Horoscope 8 September: ದಿನಭವಿಷ್ಯ, ವಿಶ್ವಾಸಘಾತದಿಂದ ನಿಮಗೆ ಬೇಸರವಾಗಬಹುದು: ಚಂಚಲ‌ ಮನಸ್ಸಿನಿಂದ ನಿರ್ಧಾರ ಕೈಗೊಳ್ಳಬೇಡಿ

ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹಾಗಾದರೆ ಇಂದಿನ (2023 ಸೆಪ್ಟೆಂಬರ್ 8) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

Horoscope 8 September: ದಿನಭವಿಷ್ಯ, ವಿಶ್ವಾಸಘಾತದಿಂದ ನಿಮಗೆ ಬೇಸರವಾಗಬಹುದು: ಚಂಚಲ‌ ಮನಸ್ಸಿನಿಂದ ನಿರ್ಧಾರ ಕೈಗೊಳ್ಳಬೇಡಿ
ಪ್ರಾತಿನಿಧಿಕ ಚಿತ್ರ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಗಂಗಾಧರ​ ಬ. ಸಾಬೋಜಿ

Updated on:Sep 08, 2023 | 10:28 PM

ರಾಶಿ ಭವಿಷ್ಯ ಪ್ರತಿಯೊಬ್ಬರ ಜೀವನದಲ್ಲಿ ವಿಭಿನ್ನವಾಗಿರುತ್ತದೆ. ಪ್ರತಿನಿತ್ಯ ಬೆಳಗ್ಗೆ ಎದ್ದ ಕೂಡಲೇ ತಮ್ಮ ರಾಶಿ ಭವಿಷ್ಯ (Daily horoscope) ನೋಡುವುದು ಕೆಲವರಿಗೆ ಅಭ್ಯಾಸ. ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹೀಗೆ ಎಲ್ಲವನ್ನು ತಿಳಿದುಕೊಳ್ಳುತ್ತಾರೆ. ಜೊತೆಗೆ ಪಂಚಾಂಗವನ್ನು ಸಹ ಓದುತ್ತಾರೆ. ಹಾಗಾದರೆ ಇಂದಿನ (2023 ಸೆಪ್ಟೆಂಬರ್ 8) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಉತ್ತರಾಫಲ್ಗುಣೀ, ಮಾಸ: ನಿಜ ಶ್ರಾವಣ, ಪಕ್ಷ: ಕೃಷ್ಣ, ವಾರ: ಶುಕ್ರ, ತಿಥಿ: ನವಮೀ, ನಿತ್ಯನಕ್ಷತ್ರ: ಮೃಗಶಿರಾ, ಯೋಗ: ವಜ್ರ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ರಿಂದ 22ರ ವರೆಗೆ, ಸೂರ್ಯಾಸ್ತ ಸಂಜೆ 06 ಗಂಟೆ 38 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 10:58 ರಿಂದ 12:30ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:35 ರಿಂದ 05:07ರ ವರೆಗೆ, ಗುಳಿಕ ಕಾಲ ಬೆಳಗ್ಗೆ 07:54 ರಿಂದ 09:26ರ ವರೆಗೆ.

ಮೇಷ ರಾಶಿ: ಕಛೇರಿಯ ಕೆಲಸವು ನಿಮಗೆ ಸಮಾಧಾನ ಕೊಡದು. ನಿದ್ರೆಯು ಸರಿಯಾಗಿ ಆಗದೇ ಕಷ್ಟವಾದೀತು. ಶಾರೀರಿಕ ಅಸೌಖ್ಯದ ಕೊರತೆ ಕಾಡಲಿದ್ದು ಔಷಧೋಪಚಾರವನ್ನು ಮಾಡುವಿರಿ. ಉದ್ಯೋಗದಲ್ಲಿ ಸ್ಥಿರತೆ‌ಯು ಕಾಣದ ಕಾರಣ ಬದಲಿಸುವಿರಿ. ನಿಮ್ಮ ಆದಾಯ ಮೂಲವನ್ನು ಎಲ್ಲರ ಜೊತೆ ಹಂಚಿಕೊಳ್ಳುವ ಸಂದರ್ಭವು ಬರಬಹುದು. ನಿಮ್ಮ ಪಾಲಿಗೆ ಬಂದಿದ್ದನ್ನು ಜೋಪಾನವಾಗಿ ರಕ್ಷಿಸಿಕೊಳ್ಳಿ. ಸಂಬಂಧಗಳನ್ನು ಚೆನ್ನಾಗಿ ಇಟ್ಟಕೊಳ್ಳಲು ಇಷ್ಟಪಡುವಿರಿ. ಬಹಳ ದಿನದದಿಂದ ನಿರೀಕ್ಷಿಸುತ್ತಿದ್ದ ವಿವಾಹಯೋಗವು ಬರಬಹುದು. ಯೋಗ್ಯತೆಗೆ ಅನುಸಾರವಾಗಿ ನಿಮ್ಮ ಕಾರ್ಯಗಳು ಇರಲಿವೆ.

ವೃಷಭ ರಾಶಿ: ಅಪವಾದವನ್ನು ಸರಿ ಮಾಡಿಕೊಳ್ಳಲು ಬಹಳ ಪ್ರಯತ್ನಿಸುವಿರಿ. ಚಂಚಲ‌ವಾದ ಮನಸ್ಸಿನಿಂದ ನಿಮ್ಮ ನಿರ್ಧಾರವು ಪೂರ್ಣವಾಗದು. ವಿಶ್ವಾಸಘಾತದಿಂದ ನಿಮಗೆ ಬೇಸರವಾಗಬಹುದು. ನೀವು ಆತ್ಮೀಯರ ಸಮಾರಂಭಕ್ಕೆ ಹೋಗಿ ಖುಷಿಪಡುವಿರಿ. ಕೆಲವರನ್ನು ನೀವು ವಿನಾಕಾರಣ ದ್ವೇಷಿಸುವಿರಿ. ನಿಮ್ಮ‌ ಮಾತು ಇನ್ನೊಬ್ಬರ ಮನಸ್ಸನ್ನು ಘಾಸಿಗೊಳಿಸಬಹುದು. ಕಿವಿಯ ನೋವಿನಿಂದ ಸಂಕಟವಾಗುವುದು. ಇಂದು ಫಲವನ್ನು ಅತಿಯಾಗಿ ನಿರೀಕ್ಷಿಸಿ ಸಿಗದೇ ಬೇಸರಗೊಳ್ಳುವಿರಿ. ಸ್ನೇಹಿತರ ಒತ್ತಾಯದ ಮೇರೆಗೆ ಪ್ರಯಾಣ ಮಾಡುವಿರಿ. ಸಂಗಾತಿಯ ಮಾತು ಕಹಿಯಾಗಬಹುದು.

ಮಿಥುನ ರಾಶಿ: ಅಲ್ಪ ಪ್ರಗತಿಯೂ ನಿಮಗೆ ಸಂತೋಷವನ್ನು ಕೊಡುವುದು. ತಮಾಷೆಯು ಗಂಭೀರ ರೂಪವನ್ನು ಪಡೆಯಬಹುದು. ಆರೋಗ್ಯವು ಕೊಂಚ ವ್ಯತ್ಯಾಸವಾಗಬಹುದು. ಮರಣಭೀತಿಯು ಕಾಡಬಹುದು. ಎಲ್ಲರಿಂದ ದೂರವಾಗಲು ಬಯಸುವಿರಿ. ಇಂದು ನಿಮ್ಮ ಅಗತ್ಯ ಕಾರ್ಯಗಳಿಗೆ ಸಮಯವನ್ನು ಕೊಡುವುದು ಕಷ್ಟವಾದೀತು. ನೀವು ಮನೆಯನ್ನು ಖರೀದಿಸುವ ಅಲೋಚನೆಯಲ್ಲಿ ಇರುವಿರಿ. ಕೂಡಿಟ್ಟ ಹಣವು ಇಂದು ಸದುಪಯೋಗಕ್ಕೆ ಬಂದಿದ್ದು ಖುಷಿ ಕೊಡಲಿದೆ. ನಿಮ್ಮ ಬೆಂಬಲಕ್ಕೆ ಸಹೋದ್ಯೋಗಿಗಳು ಬರಬಹುದು.

ಕಟಕ ರಾಶಿ: ವಿವಾಹ ಮಂಗಳಕಾರ್ಯದಿಂದ ಮನೆಯಲ್ಲಿ ನೆಮ್ಮದಿಯು ಇರುವುದು. ಆಸ್ತಿಯ‌ ಖರೀದಿಗೆ ಬೇಕಾದ ಹಣವನ್ನು ನೀವು ಇನ್ನೊಬ್ಬರಿಂದ ಸಾಲವಾಗಿ ಪಡೆಯುವಿರಿ. ಭವಿಷ್ಯದ ಬಗ್ಗೆ ಮನಸ್ಸಿನಲ್ಲಿ ನಾನಾ ಚಿಂತೆಗಳು ಹುಟ್ಟಬಹುದು. ಸಂಗಾತಿಯ ಸಲಹೆಯನ್ನೂ ಪಡೆದು ಆದಷ್ಟು ಬೇಗ ಉತ್ತಮ ನಿರ್ಧಾರಕ್ಕೆ ಬನ್ನಿ. ಇಂದು ಸ್ತ್ರೀಯರಿಗೆ ಸೌಂದರ್ಯಪ್ರಜ್ಞೆಯು ಅಧಿಕವಾಗಿ ಇರುವುದು. ಉದ್ಯೋಗದ ಸ್ಥಳವು ಬೆಲೆಯು ಕಡಿಮೆ‌ ಆದಂತೆ ತೋರುವುದು. ಕ್ಷಣಿಕ ಸುಖಕ್ಕಾಗಿ ಸಂಪತ್ತನ್ನು ಅಧಿಕವಾಗಿ ತ್ಯಾಗ ಮಾಡುವಿರಿ. ಆದಾಯದ ಮೂಲವನ್ನು ಹೆಚ್ಚು ಮಾಡಿಕೊಳ್ಳುವಿರಿ. ಮಾನಸಿಕ ಸ್ಥಿರತೆಯನ್ನು ಕಾಪಾಡಿಕೊಳ್ಳುವುದು ಕಷ್ಟವಾದೀತು.

ಸಿಂಹ ರಾಶಿ: ಉದ್ಯೋಗದಲ್ಲಿ ಪ್ರಗತಿ ಇಲ್ಲ ಎಂದು ಬೇಸರಗೊಂಡಿದ್ದರೆ ನಿಮಗೆ ಅಲ್ಪ ನೆಮ್ಮದಿಯ ಸಂಗತಿಯು ಇರಲಿದೆ. ನೌಕರರ ಕಾರ್ಯವು ನಿಮಗೆ ಸಂತೋಷವನ್ನು ತರದು. ಸಂಪೂರ್ಣವಾದ ಮನಸ್ಸಿನಿಂದ ಕಾರ್ಯವನ್ನು ಮಾಡಲಾಗದು‌. ಲಾಭವಿಲ್ಲದ ಕಾರ್ಯದಲ್ಲಿ ಆಸಕ್ತಿಯು ಕಡಿಮೆ ಇರಲಿದೆ. ವಾಹನ ಚಾಲನೆಯಲ್ಲಿ ಜಾಗರೂಕರಾಗಿರಿ. ಕಣ್ಣಿನ ತೊಂದರೆಯು ಹೆಚ್ಚಾಗಬಹುದು. ನಿಮ್ಮ ಮೇಲಧಿಕಾರಿಗಳು ನಿಮ್ಮ ಕೆಲಸಕ್ಕೆ ಅಸಮಾಧಾನಗೊಳ್ಳುವರು. ನಿಮಗೆ ಗೊತ್ತಿಲ್ಲದೇ ಇರುವ ವಿಚಾರಗಳನ್ನು ಕೇಳಿ ಪಡೆಯಿರಿ. ಎಲ್ಲವನ್ನೂ ತಿಳಿದವರಂತೆ ಇರುವುದು ಬೇಡ. ಉನ್ನತ ವ್ಯಾಸಂಗದ ಆಸಕ್ತಿಯನ್ನು ಮನೆಯಲ್ಲಿ ಹೇಳುವಿರಿ.

ಕನ್ಯಾ ರಾಶಿ: ಆರೋಗ್ಯದಲ್ಲಿ ಸುಧಾರಣೆ ಇರಲಿದ್ದು ಕಾರ್ಯಕ್ಕೆ ತಯಾರಾಗುವಿರಿ. ಕಛೇರಿಯ ಕಾರ್ಯದ ನಿಮಿತ್ತ ಓಡಾಟವನ್ನು ಮಾಡಬೇಕಾಗಿದ್ದು ನಿಮಗೆ ಕಷ್ಟವಾದೀತು. ಶತ್ರುಗಳು ಮಾನಸಿಕ ಕಿರುಕುಳವನ್ನು ಯಾವ ರೀತಿಯಿಂದಲೂ ಕೊಡಬಹುದು. ನಿಮ್ಮ ಕೆಲಸಕ್ಕೆ ಸಮಯದ ಮಿತಿಯನ್ನು ಇಟ್ಟುಕೊಳ್ಳುವುದು ಉತ್ತಮ. ಹಿರಿಯರ ತಿಳಿವಳಿಕೆಯು ಅಪಮಾನದಂತೆ ಕಾಣಬಹುದು. ಆಲಸ್ಯದ ಕಾರಣ ನಿಮ್ಮ ಕಾರ್ಯವು ಪೂರ್ಣವಾಗದು. ಸಂಗಾತಿಯ ಮಾತನ್ನು ನೀವು ಗಂಭೀರವಾಗಿ ಪರಿಗಣಿಸುವುದಿಲ್ಲ. ಅಪರಿಚಿತರು ಅಲ್ಪ ಕಾಲದಲ್ಲಿಯೇ ಆಪ್ತರಾಗಬಹುದು. ಅಂದುಕೊಂಡಿದ್ದು ಸರಿಯಾಗಿ ಆಗಿಲ್ಲ ಎಂಬ ವ್ಯಥೆಯಾಗುವುದು.

ತುಲಾ ರಾಶಿ: ಇಂದಿನ‌ ‌ಮನೆಯ ವಾತಾವರಣವು ನಿಮ್ಮ ಅಧ್ಯಯನಕ್ಕೆ ತೊಂದರೆ ಕೊಡಬಹುದು. ದಾಯಾದಿಗಳು ನಿಮ್ಮ ಮೇಲೆ ಅಪವಾದವನ್ನು ಮಾಡಬಹುದು. ಕಾರ್ಯದಲ್ಲಿ ಜಯವಿದ್ದರೂ ಆರ್ಥಿಕ ನಷ್ಟವು ಆಗಬಹುದು. ಹಿತಶತ್ರುಗಳ ಕಾರಣದಿಂದ ಇಂದಿನ ವ್ಯವಹಾರವು ಹಿಂದೆ ಸಾಗಲಿದೆ. ತಪ್ಪಿನಿಂದಾಗಿ ಹಿರಿಯರ ಕೆಂಗಣ್ಣಿಗೆ ಗುರಿಯಾಗುವಿರಿ. ತಂದೆಯ ಜೊತೆ ನಿಮ್ಮ ಭವಿಷ್ಯದ ಚಿಂತನೆಯನ್ನು ಮಾಡಲಿದ್ದೀರಿ. ಇಂದಿನ ಶುಭವಾರ್ತೆಯು ನಿಮ್ಮ ಕಾರ್ಯಕ್ಕೆ ಉತ್ಸಾಹವನ್ನು ಕೊಡುವುದು. ಖಾಸಗಿ ಸಂಸ್ಥೆಯು ನಿಮಗೆ ಜವಾಬ್ದಾರಿಯ ಸ್ಥಾನವನ್ನು ಕೊಡುವುದು. ಬಂಧುಗಳ ಮಾತಿನಿಂದ ಬೇಸರಗೊಳ್ಳುವಿರಿ.

ವೃಶ್ಚಿಕ ರಾಶಿ: ಇಂದು ನಿಮ್ಮ ಪ್ರೀತಿಪಾತ್ರರನ್ನು ಭೇಟಿ ಮಾಡಲಿದ್ದೀರಿ. ಶುಭ ಕಾರ್ಯದಲ್ಲಿ ನಿಮಗೆ ಹೆಚ್ಚು ಆಸಕ್ತಿಯು ಇರಲಿದೆ. ಆಸ್ತಿಯ ಮಾರಾಟದಿಂದ ನಿಮಗೆ ಹೆಚ್ಚಿನ ಲಾಭವು ಸಿಗಲಿದೆ. ಸಾರ್ವಜನಿಕ ಕ್ಷೇತ್ರದಲ್ಲಿ ನಿಮ್ಮ ಅಸ್ತಿತ್ವವು ಹೆಚ್ಚಾಗಿ ತೋರುವುಸು. ಹಣವನ್ನು ಸಾಮಾಜಿಕ ಕಾರ್ಯಗಳಿಗೆ ಬಳಸಲು ಸಿದ್ಧರಿರುವಿರಿ. ತಪ್ಪನ್ನು ನೀವು ಒಪ್ಪಿಕೊಳ್ಳಲಾರಿರಿ. ಸಹೋದರರ ನಡುವೆ ವಾಗ್ವಾದವು ಆಗಬಹುದು. ಇಂದಿನ ವ್ಯವಹಾರವು ಎಚ್ಚರಿಕೆಯಿಂದ ಇರಲಿ. ಕೆಲವೊಮ್ಮೆ ನಿಮ್ಮ ಮಾತುಗಳೇ ನಿಮಗೆ ಮುಳುವಾಗಬಹುದು. ನೇರ ನುಡಿಯಿಂದ ಇನ್ನೊಬ್ಬರಿಗೆ ನೋವನ್ನು ಕೊಡುವಿರಿ. ಸುಖವು ಹೇಗಾದರೂ ನಿಮ್ಮನ್ನು ಅರಸಿ ಬರಬಹುದು.

ಧನು ರಾಶಿ: ಎಲ್ಲ ರೀತಿಯಿಂದಲೂ ಅನುಕೂಲವಾಗಲಿ ಎಂಬ ಮನೋಭಾವವು ಇರಲಿದೆ. ಹಿತಶತ್ರುಗಳ ತೊಂದರೆಯ ನಡುವೆಯೂ ನಿಮ್ಮ ಅಭಿವೃದ್ಧಿಯು ಆಗಲಿದೆ. ಇದರಿಂದ‌ ನಿಮ್ಮ ಅಳಿದುಳಿದ ಶತ್ರುಗಳು ನಾಶವಾಗುವರು. ನಿಮ್ಮದೇ ಶ್ರಮದಿಂದ ಭೂಲಾಭವನ್ನು ಮಾಡಿಕೊಂಡರೂ ನಿಮಗೆ ಸಲ್ಲದ ಮಾತುಗಳನ್ನು ಕೇಳಬೇಕಾದೀತು. ಬಹಳ ದಿನಗಳ ಅನಂತರ ಮನೆಯಲ್ಲಿ ಧಾರ್ಮಿಕ ಕಾರ್ಯದಲ್ಲಿ ಆಸಕ್ತಿಯು ಬರಬಹುದು. ಸಣ್ಣ ವಿಚಾರಕ್ಕೆ ನೀವು ಕೋಪಗೊಂಡು ಮನಸ್ಸನ್ನು ಹಾಳು ಮಾಡಿಕೊಳ್ಳುವಿರಿ. ಇನ್ನೊಬ್ಬರನ್ನು ನಿಂದಿಸುವ ಮಾತು ವಿವಾದಕ್ಕೆ ಗುರಿಯಾಗಬಹುದು. ಇಂದಿನ ನಿಮ್ಮ ನಿರೀಕ್ಷೆಯು ಪೂರ್ಣವಾಗಿ ಸಾಕಾರಗೊಳ್ಳದು. ವಾಹನ ಖರೀದಿಗೆ ಆಪ್ತರ ಸಲಹೆಯನ್ನು ಪಡೆಯುವಿರಿ.

ಮಕರ ರಾಶಿ: ಸಹೋದ್ಯೋಗಿಗಳಿಂದ ಸವಾಲು ಬರಬಹುದು. ಸ್ನೇಹಿತರಿಗೆ ಸಹಾಯ ಮಾಡುವ ಸಲುವಾಗ ಓಡಾಟಗಳಾಗಬಹುದು. ಸಾಲದಿಂದ ವಿಮುಕ್ತಿ ಹೊಂದಲು ಆದಾಯದ ಮೂಲವನ್ನು ಹೆಚ್ಚಿಸಿಕೊಳ್ಳುವುದು ಅಗತ್ಯವಾಗಬಹುದು. ಸ್ಥಿರಾಸ್ತಿಯ ಸಂಪಾದನೆಗೆ ಆಪ್ತರ ಮಾರ್ಗದರ್ಶನವನ್ನು ಪಡೆದುಕೊಳ್ಳುವುದು ಉತ್ತಮ. ಇಂದು ವಿದೇಶಕ್ಕೆ ಪ್ರಯಾಣ ಹೋಗುವ ಅವಕಾಶಗಳು ತೆರೆದುಕೊಳ್ಳಬಹುದು. ನಿಮ್ಮ ಪ್ರಯತ್ನಕ್ಕೆ ಫಲವು ಇಂದೇ ಸಿಗಲಿ ಎಂಬ ನಿರೀಕ್ಷೆ ಬೇಡ. ಇಂದು ನೀವು ತಂದೆಯವರಿಗೆ ಎದುರು ಮಾತನಾಡಿ ಅವರ ಮನಸ್ಸನ್ನು ನೋಯಿಸುವಿರಿ. ಅನಂತರ ಪಶ್ಚಾತ್ತಾಪಪಡುವಿರಿ.

ಕುಂಭ ರಾಶಿ: ಹೆಚ್ಚಿನ ಖರ್ಚು ಮಾಡಿ ಇಂದಿನ‌ ಕಾರ್ಯವನ್ನು ಸಾಧಿಸಿಕೊಳ್ಳುವಿರಿ. ವಾಸಸ್ಥಳವನ್ನು ಬದಲಾಯಿಸಲಿದ್ದೀರಿ. ಮನಸ್ಸಿಗೆ ನಿಮ್ಮವರು ಆಡಿದ ಮಾತುಗಳು ಹಿಂಸೆಯನ್ನು ಕೊಡಬಹುದು. ತಾಯಿಯಿಂದ ನಿಮಗೆ ಲಾಭವಾಗಬಹುದು. ಇಂದಿನ ವ್ಯರ್ಥ ಓಡಾಟದಿಂದ ನಿಮಗೆ ಆಯಾಸವಾಗುವುದು. ಇಷ್ಟರೊಳಗೆ ಆಗಬೇಕಾದ ಸರ್ಕಾರಿ ಕೆಲಸವು ಮತ್ತೂ ಮುಂದಕ್ಕೆ ಹೋಗುವುದು. ಬಂದ ಅವಕಾಶವನ್ನು ಬಿಟ್ಟು ಸಂಕಟಪಡುವಿರಿ. ಆರ್ಥಿಕ ತೊಂದರೆಗೆ ನೀವು ಬಂಧುಗಳ ಸಹಾಯವನ್ನು ಪಡೆಯಬಹುದು. ಸಂಗಾತಿಗೆ ಸಮಯವನ್ನು ಕೊಡುವುದು ಕಷ್ಟವಾದೀತು. ವಿದ್ಯಾಭ್ಯಾಸವನ್ನು ಮುಗಿಸಿ ಉದ್ಯೋಗವನ್ನು ಪಡೆಯಲು ಇಚ್ಛಿಸುವಿರಿ. ಅಂತರ್ಜಾಲದಲ್ಲಿ ಕಾಣುವ ಉದ್ಯೋಗಕ್ಕೆ ಮಾರುಹೋಗಬಹುದು.

ಮೀನ ರಾಶಿ: ಸ್ತ್ರೀಯರಿಗೆ ಎಲ್ಲ ರೀತಿಯಿಂದ ಅನುಕೂಲಕರವಾಗಲಿದೆ. ಇಂದಿನ ಕಾರ್ಯಗಳಲ್ಲಿ ಪ್ರಗತಿ ಇರಲಿದ್ದು ಸಂತೋಷವಾಗುವುದು. ಉದ್ಯೋಗದಲ್ಲಿ ಭಡ್ತಿ ಸಿಗುವ ಸಾಧ್ಯತೆ ಇದೆ. ಸಾದಿಷ್ಟವಾದ ಭೋಜನದಿಂದ ಸಂತೃಪ್ತಿ ಇರಲಿದೆ. ಗೊಂದಲದಿಂದ ಇರುವ ಮನಸ್ಸು ಇಂದು ಪ್ರಶಾಂತವಾಗಲಿದೆ. ಆತ್ಮೀಯರ ಭೇಟಿಯಿಂದ ನಿಮಗೆ ಸಮಾಧಾನ ಸಿಗಲಿದೆ. ಸಹೋದ್ಯೋಗಿಗಳ‌ ಜೊತೆ ಭಿನ್ನಾಭಿಪ್ರಾಯ ಬಂದು ಅದು ವೈಯಕ್ತಿಕ ಶತ್ರುತ್ವ ಬರಬಹುದು. ಸಂತೋಷದ ಸಮಯವನ್ನು ನೆನಪಿಸಿಕೊಳ್ಳುವಿರಿ. ನೀವು ಪ್ರಸಿದ್ಧಿಯನ್ನು ಪಡೆಯಲು ಆಸಕ್ತಿಯು ಹೆಚ್ಚುವುದು. ಸತ್ಯವನ್ನೇ ಹೇಳುವ ಉದ್ದೇಶವಿದ್ದರೂ ಅದನ್ನು ಹೇಳುವ ರೀತಿಯಲ್ಲಿ ನೀವು ಹೇಳಿ.

ಲೋಹಿತಶರ್ಮಾ 8762924271 (what’s app only)

Published On - 12:02 am, Fri, 8 September 23

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ