ಶುಭೋದಯ ಓದುಗರೇ ಪ್ರತಿಯೊಬ್ಬರ ಜೀವನದಲ್ಲಿ ರಾಶಿ ಭವಿಷ್ಯ ವಿಭಿನ್ನವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದರೆ ಇಂದಿನ (2023 7) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ತಿಳಿದುಕೊಳ್ಳಿ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ವೃಷಭ ಮಾಸ, ಮಹಾನಕ್ಷತ್ರ : ರೋಹಿಣೀ, ಮಾಸ : ಜ್ಯೇಷ್ಠ, ಪಕ್ಷ : ಕೃಷ್ಣ, ವಾರ : ಬುಧ, ತಿಥಿ : ತೃತೀಯಾ, ನಿತ್ಯನಕ್ಷತ್ರ : ಶ್ರವಣಾ, ಯೋಗ : ಶುಕ್ಲ, ಕರಣ : ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 03 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 58 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:31 ರಿಂದ 02:08ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 07:41 ರಿಂದ 09:18ರ ವರೆಗೆ, ಗುಳಿಕ ಕಾಲ ಬೆಳಗ್ಗೆ 10:54 ರಿಂದ ಮಧ್ಯಾಹ್ನ 12:31ರ ವರೆಗೆ.
ಮೇಷ: ನೀವು ಇಂದು ಸಂಪನ್ಮೂಲ ವ್ಯಕ್ತಿಳಾಗಿ ನೀವು ಇರುವಿರಿ. ನಿಮ್ಮ ಗುಣಗಳನ್ನು ಇತರರು ಹೇಳಿಯಾರು. ಸಮಯಕ್ಕೆ ನೀವು ಹೆಚ್ಚು ಮಹತ್ತ್ವವನ್ನು ಕೊಡಬಹುದು. ಕುಟುಂಬದಲ್ಲಿ ಸಂತೋಷದ ವಾತಾವರಣವನ್ನು ನೀವೇ ನಿರ್ಮಿಸುವಿರಿ. ಅತಿಯಾದ ಕೋಪವು ಕಡಿಮೆಯಾದರೂ ನಷ್ಟವಾಗಬಹುದು. ನಿಮ್ಮನ್ನು ಕೆರಳಿಸಲು ಯಾರಾದರೂ ಬರಬಹುದು. ನಿಮ್ಮ ಅಹಂಕಾರಕ್ಕೆ ಕಡಿವಾಣ ಹಾಕಿಕೊಳ್ಳಿ. ಸುಖದುಃಖಗಳು ಎರಡೂ ನಿಮಗೆ ಸಮವಾಗಿ ಸಿಗಬಹುದು. ಹೆಚ್ಚು ಶ್ರವಹಿಸಿ ಕೆಲಸ ಮಾಡುವುದನ್ನು ನಿಲ್ಲಿಸಬಹುದು.
ವೃಷಭ: ಅನಿರೀಕ್ಷಿತ ಧನಾಗಮನವು ನಿಮಗೆ ಸಂತಸವನ್ನು ತರಲಿದೆ. ಮನೆಗೆ ಬಂದರನ್ನು ಬರಿ ಕೈಯಲ್ಲಿ ಏನನ್ನಾದರೂ ಕೊಡಿಸುವುದು ಉಚಿತ. ವಿವಾಹದ ಮಾತುಕತೆ ವಿಳಂಬವಾಗಿ ನಿಮಗೆ ಬೇಸರ ತರಿಸಬಹುದು. ಲೆಕ್ಕಪತ್ರ ವಿಷಯದಲ್ಲಿ ನೀವು ಹಿಂದುಳಿಯುವಿರಿ. ಸಭೆಯಲ್ಲಿ ನಿಮ್ಮನ್ನು ಗೌರವಿಸಬಹುದು. ವಾಹನದಲ್ಲಿ ನೀವು ಪ್ರಯಾಣ ಮಾಡಲು ನಿಮಗೆ ಕಷ್ಟವಾದೀತು. ಸಿಗದುದರ ಬಗ್ಗೆ ಬಹಳ ಆಲೋಚನೆ ಬೇಡ. ಯೋಗ ಬಂದಾ ಸಿಗುವುದು ಎಂಬ ನಂಬಿಕೆಯನ್ನು ಇಟ್ಟುಕೊಂಡಿರಿ.
ಮಿಥುನ: ನೀವು ಇಂದು ನಂಬಿಕೆಯನ್ನು ಸುಳ್ಳು ಮಾಡುವಿರಿ. ನಿಮ್ಮ ಪ್ರಾಬಲ್ಯವೇ ಮೇಲಾದೀತು. ಸ್ವಂತ ಉದ್ಯೋಗವಿದ್ದರೆ ಜನರು ವಂಚಿಸಬಹುದು. ನಿಮ್ಮ ಸಂಗಾತಿಯೊಂದಿಗೆ ಹೆಚ್ಚು ಸಮಯ ಕಳೆಯಲು ಸಾಧ್ಯವಾಗಲಾರದು. ಕೆಲಸಕ್ಕೆ ಸಂಬಂಧಿಸಿದಂತೆ ಕೆಲವು ದಿನಗಳವರೆಗೆ ಮನೆಯಿಂದ ದೂರವಿರಬೇಕಾಗುವುದು. ಕಚೇರಿಯಲ್ಲಿ ನಿಮ್ಮ ಸಾಧನೆಗೆ, ನಿಷ್ಠೆಗೆ ಮೆಚ್ಚುಗೆ ಸಿಗಲಿದೆ. ನಿಮ್ಮ ಕೆಲಸದಲ್ಲಿ ನೀವು ಪ್ರಾಮಾಣಿಕರಾಗಿ ಇರುವಿರಿ. ಇದೇ ನಿಮಗೆ ಇಷ್ಟದ ವಿಚಾರವಾಗಿದೆ. ನೂತನ ವಸ್ತುಗಳ ಖರೀದಿಗೆ ಹಣವು ಖರ್ಚಾದೀತು.
ಕರ್ಕಾಟಕ: ಮಕ್ಕಳ ಮೇಲೆ ನಿಮಗೆ ಬೇಸರ ಉಂಟಾಗಬಹುದು. ತಾಳ್ಮೆಯನ್ನು ಕಳೆದುಕೊಳ್ಳುವ ಸ್ಥಿತಿಯು ಎದುರಾಗಬಹುದು. ನಷ್ಟವನ್ನು ತುಂಬಿಕೊಳ್ಳಲು ಅನ್ಯಮಾರ್ಗವನ್ನು ಪ್ರವೇಶಮಾಡಬಹುದಿ. ಮನೆಯ ವಾತಾವರಣವು ನಿಮಗೆ ಹಿತವಾಗಲಿದೆ. ಸುಳ್ಳಿನಿಂದ ಇಂದು ನಿಮ್ಮ ವ್ಯಕ್ತಿತ್ವಕ್ಕೆ ತೊಂದರೆ ಆದೀತು. ವಿಶೇಷವಾದ ವಸ್ತುವನ್ನು ಕೊಳ್ಳುವ ವಿಚಾರದಲ್ಲಿ ಮೋಸ ಹೋಗುವಿರಿ. ದೇವರಲ್ಲಿ ಶುದ್ಧ ಮನಸ್ಸಿಂದ ಜಪಮಾಡಿ. ವಾಹನದಿಂದ ಲಾಭವನ್ನು ಪಡತುವಿರಿ. ಅತಿಯಾದ ವೇಗ ಬೇಡ.
ಸಿಂಹ: ನಿಮ್ಮ ಗುರಿಗಳು ಬದಲಾದಷ್ಟೂ ನಿಮ್ಮ ಶ್ರಮವೂ ವ್ಯರ್ಥವಾಗಬಹುದು. ಸಂಗಾತಿಯ ಜೊತೆ ಹೆಚ್ಚು ಕಾಲ ಕಳೆಯುವ ಮನಸ್ಸಿದ್ದರೂ ಸಮಯದ ಅಭಾವದಿಂದ ಅದು ಸಾಧ್ಯವಾಗದು. ಇದೇ ನಿಮ್ಮ ನಡುವಿನ ಒಡಕು ಉಂಟಾಗಲು ಕಾರಣವಾಗಬಹುದು. ಆತ್ಮವಿಶ್ವಾಸವು ಇಂದು ನಿಮಗೆ ಕೈಕೊಡಬಹುದು. ನಿಮ್ಮನ್ನು ನಿಮ್ಮವರಿಗೆ ಪರಿಚಯ ಮಾಡಿಕೊಡುವ ಸನ್ನಿವೇಶ ಬರಬಹುದು. ಹಳೆಯ ಸ್ನೇಹಿತೆಯ ಭೇಟಿಯಾಗಿ ಮಾತುಕತೆ ನಡೆಸುವಿರಿ. ನಂಬಿಕೆಯನ್ನು ಮೋಸವಾಗಬಹುದು. ಇಟ್ಟುಕೊಳ್ಳಲು ಕೊಟ್ಟ ಹಣವು ಪುನಃ ಬಾರದೇ ಇದ್ದೀತು. ಹಿರಿಯರ ಎದುರು ಮಾತನಾಡಲು ನೀವು ಹೆದರುವಿರಿ.
ಕನ್ಯಾ: ದೀರ್ಘಕಾಲದ ನೋವನ್ನು ಕಡಿಮೆ ಮಾಡಿಕೊಳ್ಳಲು ಇಂದು ಪ್ರಯತ್ನಿಸುವಿರಿ. ವೈದ್ಯವೃತ್ತಿಯಲ್ಲಿ ತೊಡಗಿದ್ದರೆ ನಿಮಗೆ ಕೆಟ್ಟ ವಾರ್ತೆಯು ಬರಬಹುದು. ಉದ್ಯಮದಲ್ಲಿ ಹೊಸರೀತಿಯ ಲಾಭಾವನ್ನು ಪಡೆಯಲು ಆಲೋಚಿಸುವಿರಿ. ಮಾನಸಿಕ ಒತ್ತಡವು ನಿಮ್ಮ ಕೆಲಸಗಳನ್ನು ಹಾಳು ಮಾಡೀತು. ದಾಂಪತ್ಯದಲ್ಲಿ ಸಣ್ಣ ವಿರಸವು ಉಂಟಾಗಬಹುದು. ಮಕ್ಕಳ ವಿಚಾರದಲ್ಲಿ ನಿಮ್ಮ ವರ್ತನೆಯು ಬಾಲಿಶ ಎನಿಸಬಹುದು. ಯಾರನ್ನೋ ಮೆಚ್ಚಿಸಲು ನೀವು ಸಮಯವನ್ನು ಕಳೆಯಬೇಕಿಲ್ಲ. ಉತ್ತಮಭೋಜನವು ನಿಮಗೆ ಸಿಗಲಿದೆ. ಭೋಗವಸ್ತುಗಳನ್ನು ಖರೀದಿಸಿ ಹಣವನ್ನು ವ್ಯರ್ಥಮಾಡುವಿರಿ.
ತುಲಾ: ಪುಣ್ಯ ಕೆಲಸದಲ್ಲಿ ನೀವು ಹೆಚ್ಚು ಭಾಗಿಯಾಗುವಿರಿ. ಖರ್ಚನ್ನು ನೀವು ನಿಯಂತ್ರಣ ಮಾಡುವ ಅವಶ್ಯಕತೆ ಇಂದು ಬರಬಹುದು. ಮಹಿಳೆಯರು ನಿಮ್ಮಿಂದ ಸಹಾಯವನ್ನು ಪಡೆಯುವರು. ವಿದ್ಯಾಭ್ಯಾಸಕ್ಕೆ ತೊಂದರೆಯಾಗಬಹುದು. ಹವಾಮಾನ ಬದಲಾವಣೆಯಿಂದ ನಿಮ್ಮ ದೇಹದ ಮೇಲೆ ವಿರುದ್ಧ ಪರಿಣಾಮವನ್ನು ಉಂಟುಮಾಡಬಹುದು. ನಿಮ್ಮ ಪ್ರಯಾಣವು ಸರಿಯಾದ ಯೋಜನೆಯಿಂದ ಇದ್ದಿರಲಿ. ನಿಮ್ಮವರನ್ನು ನೀವು ತಪ್ಪಾಗಿ ತಿಳಿಯುವರು. ಕಂಡಿದ್ದನ್ನು ನೇರವಾಗಿ ಹೇಳಲು ಮುಂದಾಗಬೇಡಿ. ದ್ವೇಷವಾಗಿ ಪರಿವರ್ತನೆ ಆಗಬಹುದು. ಯಾರನ್ನೂ ಅವಲಂಬಿಸಲು ಹೋಗಬೇಡಿ.
ವೃಶ್ಚಿಕ: ಅಧಿಕಾರದ ಬಲಾಬಲವನ್ನು ತಿಳಿದುಕೊಳ್ಳ ವಾಗ್ವಾದವು ಅಧಿಕಾರಿಗಳ ನಡುವೆ ನಡೆಯಬಹುದು. ವಾಹನಕ್ಕಾಗಿ ಹಣವನ್ನು ಖರ್ಚುಮಾಡಬೇಕಾದೀತು. ದಾಂಪತ್ಯದಲ್ಲಿ ಪ್ರೀತಿ ಬೆಳೆಯಲು ಇಬ್ಬರ ಸಹಕಾರ ಅಗತ್ಯ. ಒಬ್ಬರಿಂದ ಆಗದ್ದನ್ನು ಮಾಡಲು ಹೋಗಬೇಡಿ. ನಿಮ್ಮ ಅಹಂಕಾರವೇ ನಿಮ್ಮನ್ನು ಜನರಿಂದ ದೂರವಿರುವಂತೆ ಮಾಡಬಹುದು. ಸಾಲವನ್ನು ವೇಗವಾಗಿ ತೀರಿಸಲು ನೀವು ಇಂದು ಶ್ರಮ ಪಡುವಿರಿ. ಅದು ವಿಪರೀತ ಪರಿಣಾಮವನ್ನು ಉಂಟುಮಾಡೀತು. ಖರೀದಿಗಾಗಿ ಸಂಗಾತಿಯ ಹಣವನ್ನು ಕೇಳಬಹುದು. ನಿಮ್ಮ ಜೊತೆಗೆ ನಿಮ್ಮನ್ನು ದ್ವೇಷಿಸುವವರು ಇರುವರು. ಜಾಗರೂಕರಾಗಿರುವುದು ಉಚಿತ.
ಧನುಸ್ಸು: ಇಂದು ನೀವು ಮಾಡುವ ಕೆಲಸಗಳು ಲಾಭದಾಯಕ ಆಗಿದ್ದರೂ ಪರಿಶ್ರಮವೂ ಹೆಚ್ಚಿರಲಿದೆ. ಚಂಚಲವಾದ ಮನಸ್ಸನ್ನು ನೀವು ನಿಯಂತ್ರಿಸಲು ಬೇಕಾದ ಕ್ರಮವನ್ನು ಅನುಸರಿಸಿ. ನಿಮ್ಮ ಬಂಧುಗಳು ಹಣಕಾಸಿನ ಸಹಾಯಕ್ಕಾಗಿ ನಿಮ್ಮನ್ನು ಕೇಳಿಯಾರು. ಕೊಟ್ಟರೂ ಕೊಡದಿದ್ದರೂ ಮನಸ್ತಾಪ ಏಳಬಹುದು. ಲೆಕ್ಕ ಪರಿಶೋಧಕರು ಬಹಳ ಒತ್ತಡದಲ್ಲಿ ಇರಬೇಕಾಗಿಬರಬಹುದು. ಏಳಿಗೆಗೆ ಬೇಕಾದ ಸಾಮರ್ಥ್ಯ ಕೊರತೆ ಇದ್ದು ಅದನ್ನು ಸರಿಮಾಡಿಲೊಳ್ಳಬೇಕಿದೆ. ಯೋಗ್ಯ ವಿವಾಹಸಂಬಂಧವು ಬರಬಹುದು. ನಿಮ್ಮ ಕ್ಷುಲ್ಲಕ ಕಾರಣದಿಂದ ಅದನ್ನು ಬಿಟ್ಟ ಬಿಡುವುದು ಬೇಡ. ಮನಸ್ಸನ್ನು ಸಂಗಾತಿಯ ಜೊತೆ ಹಂಚಿಕೊಳ್ಳಿ.
ಮಕರ: ಸರ್ಕಾರದಲ್ಲಿ ಆಗಬೇಕಾದ ನಿಮ್ಮ ಕೆಲಸವು ಸ್ವಲ್ಪ ವೇಗವನ್ನು ಪಡೆಯವುದು. ಅಧಿಕಾರಿಗಳ ಭೇಟಿಯಿಂದ ನಿಮ್ಮ ಉದ್ಯೋಗದಲ್ಲಿ ಪ್ರಭಾವವು ಹೆಚ್ಚಾಗಬಹುದು. ಉತ್ತಮ ಭೋಜನವನ್ನು ನೀವಿಂದು ಮಾಡಲಿದ್ದೀರಿ. ಅಪರೂಪದ ಭೇಟಿ ನಿಮಗೆ ನೆಮ್ಮದಿಯನ್ನು ಯಂದೀತು. ಆದಾಯವು ಚಿಂತಿಸಿದ ಮಟ್ಟದಲ್ಲಿದ್ದರೂ ಖರ್ಚು ಅದಕ್ಕಿಂತಲೂ ಹೆಚ್ಚಾಗಲಿದೆ. ಸಂಸಾರದಲ್ಲಿ ಸಣ್ಣ ವಿಚಾರಗಳನ್ನು ದೊಡ್ಡ ಮಾಡಿಕೊಳ್ಳುವುದು ಬೇಡ. ಮನೆಯಲ್ಲಿ ಯಾರಾದರೂ ತಟಸ್ಥರಾದರೆ ಕಲಹವು ಶಾಂತವಾಗಬಹುದು. ದೇಹದ ಕೆಲವು ಭಾಗಗಳಲ್ಲಿ ತಾತದ ಕಾರಣದಿಂದ ನೋವುಗಳು ಕಾಣಿಸಬಹುದು. ಕೃಷಿಯ ಉತ್ಪನ್ನಗಳನ್ನು ಮಾರಾಟ ಮಾಡಲು ನೀವು ಸೋಲಬಹುದು.
ಕುಂಭ: ಕುಟುಂಬದಲ್ಲಿ ಒಂದು ಮಟ್ಟಿನ ಸೌಖ್ಯವು ಇರಲಿದೆ. ಇಷ್ಟಮಿತ್ರರು ನಿಮ್ಮನ್ನು ಭೇಟಿ ಮಾಡುವರು. ಕ್ಷೇಮಸಮಾಚಾರವನ್ನು ಹಂಚಿಕೊಳ್ಳುವರು. ಬರಬೇಕಾದ ಬಾಕಿಗಳಲ್ಲಿ ಇಂದು ಸ್ವಲ್ಪ ಬರಲಿದೆ. ನಿಮ್ಮ ಕೆಲಸಗಳಿಗೇ ನೀವು ಇಂದು ಹೆಚ್ಚು ಪ್ರಾಮುಖ್ಯ ನೀಡಿ. ಸಂತಾನದ ಸುಖವನ್ನು ನೀವುಬಪಡೆಯುವಿರಿ. ಸಾಹಸ ಮಾಡಲು ಹೋಗುವಾಗ ಎಚ್ಚರವಿರಲಿ. ಮುಖಭಂಗ ಮಾಡಿಕೊಂಡು ಬರಬೇಕಾದೀತು. ಆಪ್ತರಿಂದ ಧನವನ್ನು ನಿರೀಕ್ಷಿಸಿ, ಪಡೆದುಕೊಳ್ಳುವಿರಿ. ವಿದ್ಯಾಭ್ಯಾಸವನ್ನು ನೀವು ಅನ್ಯರ ಒತ್ತಾಯಕ್ಕೆ ಮಾಡುವಿರಿ. ಸ್ವಂತಕೆ ಇದ್ದರೆ ಒಳ್ಳೆಯದು. ಜಾಣ್ಮೆಯಿಂದ ನೀವು ಬೇರೆಯರಿಂದ ಕಾರ್ಯವನ್ನು ಮಾಡಿಸಿಕೊಳ್ಳುವಿರಿ. ಅತಿಯಾದ ಮರೆವು ಉಂಟಾಗಲಿದೆ ಇಂದು.
ಮೀನ: ಇಂದು ಮನೆಯಲ್ಲಿ ಏನಾದರೂ ತೊಂದರೆ ಕಾಣಿಸಿಕೊಳ್ಳಬಹುದು. ನಿಮ್ಮ ನಿರೀಕ್ಷಿತ ಗುರಿಯನ್ನು ತಲುಪಲು ನೀವು ವಿಳಂಬ ಆಗಬಹುದು. ಸಮಾಜಮುಖೀ ಕಾರ್ಯಗಳ ಕಡೆ ಹೆಚ್ಚು ಗಮನಹರಿಸುವಿರಿ. ಇದು ನಿಮ್ಮ ಆಸಕ್ತಿಯ ಕ್ಷೇತ್ರವೂ ಹೌದು. ನೌಕರರಿಗೆ ಇಂದು ಬಡ್ತಿ ಸಿಗಲಿದೆ. ಸಂತೋಷವು ಇಂದು ಹೆಚ್ಚಾಗಬಹುದು. ಬಂಧುಗಳು ನಿಮ್ಮನ್ನು ಬೇಕೆಂದೇ ತಪ್ಪು ದಾರಿ ತೋರಿಸುವರು. ನಿಮ್ಮ ವಿವೇಚನಾ ಶಕ್ತಿಯು ಕೆಲಸ ಮಾಡಲಿ. ದಾರಿಯನ್ನು ಸರಿ ಮಾಡಿಕೊಳ್ಳುವುದು ಉತ್ತಮ. ಪರೀಕ್ಷೆಗಳನ್ನು ಎದುರಿಸುವುದು ನಿಮಗೆ ಸಹಜ ಕೆಲಸವಾಗಿದೆ. ಜೀವನ ಪರೀಕ್ಷೆಯನ್ನೂ ಜೀವನಕ್ಕೆ ಬೇಕಾದ ಪರೀಕ್ಷೆಯನ್ನೂ ನೀವು ಎದುರಿಸುವಿರಿ.
-ಲೋಹಿತಶರ್ಮಾ ಇಡುವಾಣಿ (ವಾಟ್ಸ್ಆ್ಯಪ್ – 8762924271)