AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today: ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಭಾನುವಾರದ ರಾಶಿ ಭವಿಷ್ಯ

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಏಪ್ರಿಲ್​ 02) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope Today: ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಭಾನುವಾರದ ರಾಶಿ ಭವಿಷ್ಯ
ಇಂದಿನ ರಾಶಿ ಭವಿಷ್ಯImage Credit source: istock
Rakesh Nayak Manchi
|

Updated on: Apr 02, 2023 | 6:00 AM

Share

ದಿನ, ಸಮಯ ಎಲ್ಲರಿಗೂ ಒಂದೇ ಆದ್ರೂ ಜೀವನದಲ್ಲಿ ನಡೆಯುವ ಘಟನೆಗಳು ವಿಭಿನ್ನ. ಇದಕ್ಕೆ ಕಾರಣ ನಮ್ಮ ಜನ್ಮ ರಾಶಿಗಳಲ್ಲಾಗುವ ಬದಲಾವಣೆ. ನಮ್ಮ ಆರೋಗ್ಯ, ಯಶಸ್ಸು, ಸಂತೋಷ, ನೆಮ್ಮದಿ ಎಲ್ಲವೂ ನಮ್ಮ ರಾಶಿಗಳ ಮೇಲೆ ಅವಲಂಬಿತವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಕೆಲವರು ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗಾದರೆ ಇಂದಿನ (2023 ಏಪ್ರಿಲ್​ 02) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭ ಎಂದು  ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ಮೀನ ಮಾಸ, ಮಹಾನಕ್ಷತ್ರ : ಅಶ್ವಿನೀ, ಮಾಸ : ಚೈತ್ರ, ಪಕ್ಷ : ಶುಕ್ಲ, ವಾರ : ಭಾನು, ತಿಥಿ : ದ್ವಾದಶೀ, ನಿತ್ಯನಕ್ಷತ್ರ : ಮಘಾ, ಯೋಗ : ಶೂಲ, ಕರಣ : ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 28 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 43 ನಿಮಿಷಕ್ಕೆ. ರಾಹು ಕಾಲ ಸಂಜೆ 05:12 ರಿಂದ 06:43ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:36 ರಿಂದ 02:08ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:40 ರಿಂದ 05:12ರ ವರೆಗೆ.

ಸಿಂಹ: ನೀವಿಂದು ಯಶಸ್ಸಿನ ಶಿಖರವೇರುವಿರಿ. ನಿಮಗೆ ಸಲಹೆಯನ್ನು ಕೊಡುವವರು ಬಹಳ ಮಂದಿ ಇರಲಿದ್ದಾರೆ. ನೀವು ಪ್ರೀತಿಪಾತ್ರರಿಗೆ ಅಧಿಕಸಮಯವನ್ನು ಮೀಸಲಿಡುವಿರಿ. ಜೀವನದಲ್ಲಿ ಸಾಧಿಸುವ ಛಲದಲ್ಲಿ ನಿಷ್ಕರುಣೆ ಇರಲಿದೆ. ನೀವಿಂದು ಉತ್ಸಾಹದಿಂದ ಕೆಲಸಗಳನ್ನು ಮಾಡುವಿರಿ. ಉದ್ವೇಗದಲ್ಲಿ ಏನನ್ನಾದರೂ ಹೇಳಬಹುದು. ನಿಮ್ಮ ಯೋಜನೆಗಳನ್ನು ಬದಲಾಯಿಸಬೇಡಿ. ಸೂಕ್ತ ಕಾಲಕ್ಕೆ ಅದು ಬೆಳೆಯುವುದು.

ಕನ್ಯಾ: ಆತ್ಮವಿಶ್ವಾಸದ ಕೊರತೆಯಿಂದ ನೀವು ಹಿಂದಕ್ಕೆ ಸರಿಯುವ ಸಾಧ್ಯತೆ ಇದೆ. ನಿಮಗೆ ಸ್ನೇಹಿತರ‌ ಬೆಂಬಲ ಸಿಕ್ಕಿ ವಿಶ್ವಾಸವನ್ನು ಗಳಿಸಿಕೊಳ್ಳುವಿರಿ. ಅಧಿಕವಾಗಿ ಮಾತನಾಡಿ ಸಿಕ್ಕಿ ಹಾಕಿಕೊಳ್ಳಬೇಡಿ. ಇಂದು ನೀವಂದುಕೊಂಡಷ್ಟು ಸರಳವಾಗಿ ಯಾವ ಕೆಲಸವೂ ಆಗದು.‌ ಸರ್ಕಾರಿ ಕೆಲಸಗಳು‌ ನಿಧಾನಗತಿಯಲ್ಲಿ ಕುಂಟುತ್ತಾ ಸಾಗಲಿದೆ. ದಂಪತಿಸಹಿತರಾಗಿ ವಿಹಾರವನ್ನು ಮಾಡಲಿದ್ದೀರಿ. ಆಹಾರದ ವಿಚಾರದಲ್ಲಿ ಇತಿಮಿತಿ ಇರಲಿ. ಕೊರತೆಯನ್ನು ಕಂಡುಕೊಳ್ಳುತ್ತ ಕೊರಗುವ ಸಾಧ್ಯತೆ ಇದೆ.

ತುಲಾ: ನೀವು ಜೀವನದಲ್ಲಿ ಜಾದುವಿನಂತೆ ಏನಾದರೂ ನಡೆಯಲಿ ಎನ್ನುವ ಬಯಕೆಯನ್ನು ಇಟ್ಟುಕೊಂಡಿದ್ದೀರಿ. ಒಂದೇ ರೀತಿಯ ಜೀವನವು ಸಪ್ಪೆ ಎನಿಸಬಹುದು. ಪ್ರತಿ ಕ್ಷಣವನ್ನೂ ಆನಂದಿಸುತ್ತಾ ಮುಂದುವರಿಯುವಿರಿ. ಅಧಿಕಾರಿಗಳ‌ ಆದೇಶವನ್ನು ಪಾಲಿಸಿದ್ದಕ್ಕೆ ನಿಮಗೆ ಪ್ರಶಂಸೆ ಸಿಗಲಿದೆ. ದೊಡ್ಡ ಸಾಧನೆಯ ಬೆನ್ನು ಹತ್ತಿ ಎಲ್ಲವನ್ನೂ ಮರೆಯಲಿದ್ದೀರಿ. ಪ್ರಯತ್ನಕ್ಕೆ ತಕ್ಕ ಫಲವಿಲ್ಲ ಎಂಬ ಕೊರಗು ಇರಲಿದೆ. ವಾಹನಸಂಚಾರದಲ್ಲಿ‌ ತೊಂದರೆಗಳು ಬರಬಹುದು. ಕೃಷಿಕರಿಗೆ ಬೆಲೆ ಏರಿಕೆಯಿಂದ ಸಂತವಾಗಲಿದೆ.

ವೃಶ್ಚಿಕ: ಇಂದು ನಿಮ್ಮವರಿಗೆ ಸಾಲವಾಗಿ ಹಣವನ್ನು ಕೊಡಲಿದ್ದೀರಿ. ನಿಬಂಧನೆಗಳೊಂದಿಗೆ ಇರಲಿ. ಸ್ಪರ್ಧಾತ್ಮಕಪರೀಕ್ಷೆಗೆ ಬಹಳ ತಯಾರಿ ನಡೆಯಲಿದೆ. ಸಂಶೋಧಕರಾಗಿದ್ದರೆ ನಿಮಗೆ ಗೌರವಗಳು ಸಿಗಲಿವೆ.‌ ವಿದೇಶಕ್ಕೆ ಹೋಗಲು ಕರೆಯಬಹುದು. ಕಛೇರಿಯಲ್ಲಿ ಒತ್ತಡಗಳು ಅಧಿಕವಾಗಿದೆ. ತಂದೆಯ ಮಾತಿಗೆ ವಿರುದ್ಧವಾಗಿ ನಡೆದುಕೊಳ್ಳುವಿರಿ. ಸೌಂದರ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸುವಿರಿ. ನೂತನ ವಸ್ತುಗಳನ್ನು ಖರೀದಿಸುವ ವೇಗದಲ್ಲಿ ಆರ್ಥಿಕವಾಗಿ ನಷ್ಟವನ್ನು ಮಾಡಿಕೊಳ್ಳುವಿರಿ.

-ಲೋಹಿತಶರ್ಮಾ ಇಡುವಾಣಿ

ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ
‘ಗೌರಿ’ ಧಾರಾವಾಹಿಯಲ್ಲಿ ಬಿಗ್ ಟ್ವಿಸ್ಟ್​; ಆಗಸದಲ್ಲೇ ಮದುವೆ
‘ಗೌರಿ’ ಧಾರಾವಾಹಿಯಲ್ಲಿ ಬಿಗ್ ಟ್ವಿಸ್ಟ್​; ಆಗಸದಲ್ಲೇ ಮದುವೆ
ಸರಿ ನಿರ್ಧಾರ ಯಾವುದು? ತಪ್ಪು ಯಾವುದು? ಪಂಚಾಯ್ತಿ ವಿಷಯ ಹೇಳಿದ ಸುದೀಪ್
ಸರಿ ನಿರ್ಧಾರ ಯಾವುದು? ತಪ್ಪು ಯಾವುದು? ಪಂಚಾಯ್ತಿ ವಿಷಯ ಹೇಳಿದ ಸುದೀಪ್
ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದು ಕಾಂಪೌಂಡ್ ಗೇಟ್​​ಗೆ ಗುದ್ದಿದ BMTC ಬಸ್
ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದು ಕಾಂಪೌಂಡ್ ಗೇಟ್​​ಗೆ ಗುದ್ದಿದ BMTC ಬಸ್
ಕೋಲಾರ: ಬೆಳ್ಳಂಬೆಳಗ್ಗೆ ಬಸ್, ಕಾರುಗಳ ನಡುವೆ ಭೀಕರ ಸರಣಿ ಅಪಘಾತ
ಕೋಲಾರ: ಬೆಳ್ಳಂಬೆಳಗ್ಗೆ ಬಸ್, ಕಾರುಗಳ ನಡುವೆ ಭೀಕರ ಸರಣಿ ಅಪಘಾತ
ಆಳಂದ ಮತಗಳ್ಳತನ: ಚಾರ್ಜ್​ಶೀಟ್ ಬಗ್ಗೆ ಸುಭಾಷ್ ಗುತ್ತೇದಾರ್ ಮಗ ಹೇಳಿದ್ದೇನು?
ಆಳಂದ ಮತಗಳ್ಳತನ: ಚಾರ್ಜ್​ಶೀಟ್ ಬಗ್ಗೆ ಸುಭಾಷ್ ಗುತ್ತೇದಾರ್ ಮಗ ಹೇಳಿದ್ದೇನು?
ರಾಶಿಕಾ ಕ್ಯಾಪ್ಟನ್ ಆಗಿದ್ದು ಇಷ್ಟ ಆಗಿಲ್ಲ ಎಂದ ಸೂರಜ್; ಆಪ್ತರಲ್ಲೇ ಕಿತ್ತಾಟ
ರಾಶಿಕಾ ಕ್ಯಾಪ್ಟನ್ ಆಗಿದ್ದು ಇಷ್ಟ ಆಗಿಲ್ಲ ಎಂದ ಸೂರಜ್; ಆಪ್ತರಲ್ಲೇ ಕಿತ್ತಾಟ
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ