Horoscope 23 September: ದಿನಭವಿಷ್ಯ, ಉದ್ಯಮದಲ್ಲಿ ಯಶಸ್ಸು, ಆಭರಣವನ್ನು ನೀಡುವ ಮೂಲಕ ನಿಮ್ಮ ಸಂಗಾತಿಯನ್ನು ಖುಷಿಪಡಿಸುವಿರಿ

ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹಾಗಾದರೆ ಇಂದಿನ (2023 ಸೆಪ್ಟೆಂಬರ್ 23) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

Horoscope 23 September: ದಿನಭವಿಷ್ಯ, ಉದ್ಯಮದಲ್ಲಿ ಯಶಸ್ಸು, ಆಭರಣವನ್ನು ನೀಡುವ ಮೂಲಕ ನಿಮ್ಮ ಸಂಗಾತಿಯನ್ನು ಖುಷಿಪಡಿಸುವಿರಿ
ಪ್ರಾತಿನಿಧಿಕ ಚಿತ್ರ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಗಂಗಾಧರ​ ಬ. ಸಾಬೋಜಿ

Updated on: Sep 23, 2023 | 12:02 AM

ರಾಶಿ ಭವಿಷ್ಯ ಪ್ರತಿಯೊಬ್ಬರ ಜೀವನದಲ್ಲಿ ವಿಭಿನ್ನವಾಗಿರುತ್ತದೆ. ಪ್ರತಿನಿತ್ಯ ಬೆಳಗ್ಗೆ ಎದ್ದ ಕೂಡಲೇ ತಮ್ಮ ರಾಶಿ ಭವಿಷ್ಯ (Daily horoscope) ನೋಡುವುದು ಕೆಲವರಿಗೆ ಅಭ್ಯಾಸ. ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹೀಗೆ ಎಲ್ಲವನ್ನು ತಿಳಿದುಕೊಳ್ಳುತ್ತಾರೆ. ಜೊತೆಗೆ ಪಂಚಾಂಗವನ್ನು ಸಹ ಓದುತ್ತಾರೆ. ಹಾಗಾದರೆ ಇಂದಿನ (2023 ಸೆಪ್ಟೆಂಬರ್ 23 ) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಉತ್ತರಾಫಲ್ಗುಣೀ, ಮಾಸ: ಭಾದ್ರಪದ, ಪಕ್ಷ: ಶುಕ್ಲ, ವಾರ: ಶನಿ, ತಿಥಿ: ಅಷ್ಟಮೀ, ನಿತ್ಯನಕ್ಷತ್ರ:ಮೂಲಾ, ಯೋಗ:ಸೌಭಾಗ್ಯ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 27 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 09:24 ರಿಂದ 10:54 ರವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:56 ರಿಂದ 03:26 ರವರೆಗೆ, ಗುಳಿಕ ಕಾಲ ಸಂಜೆ 06:23 ರಿಂದ 07:53ರ ವರೆಗೆ.

ಮೇಷ ರಾಶಿ: ನಿಮ್ಮ‌ಖರ್ಚಿನಿಂದಲೇ ಪ್ರಯಾಣವನ್ನು ಮಾಡುವಿರಿ. ಪೂರ್ವಾಗ್ರಹವಿಲ್ಲದೇ ಮಾತನಾಡುವುದು ಸೂಕ್ತ. ಮಿತ್ರರ ಸಲಹೆಗಳು ನಿಮಗೆ ಪೂರಕ ಮಾನಸಿಕತೆಯನ್ನು ತಂದುಕೊಡಬಹುದು.‌ ಇಂದಿನ ನಿಮ್ಮ ಪ್ರಯತ್ನವು ಸಂಪೂರ್ಣವಾಗಿ ಇರಲಿ. ಯಶಸ್ಸನ್ನು ಪಡೆಯುವ ಹಂಬಲದಿಂದ ಏನಾದರೂ ಮಾಡಿಕೊಳ್ಳುವಿರಿ. ಸಿಕ್ಕ ಸೌಲಭ್ಯವನ್ನು ದುರುಪಯೋಗ ಮಾಡಿಕೊಳ್ಳುವಿರಿ. ಹೂಡಿಕೆಯತ್ತ ಗಮನಹರಿಸುವುದು ಬೇಡ. ದುರ್ಬಲರಿಗೆ ಅಲ್ಪ ಸಹಾಯವನ್ನು ಮಾಡುವಿರಿ. ನಕಾರಾತ್ಮಕತೆಗೆ ಅವಕಾಶ ಬೇಡ. ಪ್ರಯಾಣವು ಅನಿವಾರ್ಯವಾದರೆ ಮಾಡಿ. ಅನಗತ್ಯ ಖರ್ಚನ್ನು ನಿಲ್ಲಿಸುವಿರಿ. ಹೊರಗಡೆಯ ಆಹಾರದಿಂದ ಅನಾರೋಗ್ಯವು ಅಧಿಕವಾಗಬಹುದು. ದಾಂಪತ್ಯದಲ್ಲಿ ಸಾಮರಸ್ಯದ ಕೊರತೆ ಕಾಣಬಹುದು.

ವೃಷಭ ರಾಶಿ: ಖಾಸಗಿ ಉದ್ಯೋಗದಲ್ಲಿ ನಿಮಗೆ ಮನ್ನಣೆಯು ಸಿಗುವುದು. ನಿಮ್ಮ ಸಂತೋಷಕ್ಕೆ ಅಡ್ಡಿಯಾಗುವ ಕೆಲಸವನ್ನು ಮಾಡಲಾರಿರಿ. ವಿದ್ಯಾರ್ಥಿಗಳ ಬಗ್ಗೆ ಅಸಮಾಧನವು ಇರುವುದು. ಉದ್ವೇಗಕ್ಕೆ ಒಳಗಾಗುವ ಸಂದರ್ಭವು ಬರಬಹುದು. ಧನಲಾಭದ ನಿರೀಕ್ಷೆಯಲ್ಲಿ ನೀವು ಇರುವುದಿಲ್ಲ. ದ್ವೇಷವನ್ನು ಮರೆತು ಪ್ರೀತಿಯಿಂದ ಇರುವಿರಿ. ಆಪದ್ಧನವನ್ನು ವಿನಿಯೋಗ ಮಾಡುವ ಸ್ಥಿತಿಯು ಬರುವುದು. ದುರಾಲೋಚನೆಯು ನಿಮ್ಮ ಸಂತೋಷಕ್ಕೆ ತೊಂದರೆಯನ್ನು ಕೊಡಬಹುದು. ಮನೆಗೆ ಬೇಕಾಗಿ ವಸ್ತುಗಳನ್ನು ಖರೀದಿಸುವಿರಿ. ಸಾಧ್ಯವೆನಿಸಿದ ಕಾರ್ಯವನ್ನಷ್ಟನ್ನೇ ಮಾಡಿ. ತಂತ್ರಜ್ಞರಿಗೆ ಕೆಲವು ಅವಕಾಶಗಳು ಸಿಗಬಹುದು. ಕುಲದೇವರ ಸ್ತೋತ್ರವನ್ನು ಪಠಿಸಿ.

ಮಿಥುನ ರಾಶಿ: ಉದ್ಯಮವು ಯಶಸ್ಸಿನ ಒಂದೊಂದೇ ಹಂತವನ್ನು ಏರಲಿದೆ. ಸಹೋದರರ ಬಾಂಧವ್ಯವು ಸಡಿಲಾಗುವುದು. ಇಂದಿನ‌ ಕಾರ್ಯದಲ್ಲಿ ರೋಚಕತೆ ಕಾಣಿಸುವುದು. ಹತ್ತಾರು ವಿಚಾರಗಳನ್ನು ನೀವು ಒಂದೇ ಬಾರಿ ಅಲೋಚಿಸುವಿರಿ. ಇಬ್ಬರ ನಡುವಿನ ಜಗಳದಲ್ಲಿ ಮಧ್ಯಸ್ತಿಕೆ ವಹಿಸುವಿರಿ. ಸಮಾರಂಭಗಳಿಗೆ ಹೋಗುವ ಸಾಧ್ಯತೆ ಇದೆ. ಆರೋಗ್ಯವು ವ್ಯತ್ಯಾಸವಾದ ಕಾರಣ ಕಷ್ಟವಾದೀತು. ನಿಮ್ಮ ನಿರ್ಧಾರವನ್ನು ಬದಲು ಮಾಡಿದ್ದಕ್ಕೆ ಬೇಸರವಾದೀತು. ಹೇಳಲಾಗದ ಒಂದು ವಿಚಾರವನ್ನು ಹೇಳಲು ಭಯವು ನಿಮ್ಮನ್ನು ಕಾಡಬಹುದು. ಆಭರಣವನ್ನು ಖರೀದಿಸಲು ಸಂಗಾತಿಯನ್ನು ಪೀಡಿಸುವಿರಿ. ಏಕಾಂತವು ಬೇಕು ಎಂದು ಅನ್ನಿಸದೇ ಇದ್ದರೂ ಹಾಗಯೇ ಇರುವಿರಿ. ಮಹಾವಿಷ್ಣುವಿನ ಸ್ತೋತ್ರವನ್ನು ಪಠಿಸಿ.

ಕಟಕ ರಾಶಿ: ಕೆಲಸಕ್ಕೋಸ್ಕರ ನಿಮ್ಮನ್ನು ಹೊಗಳುವರು. ಎಚ್ಚರಿಕೆ ಇರಲಿ. ಕೆಲಸ ಕಾರ್ಯಗಳಲ್ಲಿ ಪೂರ್ಣಜಯವು ಪ್ರಾಪ್ತವಾಗದು. ಧಾರ್ಮಿಕ ಕಾರ್ಯದಲ್ಲಿ ಹೆಚ್ಚಿನ ಆಸಕ್ತಿಯು ಇರುವುದು. ನೀವು ಸ್ವಾರ್ಥಿಗಳಂತೆ ಕಾಣುವಿರಿ ಅಷ್ಟೇ. ಎಲ್ಲವೂ ನಿಮ್ಮದಾಗಬೇಕು ಎನ್ನುವ ಬಯಕೆ ಇರಿವುದು. ಆರ್ಥಿಕತೆಯ ವೃದ್ಧಿಗಾಗಿ ತಂತ್ರವನ್ನು ಮಾಡುವಿರಿ. ಪ್ರಭಾವೀ ವ್ಯಕ್ತಿಗೆ ಮೆಚ್ಚಿಸಿ ಅಧಿಕಾರವನ್ನು ಪಡೆಯುವಿರಿ. ಸಿಗದ ವಸ್ತುವಿನ ಬಗ್ಗೆ ಅತಿಯಾದ ಮೋಹವನ್ನು ಬೆಳೆಸಿಕೊಳ್ಳುವುದು ಬೇಡ. ನಿಮ್ಮ ಪ್ರಯಾಣವನ್ನು ಮೊಟಕುಗೊಳಿಸಿ ಮನೆಗೆ ಬರುವಿರಿ. ನಿಮ್ಮ ತಪ್ಪಿನಿಂದ ಪಶ್ಚಾತ್ತಾಪಪಡಬೇಕಾದೀತು. ಮನಸ್ಸು ಬಹಳ ಚಂಚಲವಾಗಿ ಇರುವಿದು.

ಸಿಂಹ ರಾಶಿ: ದಾಂಪತ್ಯದ ಒಳ ಜಗಳವು ಕುಟುಂಬಕ್ಕೆ ಗೊತ್ತಾಗಲಿದೆ. ದುರಭ್ಯಾಸವನ್ನು ರೂಢಿಸಿಕೊಳ್ಳುವಿರಿ. ಇನ್ನೊಬ್ಬರ ಸ್ವತ್ತನ್ನು ಅಪೇಕ್ಷಿಸುವುದು ಬೇಡ. ಮೋಹದಿಂದ ಹೊರಬರುವುದು ಕಷ್ಟವಾದೀತು. ನಿಮ್ಮ ಶತ್ರುಗಳು ಬಲಗೊಳ್ಳುವ ಸಾಧ್ಯತೆ ಇದೆ. ಚರಾಸ್ತಿಯ ಸಲುವಾಗಿ ಕಾನೂನು ಹೋರಾಟ ಮಾಡಬೇಕಾದೀತು. ನಿಮ್ಮ ದುರ್ಬಲ್ಯವು ಇನ್ನೊಬ್ಬರಿಗೆ ಆಹಾರವಾಗಬಹುದು. ನೇರವಾದ ಮಾತಿನಿಂದ ತೊಂದರೆಯಾಗಬಹುದು. ಸಹನೆಯನ್ನು ನೀವು ಪ್ರಯತ್ನದಿಂದ ಬೆಳೆಸಿಕೊಳ್ಳಬೇಕಾದೀತು. ದೇಹಕ್ಕೆ ಬಲವಾದ ಪೆಟ್ಟು ಬೀಳಬಹುದು. ಅಪರಿಚಿತರ ಜೊತೆ ಮಾತನಾಡಲು ಮುಜುಗರಪಟ್ಟುಕೊಳ್ಳಬಹುದು. ಆರಾಮದಿಂದ ದಿನ ಕಳೆಯಬೇಕು ಎಂದು ಅನ್ನಿಸಬಹುದು. ಸಮೀಪದ ದೇವಾಲಯಕ್ಕೆ ಹೋಗಿ ಮನಸ್ಸಿಗೆ ಶಾಂತಿಯನ್ನು ಪಡೆಯುವಿರಿ.

ಕನ್ಯಾ ರಾಶಿ: ತರಬೇತುದಾರರಿಗೆ ಹೆಚ್ಚಿನ ಮನ್ನಣೆಯು ಬರಲಿದೆ. ನಿಮ್ಮ ಲಾಭವನ್ನು ಹೆಚ್ಚು ಮಾಡಿಕೊಳ್ಳುವಿರಿ. ಸಂತೋಷದ ಸಮಯವನ್ನು ಮತ್ತೆ ಮತ್ತೆ ನೆನಪಿಸಿಕೊಳ್ಳುವಿರಿ. ಕಾಲಹರಣ ಮಾಡಲು ಅನವಶ್ಯಕ ಮಾತುಗಳನ್ನು ಆಡುವಿರಿ. ಆಲಸ್ಯ ಮನೋಭಾವವನ್ನು ಕಡಿಮೆ ಮಾಡಿಕೊಳ್ಳಿ. ಮಿತ್ರರಿಗೆ ಸಹಾಯ ಮಾಡಿ ನೀವು ತೊಂದರೆಯಲ್ಲಿ ಸಿಕ್ಕಿಕೊಳ್ಳುವ ಸಾಧ್ಯತೆ ಇದೆ. ಆಕಸ್ಮಿಕ ಧನಲಾಭವು ನಿಮಗೆ ಸ್ವಲ್ಪ ಸಮಾಧಾನ ತರಬಹುದು. ಉದ್ಯೋಗದಲ್ಲಿ ಅವಘಡವು ಸಂಭವಿಸುವ ಸಾಧ್ಯತೆ ಇದೆ. ಎಲ್ಲರಿಗೂ ಆಕರ್ಷಕವಾಗಿ ನೀವು ಕಾಣುವಿರಿ. ಯಾರು ಏನೇ ಅಂದರೂ ನಿಮ್ಮ ನಿರ್ಧಾರವನ್ನು ಬದಲಿಸಲು ನೀವು ಒಪ್ಪುವುದಿಲ್ಲ. ವಿದ್ಯಾರ್ಥಿಗಳಿಗೆ ಪಾಲಕರು ಭವಿಷ್ಯದ ಬಗ್ಗೆ ಕಿವಿ ಮಾತನ್ನು ಹೇಳುವರು. ಕುಲದೇವರ ಸ್ತುತಿಯನ್ನು ಮಾಡಿ.

ತುಲಾ ರಾಶಿ: ಆರೋಗ್ಯದ ಸಮತೋಲನವನ್ನು ಇಟ್ಟುಕೊಳ್ಳುವುದು ಮುಖ್ಯವಾಗುವುದು. ಹಿತಶತ್ರುಗಳಿಂದ ಹಲವು ತೊಂದರೆಗಳು ಬರಬಹುದು. ಹೊಗಳಿಕೆಯನ್ನು ಬಹಳ ಸಂಕೋಚದಿಂದ ಪಡೆಯುವಿರಿ. ಬಂಧುಗಳು ಮನಸ್ಸಿಗೆ ನೋವಾಗುವ ಮಾತುಗಳನ್ನು ಆಡಿದರೂ ಅದನ್ನು ಮನಸ್ಸಿನಲ್ಲಿ ಇರಿಸಿಕೊಳ್ಳುವುದಿಲ್ಲ. ಪ್ರೀತಿಯ ವಿಚಾರದಲ್ಲಿ ಬುದ್ಧಿವಾದವನ್ನು ಹೇಳುವರು. ಸರಳವಾಗಿರಲು ಇರುವುದು ನಿಮಗೆ ಕಷ್ಟವಾದೀತು. ಇನ್ನೊಬ್ಬರ ಜೊತೆ ಮಾತನಾಡುವಾಗ ಹೆದರಿಕೆ ಇರುವುದು. ನೆಮ್ಮದಿಯನ್ನು ಏಕಾಂತದಲ್ಲಿ ಪಡೆದುಕೊಳ್ಳುವಿರಿ. ಪತ್ನಿಯ ಮಾತಿನಂತೆ ನಡೆಯುವುದು ಕಷ್ಟವಾಗಿ ಸಿಡುಕು ಮಾತುಗಳು ಬರಬಹುದು. ಸಹಾಯವನ್ನು ಕೇಳಿ ಬಂದರೆ ನಿರ್ಲಕ್ಷಿಸಬೇಡಿ.

ವೃಶ್ಚಿಕ ರಾಶಿ: ಮನೆಯ ಮಂಗಲ ಕಾರ್ಯದಲ್ಲಿ ಭಾಗಿಯಾಗುವಿರಿ. ರಹಸ್ಯವನ್ನು ಭೇದಿಸುವ ಕುತೂಹಲ ಇರಲಿದೆ. ಗಣ್ಯರ ಜೊತೆ ಮಾತುಕತೆ ನಡೆಸುವಿರಿ. ದೂರವಾಣಿಯ ಕರೆಯಿಂದ ನಿಮಗೆ ಆತಂಕ ಎದುರಾಗಬಹುದು. ಕುಟುಂಬದ ಕಾರ್ಯದಿಂದ ಆಯಾಸವು ಬರಲಿದೆ. ಸಂಗಾತಿಯ ಬಗ್ಗೆ ಆರೋಗ್ಯದ ಕಾಳಜಿ ತೋರಿಸುವಿರಿ. ನೀವು ಇಷ್ಟಪಟ್ಟಿದ್ದನ್ನು ಕಳೆದುಕೊಳ್ಳುವ ಸಂದರ್ಭವು ಬರಬಹುದು. ಪತ್ನಿಯ ಕಡೆಯವರಿಂದ ಅಹಿತಕರವಾದ ಮಾತುಗಳು ಕೇಳಿಬರಬಹುದು. ಭವಿಷ್ಯಕ್ಕಾಗಿ ಹಣವನ್ನು ಯಾರಿಗೂ ಹೇಳದೇ ಗೌಪ್ಯವಾಗಿ ಇಡುವಿರಿ. ಇನ್ನೊಬ್ಬರ ಬಗ್ಗೆ ಗೊತ್ತಿಲ್ಲದೇ ಮಾತಡುವುದು ಸರಿಯಾಗದು. ಉನ್ನತ ಸ್ಥಾನಮಾನವನ್ನು ಪಡೆಯಲು ಬಹಳ ಉತ್ಸಾಹವಿರಲಿದೆ. ಕಾಲವನ್ನು ವ್ಯರ್ಥ ಮಾಡಲು ಮನಸ್ಸು ಇಲ್ಲದಿದ್ದರೂ ಅನಿವಾರ್ಯವಾದೀತು. ಗುರುಚರಿತ್ರೆಯ ಪಠಣವನ್ನು ಮಾಡಿ.

ಧನು ರಾಶಿ: ನಿಮ್ಮಿಂದಾಗಿ ಕುಟುಂಬದ ಕಲಹವು ನಿಲ್ಲುವುದು. ಇಂದಿನ ಕಾರ್ಯದಲ್ಲಿ ಜಯವನ್ನು ಗಳಿಸುವಿರಿ. ರಾಜಕಾರಣಿಗಳಿಗೆ ಸಮಾಜದಿಂದ ಗೌರವವನ್ನು ಪಡೆಯಬೇಕು ಎನ್ನುವ ಆಸೆ ಇರಲಿದೆ. ವಿದ್ಯಾರ್ಥಿಗಳು ಓದಲಿ ಸಮಯವು ಸಿಗದೇ ಕಷ್ಟವಾಗುವುದು. ಮಿತ್ರನಿಗೆ ಗೊತ್ತಿಲ್ಲದೇ ಹಣವನ್ನು ಪಡೆಯುವಿರಿ. ತಂದೆಯ ಆರೋಗ್ಯವು ವ್ಯತ್ಯಾಸವಾಗಲಿದ್ದು ಸೂಕ್ತ ಚಿಕಿತ್ಸೆಯನ್ನು ಕೊಡಿಸುವಿರಿ. ಬಹಳ ದಿನಗಳ ಅನಂತರ ಉತ್ತಮ ಭೋಜನವು ಸಿಗವುದು. ಆರೋಪದ ಬಗ್ಗೆ ಏನನ್ನೂ ನೀವು ಹೇಳಲಾರಿರಿ. ಬಂಧುಗಳ ಪ್ರೀತಿಯು ನಿಮಗೆ ಸಿಗುವುದು. ಸಾಲದಿಂದ ಮುಕ್ತರಾಗಲು ನಿಮಗೆ ಸಾಧ್ಯವಾಗದು. ತಾಳ್ಮೆಯನ್ನೂ ನೀವು ಕಳೆದುಕೊಳ್ಳುವಿರಿ. ನೀವು ದ್ವೇಷಿಸುವವರ ಬಳಿಯೇ ಸಹಾಯ ಕೇಳುವಿರಿ. ಗುರುವಿನ ಆಶೀರ್ವಾದವನ್ನು ಪಡೆದುಕೊಳ್ಳಿ.

ಮಕರ ರಾಶಿ: ನಿಮ್ಮ ಬಾಲಿಶವಾದ ಮಾತುಗಳು ನಿಮ್ಮ ವ್ಯಕ್ತಿತ್ವವನ್ನು ತೋರಿಸುವುದು. ಬರಬೇಕಾದ ಹಣವು ನಿಮಗೆ ಪೂರ್ತಿಯಾಗಿ ಬರದು. ಚಂಚಲ ಮನಸ್ಸನ್ನು ನಿಯಂತ್ರಿಸಲು ಕಷ್ಟವಾದೀತು. ಇದರಿಂದ ಕೆಲಸದಲ್ಲಿ ಹಿನ್ನಡೆಯಾಗುವುದು. ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆಯನ್ನು ನಿರಾಕರಿಸುವಿರಿ. ನಿಮ್ಮ ಆಸ್ತಿಯನ್ನು ಪಡೆಯಲು ಬೇರೆಯವರ ದೃಷ್ಟಿ ಇರುವುದು. ಕೆಲವರಿಗೆ ನಿಮ್ಮ ಉಪಕಾರವು ಸಿಗುವುದು.‌ ನಿಮ್ಮನ್ನು ಕುಟುಂಬವು ನಿರ್ಲಕ್ಷ್ಯಿಸಿದಂತೆ ಕಾಣುವುದು. ಸಂಗಾತಿಯಿಂದ ಶುಭ ಸಮಾಚಾರವು ಇರಲಿದೆ. ಸ್ನೇಹಿತರ ಜೊತೆ ಸುತ್ತಾಟದಿಂದ ಖರ್ಚು ಬರಬಹುದು. ತಮ್ಮ ಗುರುವನ್ನು ಶಿಷ್ಯರು ಭೇಟಿ ಮಾಡಲಿದ್ದು, ಉಡುಗೊರೆಯನ್ನು ನೀಡುವರು. ಹೂಡಿಕೆಯನ್ನು ಮಿತವಾಗಿ ಮಾಡಿ. ನಿಮ್ಮವರೇ ನಿಮಗೆ ಸಹಕಾರ ಕೊಡರು.

ಕುಂಭ ರಾಶಿ: ಇಂದು ಆಲಂಕಾರಿಕ ವಸ್ತುಗಳ ವ್ಯಾಪಾರದಲ್ಲಿ ಲಾಭವನ್ನು ನಿರೀಕ್ಷಿಸುವಿರಿ. ಸ್ಥಿರಾಸ್ತಿಯ ಖರೀದಿಯ ಯೋಗವಿದ್ದರೂ ಯೋಗವಿದೆ. ವಿವಾಹಕ್ಕೆ ಅನ್ಯರಿಂದ ಅಡಚಣೆ ಬರಬಹುದು. ಆದಾಯಕ್ಕಿಂತ ಹೆಚ್ಚು ಖರ್ಚು ಹೆಚ್ಚಿದ್ದು ನಿಮಗೆ ನಿಯಂತ್ರಣವು ಕಷ್ಟವಾದೀತು. ದೃಷ್ಟಿದೋಷವು ನಿಮಗೆ ಅಧಿಕವಾಗಬಹುದು. ಆಸ್ತಿಗೆ ಸಂಬಂಧಿಸಿದ ದಾಖಲೆಗಳು ಕಳೆದುಹೋಗಬಹದು. ಪಿತ್ರಾರ್ಜಿತ ಆಸ್ತಿಯ ವಿಚಾರದಲ್ಲಿ ಸಹೋದರನಿಂದ ವಂಚನೆಯಾದ ಅನುಮಾನ ಇರುವುದು. ಅನಾರೋಗ್ಯದ ಕಾರಣ ವಿಶ್ರಾಂತಿಯಿಂದ ಅನಿವಾರ್ಯವಾಗುವುದು. ಇನ್ನೊಬ್ಬರ ವಿಷಯದಲ್ಲಿ ಹೊಟ್ಟೆಕಿಚ್ಚು ಇರುವುದು. ದಾಂಪತ್ಯವನ್ನು ಸರಿದೂಗಿಸಿಕೊಳ್ಳುವ ಕಲೆಯು ನಿಮಗೆ ಗೊತ್ತಾಗುವುದು. ಪರಿಚಿತರು ನಿಮ್ಮ ವಸ್ತುವನ್ನು ಕಾಣೆ ಮಾಡುವರು. ವಿವಾಹದ ಮಾತುಕತೆಯು ಗೊಂದಲದಲ್ಲಿ ಮುಕ್ತಾಯವಾಗಬಹುದು. ಕುಲದೇವರ ಆರಾಧನೆಯಲ್ಲಿ ತೊಡಗುವಿರಿ.

ಮೀನ ರಾಶಿ: ಮನೆಯ ಹಿರಿಯದರಿಂದ ನಿಮಗೆ ಕಿವಿಮಾತು ಹೇಳುವರು. ನಿಮಗೆ ಗೌರವವು ಪ್ರಾಪ್ತವಾಗುವ ಸಾಧ್ಯತೆ ಇದೆ. ಆರ್ಥಿಕ ಸಮಸ್ಯೆಯಾದೀತು. ಶತ್ರು ನಿಗ್ರಹ. ಕೃಷಿಯಲ್ಲಿ ಲಾಭ. ಆಸ್ತಿಯ ಸಮಸ್ಯೆಗೆ ಸೂಕ್ತ ಪರಿಹಾರವನ್ನು ಕಂಡುಕೊಳ್ಳುವುದು ಕಷ್ಟವಾದೀತು. ಸರ್ಕಾರದ ಕೆಲಸವು ವಿಳಂಬವಾಗಿ ನಿಮಗೆ ಬೇಸರವಾಗುವುದು. ರಾಜಕಾರಣಿಗಳ ಕೆಲಸಕ್ಕೆ ಪ್ರಶಂಸೆಯು ಸಿಗುವುದು. ನಿಮ್ಮ ನಡೆಯಿಂದ ವಿರೋಧಿಗಳು ಹುಟ್ಟಿಕೊಳ್ಳಬಹುದು. ಹೊಸ ವಾಹನ ಖರೀದಿ ಮಾಡುವುದನ್ನು ಕೈ ಬಿಡುವಿರಿ. ಸಹೋದರರ ಜೊತೆಗಿನ ಸಂಬಂಧವು ಒಂದು ಮಾತಿನಿಂದ ಹಾಳಾಗಲಿದೆ. ಸಂಪತ್ತಿನ ರಕ್ಷಣೆಯನ್ನು ಮಾಡಿಕೊಳ್ಳುವುದು ಇಂದು ಅಸಾಧ್ಯವಾಗುವುದು. ನಿಮ್ಮ ಅಮೂಲ್ಯ ವಸ್ತುವನ್ನು ನಿಮಗೆ ಗೊತ್ತಿಲ್ಲದೇ ಇನ್ನೊಬ್ಬರಿಗೆ ಕೊಟ್ಟು ಬಿಡುವಿರಿ. ಶಿವಪಂಚಾಕ್ಷರವನ್ನು ಪಠಿಸಿ.

ಲೋಹಿತಶರ್ಮಾ – 8762924271 (what’s app only)

ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು