Daily Horoscope: ಹಣಕಾಸಿನ ವಿಚಾರದಲ್ಲಿ ಬಹಳ ಜಾಗರೂಕರಾಗಿರಿ, ಮೋಸ ಹೋಗುವ ಸಾಧ್ಯತೆ ಇದೆ

ಇಂದಿನ (2023 ಮಾರ್ಚ್30) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ತಿಳಿದುಕೊಳ್ಳಿ.

Daily Horoscope: ಹಣಕಾಸಿನ ವಿಚಾರದಲ್ಲಿ ಬಹಳ ಜಾಗರೂಕರಾಗಿರಿ, ಮೋಸ ಹೋಗುವ ಸಾಧ್ಯತೆ ಇದೆ
ಪ್ರಾತಿನಿಧಿಕ ಚಿತ್ರImage Credit source: akhindi.in
Follow us
ಗಂಗಾಧರ​ ಬ. ಸಾಬೋಜಿ
|

Updated on: Mar 30, 2023 | 5:00 AM

ಶುಭೋದಯ ಓದುಗರೇ. ಪ್ರತಿಯೊಬ್ಬರ ಜೀವನದಲ್ಲಿ ರಾಶಿ ಭವಿಷ್ಯ ವಿಭಿನ್ನವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದ್ರೆ ಇಂದಿನ (2023 ಮಾರ್ಚ್30) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ಮೀನ ಮಾಸ, ಮಹಾನಕ್ಷತ್ರ : ಉತ್ತರಾಭಾದ್ರ, ಮಾಸ : ಚೈತ್ರ, ಪಕ್ಷ : ಶುಕ್ಲ, ವಾರ : ಗುರು, ತಿಥಿ : ನವಮೀ, ನಿತ್ಯನಕ್ಷತ್ರ : ಪುನರ್ವಸು, ಯೋಗ : ಅತಿಗಂಡ, ಕರಣ : ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 30 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 43 ನಿಮಿಷಕ್ಕೆ. ರಾಹು ಕಾಲ ಮಧ್ಯಾಹ್ನ 02:08 ರಿಂದ 03:40ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 06:31 ರಿಂದ 08:02ರ ವರೆಗೆ, ಗುಳಿಕ ಕಾಲ ಬೆಳಗ್ಗೆ 09:34 ರಿಂದ ಮಧ್ಯಾಹ್ನ 11:05ರ ವರೆಗೆ.

ಮೇಷ: ನೀವಿಂದು ಏಕಾಂತವಾಗಿ ಇರಲು ಬಯಸದಿದ್ದರೂ ಏಕಾಂಗಿಯಾಗಿ ಇರುವಿರಿ. ನಿಮ್ಮೊಳಗೆ ಅತೃಪ್ತಭಾವವು ಇರಲಿದೆ‌. ಯಾರದೋ ಕೆಲಸದಲ್ಲಿ ಮಗ್ನರಾಗುವಿರಿ. ಆಲಸ್ಯವು ಮೈತುಂಬಿಕೊಂಡು ನಿದ್ರೆಯನ್ನು ಮಾಡುವ ಮನಃಸ್ಥಿತಿಯಲ್ಲಿ ಇರುವಿರಿ. ಹೊಸ ಉದ್ಯೋಗವನ್ನು ಸೃಷ್ಟಿಸಿಕೊಳ್ಳುವ ಯೋಚನೆ ದಟ್ಟವಾಗಿ ಮನದಲ್ಲಿ ಬೇರೂರಲಿದೆ‌. ಆಪ್ತರ ಜೊತೆ ಹೊಸ ಉದ್ಯೋಗದತ್ತ ಗಮನಹರಿಸುವಿರಿ. ಬೆನ್ನು‌ನೋವು ಕಾಣಿಸಿಕೊಂಡೀತು. ಯೋಗಾಸನದ ಮೂಲಕ ಸರಿ‌ಮಾಡಿಕೊಳ್ಳಿ.

ವೃಷಭ: ಇಂದು ಯಾವ ವಿಚಾರಕ್ಕೂ ವಾದ-ವಿವಾದಗಳು ಮಾಡಿಕೊಳ್ಳಲು ಹೋಗಬೇಡಿ. ಸಾಮಾಜಿಕ ಜಾಲತಾಣದಲ್ಲಿ ಸಮಯವನ್ನು ಹೆಚ್ಚು ಕಳೆಯಬಹುದು. ಜೀವನದ ತೊಂದರೆಗಳನ್ನು ಸಂಬಂಧಿಕರೊಂದಿಗೆ ಹಂಚಿಕೊಳ್ಳಬೇಡಿ. ಸಣ್ಣ ಹುಣ್ಣನ್ನು ದೊಡ್ಡ ಗಾಯ‌ ಮಾಡುವರು. ಗೃಹನಿರ್ಮಾಣ ಅಥವಾ ಗೃಹವನ್ನು ಖರೀದಿಸುವ ಯೋಚನೆ ಮಾಡಲಿದ್ದೀರಿ. ಸಣ್ಣ ಮೊತ್ತವನ್ನೂ ಹಣವೆಂದೇ ಭಾವಿಸಿ. ಇದೇ ನಿಮಗೆ ಮುಂದಿನ ಸಂಪತ್ತನ್ನು ಕೊಡಿಸುವುದು. ಸದ್ಯ ಗುರುಬಲವೇ ನಿಮ್ಮ ಬಲವಾಗಲಿದೆ.

ಮಿಥುನ: ನಿಮಗಿಂದು ಅತ್ಯುತ್ಸಾಹವಿದ್ದು ದೇಹವು ಸಹಕರಿಸುವುದೋ ಎಂದು ನೋಡಿಕೊಳ್ಳಿ. ಮಕ್ಕಳ ತುಂಟಾಟಕ್ಕೆ ಅವರಿಗೆ ಬೈದು ಅವರ ದ್ವೇಷಕ್ಕೆ ಕಾರಣರಾಗುವಿರಿ.ದಾಂಪತ್ಯದಲ್ಲಿ ಆಪ್ತಭಾವವಿರಲಿದೆ. ಕಛೇರಿಯಲ್ಲಿ ಆದ ಒತ್ತಡವನ್ನು ಮನೆಗೆ ತರಬೇಡಿ. ವ್ಯವಹಾರದ ವಿಚಾರದಲ್ಲಿ ಶುದ್ಧತೆ ಮುಖ್ಯವಾಗಿ ಬೇಕಿದೆ. ನಿಮ್ಮ‌ ಮೇಲೆ ನಿಮಗಾಗದವರು ಅಪವಾದವನ್ನು ತರಬಹುದು. ದೂರದಲ್ಲಿರುವ ನಿಮಗೆ ಮನೆಯ ವಾತಾವರಣ ಹಿತವೆನಿಸಬಹುದು. ಮನಸ್ಸು ಸ್ಥಿರವಾಗಿರಲಿ.

ಕರ್ಕ: ಇಂದು ನಿಮಗೆ ಅನಿರೀಕ್ಷಿತ ರೂಪದಲ್ಲಿ ವೈವಾಹಿಕ ಸಂಬಂಧಗಳು ಕೂಡಿ ಬರಲಿದೆ. ಒಪ್ಪಿಕೊಂಡು ಮುಂದುವರಿಯುವುದು ಉತ್ತಮ. ಆರೋಗ್ಯ ಉತ್ತಮವಾಗಿದೆ ಎಂದು ಏನನ್ನಾದರೂ ತಿನ್ನಲು ಹೋಗಬೇಡಿ. ಇಂದು ಏನನ್ನೂ ಸಾಲವಾಗಿ ಕೊಡುವುದು ಬೇಡ. ಇಂದು ನಿಮ್ಮ ಕೆಲಸದ ಸ್ಥಳದಲ್ಲಿ ಪ್ರೀತಿ ಮೇಲುಗೈ ಸಾಧಿಸುತ್ತದೆ. ನಿಮ್ಮ ಸಹಾಯಕ್ಕೆ ಸಹೋದ್ಯೋಗಿಗಳು ಬರುವರು. ಗಾಂಭೀರ್ಯವನ್ನು ಬಿಟ್ಟು ನಗುಮೊಗದಲ್ಲಿ ಇರಿ.

ಸಿಂಹ: ಇಂದು ನಿಮ್ಮ ಮಾತು ಕಡಿಮೆ ಇದ್ದಷ್ಟೂ ನಿಮಗೂ ನಿಮ್ಮ ಕುಟುಂಬಕ್ಕೂ ಒಳ್ಳೆಯದು. ಅವಿವಾಹಿತರಿಗೆ ಮಾಂಗಲ್ಯ ಭಾಗ್ಯ ಕೂಡಿಬರಲಿದೆ. ಕ್ರೀಡೆಯಲ್ಲಿ ಜಯಗಳಿಸುವ ಸಾಧ್ಯತೆ ಇದೆ. ವಿಳಂಬವಾಯಿತು ಎಂದು ಬೇಸರಿಸದೇ ಖುಷಿಯಿರಿ. ಯಾವುದನ್ನು ಯಾವಾಗಾ ಮಾಡಿಸಬೇಕು ಎನ್ನುವುದು ಗೊತ್ತಿದೆ ವಿಧಿಗೆ. ಸ್ನೇಹಿತರ ಸಾಲವು ತೀರುವುದು. ಪ್ರೇಯಸಿ ಜೊತೆಯಲ್ಲಿ ಹೊರಗೆ ವಾಯುವಿಹಾರಕ್ಕೆ ಹೋಗುವಿರಿ. ಕೃಷಿಯು ನಿಮಗೆ ಇಷ್ಟವಲ್ಲದ ವಿಚಾರವಾದರೂ ಬೇರೆಯವರ ಒತ್ತಾಯಕ್ಕೆ ಒಪ್ಪಿಕೊಳ್ಳುವಿರಿ. ಗುರುದರ್ಶನವು ನಿಮಗೆ ಅತ್ಯಗತ್ಯವಾಗಿದೆ.

ಕನ್ಯಾ: ಇಂದು ನೀವು ನಿಮ್ಮ ಕೆಲಸದ ಮೇಲೆ ಮಾತ್ರ ಗಮನಹರಿಸಿದರೆ ಉತ್ತಮ. ಏನಾದರೂ ಬಾಲಿಶವಾದದ್ದನ್ನು ಮಾಡುವ ಮೊದಲು ನಿಮ್ಮ ವರ್ತನೆಯ ಪರಿಣಾಮದ ಬಗ್ಗೆ ಆಲೋಚಿಸಿ. ವಿದ್ಯಾರ್ಥಿಗಳ ಚಂಚಲ‌ಮನಸ್ಸು ಸಲ್ಲದನ್ನು ಮಾಡಿಸಬಹುದು. ಎಂದೋ‌ ಮಾಡಿದ ಸಹಾಯ ಇಂದು ನಿಮ್ಮ ಕೈ ಹಿಡಿಯುವುದು. ನೀವು ಆಗದಿರುವ ಕೆಲಸಗಳಿಂದ ನಿರಾಸೆಯನ್ನು ಅನುಭವಿಸುವುದು ಬೇಡ. ಅದು ದೈವೇಚ್ಛೆ ಎಂದು ಬಿಟ್ಟು ಮುಂದಿನ ಕೆಲಸಕ್ಕೆ ತೆರಳಿ. ದಾಂಪತ್ಯಜೀವನ ಅಪರೂಪದ ಕ್ಷಣಗಳನ್ನು ಸವಿಯುವಿರಿ. ಮಕ್ಕಳು ನಿಮ್ಮ ಜೊತೆ ಇರುವರು.

ತುಲಾ: ಸ್ವಭಾವತಃ ಮುಂಗೋಪಿಯಾಗಿರುವ ನೀವು ಇಂದು ಪೂರ್ವಾಪರ ಆಲೋಚನೆ ಇಲ್ಲದೇ ಕೋಪಗೊಳ್ಳುವಿರಿ. ಉದ್ಯೋಗದಿಂದ ಹೊರನಡೆಯುವ ಸಾಧ್ಯತೆ ಇದೆ. ನೆಮ್ಮದಿಯನ್ನು ಕಾಣುವಾಗಲೇ ಈ ಘಟನೆ ನಿಮ್ಮನ್ನು ಆತಂಕಕ್ಕೆ ದೂಡಲಿದೆ. ಪ್ರೇಮಕ್ಕೆ ಸಂಬಂಧಿಸಿದಂತೆ ಹೆಚ್ಚು ಬೇಡಿಕೆಗಳು ಬರಬಹುದು. ಆಪ್ತರೊಂದಿಗೆ ಹೊಸ ಉದ್ಯೋಗವನ್ನು ಆರಂಭಿಸುವ ಆಲೋಚನೆ ಮಾಡುವಿರಿ. ಆದರೆ ಪಾಲುದಾರಿಕೆ ಜೊತೆ ಕೈಜೋಡಿಸುವಾಗ ಯೋಚಿಸಿ. ಹೆಚ್ಚು ಪ್ರಯತ್ನಪೂರ್ವಕವಾಗಿ ನಿಮ್ಮ‌ ಸಮಸ್ಯೆಯನ್ನು ಪರಿಹಾರ ಮಾಡಿಕೊಳ್ಳುವಿರಿ.

ವೃಶ್ಚಿಕ: ಇಂದು ನೀವು ಕಾರ್ಯ ಹೆಚ್ಚು ಮಾಡಿ, ಮಾತು ಕಡಿಮೆ ಮಾಡಲಿದ್ದೀರೊ. ಇಂದಾದ ಕೆಲಸಗಳು ನಿಮಗೇ ಆಶ್ಚರ್ಯವನ್ನು ತರಬಹುದು. ಪ್ರಭಾವೀ ವ್ಯಕ್ತಿಗಳ ಭೇಟಿ ಉದ್ಯೋಗಕ್ಕೆ ಹೊಸ ದಾರಿ ತೆರೆದುಕೊಳ್ಳುವುದು. ಕುಟುಂಬದ ಹಿರಿಯರು ನಿಮ್ಮ ಜೊತೆ ಸಮಯವನ್ನು ಕಳೆಯಲು ಬಯಸುವರು. ನಿಮ್ಮ ಗೆಳತಿಯ ಜೊತೆ ಅಸಭ್ಯವಾಗಿ ನಡೆದುಕೊಳ್ಳಬೇಡಿ. ಆಹಾರದ ಉದ್ಯೋಗವಿದ್ದರೆ ಇಂದು ಅಧಿಕಲಾಭವಾಗುವುದು. ಹರಟೆ ಮಾಡುತ್ತ ನಿಮ್ಮ ಕೆಲವು ಸಮಯ ವ್ಯರ್ಥವಾಗಬಹುದು. ಸಮಯಕ್ಕೆ ಬೆಲೆ ಕೊಡುವುದು‌ ಮುಖ್ಯವಾಗಿರಲಿ.

ಧನುಸ್ಸು: ಆರೋಗ್ಯವನ್ನು ಕಾಪಾಡಿಕೊಳ್ಳು ಹೆಚ್ಚಿನ ಪ್ರಯತ್ನ ಅವಶ್ಯಕ. ಖರ್ಚುಗಳಿಗೆ ಸ್ವಂತ ಹಣವನ್ನು ಬಳಸಿ. ಬಾಕಿಯಿರುವ ಗೃಹಕೃತ್ಯಗಳನ್ನು ಪೂರೈಸಲು ಒಂದು ಅನುಕೂಲಕರ ದಿನ. ಘಟನೆಗಳು ಉತ್ತಮ ಮತ್ತು ಗೊಂದಲಮಯವಾಗಿರುವ ಒಂದು ದಿನ – ಇದು ನಿಮ್ಮನ್ನು ದಣಿವು ಹಾಗೂ ಗೊಂದಲದಲ್ಲಿರಿಸುತ್ತದೆ. ಮಕ್ಕಳ ಆರೋಗ್ಯದ ಮೇಲೆ ಗಮನಬೇಕಿದೆ. ಎಲ್ಲ ಹತಾಶೆ, ನೋವು, ಸಂಕಟ, ತುಮುಲಗಳನ್ನು ನಿವಾರಿಸಿಕೊಳ್ಳಲು ಒಳ್ಳೆಯ ಸಮಯವಾಗಿದೆ. ಆಪ್ತರು ಎನಿಸಿದ ಸ್ನೇಹಿತರ ಜೊತೆ ಆಗಿದ್ದ ನೋವನ್ನು ಹೇಳಿಕೊಂಡು ಹಗುರಾಗಿ.

ಮಕರ: ನಿಮ್ಮ ಕುಟುಂಬ ಜೊತೆ ಆನಂದದಿಂದ ಕಾಲವನ್ನು ಕಳೆಯುವ ಮನಸ್ಸಿರಲಿದೆ. ಕಾರ್ಯದ ಒತ್ತಡದಿಂದ ಪೂರ್ತಿಯಾಗಿ ಆಗದೇ ಹೋಗಬಹುದು. ಸಹೋದರರಿಂದ ಉದ್ಯೋಗಕ್ಕೆ ಸಂಬಂಧಿಸಿದ ಕೆಲವು ಮಾಹಿತಿಗಳು ಸಿಗಬಹುದು. ಮಕ್ಕಳ ವಿದ್ಯಾಭ್ಯಾಸಕ್ಕೆ ಹಣದ ಅಭಾವವಾಗಲಿದೆ. ಬ್ಯಾಂಕ್ ನಿಂದ ಸಾಲವನ್ನು ಪಡೆಯುವಿರಿ. ಇಂದು ನಿಮ್ಮ ಸಾಮಾರ್ಥ್ಯವನ್ನು ವ್ಯಕ್ತಪಡಿಸಲು ಸಕಾಲ. ಮನೆಯಲ್ಲಿ ಇಂದು ನಿಮ್ಮ ತುಂಬಾ ಕೀಳಾಗಿ ಮಾತನಾಡಬಹುದು. ಇದೇ ನಿಮಗೆ ಛಲವಾಗಿಯೂ ಪರಿಣಾಮ ಬೀರಿ ಉತ್ತಮವಾದ ಯೋಜನೆಗಳನ್ನು ರೂಪಿಸಿ. ಪ್ರೇಮವು ಅಂಕುರಿಸಬಹುದು. ಅಷ್ಟಮಾಧಿಪತಿಯು ತೃತೀಯದಲ್ಲಿರುವ ಪ್ರಭಾವು ಇಂದು ಸ್ವಲ್ಪ ಕಡಿಮೆ ಇರಬಹುದು. ಸೂರ್ಯಾಷ್ಟವನ್ನು ಓದಿ.

ಕುಂಭ: ಇಂದು ಯಾವುದೇ ವಿಚಾರಕ್ಕೆ ಯಾರನ್ನೂ ನಂಬಬೇಡಿ. ಹಣಕಾಸಿನ ವಿಚಾರದಲ್ಲಿ ಬಹಳ ಜಾಗರೂಕರಾಗಿರಿ. ಮೋಸ ಹೋಗುವ ಸಾಧ್ಯತೆ ಇದೆ. ಆತುರದ ತೀರ್ಮಾನ ಹಾಗೂ ಒತ್ತಡಗಳಿಗೆ ಸಿಲಿಕದೇ ಎಚ್ಚರಿಕೆಯಿಂದಿರಿ. ಕೊಟ್ಟ ಸಾಲ ಮರಳಿಬರಹುದು. ಸ್ನೇಹಿತರ ಒತ್ತಾಯ ಮೇರಗೆ ಸುತ್ತಾಟ ನಡೆಸುವಿರಿ. ಆಯಾಸವಾಗಿ ವಿಶ್ರಾಂತಿಯನ್ನು ಪಡೆಯುವಿರಿ. ನಿಮ್ಮ ವಿರುದ್ಧ ಸಲ್ಲದ ಮಾತುಗಳು ಕೇಳಿಬರಬಹುದು. ಸಮರ್ಥನೆಯನ್ನು ಕೊಟ್ಟು ಸಮಯವನ್ನು ವ್ಯರ್ಥಮಾಡಬೇಡಿ. ಸ್ವಲ್ಪ‌ಕಾಲದಲ್ಲಿ ಎಲ್ಲವೂ ಸ್ಪಷ್ಟವಾಗಿ ಗೋಚರವಾಗುವುದು. ಶಿವಕವಚವನ್ನು ಓದಿ.

ಮೀನ: ಸಾಲಬಾಧೆಯಿಂದ ಕೆಟ್ಟ ಕೆಲಸವನ್ನು ಮಾಡಲು ಪ್ರೇರಣೆಯಾಗಬಹುದು. ಇದರಿಂದ ಇನ್ನಷ್ಟು ತೊಂದರೆ ಸಿಕ್ಕಿಹಾಕಿಕೊಳ್ಳುವ ಸ್ಥಿತಿ ಎದುರಾದೀತು. ಸ್ನೇಹಿತರು ನಿಮ್ಮ ಜೊತೆಗೇ ಇದ್ದು ನಿಮ್ಮ ಎಲ್ಲ ಆಗುಹೋಗುಗಳಿಗೂ ಜೊತೆಯಾಗುವರು. ಉದ್ವಿಗ್ನಗೊಳ್ಳದೇ ಸಮಾಧಾನದಿಂದ ಇರಬೇಕಾದ ಅವಶ್ಯಕತೆಯಿದೆ. ಕೆಲಸದಲ್ಲಿ ಗೊಂದಲ, ಹತಾಶೆ, ನಿರುತ್ಸಾಹದ ಉಂಟಾಗಬಹುದು. ವ್ಯಸನಕ್ಕೆ ತುತ್ತಾಗಿ ಹಣವನ್ನೂ ಆರೋಗ್ಯವನ್ನೂ ಕಳೆದುಕೊಳ್ಳಬೇಕಾಗಬಹುದು. ತೈಲ‌ ಮುಂತಾದ ವ್ಯಾಪರದಲ್ಲಿ ಲಾಭವಾಗಲಿದೆ. ವಿದ್ಯಾರ್ಥಿಗಳು ಪರಿಶ್ರಮದ ಓದಿಗೆ ಫಲಸಿಗಬಹುದು.

ಲೋಹಿತಶರ್ಮಾ, ಇಡುವಾಣಿ

ಸುರ್ಜೆವಾಲಾ ರಾಜ್ಯದಲ್ಲಿರುವಾಗಲೇ ನಡೆದಿರುವ ಬೆಳವಣಿಗೆ ಕುತೂಹಲಕಾರಿ
ಸುರ್ಜೆವಾಲಾ ರಾಜ್ಯದಲ್ಲಿರುವಾಗಲೇ ನಡೆದಿರುವ ಬೆಳವಣಿಗೆ ಕುತೂಹಲಕಾರಿ
ಸುತ್ತೂರು ಮಠದಲ್ಲೇ ವಿಜಯೇಂದ್ರ ಮತ್ತು ಸಂಗಡಿಗರಿಗೆ ಉಪಹಾರ
ಸುತ್ತೂರು ಮಠದಲ್ಲೇ ವಿಜಯೇಂದ್ರ ಮತ್ತು ಸಂಗಡಿಗರಿಗೆ ಉಪಹಾರ
ಆಕಾಶದಲ್ಲಿ ಸ್ಫೋಟಗೊಂಡ ಸ್ಪೇಸ್​ಎಕ್ಸ್​ ಸ್ಟಾರ್​ಶಿಪ್
ಆಕಾಶದಲ್ಲಿ ಸ್ಫೋಟಗೊಂಡ ಸ್ಪೇಸ್​ಎಕ್ಸ್​ ಸ್ಟಾರ್​ಶಿಪ್
ಕೆನಡಾ ಪ್ರಧಾನಿ ಹುದ್ದೆಗೆ ನಾಮಪತ್ರ ಸಲ್ಲಿಸಿ ಕನ್ನಡದಲ್ಲೇ ಮಾತನಾಡಿದ ಚಂದ್ರ
ಕೆನಡಾ ಪ್ರಧಾನಿ ಹುದ್ದೆಗೆ ನಾಮಪತ್ರ ಸಲ್ಲಿಸಿ ಕನ್ನಡದಲ್ಲೇ ಮಾತನಾಡಿದ ಚಂದ್ರ
ಈ ಸೀಸನ್​ನಲ್ಲಿ ಎಲಿಮಿನೇಟ್ ಆದ ಸ್ಪರ್ಧಿಗಳ ಮರು ಎಂಟ್ರಿ; ಜಗದೀಶ್​ ಕಥೆ ಏನು?
ಈ ಸೀಸನ್​ನಲ್ಲಿ ಎಲಿಮಿನೇಟ್ ಆದ ಸ್ಪರ್ಧಿಗಳ ಮರು ಎಂಟ್ರಿ; ಜಗದೀಶ್​ ಕಥೆ ಏನು?
ತಪ್ಪಾದ ಬಸ್ ಹತ್ತಿ ಹೋದ 5 ವರ್ಷದ ಬಾಲಕ, ಮುಂದೇನಾಯ್ತು?
ತಪ್ಪಾದ ಬಸ್ ಹತ್ತಿ ಹೋದ 5 ವರ್ಷದ ಬಾಲಕ, ಮುಂದೇನಾಯ್ತು?
Daily Devotional: ಯಾವ ರಾಶಿಯವರು ಯಾವ ಉದ್ಯೋಗ ಮಾಡಿದರೆ ಉತ್ತಮ?
Daily Devotional: ಯಾವ ರಾಶಿಯವರು ಯಾವ ಉದ್ಯೋಗ ಮಾಡಿದರೆ ಉತ್ತಮ?
ಬೀದರ್​: ಫೈರಿಂಗ್ ಮಾಡಿ ಎಟಿಎಂ ಹಣದ ಟ್ರಂಕ್ ಹೊತ್ತೊಯ್ದ ವಿಡಿಯೋ ನೋಡಿ
ಬೀದರ್​: ಫೈರಿಂಗ್ ಮಾಡಿ ಎಟಿಎಂ ಹಣದ ಟ್ರಂಕ್ ಹೊತ್ತೊಯ್ದ ವಿಡಿಯೋ ನೋಡಿ
ದರ್ಶನ್ ಭೇಟಿಗೆ ಬಂದರೆ ಒಪ್ಪುತ್ತೀರಾ? ರೇಣುಕಾಸ್ವಾಮಿ ತಂದೆ ಪ್ರತಿಕ್ರಿಯೆ
ದರ್ಶನ್ ಭೇಟಿಗೆ ಬಂದರೆ ಒಪ್ಪುತ್ತೀರಾ? ರೇಣುಕಾಸ್ವಾಮಿ ತಂದೆ ಪ್ರತಿಕ್ರಿಯೆ
ಮಂಗಳೂರಿನ ಜೊತೆ ನಟ ಗೋಲ್ಡನ್ ಸ್ಟಾರ್​ ಗಣೇಶ್​ಗೆ ಅವಿನಾಭಾವ ಸಂಬಂಧ
ಮಂಗಳೂರಿನ ಜೊತೆ ನಟ ಗೋಲ್ಡನ್ ಸ್ಟಾರ್​ ಗಣೇಶ್​ಗೆ ಅವಿನಾಭಾವ ಸಂಬಂಧ