ದಿನ, ಸಮಯ ಎಲ್ಲರಿಗೂ ಒಂದೇ ಆದ್ರೂ ಜೀವನದಲ್ಲಿ ನಡೆಯುವ ಘಟನೆಗಳು ವಿಭಿನ್ನ. ಇದಕ್ಕೆ ಕಾರಣ ನಮ್ಮ ಜನ್ಮ ರಾಶಿಗಳಲ್ಲಾಗುವ ಬದಲಾವಣೆ. ನಮ್ಮ ಆರೋಗ್ಯ, ಯಶಸ್ಸು, ಸಂತೋಷ, ನೆಮ್ಮದಿ ಎಲ್ಲವೂ ನಮ್ಮ ರಾಶಿಗಳ ಮೇಲೆ ಅವಲಂಬಿತವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಕೆಲವರು ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗಾದರೆ ಇಂದಿನ (2023 ಏಪ್ರಿಲ್ 01) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭ ಎಂದು ತಿಳಿದುಕೊಳ್ಳಿ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ಮೀನ ಮಾಸ, ಮಹಾನಕ್ಷತ್ರ : ರೇವತಿ, ಮಾಸ : ಚೈತ್ರ, ಪಕ್ಷ : ಶುಕ್ಲ, ವಾರ : ಶನಿ, ತಿಥಿ : ಏಕಾದಶೀ, ನಿತ್ಯನಕ್ಷತ್ರ : ಆಶ್ಲೇಷ, ಯೋಗ : ಧೃತಿ, ಕರಣ : ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 29 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 43 ನಿಮಿಷಕ್ಕೆ. ರಾಹು ಕಾಲ 09:33 ರಿಂದ 11:05ರ ವರೆಗೆ, ಯಮಘಂಡ ಕಾಲ 02:08 ರಿಂದ 03:40ರ ವರೆಗೆ, ಗುಳಿಕ ಕಾಲ ಬೆಳಗ್ಗೆ 06:29ರಿಂದ 08 :01ರ ವರೆಗೆ.
ಸಿಂಹ: ಇಂದು ಸಂಬಂಧಗಳ ಬೆಲೆಯಯ ಅರ್ಥವಾಗಲಿದೆ. ಎಲ್ಲವುದನ್ನೂ ವಿರೋಧಿಸುವುದು ನಿಮ್ಮ ಸ್ವಭಾವವಾಗಿರಲಿದೆ. ಮನೆಯಲ್ಲಿಯೇ ಇದ್ದು ಬೇಸರವಾಗಲಿದೆ. ಹೊರಗೆ ಸುತ್ತಾಡಲು ಹೋಗಲಿದ್ದೀರಿ. ಕಛೇರಿಯಲ್ಲಿ ಬಡ್ತಿ ಸಿಗುವ ಸಾಧ್ಯತೆ ಇದೆ. ನಿಮ್ಮ ಸೇವೆಗೆ ಮೆಚ್ವುಗೆ ಸಿಗಬಹುದು. ಸ್ನೇಹಿತರು ನಿಮ್ಮ ಮಾತಿಗೆ ಬೆಲೆ ಕೊಡುವರು. ಸಕಾರಾತ್ಮಕೆ ಚಿಂತನೆಯನ್ನು ಬೆಳೆಸಿಕೊಳ್ಳುವುದು ಉತ್ತಮ. ಅಪರಿಚಿತ ಕರೆಗಳಿಗೆ ಕಿವಿಗೊಡದೇ ನಿಮ್ಮ ಕೆಲಸವನ್ನು ಮಾಡಿ. ಇಂದಿನ ಕೆಲಸಗಳು ನಿಧಾನಗತಿಯಲ್ಲಿ ಸಾಗಲಿದೆ.
ಕನ್ಯಾ: ಹೊಸದಾಗಿ ಉದ್ಯೋಗವನ್ನು ಅರಸುತ್ತಿದ್ದರೆ ಕೆಲಸಕ್ಕೆ ಹೆಚ್ಚು ಓಡಾಟಗಳು ಆಗಬಹುದು. ನಿಮ್ಮ ಆಸೆಗಳನ್ನು ಪೂರೈಸಿಕೊಳ್ಳಲು ನಿರಂತರ ಯತ್ನವನ್ನು ಮಾಡುವಿರಿ. ಉತ್ತಮವಾದ ಆಹಾರವನ್ನು ತಿನ್ನಬೇಕು ಎಂದು ಬಯಸಿ ಮನೆಯಿಂದ ದೂರ ಹೋಗುವಿರಿ. ಮನೆಯನ್ನು ಕಟ್ಟುವ ವಿಚಾರವು ಪತ್ನಿಯಿಂದ ಬರಲಿದ್ದು ಬಹಳ ಸಂತೋಷವಾಗಲಿದೆ. ತಾಯಿಯ ಆರೋಗ್ಯವು ಕೆಡಲಿದ್ದು ಚಿಕಿತ್ಸೆಯನ್ನು ಕೊಡಿಸುವಿರಿ. ಅಲ್ಪ ಭೋಜನದಿಂದ ತೃಪ್ತಿ ಇರಲಿದೆ. ವಾಹನದಿಂದ ಅಪಘಾತವಾಗಬಹುದು.
ತುಲಾ: ಇಂದು ನೀವು ಹೆಚ್ಚು ಧಾರ್ಮಿಕ ಮನಃಸ್ಥಿತಿ ಉಳ್ಳವರಾಗಿದ್ದೀರಿ. ತೀರ್ಥಕ್ಷೇತ್ರಗಳ ಅಥವಾ ಪ್ರಾಚೀನ ದೇವಾಲಯಗಳ ದರ್ಶನಕ್ಕೆ ಹೋಗುವ ಮನಸ್ಸಾಗಲಿದೆ. ಯಥಾಯೋಗ್ಯ ದಾನವನ್ನೂ ನೀವು ಕೊಡಲಿದ್ದೀರಿ. ಮಾತಗಾರರಾಗಿದ್ದರೆ ನಿಮಗೆ ಪ್ರಶಂಸೆಗಳು ಸಿಗಬಹುದು. ವಂಚನೆ ಮಾಡಿದ್ದೀರಿ ಎಂಬ ಅಪವಾದ ಬರಬಹುದು. ಹೊಸ ವಸ್ತ್ರಗಳನ್ನು ಧರಿಸುವಿರಿ. ಶ್ರಮವಹಿಸದೇ ಫಲವನ್ನು ಅಪೇಕ್ಷಿಸುವುದು ನಿಮ್ಮ ಅಸಾಮರ್ಥ್ಯವನ್ನು ತೋರಿಸುವುದು. ನಿಮ್ಮ ಮಾತುಗಾರಿಕೆಯನ್ನು ಮೆಚ್ಚಿಕೊಳ್ಳಲಿದ್ದಾರೆ.
ವೃಶ್ಚಿಕ: ಇಂದು ನಿಮ್ಮವರುಬಯಾರು ಮತ್ತು ನಿಮ್ಮವರಂತೆ ಕಾಣುವವರು ಯಾರು ಎಂಬುದರ ಸ್ಪಷ್ಟ ನಿಲುವು ಇರಲಿದೆ. ವ್ಯಾಪರ ಅಥವಾ ಉದ್ಯಮವು ನಿಧಾನವಾಗಿ ಒಂದೊಂದೇ ಹೆಜ್ಜೆಯನ್ನು ಇಟ್ಟು ಮೇಲೇರಲು ಆರಂಭಿಸಿದೆ. ಕೃಷಿಯ ಕಾರ್ಯದಲ್ಲಿ ಮನಸ್ಸಾಗಿ ಕೆಲವು ಅಪರೂಪದ ಸಸ್ಯಗಳನ್ನು ನೆಡಲಿದ್ದೀರಿ. ವಿದ್ಯಾರ್ಥಿಗಳಿಗೆ ಸ್ವಲ್ಪ ಹಿಂಜರಿಕೆ ಇರಲಿದೆ. ಸಂಗಾತಿಯನ್ನು ಹುಡುಕುವ ಕೆಲಸವು ನಿಮಗೆ ಬೇಸರವನ್ನು ತರಿಸುವುದು. ಮರ್ಯಾದೆಗೆ ಹೆದರಿ ಮಾಡಬೇಕಾದ ಕೆಲಸವನ್ನು ಮಾಡದೇ ಇರುವಿರಿ. ಮಾತುಗಳನ್ನು ಕಡೆ ಆಡುವುವಿರಿ.
-ಲೋಹಿತಶರ್ಮಾ ಇಡುವಾಣಿ