ರಾಶಿ ಭವಿಷ್ಯ ಪ್ರತಿಯೊಬ್ಬರ ಜೀವನದಲ್ಲಿ ವಿಭಿನ್ನವಾಗಿರುತ್ತದೆ. ಪ್ರತಿನಿತ್ಯ ಬೆಳಗ್ಗೆ ಎದ್ದ ಕೂಡಲೇ ತಮ್ಮ ರಾಶಿ ಭವಿಷ್ಯ (Daily horoscope) ನೋಡುವುದು ಕೆಲವರಿಗೆ ಅಭ್ಯಾಸ. ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹೀಗೆ ಎಲ್ಲವನ್ನು ತಿಳಿದುಕೊಳ್ಳುತ್ತಾರೆ. ಜೊತೆಗೆ ಪಂಚಾಂಗವನ್ನು ಸಹ ಓದುತ್ತಾರೆ. ಹಾಗಾದರೆ ಇಂದಿನ (2023 ಸೆಪ್ಟೆಂಬರ್ 26) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಉತ್ತರಾಫಲ್ಗುಣೀ, ಮಾಸ: ಭಾದ್ರಪದ, ಪಕ್ಷ: ಶುಕ್ಲ, ವಾರ: ಮಂಗಳ, ತಿಥಿ: ಏಕಾದಶೀ, ನಿತ್ಯನಕ್ಷತ್ರ: ಶ್ರವಣಾ, ಯೋಗ: ಸುಕರ್ಮ, ಕರಣ:ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ,
ಸೂರ್ಯಾಸ್ತ ಸಂಜೆ 06 ಗಂಟೆ 25 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 07:53 ರಿಂದ 09:24 ರವರೆಗೆ, ಯಮಘಂಡ ಕಾಲ ಬೆಳಿಗ್ಗೆ 10:54 ರಿಂದ 12:24 ರವರೆಗೆ, ಗುಳಿಕ ಕಾಲ ಮಧ್ಯಾಹ್ನ 01:55 ರಿಂದ 03:25ರ ವರೆಗೆ.
ಮೇಷ ರಾಶಿ: ನಕಾರಾತ್ಮಕ ಆಲೋಚನೆಗಳು ನಿಮ್ಮ ಮನಸ್ಸನ್ನು ಕೆಡಿಸುವುದು. ಅಸಾಧ್ಯವಾದುದನ್ನು ಸಾಧಿಸುವ ಭ್ರಮೆಯಿಂದ ಹೊರಬನ್ನಿ. ಸಂಗಾತಿಯ ಜೊತೆ ಹೆಚ್ಚು ಸಮಯವನ್ನು ಕಳೆದರೂ ಮನಸ್ಸಿಗೆ ನೆಮ್ಮದಿ ಸಿಗದು. ನೀವು ಇಂದು ಅಸಹಾಯಕರಂತೆ ತೋರುವಿರಿ. ಆರ್ಥಿಕವಾಗಿ ಸಬಲರಾಗಲು ವಿವಿಧ ಆರ್ಥಿಕ ಮೂಲವನ್ನು ಅನ್ವೇಷಿಸಬೇಕಾದೀತು. ಮಕ್ಕಳ ವಿವಾಹ ಕಾರ್ಯದಲ್ಲಿ ನೀವು ಮಗ್ನರಾಗುವಿರಿ. ಶತ್ರುಗಳ ಉಪಟಳ ಕಡಿಮೆ ಆಗಿದ್ದು ವೈಯಕ್ತಿಕ ಯೋಜನೆಗೆ ಸಮಯ ಕೊಡಲಾದೀತು. ಮಾತನ್ನು ನಿಯಂತ್ರಿಸಿರುವುದು ಮಿತ್ರರಿಗೆ ಆಶ್ಚರ್ಯ ಎನಿಸುವುದು.
ವೃಷಭ ರಾಶಿ: ಪ್ರೇಮದಲ್ಲಿ ಹಿನ್ನಡೆಯಾಗುವ ಸಾಧ್ಯತೆ ಇದೆ. ತಾಳ್ಮೆಯಿಂದ ಮುಂದುವರಿಯುವುದು ಮುಖ್ಯವಾದೀತು. ವ್ಯಾಪಾರಸ್ಥರಿಗೆ ಸ್ವಲ್ಪ ಆಲಸ್ಯವು ಇರುವುದು. ಒಂದೇ ವಿಚಾರವನ್ನು ಮನನ ಮಾಡುವಿರಿ. ಸಂಗಾತಿಯ ನಡುವೆ ಭಿನ್ನಾಭಿಪ್ರಾಯ ಬರಲಿದೆ. ಪ್ರಯಾಣದಿಂದ ಆಯಾಸವಾಗಬಹುದು. ನಿಮ್ಮ ಆಸೆಗಳನ್ನು ಇನ್ನೊಬ್ಬರ ಜೊತೆ ಹೇಳಿಕೊಂಡು ಸಮಾಧಾನ ಪಡುವಿರಿ. ತುರ್ತು ಅವಶ್ಯಕತೆ ಇರುವುದು. ಭೀತಿಯಿಂದ ನೀವು ಕೆಲವನ್ನು ಮಾಡದೇ ಇರುವಿರಿ. ಇರುವುದರಲ್ಲಿ ನೆಮ್ಮದಿಯನ್ನು ಕಾಣುವುದು ಮುಖ್ಯವಾದೀತು. ಮನಸ್ಸಿನ ಚಾಂಚಲತ್ಯವನ್ನು ಕಡಿಮೆ ಮಾಡಿಕೊಳ್ಳುವುದು ಉತ್ತಮ. ವೃತ್ತಿಯಲ್ಲಿ ಮೇಲಧಿಕಾರಿಗಳಿಂದ ತೊಂದರೆ ಬರಬಹುದು. ಕೆಲವರ ವಿಚಾರದಲ್ಲಿ ನಿಮ್ಮ ಅಭಿಪ್ರಾಯವು ಬದಲಾಗಬಹುದು.
ಮಿಥುನ ರಾಶಿ: ನಿಮಗೆ ತಿಳಿದ ವಿಚಾರದ ಬಗ್ಗೆ ಹುಡುಕಾಟ ನಡೆಸುವಿರಿ. ವಿದ್ಯಾರ್ಥಿಗಳು ಸಂಶೋಧನೆಯತ್ತ ಗಮನವನ್ನು ಕೊಡುವರು. ಸಂಗಾತಿಯ ಆರೋಗ್ಯದ ಬಗ್ಗೆ ಚಿಂತೆ ಇರುವುದು. ಸರಿಯಾದ ಸಮಯಕ್ಕೆ ಉತ್ತಮ ವೈದ್ಯರ ಸಲಹೆಯನ್ನು ಪಡೆಯಿರಿ. ಕಛೇರಿಯ ಕೆಲಸವನ್ನು ಮನೆಗೂ ತಂದುಕೊಳ್ಳುವಿರಿ. ಇಂದು ಮಾನಸಿಕವಾಗಿ ನೀವು ಕುಗ್ಗುವಿರಿ. ಕೆಲಸದಿಂದ ಸ್ವಲ್ಪ ವಿಶ್ರಾಂತಿಯನ್ನು ಪಡೆಯುವುದು ಉತ್ತಮ. ವೇತನವನ್ನು ಹೆಚ್ಚಿಸಿಕೊಳ್ಳಲು ಅನ್ಯ ಮಾರ್ಗವನ್ನು ಹುಡುಕುವ ಅವಶ್ಯಕತೆ ಬರಬಹುದು. ಹೊಸ ಉದ್ಯೋಗಕ್ಕೆ ಬೇಕಾದ ಸಿದ್ಧತೆಯನ್ನೂ ಆಲೋಚಿಸುವಿರಿ. ಯಾರೋ ಕೊಟ್ಟದ್ದನ್ನು ಸ್ವೀಕರಿಸುವುದಿಲ್ಲ. ಗೆಲುವನ್ನು ಸಾಧಿಸಲು ಛಲವಿರುವುದು.
ಕಟಕ ರಾಶಿ: ಉದ್ವೇಗದಲ್ಲಿ ನೀವು ಏನನ್ನಾದರೂ ಹೇಳಬಹುದು. ಇಂದಿನ ಕೆಲವು ಮಾತುಗಳು ನಿಮಗೆ ಇಷ್ಟವಾಗದೇ ಹೋಗುವುದು. ಕೆಲವು ವಿಚಾರದಲ್ಲಿ ನೀವು ಆತುರರಾಗುವಿರಿ. ವೈದ್ಯರಿಗೆ ಪ್ರಶಂಸೆಯ ದಿನ. ಸರ್ಕಾರಿ ಉದ್ಯೋಗಿಗಳಿಗೆ ವರ್ಗಾವಣೆ ಸಾಧ್ಯತೆ ಇದೆ. ಭವಿಷ್ಯದ ಬಗ್ಗೆ ದೊಡ್ಡ ಕನಸನ್ನು ಕಟ್ಟಿಕೊಳ್ಳುವಿರಿ. ಮಕ್ಕಳು ನಿಮ್ಮ ಕೆಲಸಕ್ಕೆ ತೊಂದರೆ ಕೊಡಬಹುದು. ಬೇಡದ ವಸ್ತುಗಳನ್ನು ಇನ್ನೊಬ್ಬರಿಗೆ ಕೊಡುವಿರಿ. ಮನೆಯ ವಾತಾರಣದಲ್ಲಿ ಇರಲು ಖುಷಿಯಾಗುವುದು. ನಿಮ್ಮ ರಹಸ್ಯವನ್ನು ನೀವು ಗೊತ್ತಿಲ್ಲದೇ ಬೇರೆಯವರ ಜೊತೆ ಹಂಚಿಕೊಳ್ಳುವಿರಿ. ಸಮಯಕ್ಕೆ ಬೆಲೆಯನ್ನು ಕೊಡುವುದು ಉತ್ತಮ.
ಸಿಂಹ ರಾಶಿ: ಊಹಿಸದೇ ಇರುವ ಕಡೆಯಿಂದ ನಿಮಗೆ ಬೇಕು ಎನಿಸಿದ ಸಂಪತ್ತು ದೊರೆಯುವುದು. ಇದು ನಿಮಗೆ ಇಂದಿನ ಅಚ್ಚರಿಯ ವಿಚಾರವೇ ಆಗಲಿದೆ. ಉದ್ಯೋಗದಲ್ಲಿ ಹೆಚ್ಚುಗಾರಿಕೆ ಇರುವುದು. ತಾಳ್ಮೆಯಿಂದ ಕಾರ್ಯವನ್ನು ಮಾಡಿ. ಒತ್ತಡಕ್ಕೆ ಮಣಿದು ನಿಮ್ಮ ಕೆಲಸ ಹಾಗೂ ನಿರ್ಧಾರವನ್ನು ಬದಲಿಸುವಿರಿ. ವಿದೇಶದ ಪ್ರಯಾಣಕ್ಕೆ ಆಯಾಸವು ಆಯಾಸವು ಅಡ್ಡಿಬರಬಹುದು. ದೇಹವನ್ನು ದಂಡಿಸುವ ಅನಿವಾರ್ಯತೆ ಇರಲಿದೆ. ಆಕರ್ಷಕ ಮಾತಿಗೆ ಮನಸೋತು ಪ್ರೀತಿಯಲ್ಲಿ ಬೀಳುವಿರಿ. ಕಷ್ಟವೆಂದು ಸಿಕ್ಕ ಕೆಲಸವನ್ನು ಬಿಡುವಿರಿ. ಏನಾದರೂ ಹೇಳಬೇಕೆಂದು ಇದ್ದರೆ ನೇರವಾಗಿ ಹೇಳಿ.
ಕನ್ಯಾ ರಾಶಿ: ಮುಖವನ್ನು ಗಂಟು ಹಾಕಿಕೊಂಡು ಇರುವುದು ನಿಮ್ಮಿಂದ ಜನರನ್ನು ದೂರವಿರಿಸುತ್ತದೆ. ನಿಮ್ಮಲ್ಲಿರುವ ಅಲ್ಪ ಸ್ವಲ್ಪ ಹಣವನ್ನು ಸೇರಿಸಿ ಕೊಡಬೇಕಾದವರಿಗೆ ಹಣವನ್ನು ಕೊಡುವಿರಿ. ಇಂದಿನ ನಿಮ್ಮ ಮಾರಾಟದಿಂದ ಬೆಲೆಯು ಸಿಗದು. ನಿಮ್ಮ ವ್ಯಕ್ತಿತ್ವಕ್ಕೆ ಕಳಂಕವನ್ನು ಬಳಿಯಬಹುದು. ಬೆನ್ನಿನ ವಿಪರೀತ ನೋವು ನಿಮ್ಮ ಯಾವ ಕೆಲಸಕ್ಕೂ ಅನುಕೂಲ ಮಾಡಿ ಕೊಡದು. ಉದ್ಯೋಗಕ್ಕೆ ವಿರಾಮ ಹೇಳಿ ಹೊರಗೆ ಸುತ್ತಾಟವನ್ನು ಮಾಡುವಿರಿ. ಎಲ್ಲ ಕಾರ್ಯವನ್ನೂ ನೀವೇ ಮಾಡಬೇಕು ಎಂಬ ಹೆಬ್ಬಯಕೆ ಬೇಡ. ಮೋಜಿಗಾಗಿ ಹಣವನ್ನು ಖರ್ಚು ಮಾಡಬೇಕಾದೀತು. ಕೂಡಿಟ್ಟ ಹಣವನ್ನು ನೀವು ಬಿಡಿಸಿಕೊಳ್ಳುವ ಅನಿವಾರ್ಯತೆ ಎದುರಾಗಬಹುದು. ಸಂಗಾತಿಯ ಜೊತೆ ಹಳೆಯ ವಿಚಾರಗಳನ್ನು ತೆಗೆಯುವುದು ಬೇಡ.
ತುಲಾ ರಾಶಿ: ಇಂದು ನೀವು ಮೇಲ್ನೋಟಕ್ಕೆ ಬಹಳ ಶಾಂತ ಸರೋವರದಂತೆ ಕಂಡರೂ ಒಳಗೇ ಜ್ವಾಲಗ್ನಿಯಂತೆ ಉರಿಯುವಿರಿ. ಎಲ್ಲ ವಿಚಾರದಲ್ಲಿಯೂ ಅಸಮಾಧನವು ಇರಲಿದೆ. ಅತಿಯಾದ ಒತ್ತಡವು ನಿಮ್ಮ ದಕ್ಷತೆಯನ್ನು ಕಡಿಮೆ ಮಾಡುವುದು. ಒಂದೇ ಕೆಲಸದಲ್ಲಿ ಮಗ್ನರಾಗಿ ಮಾಡಬೇಕಾದ ಕೆಲವು ಕೆಲಸವನ್ನು ಮರೆಯುವಿರಿ. ಸ್ನೇಹಿತರ ಜೊತೆ ಪ್ರವಾಸಕ್ಕೆ ಹೋಗಬೇಕು ಎಂದು ಅನ್ನಿಸುವುದು. ಇಂದು ಖರೀದಿಸಿದ ಹೊಸ ವಸ್ತುಗಳು ನಿಮಗೆ ಬಹಳ ಖುಷಿಯನ್ನು ಕೊಡುವುದು. ವೃತ್ತಿಯಲ್ಲಿ ನಿಮ್ಮನ್ನು ಗುರುತಿಸಿರುವುದು ಮನಸ್ಸನ್ನು ಹಿಗ್ಗಿಸಿರುವುದು. ದಾಂಪತ್ಯದಲ್ಲಿ ಅಸಹಜ ಮಾತುಕತೆಗಳು ಕಿರಿಕಿರಿಯನ್ನು ಉಂಟುಮಾಡೀತು. ಶುಭ ಸುದ್ದಿಯ ನಿರೀಕ್ಷೆಯಲ್ಲಿ ನೀವು ಇರುವಿರಿ. ಇಂದಿನ ಕರ್ತವ್ಯದಲ್ಲಿ ನೀವು ನಿರತರು.
ವೃಶ್ಚಿಕ ರಾಶಿ: ಮೇಲಿಂದ ಮೇಲೆ ಬೀಳವ ಘಾತದಿಂದ ಬಲವಾದ ಘಾಸಿಯಾಗಲಿದೆ. ಯಾವ ಹೊಸತನ್ನೂ ಸ್ವೀಕರಿಸುವ ಮಾನಸಿಕತೆ ಇಂದು ಇರದು. ಎಲ್ಲ ವಿಚಾರಕ್ಕೂ ನಿಮ್ಮ ಮೌನಮುದ್ರೆಯು ಒತ್ತಿರುವುದು. ಹೂಡಿಕೆಯನ್ನು ಹಿಂಪಡೆಯುವ ಸಾಧಿಸುವಿರಿ ಇದೆ. ವೈಯಕ್ತಿಕ ವಿಚಾರಕ್ಕೆ ಯಾರನ್ನೂ ಸೇರಿಸಿಕೊಳ್ಳಲು ಬಯಸುವುದಿಲ್ಲ. ವಿವಾಹಕ್ಕೆ ಸಂಬಂಧಿಸಿದಂತೆ ಮಾತುಕತೆ ಸ್ಪಂದನ ಇರದು. ಅಶುಭವಾದ ಕೆಲಸಕ್ಕೆ ಗೊತ್ತಿಲ್ಲದೇ ನೀವು ಹಣವನ್ನು ನೀಡುವಿರಿ. ಬಂಧುಗಳ ಮಾತಿಂದ ಸಿಟ್ಟಾಗುವಿರಿ. ಆದರೆ ತೋರಿಸಲು ಹೋಗುವುದಿಲ್ಲ. ಕೃಷಿ ಚಟುವಟಿಕೆಯಲ್ಲಿ ಉತ್ಸಾಹವು ಸ್ವಲ್ಪ ಇರುವುದು. ಸಂತಾನಕ್ಕೆ ಸಂಬಂಧಿಸಿದಂತೆ ವೈದ್ಯರನ್ನು ಭೇಟಿ ಮಾಡಿ. ನಿಮ್ಮ ಸ್ಥಾನವನ್ನು ನೀವು ಬಿಟ್ಟಕೊಡುವಿರಿ.
ಧನು ರಾಶಿ: ಉದ್ಯೋಗಕ್ಕೆ ಸಂಬಂಧಿಸಿದಂತೆ ಸರಿಯಾದ ನಿರ್ಧಾರವನ್ನು ಮಾಡಿಕೊಳ್ಳಿ. ನಿಮ್ಮ ಚಾಂಚಲ್ಯದ ಸ್ಥಿತಿಗೆ ಸಿಟ್ಟಾಗಬಹುದು. ಆಹಾರದ ಮಾರಾಟದಿಂದ ಲಾಭ ಸಿಗುವುದು. ಇಂದು ಬರುವ ಹಣದ ಆಧಾರದ ಮೇಲೆ ನೀವು ಯಾವ ವ್ಯವಹಾರವನ್ನೂ ಮಾಡುವುದು ಬೇಡ. ವಾಹನವನ್ನು ಚಾಲಾಯಿಸುವಾಗ ಅನೇಕ ಸಕಾರಾತ್ಮಕ ಯೋಚನೆಗಳು ಇರಲಿ. ಸಂಗಾತಿಯ ಆಯ್ಕೆಯಲ್ಲಿ ನಿಮಗೆ ಅನೇಕ ಗಿಂದಲಗಳೂ ಪರೀಕ್ಷೆಗಳೂ ಬರಬಹುದು. ಸ್ವತಂತ್ರವಾದ ಆಲೋಚನೆಯು ಇಲ್ಲದೇ ಹೋದರೆ ಕಷ್ಟವಾದೀತು. ಕಛೇರಿಯಲ್ಲಿ ನಿಮ್ಮ ಶ್ರಮಕ್ಕೆ ಮೆಚ್ಚುಗೆ ಸಿಗಲಿದೆ. ಮನೆ ಕೆಲಸಕ್ಕೆ ಆಲಸ್ಯವು ಇರುವುದು. ಸಮಾರಂಭದಲ್ಲಿ ಅನಿರೀಕ್ಷಿತ ಗೌರವವು ನಿಮಗೆ ಪ್ರಾಪ್ತವಾಗುವುದು. ನಿಮ್ಮ ಮನಸ್ಸನ್ನು ಸಂಗಾತಿಯು ಅರ್ಥಮಾಡಿಕೊಳ್ಳಲು ಪ್ರಯತ್ನಿಸಬಹುದು.
ಮಕರ ರಾಶಿ: ಉದ್ಯೋಗದ ಸ್ಥಳದಲ್ಲಿ ಉತ್ಸಾಹವು ಹೆಚ್ಚಿರಲಿದೆ. ಸಮಯೋಚಿತ ಸಲಹೆಯಿಂದ ಬರುವ ತೊಂದರೆಯು ದೂರಾಗುವುದು. ಪಾಲುದಾರಿಕೆಯಲ್ಲಿ ಕಲಹವಾಗುವ ಸಾಧ್ಯತೆ ಇದೆ. ಪತ್ರವ್ಯವಹಾರವು ಸಂಪೂರ್ಣ ಪ್ರಾಮಾಣಿಕವಾಗಿ ಇರದು ಎಂಬುದು ಗಮನದಲ್ಲಿ ಇರಲಿ. ಕೇಳಿಕೊಂಡು ಬಂದವರಿಗೆ ನಿಮ್ಮಿಂದ ಅಲ್ಪ ಸಹಾಯ ಸಿಗುವುದು. ಇಂದು ನೀವು ನಿರೀಕ್ಷಿಸಿದಷ್ಟು ಸಂಪತ್ತು ಸಿಗದೇ ಹೋದೀತು. ಸಹೋದ್ಯೋಗಿಗಳ ವರ್ತನೆಯಿಂದ ಸಿಟ್ಟಾಗುವ ಸಾಧ್ಯತೆ ಇದೆ. ಭೋಗವಸ್ತುಗಳನ್ನು ಖರೀದಿ ಮಾಡುವಿರಿ. ಇವತ್ತಿಗೆ ಬೇಕಾದುದನ್ನು ಸ್ನೇಹಿತರಿಂದ ಪಡೆದುಕೊಳ್ಳುವಿರಿ. ನೀವು ಇಂದು ವಿಶೇಷ ಲಕ್ಷ್ಯವನ್ನು ಇಟ್ಟುಕೊಂಡು ಕೆಲಸವನ್ನು ಮಾಡಬೇಕಾದೀತು. ವಿದ್ಯಾರ್ಥಿಗಳಿಗೆ ಒಳ್ಳೆಯ ಅವಕಾಶಗಳು ಸಿಗುವುದು. ಬರಹಗಾರರು ಗೌರವವನ್ನು ಪಡೆಯುವರು.
ಕುಂಭ ರಾಶಿ: ನೆರೆಹೊರೆಯವರ ವಿಚಾರದಲ್ಲಿ ಸಣ್ಣ ಅಸಮಾಧಾನ ಇರಲಿದೆ. ದೇಹಕ್ಕೆ ತೊಂದರೆ ಮಾಡಿಕೊಳ್ಳುವ ಸನ್ನಿವೇಶವಿರಲಿದೆ. ಮನೆಯ ಬದಲಾವಣೆಯನ್ನು ಮಾಡುವಿರಿ. ಯಾರಿಂದಲೂ ಆರ್ಥಿಕ ಸಹಾಯವು ಸಿಗದೇ ಕಷ್ಟವಾದೀತು. ಮನಸ್ಸು ಚಂಚಲವಾಗಿ ಕೆಲಸವು ಸೂಚಿಸದು. ಚರ ಆಸ್ತಿಯನ್ನು ಮಾರಾಟ ಮಾಡಿ ಹಣದ ಗಳಿಸುವಿರಿ. ನಿಮಗೆ ಸಂಬಂಧಿಸದ ವಿಚಾರದಲ್ಲಿ ಮಧ್ಯಸ್ತಿಕೆ ಬೇಡ. ಇದರಿಂದ ಅಪಮಾನವು ಆಗುವುದು. ನಿಮ್ಮ ಸ್ಥಾನವನ್ನು ಉಳಿಸಿಕೊಳ್ಳಲು ಸಮಸ್ಯೆಯಾಗಬಹುದು. ಇಂದು ಭೀತಿಯು ಇರಲಿದ್ದು ಮನೆಯನ್ನು ಬಿಟ್ಟು ಹೋಗಲಾರಿರಿ. ಶುಭಾವಾರ್ತೆಯಿಂದ ಖುಷಿ ಇರುವುದು. ದೂರದಲ್ಲಿರುವ ಮಕ್ಕಳನ್ನು ಕಾಣಲು ಹೋಗುವಿರಿ.
ಮೀನ ರಾಶಿ: ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ತೊಂದರೆ ಆಗಲಿದ್ದು ಮನಸ್ಸು ವಿಚಲಿತವಗಲಿದೆ. ಮಿತ್ರರು ನಿಮಗೆ ಸಹಕಾರ ನೀಡಲಾರರು. ಸಾಲ ಮಾಡುವ ಸಂದರ್ಭವನ್ನು ತಂದುಕೊಳ್ಳುವುದು ಬೇಡ. ಪ್ರಯಾಣದಲ್ಲಿ ಜಾಗರೂಕತೆ ಇರಲಿ. ನಿಮಗೆ ಇಂದು ಸಂಗಾತಿಯ ಮೇಲೆ ಪ್ರೀತಿ ಹೆಚ್ಚಾಗಿದ್ದು ದೂರದ ಊರಿನಿಂದ ನೋಡಲು ಹೋಗುವಿರಿ. ಮಹಿಳಾ ಉದ್ಯೋಗಿಗಳು ಹೆಚ್ಚಿನ ಸ್ಥಾನವನ್ನು ಪಡೆಯುವಿರಿ. ಯಾರನ್ನೂ ದೂರುವ ಅವಶ್ಯಕತೆ ಇಲ್ಲ. ನಿಮ್ಮ ಕೆಲಸವನ್ನು ಸರಿ ಮಾಡಿಕೊಂಡು ಹೋಗುವಿರಿ. ನಿಮ್ಮ ಮಾತಿನಿಂದ ತಾಯಿಗೆ ಬೇಸರವಾಗಲಿದೆ. ನಿಮ್ಮನ್ನು ನೀವು ಬದಲಿಸಿಕೊಳ್ಳುವಿರಿ. ಕಾನೂನಿನ ಸಮರದಲ್ಲಿ ರೋಚಕತೆ ಇರುವುದು. ಸಂಗಾತಿಯ ಕಿರಿಕಿರಿಯಿಂದ ನಿಮಗೆ ಕಷ್ಟವಾದೀತು.
ಲೋಹಿತಶರ್ಮಾ – 8762924271 (what’s app only)