Daily Horoscope: ಸಾಮಾಜಿಕ ಕಾರ್ಯದಲ್ಲಿ ಈ ರಾಶಿವರಿಗೆ ಆಸಕ್ತಿ, ಸರ್ಕಾರಿ ಕೆಲಸ ವಿಳಂಬ ಸಾಧ್ಯತೆ

ಇಂದಿನ (2023 ಮಾರ್ಚ್31) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ತಿಳಿದುಕೊಳ್ಳಿ.

Daily Horoscope: ಸಾಮಾಜಿಕ ಕಾರ್ಯದಲ್ಲಿ ಈ ರಾಶಿವರಿಗೆ ಆಸಕ್ತಿ, ಸರ್ಕಾರಿ ಕೆಲಸ ವಿಳಂಬ ಸಾಧ್ಯತೆ
ಪ್ರಾತಿನಿಧಿಕ ಚಿತ್ರImage Credit source: herzindagi.com
Follow us
ಗಂಗಾಧರ​ ಬ. ಸಾಬೋಜಿ
|

Updated on: Mar 31, 2023 | 5:00 AM

ಶುಭೋದಯ ಓದುಗರೇ. ಪ್ರತಿಯೊಬ್ಬರ ಜೀವನದಲ್ಲಿ ರಾಶಿ ಭವಿಷ್ಯ ವಿಭಿನ್ನವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದ್ರೆ ಇಂದಿನ (2023 ಮಾರ್ಚ್31) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ಮೀನ ಮಾಸ, ಮಹಾನಕ್ಷತ್ರ : ಉತ್ತರಾಭಾದ್ರ, ಮಾಸ : ಚೈತ್ರ, ಪಕ್ಷ : ಶುಕ್ಲ, ವಾರ : ಶುಕ್ರ, ತಿಥಿ : ದಶಮೀ, ನಿತ್ಯನಕ್ಷತ್ರ : ಪುಷ್ಯ, ಯೋಗ : ಸುಕರ್ಮ, ಕರಣ : ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 30 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 43 ನಿಮಿಷಕ್ಕೆ. ರಾಹು ಕಾಲ 11:05 ರಿಂದ 12:37ರ ವರೆಗೆ, ಯಮಘಂಡ ಕಾಲ 03:40 ರಿಂದ 05:12ರ ವರೆಗೆ, ಗುಳಿಕ ಕಾಲ ಬೆಳಗ್ಗೆ 08:02ರಿಂದ 09 :33ರ ವರೆಗೆ.

ಮೇಷ: ಇಂದು ಸಂಕೋಚ ಸ್ವಭಾವದಿಂದ ಹೇಳಿಕೊಳ್ಳದೇ ಹಾಗೇ ಇರುವಿರಿ. ಹೊಸ ಉದ್ಯೋಗ ಸೃಷ್ಟಿಗೆ ಹೆಚ್ಚು ಪ್ರಯತ್ನ ಮಾಡುವಿರಿ. ಸಾಲ ಪಡೆದವರು ಮರಳಿ ನೀಡಲಿದ್ದಾರೆ. ಈ ಅನಿರೀಕ್ಷಿತ ಧನಾಗಮನದ ನಿರೀಕ್ಷೀತ ಧನಾಗಮನ ನೆಮ್ಮದಿ ಕೊಡಲಿದೆ. ವಿದ್ಯಾರ್ಥಿಗಳು ಉನ್ನತಿಯನ್ನು ಸಾಧಿಸಲು ಯೋಜನೆಯನ್ನು ಹಾಕಿಕೊಳ್ಳುವುದು ಒಳ್ಳೆಯದು. ತಾಳ್ಮೆಯನ್ನು ಕಳೆದುಕೊಳ್ಳದೇ ವ್ಯವಹರಿಸಿ. ವಿವೇಚನೆಯಿಂದ ಕೆಲಸಗಳನ್ನು ಮಾಡಿ. ತಂದೆಯ ಆರೋಗ್ಯದಲ್ಲಿ ವ್ಯತ್ಯಾಸವಾಗಬಹುದು. ವೈದ್ಯರನ್ನು ಭೇಟಿಯಾಗಿ.

ವೃಷಭ: ನಿಮ್ಮನ್ನು ಕಾಳಜಿ ಮಾಡುವವರ ಜೊತೆ ಸಮಯವನ್ನು ಕಳೆಯುವುದು ಉತ್ತಮ. ದೂರದ ಪ್ರಯಾಣವನ್ನು ಆದಷ್ಟು ಕಡಿಮೆ ಮಾಡಿ. ಯಾರ ಮೇಲೂ ದ್ವೇಷವನ್ನು ಸಾಧಿಸಿ ಪ್ರಯೋಜನವಿಲ್ಲ‌‌. ಸಂಗಾತಿಯ ಜೊತೆ ಹಣಕಾಸಿನ ವಿಚಾರದಲ್ಲಿ ಕಲಹವಾಗಬಹುದು. ಅದಕ್ಕೆ ತುಪ್ಪವನ್ನು ಸುರಿಯದೇ ಇದ್ದರೆ ಸ್ವಲ್ಪ ಸಮಯಕ್ಕೆ ಶಾಂತವಾಗಲಿದೆ. ಕಾರಣವಿಲ್ಲದೆ ಸಂತೋಷವಾಗಿರುವುದನ್ನು ಅಭ್ಯಾಸ ಮಾಡಿ. ಆಕಸ್ಮಿಕವಾಗಿ ಆಗಿವ ಘಟನೆಗಳನ್ನು ಮನಸಾರೆ ಸ್ವೀಕರಿಸಿ.

ಮಿಥುನ: ಇಂದು ನೀವು ಸ್ವಾತಂತ್ರ್ಯವನ್ನು ಪಡೆಯಲು ಇಚ್ಛಿಸುವಿರಿ‌. ಆದರೆ ಕಾರ್ಯದ ಒತ್ತಡ ನಿಮ್ಮನ್ನು ಬಂಧಿಸಿಡಲಿದೆ. ಹೊಸ ವಸ್ತ್ರದ ಖರೀದಿಯಾಗಲಿದೆ‌. ಅನಿರೀಕ್ಷಿತ ಬಂಧುಗಳ ಆಗಮನವು ಮನೆಯಲ್ಲಿ ಹಬ್ಬದಂತಾಗುವುದು. ಇನ್ನೊಬ್ಬರನ್ನು ನೋಡಿ ಅಸೂಯೆ ಪಡುವುದನ್ನು ಬಿಟ್ಟರೆ ಒಳ್ಳೆಯದು. ನಿಮ್ಮ ಯಶಸ್ಸಿನ ದಾರಿಯನ್ನು ನೀವೇ ಕಂಡುಕೊಳ್ಳಬೇಕು. ವೃತ್ತಿಪರರು ನಿರಾಳರತೆಯಲ್ಲಿ ಇರುವಿರಿ. ನಿಮ್ಮವರು ನಿಮ್ಮಿಂದ ಕುಟುಂಬವು ಸಹಾಯವನ್ನು ನಿರೀಕ್ಷಿಸಬಹುದು. ಕಲಾಸಕ್ತಿಯು ನಿಮ್ಮನ್ನು ಕಲಿಕೆಗೆ ಜೋಡಿಸಬಹುದು.

ಕಟಕ: ಇಂದು ನಿಮಗೆ ಅಲ್ಪರ ಸಂಗ ಅಭಿಮಾನ ಭಂಗ ಎನ್ನುವಂತೆ ತಿಳಿದೂ ಅಲದಪರ ಸಹವಾಸ ಮಾಡಿ ಅಪಮಾನಕ್ಕೆ ಒಳಗಾಗುವಿರಿ. ನಿಮ್ಮನ್ನು ಮಿತ್ರರನ್ನಾಗಿ ಮಾಡಿಕೊಳ್ಳಲು ಬಯಸಿದರೆ ನಕಾರಾತ್ಮಕ ಉತ್ತರವನ್ನು ಕೊಡಬೇಡಿ. ಒಪ್ಪಿಕೊಂಡು ಸ್ವಲ್ಪ ದಿನದವರೆಗೆ ಕಾಯಿರಿ. ಸಾಧ್ಯವಾದಷ್ಟು ತಾಳ್ಮೆಯನ್ನು ಉಳಿಸಿಕೊಳ್ಳಲು ಪ್ರಯತ್ನಿಸಿ. ಮನೆಯ ಕಡೆಯಿಂದ ಅನಿರೀಕ್ಷಿತ ಅಶುಭವಾರ್ತೆಯು ಬರಬಹುದು. ಉತ್ತಮ ಬಾಂಧವ್ಯವು ಕ್ಷುಲ್ಲಕ ಕಾರಣಕ್ಕೆ ಕೆಟ್ಟುಹೋಗಬಹುದು. ಉದ್ಯೋಗದ ನಿಮಿತ್ತ ಬೇರೆ ಕಡೆಗೆ ಹೋಗಬಹುದು.

ಸಿಂಹ: ನೀವಿಂದು ಸತ್ಯವನ್ನು ಆಡಲು ಹೋಗಿ ಸ್ನೇಹಿತರಿಗೆ ಬೇಸರ ತರಿಸುವಿರಿ. ಅತಿಯಾದ ಭೋಜನವು ನಿಮ್ಮ ಆರೋಗ್ಯದ ಮೇಲೆ ದುಷ್ಪರಿಣಾಮವನ್ನು ಉಂಟುಮಾಡಬಹುದು. ಸಾಲಬಾಧೆ ಎದುರಾಗಲಿದ್ದು ಸಮಸ್ಯೆಯನ್ನು ಎದುರಿಸಬೇಕಾಗಬಹುದು. ನಿಮ್ಮ ಹಣವು ನಿಮಗೆ ಸಿಗದೇ ಓಡಾಟವನ್ನು ನಡೆಸುವ ಸಾಧ್ಯತೆ ಇದೆ. ಅತಿಯಾದ ಆಲೋಚನೆಯಿಂದ ಮನಸ್ಸು ಹಾಳಾಗಬಹುದು. ನಿಮ್ಮ ಯೋಚನೆಗಳನ್ನು ಯಾರಮೇಲೂ ಹೇರಬೇಡಿ. ಶಿಸ್ತನ್ನು ರೂಢಿಸಿಕೊಳ್ಳುವುದು ಉತ್ತಮ.

ಕನ್ಯಾ: ನಿಮ್ಮ ಸಮಾಜಮುಖೀ ಕಾರ್ಯಗಳಿಗೆ ಗೌರವಪ್ರಶಂಸೆಗಳು ಸಿಗಲಿವೆ. ನೆರೆ-ಹೊರೆಯವರನ್ನು ಚೆನ್ನಾಗಿ ಇಟ್ಟುಕೊಳ್ಳಿ. ನಿಮ್ಮ ಕಾರ್ಯಕ್ಕೆ ವಿದೇಶದಿಂದ ಕರೆ ಬರಬಹುದು. ಅದರಿಂದ ನಿಮ್ಮ ಯೋಜನೆಗಳು ಸ್ವಲ್ಪ ವ್ಯತ್ಯಾಸವಾಗಬಹುದು. ಯಾರಿಂದಲೂ ಏನನ್ನೂ ನಿರೀಕ್ಷಿಸದೇ ಕೆಲಸ ಮಾಡುವುದು ನಿಮ್ಮ ವ್ಯಕ್ತಿತ್ವಕ್ಕೆ ಇನ್ನಷ್ಟು ಗೌರವ ಸೇರ್ಪಡೆಯಾಗಲಿದೆ. ಆಧಿಕಾರಯುತವಾದ ಮಾತುಗಳನ್ನಾಡಬೇಡಿ. ನಿಮ್ಮ‌ ಮಾತಿಗೆ ಬೆಲೆ ಇಲ್ಲವಾದೀತು.

ತುಲಾ: ಇಂದು ನೀವು ನಿಮ್ಮ ಕೆಲಸಗಳನ್ನು ಬಹಳ ಜಾಗರೂಕತೆಯಿಂದ ಮಾಡಬೇಕು. ನಿಮ್ಮ ಮನಸ್ಸು ಅತಿ ಚಾಂಚಲ್ಯದಿಂದ ಇರಲಿದ್ದು, ಕೆಲಸವು ಹಾಳಾಗಬಹುದು. ಬಹಳ ಗೊಂದಲಗಳನ್ನು ಇಟ್ಟುಕೊಂಡಿರುವಿರಿ. ಮಾತನಿಂದ ಆಗದೇ ಇರುವ ಕೆಲಸವು ಮೌನದಿಂದ ಆಗಬಹುದು, ಪ್ರಯತ್ನಿಸಿ‌. ಇನ್ನೊಬ್ಬರ ಕುರಿತು ಕುತೂಹಲವನ್ನು ಇಟ್ಟುಕೊಂಡಿರುತ್ತೀರಿ. ಆಪ್ತರ ನಿಮ್ಮಿಂದ ದೂರವಾಗಬಹುದು. ಮಕ್ಕಳು ನಿಮ್ಮ ಜೊತೆ ಕಳೆಯಲು ಇಚ್ಛಿಸುವರು.

ವೃಶ್ಚಿಕ: ಇಂದು ನೀವು ಬಹಳ ಹಿಂದೆ ಕಂಡ ಕನಸಿಗೆ ಮೂರ್ತರೂಪ ಬರಲಿದೆ. ನಿಮ್ಮಿಂದ ಹೆತ್ತವರು ಸುಖಪಡಲಿದ್ದಾರೆ. ಸ್ನೇಹಿತರಿಗೆ ಮಾಡಿದ ಸಹಾಯದಿಂದ ನಿಮಗೆ ಅನುಕೂಲವಗಲಿದೆ. ಸಾಮಾಜಿಕ ಕಾರ್ಯದಲ್ಲಿ ನಿಮಗೆ ಆಸಕ್ತಿಯು ಉಂಟಾಗುವ ಸಾಧ್ಯತೆ ಇದೆ. ಅತಿಯಾದ ಆಪ್ತತೆಯಿಂದ ನಿಮಗೆ ತೊಂದರೆಯಾಗಬಹುದು. ಯಾರದೋ ತಪ್ಪಿನಿಂದ ನೀವು ಕಷ್ಟವನ್ನು ಪಡಬೇಕಾದೀತು. ಸರ್ಕಾರಿ ಕೆಲಸವು ವಿಳಂಬವಾಗುವ ಸಾಧ್ಯತೆ ಇದೆ.

ಧನು: ದಾಂಪತ್ಯದಲ್ಲಿ ಉಂಟಾದ ವೈಮನಸ್ಯವನ್ನು ಪ್ರಕಟಗೊಳಿಸಿದೇ ಅಲದಲಿಯೇ ಸರಿಮಾಡಿಕೊಳ್ಳುವುದು ಒಳ್ಳೆಯದು. ವಿದೇಶಕ್ಕೆ ಹೋಗಬೇಕಾಗಿಬರುವ ಸಾಧ್ಯತೆ ಇದೆ. ಯಂತ್ರಗಳ ಉದ್ಯಮವನ್ನು ಮಾಡುತ್ತಿದ್ದರೆ ಅಧಿಕಲಾಭವು ಆಗಬಹುದು‌ ಒತ್ತಡವು ನಿಮ್ಮನ್ನು ದಿಗ್ಭ್ರಾಂತರನ್ನಾಗಿ ಮಾಡುವುದು. ಸಾಲಬಾಧೆಯಿಂದ ಮುಕ್ತರಾಗುವ ತವಕದಲ್ಲಿರುವಿರಿ. ಯಾರಿಂದಲೂ ಅತಿಯಾದ ನಿರೀಕ್ಷೆ ಮಾಡದೇ ಕರ್ತವ್ಯ ಎಂದು ತಿಳಿದು ಕೆಲಸ ಮಾಡಿ. ಪ್ರಯಾಣವು ಆಯಾಸ ತರಿಸಬಹುದು.

ಮಕರ: ಎಲ್ಲ ಕೆಲಸವನ್ನೂ ಬೇರೆಯವರೇ ಮಾಡಲಿ ಎಂಬ ಭಾವವನ್ನು ಬಿಡಿ. ನಿಮಗೆ ಸಾಧ್ಯವಾದ ಕೆಲಸಗಳನ್ನು ಮಾಡಿ. ಸ್ವಂತ ಭೂಮಿಯನ್ನು ಮಾರುವ ಸ್ಥಿತಿಯು ಎದುರಾದೀತು. ಅತ್ಯಮೂಲ್ಯವಾದ ಸಂಪತ್ತುಗಳನ್ನು ರಕ್ಷಿಸಿಕೊಳ್ಳವುದು ಉತ್ತಮ. ಹಗುರವಾದ ಮಾತುಗಳು ನಿಮ್ಮನ್ನು ಹಗುರ ಮಾಡುವುದು. ಅತಿಯಾದ ಹಸಿವು ನಿಮ್ಮನ್ನು ಬಾಧಿಸಬಹುದು. ಜವಾಬ್ದಾರಿಯುತ ಸ್ಥಾನದಲ್ಲಿದ್ದರೆ ನಿಮ್ಮ ಕೆಲಸಗಳು ಅಚ್ಚುಕಟ್ಟಾಗಿ ಇರಬೇಕಿದೆ. ಗೋಪೂಜೆ ಮಾಡಿ ಗ್ರಾಸವನ್ನು ನೀಡಿ.‌ ನಿಮಗೆ ಬರುವ ಆಪತ್ತುಗಳು ನಿವಾರಣೆಯಾಗಲಿದೆ.

ಕುಂಭ: ಇಂದು ನೀವು ವಾಹನವನ್ನು ಬದಲಿಸುವ ವಿಚಾರವನ್ನು ಮನೆಯಲ್ಲಿ ಪ್ರಸ್ತಾಪಿಸುವಿರಿ. ದೂರಪ್ರಯಾಣ ಸುಖಕರವಾಗಿರಲಿದೆ.‌ ಧಾರ್ಮಿಕವಾದ ನಂಬಿಕೆ ಉಳ್ಳ ನೀವು ತೀರ್ಥಕ್ಷೇತ್ರಗಳೂ ದೇವಾಲಯಕ್ಕೋ ಭೇಟಿ ಕೊಡುವಿರಿ. ಕೆಲಸವಾಗಲಿಲ್ಲವೆಂದು ಹತಾಶವಾಗಬೇಡಿ. ಆಗುವ ಕಾಲಕ್ಕೆ ಆಗಿಯೇ ಆಗುವುದು ಎನ್ನುವ ದೃಢವಾದ ನಂಬಿಕೆಯನ್ನು ಇಟ್ಟಿರಿ. ಯಾರನ್ನೂ ಪರೋಕ್ಷವಾಗಿಯೂ ಟೀಕಿಸಬೇಡಿ. ಆರೋಗ್ಯವು ಹದ ತಪ್ಪಬಹುದು. ಸಂಪತ್ತಿನ‌ ವಿಚಾರದಲ್ಲಿ ವಿವೇಚನೆ ಇರಲಿ. ಮಿತವ್ಯಯವಿರಲಿ. ಯಾರ ಮೇಲೂ ಅಸೂಯೆ ಬೇಡ.

ಮೀನ: ಇಂದು ನೀವು ಆಲಸ್ಯದಿಂದ ನಿಮ್ಮ ಕಾರ್ಯಗಳನ್ನು ಮುಂದೂಡುವಿರಿ. ಆಪತ್ತಿನಲ್ಲಿ ಸಹಾಯ ಮಾಡಲಿಲ್ಲ ಎನ್ನುವ ಕಾರಣಕ್ಕೆ ಸರ್ಕಾರದ ನೌಕರರು ಮನೆಯಿಂದ ದೂರವಿದ್ದು ಮಾನಸಿಕವಾಗಿ ಕುಗ್ಗಿರುವಿರಿ. ವಿದ್ಯಾಭ್ಯಾಸದಿಂದ ಲಾಭವಿದೆ ಎಂದು ಅನ್ನಿಸಿ ಶ್ರಮವಹಿಸುವಿರಿ. ಏಕಾಗ್ರತೆಗೆ ನಾನಾ ಪ್ರಕಾರದಲ್ಲಿ ಪರೀಕ್ಷೆಗಳು ಆಗಬಹುದು. ಆರ್ಥಿಕವಾಗಿ ಇಂದು ಸ್ವಲ್ಪ ದುರ್ಬಲರಾಗುವಿರಿ. ಆಗಿದ್ದನ್ನು ನೆನಪಿಸಿಕೊಳ್ಳುತ್ತ ಕುಳಿತುಕೊಳ್ಳುವ ಅವಶ್ಯಕತೆ ಇರುವುದಿಲ್ಲ. ಆಗಬೇಕಿರುವುದರ ಕಡೆ ಗಮನವಿರಲಿ. ಶನೈಶ್ಚರನ ಸ್ತೋತ್ರ ಮಾಡಿ. ನಿಮ್ಮನ್ನು ಸರಿದಾರಿಯಲ್ಲಿ ನಡೆಸುವನು.

ಲೋಹಿತಶರ್ಮಾ ಇಡುವಾಣಿ

ಬೀದರ್​: ಫೈರಿಂಗ್ ಮಾಡಿ ಎಟಿಎಂ ಹಣದ ಟ್ರಂಕ್ ಹೊತ್ತೊಯ್ದ ವಿಡಿಯೋ ನೋಡಿ
ಬೀದರ್​: ಫೈರಿಂಗ್ ಮಾಡಿ ಎಟಿಎಂ ಹಣದ ಟ್ರಂಕ್ ಹೊತ್ತೊಯ್ದ ವಿಡಿಯೋ ನೋಡಿ
ದರ್ಶನ್ ಭೇಟಿಗೆ ಬಂದರೆ ಒಪ್ಪುತ್ತೀರಾ? ರೇಣುಕಾಸ್ವಾಮಿ ತಂದೆ ಪ್ರತಿಕ್ರಿಯೆ
ದರ್ಶನ್ ಭೇಟಿಗೆ ಬಂದರೆ ಒಪ್ಪುತ್ತೀರಾ? ರೇಣುಕಾಸ್ವಾಮಿ ತಂದೆ ಪ್ರತಿಕ್ರಿಯೆ
ಮಂಗಳೂರಿನ ಜೊತೆ ನಟ ಗೋಲ್ಡನ್ ಸ್ಟಾರ್​ ಗಣೇಶ್​ಗೆ ಅವಿನಾಭಾವ ಸಂಬಂಧ
ಮಂಗಳೂರಿನ ಜೊತೆ ನಟ ಗೋಲ್ಡನ್ ಸ್ಟಾರ್​ ಗಣೇಶ್​ಗೆ ಅವಿನಾಭಾವ ಸಂಬಂಧ
ಗೃಹ ಸಚಿವ ಸ್ಟ್ಯಾಂಡಿಂಗ್ ಇನ್ಸಸ್ಟ್ರಕ್ಷನ್​ಗಳ ಬಗ್ಗೆ ಮಾತ್ರ ಮಾತಾಡುತ್ತಾರೆ
ಗೃಹ ಸಚಿವ ಸ್ಟ್ಯಾಂಡಿಂಗ್ ಇನ್ಸಸ್ಟ್ರಕ್ಷನ್​ಗಳ ಬಗ್ಗೆ ಮಾತ್ರ ಮಾತಾಡುತ್ತಾರೆ
ತಮ್ಮ ಬದಲು ರಮೇಶ್ ಜಾರಕಿಹೊಳಿಯನ್ನು ಮಾತಾಡಲು ಬಿಟ್ಟರೇ ಯತ್ನಾಳ್?
ತಮ್ಮ ಬದಲು ರಮೇಶ್ ಜಾರಕಿಹೊಳಿಯನ್ನು ಮಾತಾಡಲು ಬಿಟ್ಟರೇ ಯತ್ನಾಳ್?
ವಿಜಯೇಂದ್ರರನ್ನು ಸಿಎಂ ಮಾಡುವ ಸಂಕಲ್ಪ ತೊಟ್ಟಿದ್ದೇವೆ: ರೇಣುಕಾಚಾರ್ಯ
ವಿಜಯೇಂದ್ರರನ್ನು ಸಿಎಂ ಮಾಡುವ ಸಂಕಲ್ಪ ತೊಟ್ಟಿದ್ದೇವೆ: ರೇಣುಕಾಚಾರ್ಯ
ಪತ್ನಿ ಜೊತೆ ಚಾಮುಂಡಿ ಬೆಟ್ಟಕ್ಕೆ ಬಂದು ದೇವರ ದರ್ಶನ ಪಡೆದ ನಟ ದರ್ಶನ್
ಪತ್ನಿ ಜೊತೆ ಚಾಮುಂಡಿ ಬೆಟ್ಟಕ್ಕೆ ಬಂದು ದೇವರ ದರ್ಶನ ಪಡೆದ ನಟ ದರ್ಶನ್
ಒಟ್ಟು ಆರು ಇರಿತದ ಗಾಯಗಳೊಂದಿಗೆ ಸೈಫ್ ಅಲಿ ಖಾನ್ ಆಸ್ಪತ್ರೆಗೆ ದಾಖಲು
ಒಟ್ಟು ಆರು ಇರಿತದ ಗಾಯಗಳೊಂದಿಗೆ ಸೈಫ್ ಅಲಿ ಖಾನ್ ಆಸ್ಪತ್ರೆಗೆ ದಾಖಲು
ಚಾಮರಾಜಪೇಟೆ ಘಟನೆ ಖಂಡಿಸಿ ಮೈಸೂರಲ್ಲಿ ಬಿಜೆಪಿ ಮುಖಂಡರ ಪ್ರತಿಭಟನೆ
ಚಾಮರಾಜಪೇಟೆ ಘಟನೆ ಖಂಡಿಸಿ ಮೈಸೂರಲ್ಲಿ ಬಿಜೆಪಿ ಮುಖಂಡರ ಪ್ರತಿಭಟನೆ
ಗನ್ ಲೈಸೆನ್ಸ್ ರದ್ದು ಮಾಡೋದು ಬೇಡವೆಂದು ಪೊಲೀಸರಿಗೆ ದರ್ಶನ್ ಮನವಿ
ಗನ್ ಲೈಸೆನ್ಸ್ ರದ್ದು ಮಾಡೋದು ಬೇಡವೆಂದು ಪೊಲೀಸರಿಗೆ ದರ್ಶನ್ ಮನವಿ