ಶುಭೋದಯ ಓದುಗರೇ. ಪ್ರತಿಯೊಬ್ಬರ ಜೀವನದಲ್ಲಿ ರಾಶಿ ಭವಿಷ್ಯ ವಿಭಿನ್ನವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದ್ರೆ ಇಂದಿನ (2023 ಏಪ್ರಿಲ್ 8) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ತಿಳಿದುಕೊಳ್ಳಿ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ಮೀನ ಮಾಸ, ಮಹಾನಕ್ಷತ್ರ : ಅಶ್ವಿನೀ, ಮಾಸ : ಚೈತ್ರ, ಪಕ್ಷ : ಕೃಷ್ಣ, ವಾರ : ಶನಿ, ತಿಥಿ : ದ್ವಿತೀಯಾ, ನಿತ್ಯನಕ್ಷತ್ರ : ಸ್ವಾತಿ, ಯೋಗ : ವಜ್ರ, ಕರಣ : ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 24 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 44 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 09:29 ರಿಂದ ಮಧ್ಯಾಹ್ನ 11:02ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 02:07 ರಿಂದ 03:39ರ ವರೆಗೆಮ ಗುಳಿಕ ಕಾಲ ಬೆಳಗ್ಗೆ 06:29 ರಿಂದ 07:57ರ ವರೆಗೆ.
ಮೇಷ: ವಿದ್ಯಾರ್ಥಿಯಾಗಿದ್ದರೆ ಶಿಕ್ಷಣದಲ್ಲಿನ ಅಡೆತಡೆಗಳು ಸರಿಯಾಗಬಹುದು. ದಾಂಪತ್ಯಜೀವನದಲ್ಲಿ ನೀವು ಪ್ರೀತಿಯನ್ನು ಅನುಭವಿಸುವಿರಿ. ಕೆಲವು ದಿನಗಳ ಕಾಲ ಮನೆಯಿಂದ ಹೊರಗೆ ಸುತ್ತಾಡಲು ಯೋಜಿಸಬಹುದು. ಉದ್ಯೋಗಿಗಳಿಗೆ ಇಂದು ಶುಭ ಸೂಚನೆಗಳು ಸಿಗಬಹುದು. ಮಕ್ಕಳಿಂದ ನೀವು ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯಬಹುದು. ಅದು ನಿಮಗೆ ತುಂಬಾ ಹೆಮ್ಮೆ ತರುತ್ತದೆ. ಕಷ್ಟಪಟ್ಟು ಕೆಲಸ ಮಾಡುತ್ತೀರಿ ಮತ್ತು ನಿಮ್ಮ ವಿರೋಧಿಗಳಿಗೆ ಕಠಿಣ ಸ್ಪರ್ಧೆಯನ್ನು ನೀಡುತ್ತೀರಿ. ನಿಮ್ಮ ವೆಚ್ಚಗಳು ಕಡಿಮೆ ಇರುತ್ತದೆ ಮತ್ತು ನೀವು ಉಳಿಸಲು ಸಾಧ್ಯವಾಗುತ್ತದೆ.
ವೃಷಭ: ಅತಿಥಿಗಳು ಅನಿರೀಕ್ಷಿತವಾಗಿ ಮನೆಗೆ ಬರಲಿದ್ದಾರೆ. ಅವರ ಸಂತೋಷಕ್ಕೆ ನೀವು ಸಾಕಷ್ಟು ಹಣವನ್ನು ಖರ್ಚು ಮಾಡಬೇಕಾಗಿಬರಬಹುದು. ಅದು ನಿಮ್ಮ ಆತಂಕವನ್ನು ಹೆಚ್ಚಿಸುತ್ತದೆ. ಎಲ್ಲವನ್ನೂ ನಿರ್ವಹಿಸುವ ಸಾಮರ್ಥ್ಯ ನಿಮ್ಮಲ್ಲಿ ಇದೆ. ಆದರೆ ಅದನ್ನು ನಿಮಗೆ ಪರಿಚಯಿಸುವ ಕೆಲಸವಾಗಬೇಕು. ಕೆಲಸದ ಸ್ಥಳದಲ್ಲಿ ಪರಿಸ್ಥಿತಿ ಅನುಕೂಲವಾಗಿರುವುದು. ಕಷ್ಟಪಟ್ಟು ಬಹಳ ಪ್ರೀತಿಯಿಂದ ಕೆಲಸವನ್ನು ಮಾಡುತ್ತೀರಿ ಮತ್ತು ನಿಮ್ಮ ಉತ್ಸಾಹವನ್ನು ಪರಿಗಣಿಸಿ ಹಿರಿಯರು ನಿಮ್ಮನ್ನು ಪ್ರೋತ್ಸಾಹಿಸಬಹುದು.
ಮಿಥುನ: ತೊಂದರೆಗಳು ನಿಮ್ಮ ಮೇಲೆ ಪ್ರಾಬಲ್ಯವನ್ನು ಸಾಧಿಸವಹುದು. ಅದಕ್ಕೆ ಅವಕಾಶವನ್ನು ಕೊಡಬೇಡಿ. ನಿಮ್ಮ ತಿಳುವಳಿಕೆಯುಂದ ಅವುಗಳನ್ನು ಸರಿಯಾಗಿಸಿ. ನಿಮ್ಮ ಸಂಗಾತಿಯೊಂದಿಗೆ ಹೆಚ್ಚು ಸಮಯ ಕಳೆಯಲು ಸಾಧ್ಯವಾಗುವುದಿಲ್ಲ. ಕೆಲಸಕ್ಕೆ ಸಂಬಂಧಿಸಿದಂತೆ ಕೆಲವು ದಿನಗಳವರೆಗೆ ಮನೆಯಿಂದ ದೂರವಿರಬೇಕಾಗಬಹುದು. ಕಚೇರಿಯಲ್ಲಿ ನಿಮ್ಮ ಸಾಧನೆಗೆ ಮೆಚ್ಚುಗೆ ಸಿಗಲಿದೆ. ನಿಮ್ಮ ಕೆಲಸವನ್ನು ನೀವು ಪ್ರಾಮಾಣಿಕವಾಗಿ ಪೂರ್ಣಗೊಳಿಸುವಿರಿ. ಈ ಸಮಯದಲ್ಲಿ ಖರ್ಚುಗಳು ಅಧಿಕವಾಗಬಹುದು.
ಕರ್ಕ: ಅತಿಯಾದ ಸಂತೋಷದಿಂದ ನಿರ್ಧಾರ ತೆಗೆದುಕೊಳ್ಳಬೇಡಿ. ಇಲ್ಲವಾದರೆ ನೀವು ನಷ್ಟವನ್ನು ಅನುಭವಿಸುವಿರಿ. ಮನೆಯ ವಾತಾವರಣವು ಪ್ರಿಯವಾಗುವುದು. ಕುಟುಂಬಗಳ ನಡುವಿನ ಪರಸ್ಪರ ಹೊಂದಾಣಿಕೆಯು ಮೊದಲಿಗಿಂತ ಉತ್ತಮವಾಗಿರುತ್ತದೆ. ಹೆತ್ತವರೊಂದಿಗೆ ನೀವು ಸಂತೋಷದಿಂದ ಸಮಯವನ್ನು ಕಳೆಯುವಿರಿ. ಮನಸ್ಸಿನಲ್ಲಿ ಸ್ವಲ್ಪ ಗೊಂದಲಗಳು ಉಂಟಾಗಬಹುದು. ಅದು ನಿಮ್ಮನ್ನು ತುಂಬಾ ಉದ್ವೇಗಕ್ಕೆ ಒಳಗೊಳಿಸುವುದು. ಆರೋಗ್ಯದ ವಿಷಯದಲ್ಲಿ ಸ್ವಲ್ಪ ನೀವು ಕಾಳಜಿವಹಿಸಬೇಕಾಗಬಹುದು.
ಸಿಂಹ: ನಿಮ್ಮ ಸಂಗಾತಿಯನ್ನು ತಪ್ಪಾಗಿ ಗ್ರಹಿಸುವಿರಿ. ಇದೇ ನಿಮ್ಮ ನಡುವಿನ ಅಂತರಕ್ಕೆ ಕಾರಣವಾಗಲಿದೆ. ನಿಮ್ಮ ಸಂಬಂಧವನ್ನು ಸುಧಾರಿಸಲು ಬಯಸಿದರೆ ಸಂಗಾತಿಯನ್ನು ಅನುಮಾನಿಸುವುದನ್ನು ತಪ್ಪಿಸಿ. ಅವರನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿ. ಕುಟುಂಬದಲ್ಲಿಯೂ ಪರಸ್ಪರ ಸಂಬಂಧಗಳು ಉತ್ತಮವಾಗಿರುತ್ತವೆ. ಹಣದ ಪರಿಸ್ಥಿತಿ ತೃಪ್ತಿಯನ್ನು ತರುವುದು. ಇಂದು ನೀವು ಹೂಡಿಕೆ ಮಾಡಲು ಬಯಸಿದರೆ, ಸಮಯವು ಅನುಕೂಲಕರವಾಗಿರುತ್ತದೆ. ನೀವು ಅಮೂಲ್ಯ ವಸ್ತುವನ್ನು ಖರೀದಿಸಲು ಆಲೋಚಿಸಿದರೆ ಒಳ್ಳೆಯದೇ.
ಕನ್ಯಾ: ಹಣವು ದೀರ್ಘಕಾಲದವರೆಗೆ ಬಾರದೇ ಇರುವುದರಿಂದ ಇದನ್ನು ಶಾಂತವಾಗಿ ಬಗೆಹರಿಸಲು ಪ್ರಯತ್ನಿಸಬೇಕು. ಕಡಿಮೆ ಸಮಯದಲ್ಲಿ ಹೆಚ್ಚು ಲಾಭ ಗಳಿಸಲು ಹೋಗಿ ಪರಿಸ್ಥಿತಿಯಲ್ಲಿ ನೀವು ಸಿಲುಕಿಕೊಳ್ಳುವಿರಿ. ಎಲ್ಲ ಅಂಶಗಳನ್ನು ಪರಿಶೀಲಿಸಿದ ಅನಂತರವೇ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಿ. ಪ್ರೀತಿಯ ವಿಷಯದಲ್ಲಿ ನೀವು ಅದೃಷ್ಟವಂತರು. ಅಧಿಕಾರಿಗಳ ಜೊತೆ ನಿಮ್ಮ ಆಪ್ತತೆ ಹೆಚ್ಚಾಗುತ್ತದೆ. ಸಂಗಾತಿಯ ಜೊತೆ ಭಿನ್ನಾಭಿಪ್ರಾಯಗಳು ಮುಂದುವರಿಯುವ ಸಾಧ್ಯತೆ ಇದೆ. ಮಾತುಕತೆಯಿಂದ ಇಂದೇ ಬಗೆಹರಿಸಿಕೊಳ್ಳಿ.
ತುಲಾ: ಹವಾಮಾನ ಬದಲಾವಣೆಯಿಂದ ನಿಮ್ಮ ದೇಹದ ಮೇಲೆ, ಮನಸ್ಸಿನ ಮೇಲೆ ಪ್ರಭಾವವನ್ನು ಬೀರುತ್ತವೆ. ದೇಹ ಹಾಗೂ ಮನಸ್ಸಿನ ಆರೋಗ್ಯವನ್ನು ಕಾಪಾಡಿಕೊಳ್ಳಲು ಪ್ರಯತ್ನಿಸಿ. ನಿಮ್ಮ ಪ್ರಯಾಣವು ಸರಿಯಾದ ಯೋಜನೆಯಿಂದ ಕೂಡಿರಲಿ. ತಪ್ಪು ತಿಳುವಳಿಕೆಯಿಂದ ಸಣ್ಣ ವಾಗ್ವಾದವಾಗಬಹುದು. ಸಹನೆಯಿಂದ ಇಬ್ಬರೂ ಸರಿಯಾಗಿ ಆಲಿಸಿ ಸರಿಮಾಡಿಕೊಳ್ಳಿ. ವಿದ್ಯಾರ್ಥಿಗಳಿಗೆ ಅಪೇಕ್ಷಿತ ಫಲಿತಾಂಶಗಳನ್ನು ಸಾಧಿಸಲು ತಾಳ್ಮೆಯೇ ಅತ್ಯವಶ್ಯ.
ವೃಶ್ಚಿಕ: ಇಂದು ಸಿದ್ಧಪಡಿಸಿದ ಆಹಾರವನ್ನು ತಯಾರಿಸುವವರಿಗೆ ಮಾರುಕಟ್ಟೆ ವಿಸ್ತರಣೆ ಮಾಡಬಹುದು. ನಿಮ್ಮ ಅಹಂಕಾರವೇ ನಿಮ್ಮನ್ನು ಜನರಿಂದ ದೂರವಿರುವಂತೆ ಮಾಡುವುದು. ಹಾಲಿನ ಉತ್ಪನ್ನಗಳ ಮಾರಾಟದಿಂದ ಅಧಿಕ ಲಾಭವಿರಲಿದೆ. ಸರ್ಕಾರಿ ಕೆಲಸದಲ್ಲಿರುವವರಿಗೆ ಉನ್ನತ ಸ್ಥಾನ ಹಾಗೂ ಜವಾಬ್ದಾರಿಗಳು ಸಿಗಲಿವೆ. ಸಂಗಾತಿಯ ಆದಾಯದಲ್ಲಿ ನಿಮಗೆ ಹಣ ಸಿಗಲಿದೆ. ಕೃಷಿಯ ಉದ್ಯೋಗವು ನಿಮಗೆ ಉತ್ತಮವೆನಿಸಬಹುದು. ಕಳೆದುಕೊಂಡಿದ್ದರ ಬಗ್ಗೆ ಆಸೆ ಬೇಡ.
ಧನುಸ್ಸು: ನಿಮ್ಮ ಬಂಧುಗಳು ಹಣಕಾಸಿನ ಸಹಾಯಕ್ಕಾಗಿ ನಿಮ್ಮಲ್ಲಿಗೆ ಬರುವರು. ಕಾರ್ಯದ ಒತ್ತಡದ ನಡುವೆಯೂ ಕುಟುಂಬದಲ್ಲಿನ ಆಗು ಹೋಗುಗಳತ್ತ ಗಮನಹರಿಸುವುದು ಒಳ್ಳೆಯದು. ಹಳೆಯ ಸ್ನೇಹಿತರ ಅಪರೂಪಕ್ಕೆ ದೊರೆತಿದ್ದರಿಂದ ಸಂತೋಷಪಡುವಿರಿ. ಲೆಕ್ಕ ಪರಿಶೋಧಕರು ಬಹಳ ಒತ್ತಡದಲ್ಲಿ ಇರುವರು. ಷೇರು ವ್ಯವಹಾರಗಳಲ್ಲಿ ಏಳಿಗೆಯು ಅಷ್ಟಾಗಿ ಇರುವುದಿಲ್ಲ. ಸೂಕ್ತ ವೈವಾಹಿಕ ಸಂಬಂಧ ದೊರೆಯುವ ಸಾಧ್ಯತೆ ಇದೆ, ಪ್ರಯತ್ನಶೀಲರಾಗಿ. ಹಿರಿಯರಿಂದ ನಿಮ್ಮ ವಂಶದದವರ ಬಗ್ಗೆ ತಿಳಿದುಕೊಳ್ಳುವಿರಿ.
ಮಕರ: ಅಧಿಕಾರಿಗಳ ಭೇಟಿಯಿಂದ ನಿಮ್ಮ ಉದ್ಯೋಗದಲ್ಲಿ ಆದಾಯ, ಪ್ರಭಾವಗಳು ಹೆಚ್ಚಾಗಲಿದೆ. ಆದಾಯವು ನಿರೀಕ್ಷಿತ ಮಟ್ಟದಲ್ಲಿದ್ದರೂ ಖರ್ಚು ಅದಕ್ಕಿಂತಲೂ ಹೆಚ್ಚಾಗಬಹುದು. ಸಂಸಾರದಲ್ಲಿ ಸಣ್ಣ ಸಣ್ಣ ವಿಚಾರಗಳಿಗೆ ಕಲಹವಾಗಬಹುದು. ಯಾರಾದರೂ ತಟಸ್ಥರಾದರೆ ಶಾಂತವಾಗಲಿದೆ. ದೇಹದ ಕೆಲವು ಭಾಗಗಳಲ್ಲಿ ನೋವುಗಳು ಕಾಣಿಸಬಹುದು. ಕೃಷಿಗೆ ಸಂಬಂಧಿಸಿದ ವ್ಯವಹಾರಗಳಲ್ಲಿ ಸ್ವಲ್ಪ ಹಿನ್ನಡೆ ಆಗಬಹುದು. ಸರ್ಕಾರಿ ಉದ್ಯೋಗದಲ್ಲಿ ಹೊಸ ಸ್ಥಾನ ದೊರೆಯುವ ಸಾಧ್ಯತೆ ಇದೆ.
ಕುಂಭ: ಬರಬೇಕಾದ ಹಳೆಯ ಬಾಕಿಗಳು ಇಂದು ಬಂದು ಸೇರಲಿದೆ. ನಿಮ್ಮ ಕೆಲಸಗಳಿಗೆ ಇಂದು ಹೆಚ್ಚು ಪ್ರಾಮುಖ್ಯ ನೀಡಿ. ಸಾಹಸ ಮಾಡಲು ಹೋಗಿ ಮುಖಭಂಗವಾದೀತು. ಆಪ್ತರಿಂದ ಏನಾನ್ನಾದರೂ ನಿರೀಕ್ಷಿಸಿ, ಪಡೆದುಕೊಳ್ಳುವಿರಿ. ವಿದ್ಯಾಭ್ಯಾಸಕ್ಕಾಗಿ ಮನೆಯಿಂದ ದೂರವಿರಬೇಕಸದೀತು. ವ್ಯಾಪಾರದಲ್ಲಿ ಚೇತರಿಕೆ ಕಂಡು ಸಂತಸವಾದೀತು. ವೃತ್ತಿಯಲ್ಲಿ ಬಹಳ ಜಾಣ್ಮೆಯಿಂದ ಕೆಲಸವನ್ನು ನಿಭಾಯಿಸುವಿರಿ. ಹೊಸ ಯೋಜನೆಯನ್ನು ರೂಪಿಸುವಿರಿ. ಪತ್ನಿಯ ಸಹಾಯ ನಿಮಗೆ ಸಿಗಲಿದೆ.
ಮೀನ: ನಿಮ್ಮ ಸಂಕಷ್ಟಕ್ಕೆ ಇತರರ ಸಹಾಯವನ್ನು ಪಡೆದುಕೊಳ್ಳುವಿರಿ. ಸಮಾಜಮುಖೀ ಕಾರ್ಯಗಳ ಕಡೆ ಗಮನಹರಿಸುವಿರಿ. ರಾಜಕೀಯ ವ್ಯಕ್ತಿಗಳಿಗೆ ಓಡಾಟ ಹೆಚ್ಚಾಗಿ, ಹೆಚ್ಚು ಜನಸಂಪರ್ಕ ಮಾಡಬೇಕಾದ ಅನಿವಾರ್ಯತೆ ಇರಲಿದೆ. ಬಂಧುಗಳು ತಾವು ಮಾಡಿದ ತಪ್ಪನ್ನು ನಿಮ್ಮ ಮೇಲೆ ಹಾಕಲು ಯತ್ನಿಸುವರು ಎಚ್ಚರದಿಂದಿರಿ. ವೃತ್ತಿಯಲ್ಲಿ ಬರುವ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯಬಹುದು. ಅದರಲ್ಲಿ ಉತ್ತಮ ಫಲಿತಾಂಶ ಬರುವ ಯೋಗವಿದೆ. ಕೊನೆಯ ಕ್ಷಣದವರೆಗೂ ನಿಮ್ಮ ಛಲವನ್ನು ಬಿಡಬೇಡಿ.
ಲೋಹಿತಶರ್ಮಾ ಇಡುವಾಣಿ – 8762924271 (what’s app only)