Horoscope 30 August: ದಿನಭವಿಷ್ಯ, ಈ ರಾಶಿಯವರು ಕೋಪವನ್ನು ಸ್ವಲ್ಪ ಕಡಿಮೆ ಮಾಡಿಕೊಳ್ಳುವುದು ಉತ್ತಮ

ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹಾಗಾದರೆ ಇಂದಿನ (2023 ಆಗಸ್ಟ್ 30) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

Horoscope 30 August: ದಿನಭವಿಷ್ಯ, ಈ ರಾಶಿಯವರು ಕೋಪವನ್ನು ಸ್ವಲ್ಪ ಕಡಿಮೆ ಮಾಡಿಕೊಳ್ಳುವುದು ಉತ್ತಮ
ಪ್ರಾತಿನಿಧಿಕ ಚಿತ್ರImage Credit source: iStock Photo
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: Rakesh Nayak Manchi

Updated on: Aug 30, 2023 | 12:00 AM

ರಾಶಿ ಭವಿಷ್ಯ ಪ್ರತಿಯೊಬ್ಬರ ಜೀವನದಲ್ಲಿ ವಿಭಿನ್ನವಾಗಿರುತ್ತದೆ. ಪ್ರತಿನಿತ್ಯ ಬೆಳಗ್ಗೆ ಎದ್ದ ಕೂಡಲೇ ತಮ್ಮ ರಾಶಿ ಭವಿಷ್ಯ (Daily horoscope) ನೋಡುವುದು ಕೆಲವರಿಗೆ ಅಭ್ಯಾಸ. ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹೀಗೆ ಎಲ್ಲವನ್ನು ತಿಳಿದುಕೊಳ್ಳುತ್ತಾರೆ. ಜೊತೆಗೆ ಪಂಚಾಂಗವನ್ನು ಸಹ ಓದುತ್ತಾರೆ. ಹಾಗಾದರೆ ಇಂದಿನ (2023 ಆಗಸ್ಟ್ 30) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರಮ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಮಘಾ, ಮಾಸ: ನಿಜ ಶ್ರಾವಣ, ಪಕ್ಷ: ಶುಕ್ಲ, ವಾರ: ಬುಧ, ತಿಥಿ: ಚತುರ್ದಶೀ, ನಿತ್ಯನಕ್ಷತ್ರ: ಧನಿಷ್ಠಾ, ಯೋಗ: ಶೋಭನ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 21 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 45 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:33 ರಿಂದ 02:06ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 07:55 ರಿಂದ 09:27ರ ವರೆಗೆ, ಗುಳಿಕ ಕಾಲ ಬೆಳಗ್ಗೆ 11:00 ರಿಂದ ಮಧ್ಯಾಹ್ನ 12:33ರ ವರೆಗೆ.

ಮೇಷ ರಾಶಿ:

ಗೆಲ್ಲಬೇಕು ಎನ್ನುವ ಉತ್ಕಟ ಇಚ್ಛೆ ಇರಲಿದೆ. ಸೋತರೂ ಗೆದ್ದವರ ಜೊತೆ ಶುಷ್ಕವಾದವನ್ನು ಮಾಡುವಿರಿ. ಸಹೋದರಿಯ ಜೊತೆ ವಾಗ್ವಾದವನ್ನು ಮಾಡುವಿರಿ. ಹಣದ ವಿಚಾರದಲ್ಲಿ ನಿಮಗೆ ಇಂದು ಮೋಹವು ಇರದು. ಇಂದು ನೀವು ಯಾರ‌ ಮಾತನ್ನೂ ನಂಬಲಾರಿರಿ. ಸ್ವತಃ ಅನುಭವವೇ ನಿಮಗೆ ಪ್ರಮಾಣವಾಗುವುದು. ಆರ್ಥಿಕ ತೊಂದರೆಯಿಂದ ಮನೆಯ ಕಾರ್ಯವು ಅರ್ಧಕ್ಕೇ ನಿಲ್ಲಬೇಕಾಗಬಹುದು. ಕುಟುಂಬದ ಜೊತೆ ನಿಮ್ಮ ಭವಿಷ್ಯವನ್ನು ಹಂಚಿಕೊಳ್ಳುವಿರಿ. ಅದೃಷ್ಟವನ್ನು ನಂಬಿಕೆ ಕುಳಿತುಕೊಳ್ಳುವುದು ಪ್ರಯೋಜನವಾಗದು. ಸಾಲಗಾರರ‌ ಉಪಟಳ ಹೆಚ್ಚಿರಲಿದೆ.

ವೃಷಭ ರಾಶಿ:

ಸ್ವಪ್ರತಿಷ್ಠೆಯನ್ನು ಬಿಟ್ಟು ನೀವು ಸಹಜವಾಗಿ ಇರಬೇಕಾಗುವುದು. ನಿಮ್ಮ ಅಹಂಕಾರದಿಂದ ಜನರನ್ನು ದೂರಮಾಡಿಕೊಳ್ಳುವಿರಿ. ನಿಮ್ಮ ವಸ್ತುಗಳು ಕಾಣೆಯಾಗಬಹುದು. ಅವ್ಯಕ್ತ ಭೀತಿಯು ನಿಮ್ಮ ಉತ್ಸಾಹವನ್ನು ಕಡಿಮೆ ಮಾಡುವುದು. ಮನೆಯ ಸದ್ಯರ ಜೊತೆ ಕಾಲಹರಣ ಮಾಡುವಿರಿ. ಶತ್ರುಗಳನ್ನು ನೀವು ಹೆಚ್ಚಿಸಿಕೊಳ್ಳುವ ಸಾಧ್ಯತೆ ಇದೆ. ನಿಮ್ಮ ಮಾತು ಹಾಸ್ಯದಿಂದ ಗಂಭೀರರೂಪಕ್ಕೆ ಹೋಗುವುದು. ಅತಿಥಿಸತ್ಕಾರವನ್ನು ನೀವು ಮಾಡುವಿರಿ. ದೈವರಾಧನೆಗೆ ಸ್ವಲ್ಪ ಸಮಯವನ್ನು ಕೊಡುವಿರಿ.

ಮಿಥುನ ರಾಶಿ:

ನಿಮ್ಮ ಕಾರ್ಯಗಳಿಗೆ ಇನ್ನೊಬ್ಬರಿಗೆ ಸಹಕಾರ ಸಿಗಲಿದೆ. ನೀವು ಖರೀದಿಸಿದ ಸ್ಥಿರಾಸ್ತಿ ದಾಖಲೆಗಳನ್ನು ಸರಿಯಾಗಿ ಆಪ್ತರ ಜೊತೆ ಚರ್ಚಿಸಿ. ಇನ್ನೊಬ್ಬರ ಸಂಕಷ್ಟವನ್ನು ಪರಿಹರಿಸಲು ಉತ್ಸಾಹದಿಂದ ಇರುವಿರಿ. ಮನೆಯಲ್ಲಿ ಸಂತೋಷದ ವಾತಾವರಣವು ಇರಲಿದೆ. ಸಂಗಾತಿಯ‌ ಆರೋಗ್ಯವು ಕೆಡಲಿದ್ದು ನಿಮಗೆ ತಿರುಗಾಡವು ಇರಲಿದೆ. ಸರ್ಕಾರಿ ಕೆಲಸದಲ್ಲಿ ತೊಡಕಾಗಬಹುದು. ಇಂದು ನೀವು ಪ್ರಭಾವಿ ವ್ಯಕ್ತಿಗಳ ಸಹಾಯದಿಂದ ನಿಮ್ಮ ಕೆಲಸವನ್ನು ಮಾಡಿಸಿಕೊಳ್ಳುವಿರಿ. ಉನ್ನತ ಅಧ್ಯಯನಕ್ಕೆ ನೀವು ಬೇರೆ ಕಡೆಗೆ ಹೋಗುವ ಸ್ಥಿತಿಯು ಬರಬಹುದು. ಸಣ್ಣವರ ವಿಚಾರದಲ್ಲಿ ಕಾಳಜಿ ಇರಲಿ.

ಕಟಕ ರಾಶಿ:

ಯಾರದೋ ಮೇಲಿನ ಸಿಟ್ಟನ್ನು ತೀರಿಸಿಕೊಳ್ಳಲು ನಿಮ್ಮವರ ಮೇಲೆ ಸಿಟ್ಟುಗೊಳ್ಳುವಿರಿ. ಎಲ್ಲ ವಿಚಾರದಲ್ಲಿಯೂ ಕಿರಿಕಿರಿ ಆಗಲಿದೆ. ಇಂದು ಸಮಾಧಾನದಿಂದ ಆಲೋಚಿಸುವುದು ನಿಮಗೆ ಬಾರದು.‌ ಬಂಧುಗಳ ಮನೆಗೆ ಹೋಗಲಿದ್ದೀರಿ. ಒಳ್ಳೆಯ ರೀತಿಯಲ್ಲಿ ನಿಮ್ಮನ್ನು ಸತ್ಕರಿಸುವರು. ಸಂಗಾತಿಯ ವಿಚಾರದಲ್ಲಿ ಉದ್ವೇಗಕ್ಕೆ ಒಳಗಾಗುವುದು ಬೇಡ. ನಿಮ್ಮ ಆರ್ಥಿಕ ಸ್ಥಿತಿಯೂ ಕ್ಷೀಣಿಸಬಹುದು. ಸಹೋದರರ ನಡುವೆ ಸಹಬಾಳ್ವೆ ಇರಲಿದೆ. ಪುಣ್ಯಕ್ಷೇತ್ರಗಳಿಗೆ ಹೋಗುವಿರಿ. ಅಂದುಕೊಂಡಿದ್ದನ್ನು ಸಾಧಿಸುವ ಛಲವಿರುವುದು.

ಸಿಂಹ ರಾಶಿ:

ಸ್ನೇಹಿತರಿಗಾಗಿ ನಿಮ್ಮ ಕಡೆಯಿಂದ ಸಾಲವನ್ನು ಕೊಡಿಸಿದ್ದು ಈಗ ನಿಮ್ಮ ತಲೆಗೇ ಅದು ಸುತ್ತಿಕೊಳ್ಳಲಿದೆ. ವಿಜ್ಞಾನಿಗಳಿಗೆ ಉತ್ತಮ ಅವಕಾಶಗಳು ಸಿಗುವುದು. ಸರ್ಕಾರಿ ಉದ್ಯೋಗಿಗಳಿಗೆ ಸ್ಥಾನ ಮಾನಗಳು ಹೆಚ್ಚಾಗಬಹುದು. ಅನಪೇಕ್ಷಿತ ಸ್ಥಳದಲ್ಲಿ ನೀವು ಇರಲು ಇಷ್ಟಪಡುವುದಿಲ್ಲ. ಅಗ್ನಿಯ ಭೀತಿಯು ನಿಮ್ಮನ್ನು ಕಾಡಬಹುದು. ಎಲ್ಲ ವಿಚಾರಗಳಿಗೆ ಸಂಗಾತಿಯನ್ನು ಬೊಟ್ಟು ಮಾಡಿ ತೋರಿಸುವುದು ಯೋಗ್ಯವಾಗದು. ಮಕ್ಕಳ ಹಠದ ಸ್ವಭಾವಕ್ಕೆ ನೀವು ಮಣಿಯಲೇ ಬೇಕು. ಯೋಜಿತ ಕಾರ್ಯವನ್ನು ಪೂರೈಸಲು ನಡುವೆ ಮಗೆ ತೊಂದರೆಗಳು ಬರಬಹುದು. ಕೈಗೊಂಡ ಕಾರ್ಯದಲ್ಲಿ ಅಪಯಶಸ್ಸು ಬರಬಹುದು.

ಕನ್ಯಾ ರಾಶಿ:

ನಿಮ್ಮ ನಿಜವಾದ ಗುಣವು ನಿಮಗೆ ಗೊತ್ತಾಗಲಿದೆ. ನಿದ್ರೆಯ ಕೊರತೆಯಿಂದ ನಿಮಗೆ ಆಲಸ್ಯವು ಇರಲಿದೆ. ನಿಮ್ಮ ಗೌರವಕ್ಕೆ ತೊಂದರೆಯಾಗಬಹುದು. ತುರ್ತು ಹಣಕಾಸಿನ ಹೊಂದಾಣಿಕೆಯು ನಿಮಗೆ ಕಷ್ಟವಾಗುವುದು. ನಿಮ್ಮ ಬಗ್ಗೆ ನಿಂದನೆಯ ಮಾತುಗಳು ಕೇಳಿಬರಬಹುದು. ದುರ್ವಿಚಾರಗಳನ್ನು ಯೋಚಿಸಿಬಾರದು ಎಂದುಕೊಂಡರೂ ಅದೇ ಬಂದು ನಿಮ್ಮನ್ನು ಹಿಂಸಿಸಬಹುದು.‌ ಬರಹಗಾರಿಗೆ ಹಿನ್ನಡೆಯಾಗಲಿದೆ. ಕಲಾವಿದರು ಉತ್ತಮ‌ ಅವಕಾಶಗಳನ್ನು ನಿಮ್ಮದಾಗಿಸಿಕೊಳ್ಳುವರು. ಇಂದು ಬಹಳ ದಿನಗಳಿಂದ ಉಳಿಸಿಕೊಂಡ ಸ್ವಂತ ಕಾರ್ಯವನ್ನು ನೀವು ಮಾಡಿ ಮುಗಿಸುವಿರಿ.

ತುಲಾ ರಾಶಿ:

ರಾಜಕೀಯ ವ್ಯಕ್ತಿಗಳು ತಮ್ಮ ಲಾಭವನ್ನು ಪಡೆದುಕೊಳ್ಳುವರು. ಯಾರನ್ನೋ‌ ನಂಬಿ ನೀವು ಇರುವ ಸಣ್ಣ ಕೆಲಸವನ್ನೂ ಬಿಟ್ಟು ಪಶ್ಚಾತ್ತಾಪಪಡುವಿರಿ. ಹಿತಶತ್ರುಗಳ ಪಿತೂರಿಯು ನಿಮ್ಮ ಏಳ್ಗೆಗೆ ಘಾಸಿ ನೀಡಬಹುದು. ಹೊಗಳಿಕೆಯ ಮೂಲಕ ನೀವು ಕೆಲಸವನ್ನು ಮಾಡಿಸಿಕೊಳ್ಳುವಿರಿ. ವಿವಾಹದ ಬಗ್ಗೆ ಗೊಂದಲ ಇರಲಿದೆ. ನಿಮ್ಮ ಗೌಪ್ಯ ವಿಚಾರಗಳನ್ನು ತಿಳಿದುಕೊಳ್ಳಲು ಬಯಸುವರು. ಆದಾಯಕ್ಕೆ ತಕ್ಕಹಾಗೆ ಖರ್ಚಿಗೂ ಸಿದ್ಧವಾಗಿರಬೇಕಾಗುವುದು. ನಿಮ್ಮ ವಿವಾಹದ ಬಗ್ಗೆ ತಂದೆಯವರೇ ನಿಮ್ಮ ಬಳಿ ಮಾತನಾಡಬಹುದು. ಉತ್ತಮ ಭೂಮಿಯ ಲಾಭಕ್ಕಾಗಿ ಓಡಾಟ ಮಾಡುವಿರಿ. ಒತ್ತಡದಿಂದ ನಿಮ್ಮ ಎಲ್ಲ ಚಿಂತೆಗಳೂ ಕಾಣಿಸಿಕೊಳ್ಳದು.

ವೃಶ್ಚಿಕ ರಾಶಿ:

ಪ್ರಾಮಾಣಿಕತೆಗೆ ಬೆಲೆ ಇಲ್ಲದಂತೆ ಆಗುವುದು. ಉದ್ಯಮದ ವಿಸ್ತಾರ ಮಾಡುವ ಬಗ್ಗೆ ಉನ್ನತ ಮಟ್ಟದಲ್ಲಿ ಚರ್ಚೆ ನಡೆಸುವಿರಿ. ಉದ್ಯೋಗಕ್ಕಾಗಿ ಓಡಾಡುವುದು ನಿಮಗೆ ಕಷ್ಟವಾಗಲಿದೆ. ಆರ್ಥಿಕ ನಷ್ಟದ ಆತಂಕವೂ ಇರಲಿದೆ. ಅಪರಿಚಿತರ ವಿದ್ಯಾಭ್ಯಾಸಕ್ಕೆ ನೀವು ಸಹಾಯ ಮಾಡುವಿರಿ. ವೃತ್ತಿಯನ್ನು ಶುದ್ಧವಾಗಿ ಇಟ್ಟುಕೊಳ್ಳಲು ಬಯಸುವಿರಿ. ಒತ್ತಾಯದಿಂದ ಯಾರ ಸ್ನೇಹವನ್ನೂ ಬಯಸುವುದು ಬೇಡ. ಒಳ್ಳೆಯ ಕುಲದ ಸಂಗಾತಿಯನ್ನು ಪಡೆಯುವಿರಿ. ದೇವರಲ್ಲಿ ಶ್ರದ್ಧೆ ಇರಲಿದೆ. ಕೋಪವನ್ನು ಸ್ವಲ್ಪ ಕಡಿಮೆ ಮಾಡಿಕೊಳ್ಳುವುದು ಉತ್ತಮ. ಒಂದೇ ಸ್ನೇಹವನ್ನು ಬಹಳ ಕಾಲ ಇಟ್ಟುಕೊಳ್ಳಲಾರಿರಿ.

ಧನು ರಾಶಿ:

ನಿಮಗಾಗದವರು ನಿಮ್ಮ ಬಗ್ಗೆ ಸಲ್ಲದ ಆರೋಪಗಳನ್ನು ಮಾಡುವರು. ನೀವೇ ಬುದ್ಧಿವಂತರೆಂಬಂತೆ ತೋರಿಸಿಕೊಳ್ಳುವಿರಿ. ಅಧಿಕಾರದ ಮಾತುಗಳು ನಿಮ್ಮ ಕೆಲಸಕ್ಕೆ ಬಾರದು. ನಿಮ್ಮ ಸ್ವಭಾವದ ಬದಲಾವಣೆಯು ಎಲ್ಲರಿಗೂ ಅಚ್ಚರಿಯನ್ನು ತಂದೀತು. ಉದ್ಯೋಗದಲ್ಲಿ ವಿರಾಮವನ್ನು ತೆಗೆದುಕೊಳ್ಳುವಿರಿ. ನಿಮ್ಮದಲ್ಲದ್ದನ್ನು ನಿಮ್ಮದೆಂದೇ ವಾದಿಸುವಿರಿ. ತಾಯಿಯ ಜೊತೆ ವಾಗ್ವಾದ ನಡೆಸುವಿರಿ. ನಿಮ್ಮ ಕೆಲಸವನ್ನು ಸರಿಯಾಗಿ ಮಾಡದಿದ್ದರೆ ನಿಮ್ಮನ್ನು ತೆಗೆಯಬಹುದು. ಆಸಮಯದಲ್ಲಿ ನೀವು ಭೋಜನವನ್ನು ಮಾಡಿ ಆರೋಗ್ಯವನ್ನು ಹಾಳುಮಾಡಿಕೊಳ್ಳುವಿರಿ. ನಿಮ್ಮ ಲಾಭಕ್ಕೆ ಯಾರನ್ನಾದರೂ ಬಳಸಿಕೊಳ್ಳುವಿರಿ.

ಮಕರ ರಾಶಿ:

ವ್ಯಾಪಾರದಲ್ಲಿ ನಿಮ್ಮ ತಂತ್ರಗಾರಿಕೆಯು ಫಲಿಸಬಹುದು. ಅಹಂಕಾರದ ಮಾತುಗಳು ನಿಮಗೆ ಮಾತ್ರ ಖುಷಿ ಕೊಡಬಹುದು. ತಾಯಿಯ ಆರೋಗ್ಯದಲ್ಲಿ ಆದ ವ್ಯತ್ಯಾಸದಿಂದ ನಿಮಗೆ ಕಷ್ಟವಾಗುವುದು. ಸ್ನೇಹಿತರಿಗೆ ಧನಸಹಾಯವನ್ನು ಮಾಡುವುದು ಅನಿವಾರ್ಯವಾದೀತು. ಪ್ರಸಿದ್ಧ ವ್ಯಕ್ತಿಗಳು ಅನಿರೀಕ್ಷಿತವಾಗಿ ಭೇಟಿಯಾಗವರು. ದೊಡ್ಡ ಅಪಾಯದಿಂದ ನಿಮಗೆ ರಕ್ಷಣೆಯಾಗುವುದು. ಸಂಗಾತಿಯ ಇಂಗಿತವನ್ನು ತಿಳಿದುಕೊಳ್ಳುವುದು ನಿಮಗೆ ಕಷ್ಟವಾಗುವುದು. ಎಂದು ಆಡಿದ ಮಾತಿಗೆ ಇಂದು ಪಶ್ಚಾತ್ತಾಪಪಡಬೇಕಾದೀತು.‌ ಒಂಟಿಯಾಗಿ ಎಲ್ಲಿಗಾದರೂ ಹೋಗಬೇಕು ಎಂದು ಅನ್ನಿಸುವುದು.

ಕುಂಭ ರಾಶಿ:

ಹಣವನ್ನು ಎಲ್ಲಿಯೋ ಇಟ್ಟು ಕಳೆದುಕೊಳ್ಳುವಿರಿ. ರಾಜಕೀಯ ವ್ಯಕ್ತಿಗಳು ಸಾಮಾಜಿಕ ಕಾರ್ಯಗಳಿಗೆ ಹಣವನ್ನು ಕೊಡುವರು. ಆರೋಗ್ಯವು ಸರಿಯಾದರೂ ಮನಸ್ಸು ಸರಿಯಾಗಲು ಸಮಯವನ್ನು ತೆಗದುಕೊಳ್ಳಬಹುದು. ಆಪ್ತರನ್ನು ನೀವು ಕಳೆದುಕೊಳ್ಳುವ ಸಂಭವವಿದೆ. ಉದ್ಯೋಗದಲ್ಲಿ ಉಂಟಾದ ಸಣ್ಣ ಅಡ್ಡಿಯನ್ನೇ ದೊಡ್ಡದಾಗಿ ಬಿಂಬಿಸುವಿರಿ. ನಿಮ್ಮವರು ನಿಮ್ಮನ್ನು ಅನ್ಯ ಕೆಲಸಗಳಿಗೆ ಕರೆದುಕೊಂಡು ಹೋಗುವರು. ನಿಮ್ಮ ಪಕ್ಷಾತೀತ ನಿಲುವು ಕೆಲವರಿಗೆ ಇಷ್ಟವಾಗದು. ನೀವು ವಹಿಸಿಕೊಂಡ ನಿರ್ಮಾಣ ಹಂತದ ಕೆಲಸಗಳು ಮಂದಗತಿಯಲ್ಲಿ ಇರಲಿದೆ. ಮೊದಲೇ ತೀರ್ಮಾನವಾದ ನಿಮ್ಮ ಪ್ರಯಾಣವು ಮುಂದೆ ಹೋಗಬಹುದು. ನಕಾರಾತ್ಮಕ ವಿಚಾರಗಳೇ ನಿಮಗೆ ಎಲ್ಲ ಕಡೆಗಳಲ್ಲಿಯೂ ಕಾಣಿಸುವುದು.

ಮೀನ ರಾಶಿ:

ಸಾಲವನ್ನು ಮಾಡುವ ಸ್ಥಿತಿಯು ಬರಬಹುದು. ತಾಯಿಯ ಕಡೆಯಿಂದ ನಿಮಗೆ ಯಾವ ಸಹಕಾರವೂ ಸಿಗದೇ ಇರುವುದು ಬೇಸರವಾಗಬಹುದು. ನಿರಂತರ ಕೆಲಸದಿಂದ ನಿಮಗೆ ಮುಕ್ತಿಯ ಅವಶ್ಯಕತೆ ಇದೆ. ಸ್ವಲ್ಪ ಮನಸ್ಸು ಎಲ್ಲದರಿಂದ ಮುಕ್ತವಾಗಿರಲು ಬಯಸುವುದು. ಸಾಮರಸ್ಯದ ಕೊರತೆಯಿಂದ ದ್ವೇಷವೂ ಹುಟ್ಟಿಕೊಳ್ಳಬಹುದು. ವಿದ್ಯಾಭ್ಯಾಸದ ವಿಷಯದಲ್ಲಿ ನಿಮಗೆ ತೃಪ್ತಿ ಇರದು. ಸಿಕ್ಕ ವಸ್ತುವನ್ನು ಯೋಗ್ಯವಾದ ರೀತಿಯಲ್ಲಿ ಇಟ್ಟುಕೊಳ್ಳಿ. ನಿಮ್ಮನ್ನು ಕಡೆಗಣಿಸಿದ್ದು ನಿಮಗೆ ಪ್ರೇರಣೆಯಾಗಬಹುದು. ಕೆಲಸಗಳನ್ನು ಮುಂದೂಡುತ್ತ ಇರುವುದು ನಿಮ್ಮ ನಿರಾಸಕ್ತಿಯನ್ನು ತೋರಿಸುವುದು. ವಹಿಸಿಕೊಂಡ ಕಾರ್ಯವನ್ನು ಸಕಾಲಕ್ಕೆ ಮಾಡಿ ಮುಗಿಸಿ.

-ಲೋಹಿತಶರ್ಮಾ (ವಾಟ್ಸ್​​ಆ್ಯಪ್- 8762924271)

ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ