Horoscope 5 September: ಹಣಕಾಸಿನ ವಿಚಾರಕ್ಕೆ ನಿಮ್ಮ ಮೇಲೆ ಅಪವಾದ ಬರಬಹುದು, ನಿಮ್ಮದಲ್ಲದ ಪರಿಸರಕ್ಕೆ ಹೊಂದಿಕೊಳ್ಳಲು ಕಷ್ಟಪಡುವಿರಿ

ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹಾಗಾದರೆ ಇಂದಿನ (2023 ಸೆಪ್ಟೆಂಬರ್ 5) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

Horoscope 5 September: ಹಣಕಾಸಿನ ವಿಚಾರಕ್ಕೆ ನಿಮ್ಮ ಮೇಲೆ ಅಪವಾದ ಬರಬಹುದು, ನಿಮ್ಮದಲ್ಲದ ಪರಿಸರಕ್ಕೆ ಹೊಂದಿಕೊಳ್ಳಲು ಕಷ್ಟಪಡುವಿರಿ
ಪ್ರಾತಿನಿಧಿಕ ಚಿತ್ರ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಗಂಗಾಧರ​ ಬ. ಸಾಬೋಜಿ

Updated on: Sep 05, 2023 | 12:02 AM

ರಾಶಿ ಭವಿಷ್ಯ ಪ್ರತಿಯೊಬ್ಬರ ಜೀವನದಲ್ಲಿ ವಿಭಿನ್ನವಾಗಿರುತ್ತದೆ. ಪ್ರತಿನಿತ್ಯ ಬೆಳಗ್ಗೆ ಎದ್ದ ಕೂಡಲೇ ತಮ್ಮ ರಾಶಿ ಭವಿಷ್ಯ (Daily horoscope) ನೋಡುವುದು ಕೆಲವರಿಗೆ ಅಭ್ಯಾಸ. ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹೀಗೆ ಎಲ್ಲವನ್ನು ತಿಳಿದುಕೊಳ್ಳುತ್ತಾರೆ. ಜೊತೆಗೆ ಪಂಚಾಂಗವನ್ನು ಸಹ ಓದುತ್ತಾರೆ. ಹಾಗಾದರೆ ಇಂದಿನ (2023 ಸೆಪ್ಟೆಂಬರ್ 5) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಉತ್ತರಾಫಲ್ಗುಣೀ, ಮಾಸ: ನಿಜ ಶ್ರಾವಣ, ಪಕ್ಷ: ಕೃಷ್ಣ, ವಾರ: ಮಂಗಳ, ತಿಥಿ: ಪಂಚಮೀ, ನಿತ್ಯನಕ್ಷತ್ರ: ಭರಣೀ, ಯೋಗ: ಧ್ರುವ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 21 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 40 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 03:36 ರಿಂದ 05:09 ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 09:27 ರಿಂದ 10:59ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:31 ರಿಂದ 02:04ರ ವರೆಗೆ.

ಮೇಷ ರಾಶಿ: ನಿಮ್ಮ‌ ಮಾತುಗಳಿಗೆ ತೂಕವು ಕಡಿಮೆ‌ ಆಗಬಹುದು. ಸ್ಥಾನಕ್ಕಾಗಿ ನೀವು ಎದುರುನೋಡುತ್ತಿದ್ದರೆ ನಿಮಗೆ ಅದು ಸಿಗಬಹುದು. ವಾಹನ ಚಾಲನೆಯನ್ನು ಎಚ್ಚರಿಕೆಯಿಂದ ಮಾಡಿ. ಆತ್ಮವಿಶ್ವಾಸವನ್ನು ಕಳೆದುಕೊಳ್ಳದೇ ಮುಂದಡಿ ಇಡುವಿರಿ. ನಿಮ್ಮನ್ನು ಇಷ್ಟಪಟ್ಟವರ ಜೊತೆ ಸಮಯವನ್ನು ಕಳೆಯುವಿರಿ. ನಿಮ್ಮ ನಿರ್ಧಾರವನ್ನು ಮಕ್ಕಳು ಒಪ್ಪದೇ ಇರುವುದು ನಿಮಗೆ ಕೋಪಬರಬಹುದು. ನೀವು ಇಂದು‌ ಪ್ರೀತಿಯನ್ನು ಹೇಳಿಕೊಳ್ಳುವಿರಿ. ಸಂಬಂಧವಿಲ್ಲದ ವಿಚಾರದಲ್ಲಿ ಮೂಗುತೂರಿಸುವುದು ಬೇಡ. ನಿಮ್ಮ ಆಸೆಯನ್ನು ಪೂರೈಸಿಕೊಳ್ಳಲು ಖರ್ಚು ಮಾಡುವಿರಿ.

ವೃಷಭ ರಾಶಿ: ಇಂದು ಕುಟುಂಬದಲ್ಲಿ ಆತಂಕವು ಇರಲಿದ್ದು ದೈವದ ಮೊರೆ ಹೋಗುವಿರಿ. ನೀವು ಇಂದು ಮಾನಸಿಕವಾಗಿ ಕುಗ್ಗುವಿರಿ. ಯಾರ ಸಮಾಧಾನವೂ ನಿಮಗೆ ಸಾಂತ್ವನ‌ವನ್ನು ನೀಡದು. ನಿಮ್ಮ ಇಂದಿನ‌ ಕಾರ್ಯದಲ್ಲಿ ಸಾವಧಾನತೆ ಇರಲಿದೆ. ನಂಬಿಕೆಯನ್ನು ಉಳಿಸಿಕೊಳ್ಳಲು ಪ್ರಯತ್ನ ಮಾಡುವಿರಿ. ನಿಜವಾದ ಯಶಸ್ಸಿಗೆ ಅಡ್ಡದಾರಿಯನ್ನು ಹುಡುಕಿ ಪ್ರಯೋಜನವಾಗದು. ಹಣಕಾಸಿನ ವಿಚಾರದಲ್ಲಿ ಬಹಳ ತೊಂದರೆಯಲ್ಲಿ ಸಿಕ್ಕಿಕೊಳ್ಳುವಿರಿ. ವ್ಯಾಪಾರವು ಮಧ್ಯಮ‌ ಲಾಭವನ್ನು ಗಳಿಸಬಹುದು.

ಮಿಥುನ ರಾಶಿ: ಸ್ವಯಂ ಕೃತ ಅಪರಾಧವೇ ನಿಮಗೆ ಮುಳುವಾಗಬಹುದು. ಆಕಸ್ಮಿಕ ಲಾಭದ ನಿರೀಕ್ಷೆಯಲ್ಲಿ ನೀವು ಇರುವಿರಿ. ಅತಿಥಿಗಳ ಆಗಮನದಿಂದ‌ ಸಂತೋಷವಾಗುವುದು. ಸಂಗಾತಿಯ ಜೊತೆ ಸಣ್ಣ ವಿಚಾರಕ್ಕೂ ಕಲಹ ಮಾಡಿಕೊಳ್ಳುವಿರಿ. ನಿಮ್ಮ‌ ಚಂಚಲವಾದ ಸ್ವಭಾವವನ್ನು ನಿಯಂತ್ರಿಸಲು ಪ್ರಯತ್ನಿಸಿದರೂ ಕಷ್ಟವಾದೀತು.‌ ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕೆ ದೂರ ಹೋಗುವ ಮನಸ್ಸು ಮಾಡುವಿರಿ. ಸುಲಭವಾದ ಮಾರ್ಗವನ್ನು ನೀವು ಕ್ಲಿಷ್ಟ ಮಾಡಿಕೊಳ್ಳುವಿರಿ. ದೈವಭಕ್ತಿಯು ಅಧಿಕವಾಗುವುದು. ಇಂದು ಸಂಯಮವು ಮುಖ್ಯ. ಹಿರಿಯರ ಮಾತಿಗೆ ಬೆಲೆ ಇರಲಿ.

ಕಟಕ ರಾಶಿ: ಮನೆಯಲ್ಲಿ ಆಸ್ತಿಯ ವಿಚಾರವಾಗಿ ಸಣ್ಣ ಬಿರುಸಿನ ಮಾತುಗಳು ಕೇಳಿಬರಬಹುದು. ಮೇಲಧಿಕಾರಿಗಳು ನಿಮ್ಮ ಮೇಲೆ‌ ಒತ್ತಡ ಹೇರಬಹುದು. ನಿಮ್ಮ ಮೇಲೆ ಪಿತೂರಿ ಮಾಡಿದ ಅನುಮಾನ ಇರಲಿದೆ. ಮನಸ್ಸಿನ ದುಗುಡವನ್ನು ಶಾಂತಮಾಡಿಕೊಳ್ಳುವಿರಿ. ನಿಮ್ಮ ವಿಚಾರವನ್ನು ನೀವು ಗುಪ್ತವಾಗಿ ತಿಳಿದುಕೊಳ್ಳುವಿರಿ. ಕೆಲಸವು ಪೂರ್ಣವಾಗದೇ ಒದ್ದಾಡಿಕೊಂಡು ಇಂದಿನ ಕೆಲಸವನ್ನು ಮಾಡುವಿರಿ. ಸಂಗಾತಿಯ ಕೋಪವನ್ನು ನೀವು ಕಡಿಮೆ ಮಾಡುವಿರಿ. ಪಾಲುದಾರಿಕೆಯಲ್ಲಿ ನಿಮ್ಮ ನಿಮಗೆ ವ್ಯಥೆಯು ಇರಲಿದೆ. ಉಪಕರಿಸಿದವರ ಮೇಲೆ ನಿಮಗೆ ಸ್ಮರಣೆ ಇರಲಿ. ಮನೆಯ ಕೆಲಸವನ್ನು ಮಾಡಲು ಉತ್ಸಾಹವೇ ಇರದು.

ಸಿಂಹ ರಾಶಿ: ನಿಮಗೆ ಗೌರವಕ್ಕೆ ತೊಂದರೆ ಆಗಬಹುದು. ಇದರಿಂದ ಸಿಟ್ಟುಗೊಳ್ಳುವಿರಿ. ಆರೋಗ್ಯವು ಕೆಡಲಿದ್ದು ಹತ್ತಾರು ಆಲೋಚನೆಗಳು ಬರಬಹುದು. ದೂರದಲ್ಲಿರುವ ನಿಮ್ಮ ಮಕ್ಕಳ ಬಗ್ಗೆ ಚಿಂತೆಯಾಗುವುದು. ನೀವು‌ ಇಂದು ವಿದ್ಯುತ್ ಉಪಕರಣದ ಮಾರಟಗಾರರಾಇದ್ದರೆ ಅಧಿಕ ಲಾಭವು ಸಿಗುವುದು. ಸಾರ್ವಜನಿಕವಾಗಿ ಹೆಚ್ಚು ಪ್ರಭಾವ ಉಳ್ಳವರಾಗಿದ್ದು ಗೌರವವು ಸಿಗಲಿದೆ. ಸಹೋದ್ಯೋಗಿಗಳು ನಿಮ್ಮ ಮೇಲೆ ಒತ್ತಡವನ್ನು ಹೇಳಬಹುದು. ನಿಮ್ಮ ಸ್ನೇಹ ಬಳಗವು ದೊಡ್ಡದಾಗುವುದು. ಭೂಮಿಯ ಖರೀದಿಗೆ ಇಂದು ಸ್ಥಳವನ್ನು ಪರಿಶೀಲಿಸುವಿರಿ. ಪ್ರಮುಖ ದಾಖಲೆಗಳು ಕಣ್ಮರೆಯಾದೀತು.

ಕನ್ಯಾ ರಾಶಿ: ಮಾತಿನಲ್ಲಿ ಹಿಡಿತವಿಲ್ಲದೇ ಮನ ಬಂದಂತೆ ಮಾತನಾಡುವಿರಿ. ಯಾರಿಗೂ ಹೇಳಿಕೊಳ್ಳದೇ ನೀವೊಬ್ಬರೇ ರೋಗವನ್ನು ಅನುಭವಿಸುವಿರಿ.‌ ವಿದ್ಯಾರ್ಥಿಗಳಿಗೆ ಅಧ್ಯಯನಕ್ಕೆ ಉತ್ತಮಸ್ಥಾನವು ಸಿಗಲಿದೆ. ನಿಮ್ಮ ಬಗ್ಗೆ ಪ್ರೀತಿಯುಳ್ಳವರು ನಿಮ್ಮನ್ನು ಹರಸುವರು. ಹಣಕಾಸಿನ ವಿಚಾರಕ್ಕೆ ಅಪವಾದ ಬರಬಹುದು. ನಿಮ್ಮನ್ನು ಪರೋಕ್ಷವಾಗಿ ಯಾರದರೂ ನಿವಾರಿಸಬಹುದು. ಸಂಗಾತಿಯ ಮಾತಿಗೆ ನೀವು ಉತ್ತರಿಸಲಾರಿರಿ. ನಿಮ್ಮ ಲಾಭಾಂಶದ ಕೆಲವು ಭಾಗವನ್ನು ನೀವು ದಾನ ಮಾಡುವಿರಿ. ನಿಮ್ಮ ಒಳಗುಟ್ಟನ್ನು ಯಾರ ಮುಂದೂ ಬಿಚ್ಚಿಡುವುದು ಬೇಡ. ನಿಮ್ಮ ಮಾತಿನಿಂದ ನೀವು ಹಗುರಾಗುವಿರಿ.

ತುಲಾ ರಾಶಿ: ನಿಮಗೆ ಬೇಡದ ವಸ್ತುಗಳನ್ನು ನೀವು ಇನ್ನೊಬ್ಬರಿಗೆ ದಾನವಾಗಿ ಕೊಡುವಿರಿ. ದುರ್ಜನರ ಸಹವಾಸದಿಂದ ನಿಮಗೆ ಅಪವಾದವು ಬರಬಹುದು. ಕೆಲಸಗಳಲ್ಲಿ‌ ನೀವು ಜಯವನ್ನು ಸಾಧಿಸಬಹುದು. ಸೊಂಟದ ನೋವು ಅಧಿಕವಾಗಿ ಕಾಡಬಹುದು. ಪೋಷಕರ ಜೊತೆ ನಿಮ್ಮ ವರ್ತನೆಯು ಆಪ್ತವಾಗಿ ಇರಲಿದೆ. ಅಪೇಕ್ಷಿಸಿದ ಸ್ಥಳಕ್ಕೆ ಕರೆದುಕೊಂಡು ಹೋಗುವಿರಿ. ನಿಮ್ಮ ಸ್ವಲ್ಪ ಸಹಾಯವನ್ನು ಮಾಡಿ. ವಿರೋಧಿಗಳಿಗೆ ನಿಮ್ಮ ಬಲವನ್ನು ತೋರಿಸುವಿರಿ. ಹೆಚ್ಚು ಆದಾಯ ಸಿಗುವ ಕೆಲಸವನ್ನು ಹುಡುಕಲು ಬಯಸುವಿರಿ. ನಿಮ್ಮದಲ್ಲದ ಪರಿಸರಕ್ಕೆ ಹೊಂದಿಕೊಳ್ಳಲು ಕಷ್ಟಪಡುವಿರಿ. ಸ್ನೇಹಿತರಿಂದ‌ ಉದ್ಯೋಗವನ್ನು ನೀವು ನಿರೀಕ್ಷಿಸುವಿರಿ.

ವೃಶ್ಚಿಕ ರಾಶಿ: ಇಂದಿನ ನಿಮ್ಮ ಕೆಲಸಗಳು ಬಹಳ ವಿಳಂಬವಾಗುದು. ನೀವು ಹೇಳಿದ ಕೆಲಸವೂ ವೇಗವಾಗಿ ಮುಗಿಯದು. ಸ್ನೇಹಿತರಿಗೆ ಬೇಸರವಾಗಬಾರದೆಂದು ಅವರ ಜೊತೆ ಸಮಸ್ಯೆ ಕಳೆಯುವಿರಿ. ದಾಂಪತ್ಯದಲ್ಲಿನ ವೈಮನಸ್ಯವು ಹಿರಿಯರ ಭೇಟಿಯಿಂದ ಸರಿಯಾಗುವುದು. ಅಧಿಕಾರಿಗಳು ನಿಮಗೆ ತೊಂದರೆ ಕೊಡಬಹುದು. ನಿಮ್ಮ ಬಳಿ ಇರುವ ವಸ್ತುಗಳನ್ನು ಬಳಸಿಕೊಂಡು ನಿಮ್ಮ ಕಾರ್ಯವನ್ನು ಪೂರೈಸಿಕೊಳ್ಳಿ. ಹೊಸ ವಸ್ತುವಿಗೆ ಧನವನ್ನು ವ್ಯಯಮಾಡುವುದು ಬೇಡ. ಇಂದಿನ ಓಡಾಟದಿಂದ ಶರೀರವು ದಣಿಯಬಹುದು. ಮನಸ್ಸಿಗೆ ಶಾಂತಿಯು ಇರಲಿದ್ದು ಗೊಂದಲವನ್ನು ಅನಾಯಾಸವಾಗಿ ದಾಟುವಿರಿ. ಸಹೋದ್ಯೋಗಿಗಳ ವರ್ತನೆಯು ಬೇಸರ ತರಿಸಬಹುದು.

ಧನು ರಾಶಿ: ನಿಮ್ಮವರು ನೀವಿಟ್ಟ ನಂಬಿಕೆಯನ್ನು ಉಳಿಸಿಕೊಳ್ಳುವರು. ಪ್ರೇಮಕ್ಕಾಗಿ ಹೆಚ್ಚು ಖರ್ಚನ್ನು ಮಾಡಬೇಕಾದೀತು. ಹಿತಶತ್ರುಗಳ ಬಗ್ಗೆ ನಿಮ್ಮ ಜಾಗರೂಕತೆಯು ಸಾಕಾಗದು. ಉದ್ಯೋಗವನ್ನು ಬಿಡುವ ಸಂದರ್ಭವೂ ಬರಬಹುದು. ಮನೋ ವ್ಯಥೆಯನ್ನು ಯಾರ ಬಳಿಯಾದರೂ ಹೇಳಿಕೊಳ್ಳುವಿರಿ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಸೋಲಬೇಕಾಗುವುದು. ನಿಮ್ಮ ಗುರಿಯನ್ನು ತಲುಪಲು ಬೇರೆ ಮಾರ್ಗವನ್ನೂ ಅನುಸರಿಸಬೇಕಾದೀತು. ಉದ್ಯೋಗದಲ್ಲಿ ಸ್ತ್ರೀಯರಿಗೆ ಸಹಕಾರ ಮಾಡುವಿರಿ‌. ಇಂದು ನಿಮಗೆ ಭಯವು ಕಾಡಬಹುದು. ಹೆಚ್ಚಿನ ಆದಾಯ ಸಿಗುವ ವ್ಯವಹಾರವು ತಪ್ಪಿಹೋಗಬಹುದು.

ಮಕರ ರಾಶಿ: ಇಂದಿನ ಕಾರ್ಯಗಳಲ್ಲಿ ತೊಂದರೆಗಳು ಎದ್ದು ಕಾಣಿಸುವುದು. ಜಾಣ್ಮೆಯನ್ನು ಪ್ರದರ್ಶಿಸಲು ಹೋಗಿ ಮುಗ್ಗರಿಸುವಿರಿ. ತೀರ್ಥಕ್ಷೇತ್ರಗಳ ದರ್ಶನವನ್ನು ಮಾಡುವಿರಿ. ರಾಜಕೀಯ ವ್ಯಕ್ತಿಗಳ ಸಂಪರ್ಕವನ್ನು ನೀವು ಮಾಡುವಿರಿ. ಸ್ತ್ರೀಯರು ತಾಳ್ಮೆಯನ್ನು ಕಳೆದುಕೊಂಡು ಕೂಗಾಡಬಹುದು. ಸಾಹಸ ಕಾರ್ಯಗಳನ್ನು ಮಾಡಲು ನಿಮಗೆ ಉತ್ಸಾಹವು ಬರಬಹುದು. ನೀವು ಮಾಡಲು ಹೊರಟ ಕೆಲಸಕ್ಕೆ ಶುಭಸೂಚನೆಯು ಸಿಗುವುದು. ನಿಮ್ಮ ಆಲೋಚನೆಯ ದಿಕ್ಕು ಬದಲಾಗಬಹುದು. ದ್ವೇಷವನ್ನು ಮುಂದುವರಿಸಿ ಮನಸ್ಸನ್ನು ಹಾಳು ಮಾಡಿಕೊಳ್ಳಬೇಕಾದೀತು. ಅಪರೂಪದ ಬಂಧುಗಳ ಆಗಮನವು ನಿಮಗೆ ಕಷ್ಟವಾದೀತು. ದೂರಾದ ಪ್ರೇಮಿಯನ್ನು ನೆನಪುಮಾಡಿಕೊಂಡು ಮನಸ್ಸಿನಲ್ಲಿ ಸಂಕಟಪಡುವಿರಿ.

ಕುಂಭ ರಾಶಿ: ಅಮೂಲ್ಯ ವಸ್ತುವಿನ ಲಾಭದಿಂದ ಸಂತಸವಾಗಲಿದೆ. ಅಪರಿಚಿತರ ಜೊತೆ ವೃಥಾ ಕಲಹವಾಗಬಹುದು. ಮಕ್ಕಳ ವಿದ್ಯಾಭ್ಯಾಸದ ಚಿಂತೆ ಇರಲಿದೆ. ವಾಹನ‌ದ ಖರೀದಿಗೆ ಬೆಂಬಲವು ಸಿಗಬಹುದು. ‌ನಿಮ್ಮ‌ ಕೆಲಸಕ್ಕೆ ಅಧಿಕಾರಿಗಳು ಪ್ರಶಂಸಿಸುವರು. ಬಹಳ ದಿನಗಳಿಂದ ನಡೆಯುತ್ತಿದ್ದ ನ್ಯಾಯಾಲಯದ ವ್ಯವಹಾರವನ್ನು ಮುಕ್ತಾಯ ಮಾಡಿಕೊಳ್ಳುವಿರಿ. ಮಿತ್ರರೆಂದು ಹೇಳಿಕೊಂಡು ಯಾರಾದರೂ ಬರಬಹುದು. ನಿಮ್ಮ ಜಾಗರೂಕತೆಯಲ್ಲಿ ನೀವಿರಿ. ಕುಟುಂಬದ ಸ್ಥಿರಾಸ್ತಿಯನ್ನು ಪಡೆಯಲು ಪ್ರೇರಣೆ ಪಡೆಯುವುರಿ. ಬರಬೇಕಾದ ಹಣವು ಬಾರದೇ ಇರುವುದು ಚಿಂತೆಗೊಳಿಸುವುದು.

ಮೀನ ರಾಶಿ: ಇಂದು ನೀವು ಎಲ್ಲರ ಮಾತಿನಿಂದ ಗೆಲ್ಲುವಿರಿ. ನಿಮ್ಮನ್ನು ನೌಕರರು ಹೋಗಳುವರು. ನಿಮ್ಮ ಇಂದಿನ‌ ಶ್ರಮಕ್ಕೆ ತಕ್ಕುದಾದ ಫಲವು ಸಿಗಬಹುದು. ಭೂಮಿಯ ವ್ಯಾಪಾರದಲ್ಲಿ ಜಯವಾಗಲಿದೆ. ಇಂದು ಸರ್ಕಾರಿ ಕೆಲಸಕ್ಕೆ ಓಡಾಟ ಮಾಡುವಿರಿ. ಕುಲದೇವರ ಆರಾಧನೆಯನ್ನು ನೀವು ಮಾಡುವಿರಿ. ನಿಮಗೆ ಕೆಲಸದಲ್ಲಿ ಅನೇಕ ಗೊಂದಲಗಳು ಇರಬಹುದು. ಹಳೆಯ ನೆನಪುಗಳು ನಿಮ್ಮನ್ನು ಕಾಡುವುದು. ತಂದೆಯ ಆರೋಗ್ಯದಲ್ಲಿ ಏರುಪೇರಾಗಬಹುದು. ಮಕ್ಕಳ ಸಂತೋಷಕ್ಕಾಗಿ ಹಣವನ್ನು ವ್ಯಯಿಸುವಿರಿ. ಅದೃಷ್ಟವನ್ನು ಮಾತ್ರ ನಂಬಿ ಕೆಲಸವನ್ನು ಮಾಡಬೇಡಿ.

ಲೋಹಿತಶರ್ಮಾ 8762924271 (what’s app only)

ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್