Daily Horoscope 29 July: ನಿಮಗೆ ಸಿಕ್ಕ ಅವಕಾಶಗಳನ್ನು ಬೇರೆಯವರಿಗೆ ಬಿಟ್ಟುಕೊಡುವಿರಿ

ಇಂದಿನ (2023 ಜುಲೈ​ 29) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

Daily Horoscope 29 July: ನಿಮಗೆ ಸಿಕ್ಕ ಅವಕಾಶಗಳನ್ನು ಬೇರೆಯವರಿಗೆ ಬಿಟ್ಟುಕೊಡುವಿರಿ
ಪ್ರಾತಿನಿಧಿಕ ಚಿತ್ರ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಗಂಗಾಧರ​ ಬ. ಸಾಬೋಜಿ

Updated on: Jul 29, 2023 | 12:02 AM

ರಾಶಿ ಭವಿಷ್ಯ ಪ್ರತಿಯೊಬ್ಬರ ಜೀವನದಲ್ಲಿ ವಿಭಿನ್ನವಾಗಿರುತ್ತದೆ. ಪ್ರತಿನಿತ್ಯ ಬೆಳಗ್ಗೆ ಎದ್ದ ಕೂಡಲೇ ತಮ್ಮ ರಾಶಿ ಭವಿಷ್ಯ (Daily horoscope) ನೋಡುವುದು ಕೆಲವರಿಗೆ ಅಭ್ಯಾಸ. ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹೀಗೆ ಎಲ್ಲವನ್ನು ತಿಳಿದುಕೊಳ್ಳುತ್ತಾರೆ. ಜೊತೆಗೆ ಪಂಚಾಗವನ್ನು ಸಹ ಓದುತ್ತಾರೆ. ಹಾಗಾದರೆ ಇಂದಿನ (2023 ಜುಲೈ​ 29) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕರ್ಕಾಟಕ ಮಾಸ, ಮಹಾನಕ್ಷತ್ರ: ಪುಷ್ಯಾ, ಮಾಸ: ಅಧಿಕ ಶ್ರಾವಣ, ಪಕ್ಷ: ಶುಕ್ಲ, ವಾರ: ಶನಿ, ತಿಥಿ: ಏಕಾದಶೀ, ನಿತ್ಯನಕ್ಷತ್ರ: ಮೂಲಾ, ಯೋಗ: ಬ್ರಹ್ಮ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 16 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 01 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 09:27 ರಿಂದ 11:03ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 02:14 ರಿಂದ 03:50ರ ವರೆಗೆ, ಗುಳಿಕ ಕಾಲ ಬೆಳಗ್ಗೆ 06:16 ರಿಂದ 07:52ರ ವರೆಗೆ.

ಮೇಷ: ಸಮಾರಂಭಗಳಿಗೆ ಭೇಟಿ ಕೊಡುವಿರಿ. ಪ್ರೀತಿಪಾತ್ರರು ನಿಮಗೆ ಸಹಕಾರವನ್ನು ಮಾಡುವರು. ಆಪ್ತರನ್ನು ನೀವು ದೂರ ಮಾಡಿಕೊಳ್ಳುವುದು ಕಷ್ಟವಾಗಬಹುದು. ಮನೆಯ ಕೆಲಸದಲ್ಲಿ ನೀವು ತೊಡಗಿಕೊಳ್ಳುವಿರಿ. ದೂರ ಬಂಧುಗಳ ಭೇಟಿಯಾಗಬಹುದು. ಪರೀಕ್ಷೆಯ ತಯಾರಿಯಲ್ಲಿ ನೀವು ಸಮಯವನ್ನು ಕಳೆಯುವಿರಿ. ಸೌಲಭ್ಯಗಳನ್ನು ನೀವು ಪಡೆದುಕೊಳ್ಳಲಿದ್ದೀರಿ. ಗೌರವಗಳು ನಿಮಗೆ ಸಿಗಬಹುದು. ಕೆಲವು ವಿಚಾರವು ನಿಮಗೆ ಗೊತ್ತಾಗದೇ ಇರುವುದು ಬೇಸರ ತರಿಸಬಹುದು. ಮನೆಯರ ಮೇಲೆ ನೀವು ಸಿಟ್ಟಾಗುವಿರಿ. ಯಾರ ಮಾತನ್ನೂ ಕೇಳುವ ಮಾನಸಿಕತೆ ಇರುವುದಿಲ್ಲ.

ವೃಷಭ: ನಿಮ್ಮ‌ ಕೆಲಸವು ಕೇವಲ ತಿರುಗಾಟದಲ್ಲಿ ಮುಕ್ತಾಯವಾಗಲಿದೆ. ಸೌಂದರ್ಯಕ್ಕೆ ಹೆಚ್ಚು ಒತ್ತುಕೊಡುವಿರಿ. ಆಲಂಕಾರಿಕ ವಸ್ತುಗಳ ಬಗ್ಗೆ ಹೆಚ್ಚು ಮೋಹವಿರುವುದು. ನಿಮ್ಮ ವರ್ತನೆಯು ಹಲವರಿಗೆ ಇಷ್ಟವಾಗಲಿದೆ. ಬಂಧುಗಳು ನಿಮ್ಮ ಬಗ್ಗೆ ಹಗುರವಾದ ಮನಃಸ್ಥಿತಿಯನ್ನು ಇಟ್ಟುಕೊಳ್ಳುವರು. ಸಂಗಾತಿಯ ಜೊತೆ ಪ್ರೀತಿಯನ್ನು ಹಂಚಿಕೊಳ್ಳುವಿರಿ. ಕೃಷಿಕರು ಅಧಿಕ ಲಾಭವನ್ನು ಪಡೆಯುವರು. ಅಪರಿಚಿತರ ಸಹವಾಸವನ್ನು ಕಡಿಮೆ ಮಾಡಿಕೊಳ್ಳಿ. ಧನನಷ್ಟವಾಗುವ ಸಾಧ್ಯತೆ ಇದೆ. ಆರೋಗ್ಯದಲ್ಲಿ ವ್ಯತ್ಯಾಸ ಆಗಬಹುದು.

ಮಿಥುನ: ಅವಕಾಶಗಳನ್ನು ನೀವು ಬಿಟ್ಟುಕೊಟ್ಟು ದೊಡ್ಡವರಾಗಲು ಬಯಸುವಿರಿ. ಕೆಟ್ಟ ಮಾತುಗಳನ್ನು ಇನ್ನೊಬ್ಬರ ಬಗ್ಗೆ ಆಡಲಿದ್ದೀರಿ. ನಿರಂತರ ಕ್ರಿಯಾಶೀಲತೆಯು ನಿಮ್ಮ ಮಾನಸಿಕ ಒತ್ತಡವನ್ನು ನಿವಾರಿಸಿ ಉತ್ಸಾಹವನ್ನು ತಂದುಕೊಡುವುದು. ಸರ್ಕಾರಿ ಕೆಲಸದಲ್ಲಿ ಇರುವರಿಗೆ ತೊಂದರೆಗಳು ಬರಬಹುದು. ಸಹೋದ್ಯೋಗಿಗಳು ನಿಮ್ಮ ವರ್ತನೆಯ ಮೇಲೆ ಕಣ್ಣಿಟ್ಟಿರುವರು. ಭೂಮಿಯ ವ್ಯವಹಾರವನ್ನು ಮಾಡುವ ಆಪ್ತರನ್ನು ಜೊತೆಗೆ ಇಟ್ಟುಕೊಳ್ಳುವುದು ಉತ್ತಮ. ಕಳೆದುಕೊಂಡ ವಸ್ತುವು ನಿಮಗೆ ಸಿಕ್ಕಿ ಸಂತೋಷವಾಗಲಿದೆ. ಮನೆಯಲ್ಲಿ ಧಾರ್ಮಿಕ ಕಾರ್ಯಗಳು ನಡೆಯಲಿವೆ.

ಕಟಕ: ಶುಭಕಾರ್ಯದಲ್ಲಿ ಭಾಗವಹಿಸುವಿರಿ. ಮನೆಯಿಂದ ದೂರ ಇರುವಿರಿ. ಸಜ್ಜನರ ಸಹವಾಸವನ್ನು ಇಷ್ಟಪಡುವಿರಿ. ಮಾತುಗಳನ್ನು ನೋವಾಗುವಂತೆ ಆಡುವಿರಿ. ಭೋಗವಸ್ತುಗಳ ಖರೀದಿಯನ್ನು ಮಾಡುವಿರಿ. ನಿಮ್ಮ ಗೌರವಕ್ಕೆ ತೊಂದರೆಯಾಗುವ ಕೆಲಸವನ್ನು ಮಾಡುವುದು ಬೇಡ. ಹಿರಿಯ ಹಿತವಚನವು ನಿಮಗೆ ಅಸಹ್ಯವಾಗುವುದು. ಆಹಾರದಿಂದ ನಿಮಗೆ ಅನಾರೋಗ್ಯವು ಆಗುವುದು. ಸಂಗಾತಿಯ ಮಾತುಗಳನ್ನು ವಿರೋಧಿಸುವಿರಿ. ಇನ್ನೊಬ್ಬರಿಗೆ ಚುಚ್ಚಿ ಮಾತನಾಡಲಿದ್ದೀರಿ. ಸುಲಭವಾಗಿ ಸಿಗುವುದನ್ನು ಬಿಟ್ಟುಕೊಡುವಿರಿ.

ಸಿಂಹ: ರಾಜಕಾರಣಿಗಳಿಗೆ ಹೆಚ್ಚಿನ ಬೆಂಬಲವು ಸಿಗಲಿದ್ದು ಜನರ ಕಾರ್ಯವನ್ನು ಮಾಡಲು ಇಚ್ಛೆಪಡುವಿರಿ. ಮಾನಸಿಕ ಒತ್ತಡದಿಂದ ದೂರವಾಗಲು ಏಕಾಂತವನ್ನು ಬಯಸುವಿರಿ. ಹಣಕಾಸಿನ ವ್ಯವಹಾರವು ಸರಿಯಾಗಿ ಇಟ್ಟುಕೊಳ್ಳಿ. ಪೋಷಕರ ಜೊತೆ ನಿಮ್ಮ ಸಮಯವು ಆನಂದದಿಂದ ಇರಲಿದೆ. ನಿಮ್ಮ ಮನಸ್ಸು ಯಾವುದೋ ಆಲೋಚನೆಯಲ್ಲಿ ಮಗ್ನವಾಗುವುದು. ಸ್ನೇಹಿತರ ಸಲಹೆಗಳು ನಿಮ್ಮ ಉದ್ಯಮಕ್ಕೆ ಸಹಕಾರಿಯಲಿದೆ. ವಿದ್ಯಾಭ್ಯಾಸವನ್ನು ಹೆಚ್ಚು ಮಾಡಬೇಕಾಗಿ ಬರಬಹುದು. ಮಕ್ಕಳ ಸುಖವನ್ನು ಅನುಭವಿಸುವಿರಿ. ಅಧಿಕಾರವನ್ನು ಸದುಪಯೋಗ ಮಾಡಿಕೊಳ್ಳುವಿರಿ.

ಕನ್ಯಾ: ನಿಮ್ಮ ವಿರೋಧಿಗಳು ಹೆಚ್ಚಾಗುವ ಸಾಧ್ಯತೆ ಇದೆ. ಇಂದು ನಿಮಗೆ ಒತ್ತಡವನ್ನು ನಿಭಾಯಿಸುವುದು ಕಷ್ಟವಸಲಾದೀತು. ಕಷ್ಟದಲ್ಲಿ ಇರುವವರಿಗೆ ಕರುಣೆ ತೋರಿಸುವಿರಿ. ಕೈಯಲ್ಲಿ ಆದ ಸಹಾಯವನ್ನು ಮಾಡುವಿರಿ. ನಿಮ್ಮ ರೋಗಕ್ಕೆ ವೈದ್ಯಕೀಯ ಚಿಕಿತ್ಸೆಯ ಅವಶ್ಯಕತೆ ಇರಲಿದೆ. ಧಾರ್ಮಿಕ ಆಚರಣೆಗೆ‌ ಮನಸ್ಸಿದ್ದರೂ ಸಮಯದ ಹಾಗೂ ಸನ್ನಿವೇಶಗಳು ಬಾರದೇ ಹೋಗಬಹುದು. ಅಧಿಕ ಮೌಲ್ಯವನ್ನು ಕೊಟ್ಟು ಮನೆಗೆ ಬೇಕಾದ ವಸ್ತುಗಳನ್ನು ಖರೀದಿಸುವಿರಿ. ಅಸಭ್ಯ ವರ್ತನೆಯಿನಿಂದ ಬೈಗುಳವು ಸಿಗಬಹುದು. ಒಂದೇ ವಿಚಾರಕ್ಕೆ ದಂಪತಿಗಳ ನಡುವೆ ಕಲಹವಾಗುತ್ತಲೇ ಇರುವುದು.

ತುಲಾ: ಮಕ್ಕಳಿಂದ ತೊಂದರೆ ಬರಬಹುದು. ಭೂಮಿಯ ವಿಚಾರದಲ್ಲಿ ನಿಮಗೆ ನಷ್ಟವಾಗಬಹುದು. ಮನಸ್ಸಿನ ನಿಯಂತ್ರಣವನ್ನು ಸಾಧಿಸುವ ಅವಶ್ಯಕತೆ ಇದೆ. ಹಣದ ದುರ್ಬಳಕೆಯನ್ನು ಮಾಡುವ ಸಾಧ್ಯತೆ ಇದೆ. ಕುಟುಂಬದ ತೊಡಕುಗಳನ್ನು ಅತ್ಯಂತ ಸೂಕ್ಷ್ಮವಾಗಿ ನಿಭಾಯಿಸುವಿರಿ. ಇನ್ನೊಬ್ಬರಿಗೆ ಸಹಾಯವನ್ನು ಮಾಡುವ ಇಚ್ಛೆಯು ಇರಲಿದೆ. ಅಮೂಲ್ಯವಾದ ವಸ್ತುವು ಕಣ್ಮರೆಯಾಗಿ ಆತಂಕವನ್ನು ಸೃಷ್ಟಿಸಬಹುದು. ಮಕ್ಕಳ ಜೊತೆ ಹೆಚ್ಚಿನ ಸಮಯವನ್ನು ಕಳೆಯುವಿರಿ. ಹಿರಿಯರ ಭೇಟಿಯು ನಿಮಗೆ ಸಂತೋಷವನ್ನು ಜ್ಞಾನವನ್ನೂ ಕೊಡಬಹುದು.

ವೃಶ್ಚಿಕ: ಸಾಲ ಕೊಟ್ಟ ಹಣವು ನಿಮಗೆ ಮರಳಿಬರಬಹುದು. ನಿಮಗೆ ಖಾಸಗಿ ಸಂಸ್ಥೆಯೊಂದನ್ನು ಮುನ್ನಡೆಸುವ ಜವಾಬ್ದಾರಿಯು ಸಿಗಬಹುದು. ಇನ್ನೊಬ್ಬರ ನೋವಿಗೆ ಸ್ಪಂದಿಸುವುದು ನಿಮಗೆ ಆಗದು. ನೀವು ತೆಗೆದುಕೊಂಡ ತೀರ್ಮಾನವನ್ನು ಇತರರು ಬದಲಿಸಿದ್ದು ನಿಮ್ಮ ಕೋಪಕ್ಕೆ ಕಾರಣವಾಗಲಿದೆ. ನಿಮ್ಮ ಕೆಲಸಕ್ಕೆ ಕುಟುಂಬ ಬೆಂಬಲವಿರುವುದು. ಆರ್ಥಿಕ ಸಹಾಯವನ್ನು ನೀವು ಸ್ನೇಹಿರಿಂದ ಪಡೆದುಕೊಳ್ಳುವಿರಿ. ವ್ಯಾಪಾರದಲ್ಲಿ ಸ್ವಲ್ಪ ಲಾಭವು ಇರಲಿದೆ. ಜನರ ಜೊತೆ ಬೆರೆಯುವಾಗ ಎಚ್ಚರಿಕೆ ಇರಲಿ. ನಿಮ್ಮ ಬಗ್ಗೆ ಅಧಿಕರ ದುರುಪಯೋಗದ ಆರೋಪವು ಬರಬಹುದು. ಅಧಿಕಾರಕ್ಕೆ ನೀವು ಮಾಡಿದ ಪ್ರಯತ್ನವು ಸಫಲವಾಗಬಹುದು.

ಧನಸ್ಸು: ಭೂಮಿಯ ವ್ಯವಹಾರವನ್ನು ಮಾಡಲು ಬಹಳ ಉತ್ಸಾವಿರಲಿದ್ದು ಪಾಲುದಾರಿಕೆಯಲ್ಲಿ ಇನ್ನೊಬ್ಬರ ಜೊತೆ ಸೇರಿ ಮಾಡುವಿರಿ. ಕಛೇರಿಯಲ್ಲಿ ನಿಮ್ಮ ದಾಖಲೆಗಳನ್ನು ಸರಿಯಾಗಿ ಇಟ್ಟುಕೊಳ್ಳುವುದು ಮುಖ್ಯವಾಗಿರಲಿ. ನಿಮಗೆ ಬೇಡದ ವಸ್ತುಗಳನ್ನು ಯಾರಿಗಾದರೂ ಕೊಡುವ ಮನಸ್ಸಾಗುವುದು. ಆರ್ಥಿಕ ಪರಿಸ್ಥಿತಿಯನ್ನು ಬಲಪಡಿಸಿಕೊಳ್ಳುವುದು ಉತ್ತಮ. ನೀವು ಶುಭವಾರ್ತೆಯ ನಿರೀಕ್ಷೆಯಲ್ಲಿ ಇರುವಿರಿ. ಮಕ್ಕಳ ಭವಿಷ್ಯವನ್ನು ನಿರೂಪಿಸಲು ನಿಮಗೆ ಒದ್ದಾಟವಾಗಬಹುದು. ನಿಮ್ಮ ಜೊತೆ ಉದ್ಯೋಗದ ವೃದ್ಧಿಗೆ ಸಂಬಂಧಿಸಿದ ಮಾತುಕತೆಗಳು ನಡೆಯುವುದು.

ಮಕರ: ಸರ್ಕಾರದ ಅಧಿಕಾರಿಗಳಿಂದ ತೊಂದರೆಯಾಗುವ ಸಾಧ್ಯತೆ ಇದೆ. ಹಣಕಾಸಿನ ವಿಚಾರದಲ್ಲಿ ನಿಮಗೆ ಸಂಕಷ್ಟವು ಬರಬಹುದು. ಹಣಕಾಸಿಗೆ ಸಂಬಂಧಿಸಿದಂತೆ ಕೆಲವರನ್ನು ದೂರಮಾಡಿಕೊಳ್ಳುವಿರಿ. ಯಾರದೋ ಒತ್ತಾಯಕ್ಕಾಗಿ ಪ್ರಯಾಣ ಮಾಡಬೇಕಾಗಬಹುದು. ಪತ್ನಿಯ ಕಡೆಯಿಂದ ನಿಮಗೆ ಕೆಲವು ಸಹಾಯವನ್ನು ನಿರೀಕ್ಷಿಸಬಹುದು. ನಿಮ್ಮ ಪ್ರಾಮಾಣಿಕ ಪ್ರಯತ್ನಕ್ಕೆ ಫಲವು ಲಭಿಸುವುದು. ಖಾಸಗಿಯ ಸಮಾರಂಭದಲ್ಲಿ ಭಾಗವಹಿಸುವಿರಿ. ನಿಮಗೆ ಒತ್ತಡದ ಕೆಲಸವು ಬಂದು ಮನೆಯ ಕೆಲಸವು ಮರೆಯಾಗಬಹುದು.

ಕುಂಭ: ಶತ್ರುಗಳ ಬಾಧೆಯು ನಿಮಗೆ ಚಿಂತೆಯನ್ನು ಉಂಟುಮಾಡೀತು. ನಿಮ್ಮಷ್ಟಕ್ಕೆ ನೀವಿರಲು ಬಯಸುವಿರಿ. ಹಿಂದಿನಿಂದ ಮಾತನಾಡಿಕೊಳ್ಳುವರಿಗೆ ನೆಲೆಯನ್ನು ಕೊಡುವುದು ಬೇಡ. ಮಾತನಾಡಲು ನಿಮಗೆ ತೊಂದರೆಯಾದೀತು ಇಂದು ನಿಮಗಾದ ವಿಶ್ವಾಸದ್ರೋಹದಿಂದ ನೀವು ಸಿಟ್ಟಿಗೇಳುವಿರಿ. ನಿಮ್ಮದಲ್ಲದ ವಸ್ತುವನ್ನು ಪಡೆದುಕೊಳ್ಳಲು ಹಂಬಲಿಸುವಿರಿ. ಸಿಗದೇ ದುಃಖಿಸಬೇಕಾದೀತು. ಸಂಗಾತಿಯ ಪ್ರೀತಿಯು ಕಡಿಮೆಯಾಗಬಹುದು. ಕೆಲಸವನ್ನು ನಿಭಾಯಿಸಲು ಸರಳ ತಂತ್ರವನ್ನು ಬಳಸಿವಿರಿ. ಇನ್ನೊಬ್ಬರ ಬಗ್ಗೆ ಇರುವ ತಪ್ಪು ಕಲ್ಪನೆ ಇರಬಹುದು.

ಮೀನ: ರಪ್ತು ವ್ಯವಹಾರವನ್ನು ಇಂದು ಸುಗಮವಾಗಿ ನಡೆಸುವಿರಿ. ಸ್ತ್ರೀಯ ಕಾರಣದಿಂದ ನಿಮಗೆ ಲಾಭಗಳು ಆಗಲಿದೆ. ವಾಹನ ಖರೀದಿಗೆ ಬೇಕಾದ ವ್ಯವಸ್ಥೆಯನ್ನು ಇಂದು ಮಾಡಿಕೊಳ್ಳಲಿದ್ದೀರಿ. ಇಂದು ನಿಮ್ಮ ತಲೆಯಲ್ಲಿ ಅಪೂರ್ಣ ತುಂಬಿರಲಿವೆ. ನಿಮ್ಮ ಮಗನ ಮೇಲೆ ಸಂಪತ್ತಿನ‌ ವಿಚಾರವಾಗಿ ಅಪವಾದಗಳು ಕೇಳಿಬರಬಹುದು. ತುರ್ತು ಕಾರ್ಯಕ್ಕಾಗಿ ಮನೆಯಿಂದ ಹೊರಡುವಿರಿ. ಕುಟುಂಬದವರ ಸಹಾಯದಿಂದ‌ ನೀವು ಆತ್ಮವಿಶ್ವಾಸವನ್ನು ಪಡೆಯುವಿರಿ. ಹೇಳಿದ ಕೆಲಸಗಳು ಆಗದೇ ಇರುವುದರಿಂದ ನೌಕರರ ಮೇಲೆ ಸಿಟ್ಟಾಗುವಿರಿ.

-ಲೋಹಿತಶರ್ಮಾ – 8762924271 (what’s app only)

ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ