ರಾಶಿ ಭವಿಷ್ಯ ಪ್ರತಿಯೊಬ್ಬರ ಜೀವನದಲ್ಲಿ ವಿಭಿನ್ನವಾಗಿರುತ್ತದೆ. ಪ್ರತಿನಿತ್ಯ ಬೆಳಗ್ಗೆ ಎದ್ದ ಕೂಡಲೇ ತಮ್ಮ ರಾಶಿ ಭವಿಷ್ಯ (Daily horoscope) ನೋಡುವುದು ಕೆಲವರಿಗೆ ಅಭ್ಯಾಸ. ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹೀಗೆ ಎಲ್ಲವನ್ನು ತಿಳಿದುಕೊಳ್ಳುತ್ತಾರೆ. ಜೊತೆಗೆ ಪಂಚಾಂಗವನ್ನು ಸಹ ಓದುತ್ತಾರೆ. ಹಾಗಾದರೆ ಇಂದಿನ (2023 ಸೆಪ್ಟೆಂಬರ್ 24 ) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಉತ್ತರಾಫಲ್ಗುಣೀ, ಮಾಸ: ಭಾದ್ರಪದ, ಪಕ್ಷ: ಶುಕ್ಲ, ವಾರ: ಭಾನು, ತಿಥಿ: ನವಮೀ, ನಿತ್ಯನಕ್ಷತ್ರ:ಪೂರ್ವಾಷಾಢ, ಯೋಗ: ಶೋಭನ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 26 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 04:56 ರಿಂದ 6:27 ರವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:25 ರಿಂದ 01:55 ರವರೆಗೆ, ಗುಳಿಕ ಕಾಲ ಸಂಜೆ 03:26 ರಿಂದ 04:56ರ ವರೆಗೆ.
ಮೇಷ ರಾಶಿ: ಇನ್ನೊಬ್ಬರಲ್ಲಿ ತಪ್ಪನ್ನೇ ಹುಡುಕುವ ಕೆಲಸ ಇಂದು ಬೇಡ. ಇಂದು ನೀವು ಮಾತನಾಡುವ ಸಂದರ್ಭವು ಕಡಿಮೆ ಇರುವುದು. ಕುಲದ ಮರ್ಯಾದೆಗೆ ತಕ್ಕಂತೆ ವರ್ತಿಸುವಿರಿ. ಕಚೇರಿಯ ಕಾರ್ಯವು ಇಂದು ಅಧಿಕವಾಗಿ ಇರುವುದು. ಉಪಾಯದಿಂದ ನಿಮ್ಮ ಸ್ಥಾನವನ್ನು ಸ್ಥಿರವಾಗಿಸಿಕೊಳ್ಳಿ. ಕೃಷಿಯ ಬಗ್ಗೆ ಒಲವು ಬರಬಹುದು. ನಿಮ್ಮ ವಿಚಾರವನ್ನು ಇತರರ ಜೊತೆ ಹಂಚಿಕೊಳ್ಳುವಿರಿ. ಸಂತೋಷದ ದಿನಗಳ ನಿರೀಕ್ಷೆಯು ಹೆಚ್ಚಿರುವುದು. ಇಂದು ನಿಮ್ಮ ಪರಿಚಯವು ಇತರರಿಗೆ ಆಗುವುದು. ವ್ಯಕ್ತಿತ್ವವನ್ನು ನೀವು ಸರಿಯಾಗಿ ಮಾಡಿಕೊಳ್ಳಲು ಗಮನವಿರುವುದು. ಓಡಾಟವು ಅಧಿಕ ಆಯಾಸವನ್ನು ತರಿಸಬಹುದು. ನಿಮ್ಮನ್ನು ನೀವು ಸಮರ್ಥಿಸಿಕೊಳ್ಳುವಿರಿ.
ವೃಷಭ ರಾಶಿ: ನೀವು ಇಂದು ಯಾರ ಮಾತನ್ನೂ ಕೇಳದ ಸ್ಥಿತಿಯಲ್ಲಿ ಇರುವಿರಿ. ಸುಲಭವಾದ ಕಾರ್ಯವನ್ನು ಸಂಕೀರ್ಣ ಮಾಡಿಕೊಳ್ಳುವಿರಿ. ಒಂದೇ ವಿಚಾರಕ್ಕೆ ಹತ್ತು ಬಾರಿ ಹೇಳಿಸಿಕೊಳ್ಳುವಿರಿ. ಕರ್ತವ್ಯದಲ್ಲಿ ನಿರಾಸಕ್ತಿ ಇರುವುದು. ನಿಮ್ಮ ಜವಾಬ್ದಾರಿಗಳನ್ನು ನೀವು ಕಳೆದುಕೊಂಡು ನಿಶ್ಚಿಂತೆಯಿಂದ ಇರುವಿರಿ. ನಿಮ್ಮದೇ ವಸ್ತುವನ್ನು ಗುರುತಿಸಲಾರದಷ್ಟು ಮರೆವು ನಿಮ್ಮದಾಗಿದೆ. ಪ್ರವಾಸವನ್ನು ಹೆಚ್ಚು ಮಾಡುವ ಆಸಕ್ತಿಯಿರುವುದು. ನಿಮ್ಮ ವರ್ತನೆಯು ಅಹಂಕಾರದಂತೆ ಇರಲಿದೆ. ಹಣವನ್ನು ಬಹಳ ಜೋಪಾನವಾಗಿ ತೆಗೆದಿಟ್ಟುಕೊಳ್ಳಿ. ಇಷ್ಟ ಮಿತ್ರರ ಸಹವಾಸವು ಸಿಗಬಹುದು. ಭವಿಷ್ಯದ ಬಗ್ಗೆ ಚಿಂತೆ ಆರಂಭವಾಗಲಿದೆ.
ಮಿಥುನ ರಾಶಿ: ಇಂದು ವಿಸ್ಮರಣೆಯಿಂದ ಮಾಡಬೇಕಾದ ಕೆಲಸವನ್ನು ಮಾಡದೇ ಇರುವಿರಿ. ಧಾರ್ಮಿಕ ಆಚರಣೆಗಳಲ್ಲಿ ನಿಷ್ಠೆ ಇರಲಿದೆ. ಗಳಿಸಿದ ಹಣವನ್ನು ಸದ್ವಿನಿಯೋಗಕ್ಕೆ ಕೊಡುವಿರಿ. ಆರ್ಥಿಕತೆಯು ದಾಂಪತ್ಯದಲ್ಲಿ ಕಲಹವಾಗುವಂತೆ ಮಾಡುವುದು. ಕುಟುಂದ ಜೊತೆ ಸಮಯ ಕಳೆಯುವುದು ಇಂದು ಸಾಧ್ಯವಾಗದು. ನಿಮ್ಮ ಸಿಟ್ಟನ್ನು ಇಂದು ತೋರಿಸುವುದು ಬೇಡ. ಇರುವುದರಲ್ಲಿ ಸುಖಪಡುವುದನ್ನು ಕಲಿತುಕೊಳ್ಳಬೇಕಾದೀತು. ನಿಮ್ಮವರ ಪ್ರೀತಿಯನ್ನು ಇಂದು ಗಳಿಸುವಿರಿ. ಒಂದೇ ಕೆಲಸವನ್ನು ಬಹಳ ಕಾಲ ಮಾಡುವುದು ನಿಮಗೆ ಇಷ್ಟವಾಗದು. ಆಸ್ತಿ ಖರೀದಿಯ ಬಗ್ಗೆ ನಿಮಗೆ ಸರಿಯಾದ ಮಾಹಿತಿ ಲಭ್ಯವಾಗದು. ಸಾಕಾಗದು. ಸಾಮಾಜಿಕ ಮಾಧ್ಯಮದಲ್ಲಿ ಪ್ರಚಾರ ಸಿಗಲಿದೆ.
ಕಟಕ ರಾಶಿ: ಮನೋವಿಕಾರದಿಂದ ಜೊತೆಗಾರರಿಗೆ ತೊಂದರೆಯಾಗುವುದು. ಪ್ರವಾಸಕ್ಕೆ ಸ್ನೇಹಿತರ ಜೊತೆ ಎಲ್ಲಿಗಾದರೂ ಹೋಗುವಿರಿ. ಅನಿರೀಕ್ಷಿತ ಧನವನ್ನು ಪಡೆಯುವಿರಿ. ಸಮಾರಂಭಗಳಿಗೆ ಹೋಗುವಿರಿ. ವಂಚನೆಗೆ ಸಿಕ್ಕಿಕೊಳ್ಳುವಿರಿ. ಯೋಗ್ಯತೆ ಅನುಸಾರವಾಗಿ ನಿಮ್ಮ ಮಾತು ಇರಲಿ. ಮನೋಬಲವನ್ನು ಹೆಚ್ಚಿಸಿಕೊಳ್ಳಬೇಕಾಗುವುದು. ಸುಮ್ಮನೇ ಮಾತಿಗಾಗಿ ಮಾತು ಬೆಳೆಸುವುದು ಬೇಡ. ನಿಮ್ಮ ತಪ್ಪನ್ನು ಯಾರದೋ ಮೇಲೆ ಹಾಕಿ ಖುಷಿ ಪಡುವಿರಿ. ಸಂಗಾತಿಯಿಂದ ಮಾನಸಿಕ ಕಿರಿಕಿರಿ ಇರುವುದು. ಪ್ರತಿಭೆಯ ಪ್ರದರ್ಶನಕ್ಕೆ ಅವಕಾಶಗಳು ಸಿಗದೇ ಹೋಗಬಹುದು. ವೃತ್ತಿಯಲ್ಲಿ ನಿಮ್ಮ ಸ್ಥಾನವನ್ನು ಭದ್ರವಾಗಿರಿಸಿಕೊಳ್ಳಲು ನೋಡುವಿರಿ.
ಸಿಂಹ ರಾಶಿ: ಕೆಟ್ಟ ಅಭ್ಯಾಸಕ್ಕೆ ಹಣವನ್ನು ಖರ್ಚು ಮಾಡುವಿರಿ. ನಿಮ್ಮ ಸರಳ ಉಪಾಯವನ್ನು ಕಾರ್ಯದಲ್ಲಿ ಹಾಕುವಿರಿ. ನಿಮ್ಮ ಮಾತು ಸಂಗಾತಿಯನ್ನು ಮೌನಿಯನ್ನಾಗಿ ಮಾಡುವುದು. ನೀವು ಮನೆಯ ಜವಾಬ್ದಾರಿಗಳನ್ನು ವಹಿಸಿಕೊಳ್ಳಬೇಕಾದೀತು. ಮನೆಯ ಕಾರ್ಯವು ನಿಮಗೆ ತೃಪ್ತಿ ಕೊಡುವುದು. ವಾಹನ ಸಂಚಾರಕ್ಕೆ ತೊಂದರೆಯಾಗುವುದು. ಹಣಕಾಸಿನ ವ್ಯವಹಾರದಲ್ಲಿ ಸಡಿಲಿಕೆ ಬೇಡ. ಭವಿಷ್ಯದ ಕನಸಿನಿಂದ ನೀವು ಹೊರಬನ್ನಿ. ಎಲ್ಲ ವಿಚಾರವನ್ನೂ ನೀವು ತಿಳಿಯಬೇಕು ಎಂಬ ಕುತೂಹಲವು ಇರುವುದು. ಮನೆಯಲ್ಲಿ ಅಧ್ಯಯನಕ್ಕೆ ತೊಂದರೆಯಾಗಿ ಎಲ್ಲಿಗಾದರೂ ದೂರ ಹೋಗುವಿರಿ. ತಾಯಿಯ ಸೇವೆಯನ್ನು ಶ್ರದ್ಧೆಯಿಂದ ಮಾಡಲಿದ್ದೀರಿ. ದುರಭ್ಯಾಸವನ್ನು ನೀವು ಬಿಡಬೇಕಾದೀತು.
ಕನ್ಯಾ ರಾಶಿ: ನಿಮ್ಮಅಹಂಕಾರದ ಮಾತುಗಳಿಂದ ಮಿತ್ರರೇ ನಿಮ್ಮ ವಿರುದ್ಧ ತಿರುಗಿ ನಿಲ್ಲಬಹುದು. ಇನ್ನೊಬ್ಬರನ್ನು ಕಂಡು ಕೊರಗುವುದು ಬೇಡ. ನಿಮ್ಮ ಆಲೋಚನೆಗಳನ್ನು ಇನ್ನೊಬ್ಬರ ಮೇಲೆ ಹೇರುವುದು ಬೇಡ. ಸಾಮಾಜಿಕವಾಗಿ ಕಾರ್ಯಗಳಿಗೆ ನಿಮ್ಮ ಹಣವನ್ನೇ ಬಳಸುವಿರಿ. ಮನೆಯಲ್ಲಿ ನಿಮ್ಮ ಕಾರ್ಯಗಳಿಗೆ ಹಿರಿಯರಿಂದ ವಿರೋಧ ಬರಲಿದೆ. ಅಪಮಾನವನ್ನು ಧೈರ್ಯದಿಂದ ಎದುರಿಸಲು ಮುಂದಾಗುವಿರಿ. ತಿಳಿವಳಿಕೆಯು ಇಂದು ನಿಮಗೆ ಮುಜುಗರವನ್ನು ತರಬಹುದು. ನಿಮ್ಮ ವೃತ್ತಿಯನ್ನು ಪ್ರೀತಿಸುವುದು ಅನಿವಾರ್ಯವೇ ಆಗಿರುತ್ತದೆ. ಅದು ನಿಮಗೆ ಅನುಕೂಲವನ್ನು ಮಾಡಿಕೊಡುವುದು. ಸಿಕ್ಕ ಅವಕಾಶಗಳನ್ನು ಇನ್ನೊಬ್ಬರಿಗೆ ಕೊಡುವ ಮೊದಲು ಯೋಚಿಸಿ. ಸಾಧ್ಯವಾದಷ್ಟು ನಿಮ್ಮ ಸಮಯವು ವ್ಯರ್ಥವಾಗದಂತೆ ನೋಡಿಕೊಳ್ಳಿ.
ತುಲಾ ರಾಶಿ: ರಾಜಕೀಯದಲ್ಲಿ ತೃಪ್ತಿ ಸಿಗದೇ ತೊಳಲಾಟ ಇರಲಿದೆ. ಸಂಗಾತಿಯ ಆರೋಗ್ಯದ ಕಡೆ ನಿಮ್ಮ ಗಮನವು ಹೆಚ್ಚಿರುವುದು. ಕಿರಿಯರಿಂದ ಆಕಸ್ಮಿಕವಾಗಿ ಗೌರವಕ್ಕೆ ಪಾತ್ರರಾಗುವಿರಿ. ಅಸಹಜ ಮಾತುಗಳಿಗೆ ಸ್ಪಂದನೆ ಸಿಗದು. ಪ್ರತ್ಯೇಕತೆಯನ್ನು ನೀವು ಬಯಸುತ್ತಿರುವಿರಿ. ಏಕಾಂತವು ನಿಮಗೆ ಬಹಳ ಪ್ರಿಯವಾಗಲಿದೆ. ಆರ್ಥಿಕ ಅಭಿವೃದ್ಧಿಯಿಂದ ನೆಮ್ಮದಿ ಇರುವುದು. ದಾಂಪತ್ಯ ಜೀವನವನ್ನು ಬಹಳ ಆನಂದಿಸುವಿರಿ. ಸ್ನೇಹಿತರ ಜೊತೆ ಆಪ್ತವಾಗಿ ಕಾಲವನ್ನು ಕಳೆಯಲಿದ್ದೀರಿ. ಖರ್ಚುಗಳಿಗೆ ನಿರ್ದಿಷ್ಟತೆ ಇರಲಿ. ಚಂಚಲವಾದ ಮನಸ್ಸಿನಿಂದ ಯಾರು ಹೇಳಿದ್ದೂ ನಿಮಗೆ ಗೊತ್ತಾಗದು. ನಿಮ್ಮ ಬಗ್ಗೆ ನಿಮ್ಮನ್ನೇ ಕೇಳಿಕೊಳ್ಳಿ. ಇನ್ನೊಬ್ಬರ ಜೊತೆ ಸೇರಿ ಟೀಕೆಯನ್ನು ಮಾಡುವಿರಿ.
ವೃಶ್ಚಿಕ ರಾಶಿ: ನಿಮ್ಮ ಆಸೆಗಳನ್ನು ಪೂರೈಸಿಕೊಳ್ಳಲು ಇಂದು ಸುದಿನ. ನಿಮ್ಮ ಜ್ಞಾನವನ್ನು ಇತರಿಗೆ ಹಂಚುವಿರಿ. ಭೂಮಿಯ ಲಾಭವು ಆಗಲಿದ್ದು ಅನೇಕ ದಿನದ ಚಿಂತೆಗಳು ದೂರಾಗುವುದು. ಉದ್ಯೋಗದಲ್ಲಿ ಅಧಿಕ ಆದಾಯು ಸಿಗುವುದು ಎಂಬ ನಿರೀಕ್ಷೆ ಇರಲಿದೆ. ಮಾನಸಿಕ ಅಸಮತೋಲನವನ್ನು ಸರಿ ಮಾಡಿಕೊಳ್ಳುವಿರಿ. ಮಾತಿಗೆ ಸಂಬಂಧಿಸದಂತೆ ದೋಷವು ನಿಮಗೆ ಕಾಣಸಿಗುವುದು. ನಿಮ್ಮ ಕೆಲಸವನ್ನು ಶಿಸ್ತಿನಿಂದ ಮಾಡಿ ಮುಗಿಸುವಿರಿ. ಕಾರ್ಯಸಾಧನೆಗೆ ಹೆಚ್ಚು ಓಡಾಟವನ್ನು ಮಾಡಬೇಕಾದೀತು. ಇಂದು ಪ್ರಯತ್ನಿಸಿದ ಕಾರ್ಯವು ಆಗದೇ ಇರುವುದಕ್ಕೆ ಬೇಸರಿಸುವಿರಿ. ಇನ್ನೊಬ್ಬರನ್ನು ಟೀಕಿಸುವುದು ನಿಮಗೆ ಬೇಡ. ಹಿರಿಯರ ಕಿವಿಮಾತಿನ ಮೇಲೆ ನಿರ್ಲಕ್ಷ್ಯವಿರುವುದು. ವಸ್ತುಗಳ ಮೇಲೆ ಅಧಿಕ ಮೋಹವು ಬೇಡ. ಸಮಯಕ್ಕೆ ಆಗಬೇಕಾದುದು ಆಗುವುದು ಎಂಬ ತಟಸ್ಥ ಸ್ಥಿತಿ ಇರಲಿದೆ.
ಧನು ರಾಶಿ: ವಾಹನ ಖರೀದಿಗೆ ಯೋಚನೆ ಇರಲಿದ್ದು ಸಾಲ ಮಾಡಬೇಕಾಗವುದು. ನಿಮ್ಮ ವೇಗದ ಮನಸ್ಸನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳುವಿರಿ. ಮನೆಯವರ ಸಣ್ಣ ತಪ್ಪುಗಳೂ ನಿಮಗೆ ಸಹ್ಯವಾಗದೇ ಇರುವುದು. ಮತ್ತೆ ಮತ್ತೆ ಉಂಟಾದ ಅನಾರೋಗ್ಯದಿಂದ ನಿಮ್ಮ ದಿನಚರಿಯನ್ನೇ ಬದಲಿಸಿಕೊಳ್ಳುವಿರಿ. ಬಂಧುಗಳು ನಿಮ್ಮ ಬಗ್ಗೆ ಏನಾದರೂ ಆಡಿಕೊಂಡಾರು. ಶ್ರಮವು ಯುಕ್ತಿಯಿಂದ ಕೂಡಿರಲಿ. ಧನಾತ್ಮಕ ಚಿಂತನೆಯನ್ನು ಪ್ರಯತ್ನಪೂರ್ವಕವಾಗಿ ಮಾಡಿಬೇಕಾದೀತು. ನಿದ್ರೆಯು ಬಾರದೇ ಕಷ್ಟವಾದೀತು. ಮನೆತನದ ಗೌರವವನ್ನು ಕಾಪಾಡಿಕೊಳ್ಳುವುದು ನಿಮ್ಮ ಜವಾಬ್ದಾರಿಯಾಗಲಿದೆ. ಕಳೆದುಕೊಂಡ ವಸ್ತುವಿಗಾಗಿ ನೀವು ಬಹಳ ಬೇಸರಪಡುವಿರಿ. ಧನಲಾಭದ ನಿರೀಕ್ಷೆಯಲ್ಲಿ ನೀವು ಇರುವಿರಿ.
ಮಕರ ರಾಶಿ: ಪ್ರೀತಿಯ ವಿಚಾರಕ್ಕೆ ಬಂದರೆ ಪೂರ್ಣ ಸಮಾಧಾನ ಇರದು. ಸಂಗಾತಿಯ ಮೇಲೆ ಅನುಮಾನವನ್ನು ವ್ಯಕ್ತಪಡಿಸುವಿರಿ. ಆಭರಣ ಖರೀದಿಯಿಂದ ಸಂತೃಪ್ತಿ ಇರಲಿದೆ. ಅತಿಯಾದ ಖರ್ಚನ್ನು ಮಾಡಿಕೊಳ್ಳುವಿರಿ. ನಿಮ್ಮವರ ಪ್ರೀತಿಯು ನಿಮಗೆ ಕಡಿಮೆ ಆದಂತೆ ಅನ್ನಿಸಬಹುದು. ಕೃಷಿಯಲ್ಲಿ ಉಪಯುಕ್ತ ಯೋಜನೆಯನ್ನು ಹಾಕಿಕೊಳ್ಳುವಿರಿ. ಮಕ್ಕಳ ಬಗ್ಗೆ ಇರುವ ನಿಮ್ಮ ಚಿಂತೆ ನಿವಾರಣೆ ಆಗುವುದು. ಹಣವನ್ನು ಗಳಿಸುವ ಹಂಬಲವು ಇದ್ದು ಅದಕ್ಕಾಗಿ ಮಾರ್ಗವನ್ನೂ ಪರ್ಯಾಲೋಚಿಸಿ. ಸಹೋದರಿಯ ಜೊತೆ ಭಾವನೆಯನ್ನು ತೆರೆದಿಡುವಿರಿ. ಆಗಾಗ ಮಾತನಾಡುತ್ತ ಸಂಬಂಧವನ್ನು ಗಟ್ಟಿಮಾಡಿಕೊಳ್ಳಿ. ಇಂದಿನ ಕೆಲಸವನ್ನು ಸಮಯದ ಮಿತಿಯಲ್ಲಿ ಮಾಡುವುದು ಕಷ್ಟವಾದೀತು.
ಕುಂಭ ರಾಶಿ: ಮನೆಯವರ ಜೊತೆ ವಿನಾಕಾರಣ ಏರುಧ್ವನಿಯಲ್ಲಿ ಮಾತನಾಡುವಿರಿ. ಆಸ್ತಿಯು ನಷ್ಟವಾಗುದು ಎಂಬ ಹೆದರಿಕೆ ಇರಲಿದೆ. ಹಣಕಾಸಿನ ಒತ್ತಡವು ಕಡಿಮೆ ಆಗಲಿದೆ. ಅನಾರೋಗ್ಯದ ಕಾರಣದಿಂದ ನೀವು ಇಂದಿನ ಪ್ರಯಾಣವನ್ನು ನಿಲ್ಲಿಸುವಿರಿ. ಕಳ್ಳತನದ ಭೀತಿಯು ನಿಮಗೆ ಇರವುದು. ಸಜ್ಜನರಿಗೆ ಕೆಲವು ಅಪವಾದದ ಮಾತುಗಳು ಬರಬಹುದು. ನಿಮ್ಮ ತಾಳ್ಮೆಯ ವರ್ತನೆಯಿಂದ ಸಂಕಟವು ದೂರಾಗುವುದು. ಕಲಿಕೆಯಲ್ಲಿ ಹೊಸತನವನ್ನು ಇರುವುದು. ಸಂತಾನವು ನಿಮಗೆ ಖುಷಿ ಕೊಡುವುದು. ವಿದೇಶಪ್ರಯಾಣವನ್ನು ಮಾಡುವ ಯೋಚನೆಯಲ್ಲಿಯೇ ಇರುವಿರಿ. ಕೆಲಸದಲ್ಲಿ ಪ್ರಾಮಾಣಿಕ ಪ್ರಯತ್ನವನ್ನು ಮಾಡಲಿದ್ದೀರಿ. ಪುಣ್ಯಸ್ಥಳಗಳ ದರ್ಶನವು ಇರಲಿದೆ. ನಿಮಗೆ ಸಿಗಾಬೇಕಾದುದ್ದು ಸಿಕ್ಕಿಯೇ ಸಿಗುತ್ತದೆ ಎಂಬ ಗಾಢವಾದ ನಂಬಿಕೆ ಇರುವುದು.
ಮೀನ ರಾಶಿ: ಸ್ತ್ರೀಯರಿಂದ ಇಂದಿನ ನಿಮ್ಮ ಕೆಲಸವನ್ನು ಮಾಡಿಕೊಳ್ಳುವಿರಿ. ಅಗೌರವವನ್ನು ಕೊಟ್ಟಂತೆ ನಿಮಗೆ ಅನ್ನಿಸಬಹುದು. ಸ್ನೇಹಿತರ ಜೊತೆ ಮನಸ್ತಾಪವು ಬರಬಹುದು. ಕಾನೂನಿಗೆ ವಿರುದ್ಧದ ವ್ಯವಹಾರದಿಂದ ನಿಮಗೆ ತೊಂದರೆಯಾಗುವುದು. ಆಪ್ತರು ನಿಮ್ಮಿಂದ ದೂರವಾಗಲಿದ್ದು ಬಹಳ ವೇದನೆಯಾಗುವುದು. ಮಕ್ಕಳು ಅಡ್ಡದಾರಿಗೆ ಹೋಗುವ ಸನ್ನಿವೇಶವು ಬರಬಹುದು. ಮಾರ್ಗದರ್ಶನದ ಅವಶ್ಯಕತೆ ಇರಲಿದೆ. ಸ್ವಾವಂಬಿಯಾಗಲು ನೀವು ಇಚ್ಛಿಸುವಿರಿ. ಸಿಟ್ಟನ್ನು ಕಡಿಮೆ ಮಾಡಿಕೊಂಡು ಎಲ್ಲವನ್ನೂ ಸ್ವೀಕರಿಸಿದರೆ ಯಶಸ್ಸು ನಿಮ್ಮದೇ. ಉನ್ನತ ಅಧಿಕಾರವು ನಿಮ್ಮನ್ನು ಹುಡುಕಿಕೊಂಡು ಬಂದೀತು. ಕಲಾವಿದರು ತಮ್ಮ ಪ್ರತಿಭೆಯನ್ನು ಪ್ರದರ್ಶನಕ್ಕೆ ಅವಕಾಶ ಸಿಗುವುದು.
-ಲೋಹಿತಶರ್ಮಾ – 8762924271 (what’s app only)