Horoscope 29 August: ದಿನಭವಿಷ್ಯ, ವಿದ್ಯಾಭ್ಯಾಸಕ್ಕಾಗಿ ದೂರ ಪ್ರಯಾಣ, ಸ್ನೇಹ ಸಂಬಂಧವನ್ನು ಗಟ್ಟಿಗೊಳಿಸಿಕೊಳ್ಳುವಿರಿ

ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹಾಗಾದರೆ ಇಂದಿನ (2023 ಆಗಸ್ಟ್ 29) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

Horoscope 29 August: ದಿನಭವಿಷ್ಯ, ವಿದ್ಯಾಭ್ಯಾಸಕ್ಕಾಗಿ ದೂರ ಪ್ರಯಾಣ, ಸ್ನೇಹ ಸಂಬಂಧವನ್ನು ಗಟ್ಟಿಗೊಳಿಸಿಕೊಳ್ಳುವಿರಿ
ಪ್ರಾತಿನಿಧಿಕ ಚಿತ್ರ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಗಂಗಾಧರ​ ಬ. ಸಾಬೋಜಿ

Updated on: Aug 29, 2023 | 12:02 AM

ರಾಶಿ ಭವಿಷ್ಯ ಪ್ರತಿಯೊಬ್ಬರ ಜೀವನದಲ್ಲಿ ವಿಭಿನ್ನವಾಗಿರುತ್ತದೆ. ಪ್ರತಿನಿತ್ಯ ಬೆಳಗ್ಗೆ ಎದ್ದ ಕೂಡಲೇ ತಮ್ಮ ರಾಶಿ ಭವಿಷ್ಯ (Daily horoscope) ನೋಡುವುದು ಕೆಲವರಿಗೆ ಅಭ್ಯಾಸ. ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹೀಗೆ ಎಲ್ಲವನ್ನು ತಿಳಿದುಕೊಳ್ಳುತ್ತಾರೆ. ಜೊತೆಗೆ ಪಂಚಾಂಗವನ್ನು ಸಹ ಓದುತ್ತಾರೆ. ಹಾಗಾದರೆ ಇಂದಿನ (2023 ಆಗಸ್ಟ್ 29) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಮಘಾ, ಮಾಸ: ನಿಜ ಶ್ರಾವಣ, ಪಕ್ಷ: ಶುಕ್ಲ, ವಾರ: ಮಂಗಳ, ತಿಥಿ: ತ್ರಯೋದಶೀ, ನಿತ್ಯನಕ್ಷತ್ರ: ಶ್ರವಣಾ, ಯೋಗ: ಸೌಭಾಗ್ಯ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 21 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 45 ನಿಮಿಷಕ್ಕೆ, ರಾಹುಕಾಲ ಮಧ್ಯಾಹ್ನ 03:39 ರಿಂದ 05:12ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 09:27 ರಿಂದ 11:00ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:33 ರಿಂದ 02:06ರ ವರೆಗೆ.

ಮೇಷ ರಾಶಿ: ಮಕ್ಕಳನ್ನು ವಿದ್ಯಾಭ್ಯಾಸಕ್ಕಾಗಿ ದೂರ ಕಳಿಸುವಿರಿ. ಸ್ಥಾನಮಾನವನ್ನು ಪಡೆಯಲು ಯಾವುದಾದರೂ ಮಾರ್ಗವನ್ನು ಪಡೆಯುವಿರಿ. ಬೇರೆ ಬೇರೆ ಆಲೋಚನೆಯನ್ನು ಮಾಡುವಿರಿ. ಸ್ನೇಹ ಸಂಬಂಧವನ್ನು ಗಟ್ಟಿಗೊಳಿಸಿಕೊಳ್ಳುವಿರಿ. ಅನಗತ್ಯ ಕಾರ್ಯಗಳತ್ತ ಮನಸ್ಸು ಹೋಗುವುದು. ಸಂಗಾತಿಯು ನಿಮ್ಮ ಹಳೆಯ ವಿಚಾರವನ್ನು ನೆನಪಿಸಿ ಜಗಳವಾಡುವರು. ಜಲಭೀತಿಯು ನಿಮಗೆ ಆಗಲಿದೆ. ಯಾರನ್ನೋ ಮೆಚ್ಚಿಸಲು ಕೆಲಸ ಮಾಡಬೇಕಾಗಬಹುದು. ನಿಮ್ಮ‌ ಮಾತಿಗೆ ವಿರೋಧವು ಬರಬಹುದು. ನೀವು ನಿಶ್ಚಿಂತರಾಗಿರಿ.

ವೃಷಭ ರಾಶಿ: ಮನೆಯ ಕೆಲಸದಿಂದ ನಿಮಗೆ ಆಯಾಸವಾಗುವುದು. ಮಹಿಳೆಯರಿಗೆ ಉದ್ಯೋಗದಲ್ಲಿ ಬಡ್ತಿ ಸಿಗಲಿದೆ. ಅನಿರೀಕ್ಷಿತ ವಾರ್ತೆಯಿಂದ ಬೇಸರವಾಗಲಿದೆ. ಮಕ್ಕಳ ಜೊತೆ ಹೆಚ್ಚು ಸಮಯವನ್ನು ಕಳೆಯಲು ಇಷ್ಟಪಡುವಿರಿ. ಯಾರಾದರೂ ನಿಮಗೆ ಬೇಸರ ಮಾಡಿಸುವರು. ಆದರೆ ನಿಮಗೆ ಮೌನವೇ ಇಷ್ಟವಾದೀತು. ಇಬ್ಬಗೆಯ ಮನಃಸ್ಥಿತಿಯನ್ನು ಇಟ್ಟಕೊಂಡರೆ ಕಷ್ಟವಾಗುವುದು. ಕುಟುಂಬದ ಹತ್ತಿರದವರನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ. ವೈದ್ಯ ವೃತ್ತಿಯಲ್ಲಿ ಅಪವಾದವು ಬರಬಹುದು. ಮಾನಸಿಕ ಕಿರಿಕಿರಿಯಿಂದ ನೆಮ್ಮದಿ ಸಿಗಲಿದೆ.

ಮಿಥುನ ರಾಶಿ: ಯಾವಾಗಲೂ ಸಿಟ್ಟು ಮಾಡುತ್ತಿದ್ದರೆ ನಿಮ್ಮ‌ ಸಿಟ್ಟಿಗೆ ಯಾವ ಬೆಲೆಯೂ ಇರದು. ಪ್ರಾಪಂಚಿಕ ಸುಖದಲ್ಲಿ ಆಸಕ್ತಿಯು ಕಡಿಮೆ ಇರುವುದು. ಅಧ್ಯಾತ್ಮದ ವಿಚಾರಕ್ಕೆ ಹೆಚ್ಚು ಒತ್ತು ಕೊಡುವಿರಿ. ಇನ್ನೊಬ್ಬರ ದುಃಖಕ್ಕೆ ನೀವು ಸ್ಪಂದಿಸುವಿರಿ. ಎಲ್ಲರ ಜೊತೆ ಸಂತೋಷದಿಂದ ಇರಲು ಇಷ್ಟಪಡುವಿರಿ. ನಿಮ್ಮ ಭಾವನೆಗಳಿಗೆ ಬೆಲೆ ಕೊಡುವವರು ನಿಮಗೆ ಇಷ್ಟವಾಗುವರು. ಇಂದು ನೀವು ಸ್ವಾರ್ಥವನ್ನು ಬಿಟ್ಟು ಕೆಲಸ ಮಾಡಲು ಬಯಸುವಿರಿ. ಹಣಕಾಸಿನ ವಿಚಾರದಲ್ಲಿ ನಿಮಗೆ ಬಹಳ ಗೊಂದಲವಾಗಲಿದೆ. ಸಾಮಾಜಿಕ ಕಾರ್ಯವನ್ನು ಮಾಡಲು ಇಷ್ಟವಾಗುವುದು. ಎಲ್ಲ ಕೆಲಸವನ್ನೂ ನೀವೇ ಮಾಡಬೇಕೆಂಬ ಆಸೆ ಇರುವುದು.

ಕಟಕ ರಾಶಿ: ಹೊಂದಾಣಿಕೆಯ ಮನೋಭಾವವು ನಿಮಗೆ ಆಗದು. ಯಾರ ಜೊತೆಗೂ ನಿಮ್ಮ ವರ್ತನೆಯು ಸಹಜತೆಯಿಂದ ಇರದು. ಆಸ್ತಿಯ ವಿಚಾರದಲ್ಲಿ ಆಂತರಿಕ ಕಲಹವು ದೊಡ್ಡದಾಗಬಹುದು. ದಾಂಪತ್ಯದಲ್ಲಿ ಕೆಲವು ಮಾರ್ಪಾಡುಗಳನ್ನು ಮಾಡಿಕೊಳ್ಳಬೇಕಾಗುವುದು. ನಿಮ್ಮದೇ ಆದ ಕಾರ್ಯದಲ್ಲಿ ನೀವು ಮಗ್ನರಾಗುವಿರಿ. ವೃತ್ತಿಯಲ್ಲಿ ನಿಮಗೆ ಸಹಕಾರವು ಸಿಗದು. ನಾಲ್ಕಾರು ಕಾರ್ಯಗಳನ್ನು ಒಟ್ಟಿಗೇ ವಹಿಸಿಕೊಳ್ಳುವಿರಿ. ಪ್ರಯಾಣದಲ್ಲಿ ನೀವು ಎಚ್ಚರಿಕೆಯಿಂದ ಇರಬೇಕಾಗುವುದು. ಕೇಳಿದ್ದಕ್ಕಷ್ಟೇ ಉತ್ತರವನ್ನು ಕೊಟ್ಟು ಸುಮ್ಮನಾಗುವಿರಿ. ಸತ್ಯವನ್ನು ನೀವು ಮರೆಮಾಡಲು ಪ್ರಯತ್ನಿಸುವಿರಿ.

ಸಿಂಹ ರಾಶಿ: ಪ್ರೇಮವು ನಿಮಗೆ ಬಂಧನದಂತೆ ತೋರಬಹುದು. ಮಕ್ಕಳ ಪ್ರಗತಿಯಿಂದ ಸಂತೋಷವು ಇರಲಿದೆ. ಸಹೋದರರ ನಡುವೆ ವಿನಾಕಾರಣ ಆರಂಭವಾದ ವಾಗ್ವಾದವು ದ್ವೇಷವಾಗಿ ಪರಿಣಮಿಸಬಹುದು. ನಿಮ್ಮ ಸೋಲನ್ನು ಒಪ್ಪಿಕೊಳ್ಳಲು ನೀವು ಸಿದ್ಧರಿರುವುದಿಲ್ಲ. ನಿಮ್ಮ ಎಲ್ಲ ಕೆಲಸಗಳನ್ನು ಸಮಯಕ್ಕೆ ಸರಿಯಾಗಿ ಮುಗಿಸಿಕೊಳ್ಳುವುದು ಕಷ್ಟವಾದೀತು. ಯಾರದೋ ಒತ್ತಾಯಕ್ಕೆ ಹೂಡಿಕೆಯನ್ನು ಮಾಡಲು ಇಚ್ಛಿಸುವಿರಿ. ಉತ್ತಮ‌ ಭೋಜನವನ್ನು ಮಾಡುವಿರಿ. ಎಲ್ಲರನ್ನೂ ಸಮಾನವಾಗಿ ಕಾಣುವುದು ನಿಮಗೆ ಬರದು. ಉಪಕಾರಕ್ಕೆ ಪ್ರತ್ಯುಪಕಾರವನ್ನು ಮಾಡುವ ಮನೋಭಾವವು ಬರಬಹುದು.

ಕನ್ಯಾ ರಾಶಿ: ದೇಹ ಪೀಡೆಯು ಅಧಿಕವಾಗಿ ಇರಲಿದೆ. ಇದರಿಂದ ನಿಮ್ಮ ಇಂದಿನ ಕೆಲಸವೂ ವಿಳಂಬವಾಗುವುದು. ಅನಿವಾರ್ಯ ನೀವು ಪ್ರಯಾಣವನ್ನು ಮಾಡಬೇಕಾಗಿಬರಬಹುದು. ಸರ್ಕಾರದ ನಿಮ್ಮ‌ ಕೆಲಸಗಳು ಮುಂದೆ ಹೋಗದು. ನೀವು ಕಷ್ಟವನ್ನು ಅನುಭವಿಸುತ್ತಿರುವುದು ಸುಖವಿದೆ ಎಂಬ ಕಾರಣಕ್ಕೆ. ಸಿಗಬೇಕಾದ ವಸ್ತುವನ್ನು ನೀವು ಬಹಳ ಪ್ರಯತ್ನದಿಂದ ಪಡೆದುಕೊಳ್ಳುವಿರಿ. ಸಂಸಾರದಲ್ಲಿ ನಿಮಗೆ ಆಸಕ್ತಿಯು ಕಡಿಮೆ ಆಗಬಹುದು. ಯಾರ ಜೊತೆಯೂ ನಿಮ್ಮ ಮಾತು ಸರಿಯಾಗಿ ಇರದು. ಭೂವ್ಯವಹಾರದಿಂದ ನಿಮಗೆ ಕೆಲವು ತೊಂದರೆಗಳೂ ಬರಲಿವೆ. ನಿಮ್ಮನ್ನು ಯಾರೂ ಸೇರಿಸಿಕೊಳ್ಳದಿರುವುದರಿಂದ ಬಹಳ ದುಃಖಿಸುವಿರಿ.

ತುಲಾ ರಾಶಿ: ಇಂದು ನೀವು ಅಂದುಕೊಂಡ ವಿಚಾರದಲ್ಲಿ ಜಯವು ಸಿಗಲಿದೆ. ಕೆಟ್ಟವರ ಸಹವಾಸದಿಂದ ನಿಮಗೆ ಅಪಕೀರ್ತಿಯು ಬರುವುದು. ಕೆಲವು ವಿಚಾರಗಳಿಗೆ ನೀವು ಪ್ರತಿಕ್ರಿಯೆಯನ್ನು ನೀಡಬೇಕಿಲ್ಲ. ನಿಮ್ಮ ಕೆಲಸಗಳನ್ನು ನೀವು ಮುಂದುರಿಸುವಿರಿ. ಇಷ್ಟಪಟ್ಟವರು ಸಿಗದೇಹೋಗಬಹುದು. ಅವಕಾಶಗಳನ್ನು ಬಿಟ್ಟರೂ ನೀವು ಬೇಸರವನ್ನು ವ್ಯಕ್ತಪಡಿಸುವುದಿಲ್ಕ. ಕೋಪವನ್ನು ಕಡಿಮೆ‌ ಮಾಡಿಕೊಂಡರೂ ತಾಳ್ಮೆ ಹೆಚ್ಚು ಮಾಡಿಕೊಳ್ಳಬೇಕಾಗುವುದು. ನಿಮ್ಮ‌ ಮನಸ್ಸಿಗೆ ಬಾರದೇ ಯಾರಿಗೂ ಏನನ್ನೂ ಕೊಡುವುದಿಲ್ಲ. ಬಂಧುಗಳ ವಿಚಾರದಲ್ಲಿ ನಿಮಗೆ ಅಸಮಾಧನವು ಇರಲಿದ್ದು ಅದನ್ನು ಬೇರೆಯವರ ಬಳಿ ಹೇಳಿಕೊಳ್ಳುವಿರಿ. ಸೌಂದರ್ಯಕ್ಕೆ ಸಂಬಂಧಿಸಿದ ಉದ್ಯಮಕ್ಕೆ ಹೆಚ್ಚು ಲಾಭವಿರಲಿದೆ.

ವೃಶ್ಚಿಕ ರಾಶಿ: ಮನೆಯಲ್ಲಿಯೇ ಇದ್ದು ಬೇಸರ ಬಂದ ಕಾರಣ ಎಲ್ಲಿಗಾದರೂ ವಿಹಾರಕ್ಕೆ ಹೋಗುವಿರಿ. ಅಧಿಕಾರಿಗಳಿಂದ ನಿಮ್ಮ ಉದ್ಯಮದ ಪರಿಶೀಲನೆ ನಡೆಯುವುದು. ನಿಮಗೆ ಬೇಡ ಎನಿಸಿದ ವಿಚಾರವೇ ಮತ್ತೆ ಮತ್ತೆ ಕೇಳಿಬರುವುದು. ಮನೆಯಲ್ಲಿ ಜಗಳವಾಡಿ ನೀವು ದೂರವಿರಬೇಕಾಗುವುದು. ನೀವು ನಿರೀಕ್ಷಿಸಿದ ಸ್ಥಳದಲ್ಲಿ ಉದ್ಯೋಗವು ಸಿಗದೇ ಬೇಸರವಾಗುವುದು. ಮಕ್ಕಳ ವಿಚಾರದಲ್ಲಿ ನೀವು ಉತ್ತರಿಸಬೇಕಾಗಬಹುದು. ನಿಮ್ಮ ಇಚ್ಛೆಯನ್ನು ಪೂರೈಸಿಕೊಳ್ಳಲು ಸಾಧ್ಯವಾಗದು. ಕೊಟ್ಟ ಹಣವನ್ನು ವಾಪಾಸು ಪಡೆಯಲು ನೀವು ಬಹಳ ಪ್ರಯತ್ನಿಸುವಿರಿ. ಪುಣ್ಯಸ್ಥಳಗಳಿಗೆ ಹೋಗುವಿರಿ. ಆದಾಯಕ್ಕೆ ಸಮನಾದ ಖರ್ಚು ಇರಲಿದೆ.

ಧನು ರಾಶಿ: ಮನಸ್ಸು ಸ್ಥಿರವಿಲ್ಲದೇ ಇರುವ ಕಾರಣ ನಿಮ್ಮ ಗುರಿಯೂ ಬದಲಾಗುವುದು. ಸಮಯ ಸ್ಫೂರ್ತಿಯಿಂದ ಕಾರ್ಯವನ್ನು ಸಾಧಿಸಿ. ಪ್ರೇಮದಲ್ಲಿ ಅಂತಿಮವಾಗಿ ನೀವೇ ಯಶಸ್ಸನ್ನು ಸಾಧಿಸುವಿರಿ. ಖುಷಿಯಿಂದ ಹಣವನ್ನು ಖರ್ಚು ಮಾಡುವಿರಿ. ನಿಮ್ಮ ಮಾತು ತೂಕದ್ದಾಗಿರಲಿದೆ. ನಿಮ್ಮ ಕೆಲಸಗಳನ್ನು ಮೇಲಧಿಕಾರಿಗಳು ನೋಡಬಹುದು. ತುರ್ತು ಮಾಡಬೇಕಾದುದನ್ನು ಮಾಡಿ. ವ್ಯಾಪಾರದಲ್ಲಿ ನೀವು ತಜ್ಞರಾಗಿರುವಿರಿ. ಸಂತೋಷದ ವಿಚಾರವನ್ನು ಹಂಚಿಕೊಳ್ಳಲು ನೀವು ಮುಜುಗರ ಪಡಬಹುದು. ಇಷ್ಟವಿಲ್ಲದಿದ್ದರೂ ಇನ್ನೊಬ್ಬರ ಮಾತಿಗೆ ನೀವು ಬೆಂಬಲ ಕೊಡಬೇಕಾದೀತು. ಸಂಕಷ್ಟದ ಕಾರಣ ದೈವದಲ್ಲಿ ಭಕ್ತಿ ಇರಲಿದೆ.

ಮಕರ ರಾಶಿ: ಕುಟುಂಬದ ನೆಮ್ಮದಿಯು ನಿಮ್ಮ ಮಾತಿನಿಂದ ಕದಡುವುದು. ಅನ್ನಿಸಿದ್ದನ್ನು ಕೂಡಲೇ ಹೇಳುವುದು ಬೇಡ. ಸಮಯಕ್ಕಾಗಿ ಕಾಯಿರಿ. ಸ್ವಂತ ಶ್ರಮದಿಂದ ಗಳಿಸಿದ್ದು ನಿಮಗೆ ಆಪ್ತವೆನಿಸುವುದು. ಮಾಡಬೇಕೆಂದು ಹೊರಟ ಕೆಲಸಕ್ಕೆ ತೊಂದರೆ ಬಂದರೂ ಬಿಡದೇ ಮುಂದುವರಿಸುವಿರಿ. ಆದಾಯದ ವಿಚಾರದಲ್ಲಿ ನೀವು ಬಹಳ ಹಿಂದೆ. ನಿಮ್ಮ ಮೇಲಿನ ಗೌರವವು ನಿಮ್ಮ ನಡವಳಿಕೆಯಿಂದ ಇನ್ನೂ ಹೆಚ್ಚಾಗಬಹುದು. ಸುಖವಾದ ಪ್ರಯಾಣವನ್ನು ಮಾಡುವಿರಿ. ದಾಂಪತ್ಯದಲ್ಲಿ ಮನಸ್ತಾಪವು ಏಳಬಹುದು.‌ ಆದರೆ ಅದನ್ನು ಮುಂದುವರಿಸಲು ಬಿಡದೇ ಜಾಣ್ಮೆಯಿಂದ ಅಲ್ಲೇ ಮೊಟಕುಗೊಳಿಸುವಿರಿ. ಆಟವಾಡುವಾಗ ಜಾಗರೂಕರಾಗಿರಿ. ಪೆಟ್ಟಾಗುವ ಸಾಧ್ಯತೆ ಇದೆ.

ಕುಂಭ ರಾಶಿ: ಅಪರಿಚಿತರ ಜೊತೆ ಜಗಳವಾಡಿ ಏನು ಸಾಧಿಸುವಿರಿ? ಈ ಇರುವವರು ಇನ್ನು ನಿಮಗೆ ಸಿಗದೇ ಹೋಗಬಹುದು. ಮನಸ್ಸನ್ನು ಹಾಳು ಮಾಡಿಕೊಳ್ಳುವಿರಿ. ವಿದ್ಯಾಭ್ಯಾಸದಲ್ಲಿ ಪ್ರಗತಿಯು ಇರಲಿದ್ದು ಅಡೆತಡೆಗಳೂ ಇರಲಿವೆ. ನಿಮ್ಮ ಒರಟಾದ ಮಾತು ನಿಮ್ಮ ಕೆಳಗೆ ಕೆಲಸ ಮಾಡುವವರಿಗೆ ಹಿಂಸೆ ಆಗಬಹುದು. ನಿಯಮದ ಉಲ್ಲಂಘನೆ‌ಯ ಕಾರಣ ದಂಡ ತೆರಬೇಕಾದ ಸ್ಥಿತಿ ಇರಲಿದೆ. ನಿಮಗೆ ಸಿಗುವ ಅವಕಾಶಗಳನ್ನು ಅನ್ಯರು ಬಳಸಿಕೊಳ್ಳುವರು. ಅತಿಯಾದ ಉತ್ಸಾಹದಲ್ಲಿರುವ ನಿಮಗೆ ಸಂಗಾತಿಯ ಮಾತು ಉತ್ಸಾಹ ಭಂಗವನ್ನು ಮಾಡುವುದು. ಹಳೆಯ ಸ್ನೇಹಿತರು ಉಪಕಾರ ಸ್ನರಣೆಯ ಜೊತೆ ಸಹಾಯ ಮಾಡುವರು. ನಿಮಗೆ ನೀವು ಒಂಟ ಎನಿಸಬಹುದು.

ಮೀನ ರಾಶಿ: ಎಲ್ಲರನ್ನೂ ತೃಪ್ತಿಪಡಿಸಲು ಸಾಧ್ಯವಾಗದು. ನಿಮ್ಮ ದಾರಿಯ ಬಗ್ಗೆ ನಿಮಗೆ ವಿಶ್ವಾಸವು ಇರಲಿ. ನಿಮ್ಮಿಂದ ಕೆಲಸವನ್ನು ಮಾಡಿಕೊಳ್ಳಲು ಹೊಗಳಬಹುದು. ಉದ್ಯೋಗದಲ್ಲಿ ಬಡ್ತಿಯನ್ನು ನಿರೀಕ್ಷಿಸಬಹುದು. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿಯು ಕಡಿಮೆ ಆಗಬಹುದು. ನಿಮ್ಮ ಮೇಲೆ‌ ಕೆಲವು ಹಿತಶತ್ರುಗಳು ಆರೋಪವನ್ನು ಮಾಡಬಹುದು. ನಿಮ್ಮ ಇಂದಿನ ಕಾರ್ಯದಲ್ಲಿ ಶ್ರದ್ಧೆಯ ಕಡಿಮೆ ಆಗಬಹುದು. ತಿಳಿವಳಿಕೆಯ ಕೊರತೆಯಿಂದ ನೀವು ಇನ್ನೊಬ್ಬರ‌ ಮುಂದೆ ತೋರಿಸಿಕೊಳ್ಳುವುದಿಲ್ಲ. ನಿಮಗೆ ಇಂದು ಚಂಚಲವಾದ ಮನಸ್ಸು ಇರಲಿದ್ದು ಸ್ಪರ್ಧೆಯಲ್ಲಿ ಸೋಲಬೇಕಾಗಬಹುದು.

ಲೋಹಿತಶರ್ಮಾ-8762924271 (what’s app only)

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ