Horoscope Today: ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ ರಾಶಿ ಭವಿಷ್ಯ

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಏಪ್ರಿಲ್​ 08) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope Today: ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ ರಾಶಿ ಭವಿಷ್ಯ
ಇಂದಿನ ರಾಶಿಭವಿಷ್ಯ
Follow us
Rakesh Nayak Manchi
|

Updated on: Apr 08, 2023 | 5:57 AM

ದಿನ, ಸಮಯ ಎಲ್ಲರಿಗೂ ಒಂದೇ ಆದ್ರೂ ಜೀವನದಲ್ಲಿ ನಡೆಯುವ ಘಟನೆಗಳು ವಿಭಿನ್ನ. ಇದಕ್ಕೆ ಕಾರಣ ನಮ್ಮ ಜನ್ಮ ರಾಶಿಗಳಲ್ಲಾಗುವ ಬದಲಾವಣೆ. ನಮ್ಮ ಆರೋಗ್ಯ, ಯಶಸ್ಸು, ಸಂತೋಷ, ನೆಮ್ಮದಿ ಎಲ್ಲವೂ ನಮ್ಮ ರಾಶಿಗಳ ಮೇಲೆ ಅವಲಂಬಿತವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಕೆಲವರು ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗಾದರೆ ಇಂದಿನ (2023 ಏಪ್ರಿಲ್​ 08) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭ ಎಂದು ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ಮೀನ ಮಾಸ, ಮಹಾನಕ್ಷತ್ರ : ಅಶ್ವಿನೀ, ಮಾಸ : ಚೈತ್ರ, ಪಕ್ಷ : ಕೃಷ್ಣ, ವಾರ : ಶನಿ, ತಿಥಿ : ದ್ವಿತೀಯಾ, ನಿತ್ಯನಕ್ಷತ್ರ : ಸ್ವಾತಿ, ಯೋಗ : ವಜ್ರ, ಕರಣ : ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 24 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 44 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 09:29 ರಿಂದ 11:02ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 02:07 ರಿಂದ 03:39ರ ವರೆಗೆ, ಗುಳಿಕ ಕಾಲ ಬೆಳಗ್ಗೆ 06:25 ರಿಂದ 07:57ರ ವರೆಗೆ.

ಸಿಂಹ: ನಿಮ್ಮ ಸಂಗಾತಿಯನ್ನು ತಪ್ಪಾಗಿ ಗ್ರಹಿಸುವಿರಿ. ಇದೇ ನಿಮ್ಮ ನಡುವಿನ ಅಂತರಕ್ಕೆ ಕಾರಣವಾಗಲಿದೆ. ನಿಮ್ಮ ಸಂಬಂಧವನ್ನು ಸುಧಾರಿಸಲು ಬಯಸಿದರೆ ಸಂಗಾತಿಯನ್ನು ಅನುಮಾನಿಸುವುದನ್ನು ತಪ್ಪಿಸಿ. ಅವರನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿ. ಕುಟುಂಬದಲ್ಲಿಯೂ ಪರಸ್ಪರ ಸಂಬಂಧಗಳು ಉತ್ತಮವಾಗಿರುತ್ತವೆ. ಹಣದ ಪರಿಸ್ಥಿತಿ ತೃಪ್ತಿಯನ್ನು ತರುವುದು. ಇಂದು ನೀವು ಹೂಡಿಕೆ ಮಾಡಲು ಬಯಸಿದರೆ, ಸಮಯವು ಅನುಕೂಲಕರವಾಗಿರುತ್ತದೆ. ನೀವು ಅಮೂಲ್ಯ ವಸ್ತುವನ್ನು ಖರೀದಿಸಲು ಆಲೋಚಿಸಿದರೆ ಒಳ್ಳೆಯದೇ.

ಕನ್ಯಾ: ಹಣವು ದೀರ್ಘಕಾಲದವರೆಗೆ ಬಾರದೇ ಇರುವುದರಿಂದ ಇದನ್ನು ಶಾಂತವಾಗಿ ಬಗೆಹರಿಸಲು ಪ್ರಯತ್ನಿಸಬೇಕು. ಕಡಿಮೆ ಸಮಯದಲ್ಲಿ ಹೆಚ್ಚು ಲಾಭ ಗಳಿಸಲು ಹೋಗಿ ಪರಿಸ್ಥಿತಿಯಲ್ಲಿ ನೀವು ಸಿಲುಕಿಕೊಳ್ಳುವಿರಿ. ಎಲ್ಲ ಅಂಶಗಳನ್ನು ಪರಿಶೀಲಿಸಿದ ಅನಂತರವೇ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಿ. ಪ್ರೀತಿಯ ವಿಷಯದಲ್ಲಿ ನೀವು ಅದೃಷ್ಟವಂತರು. ಅಧಿಕಾರಿಗಳ ಜೊತೆ ನಿಮ್ಮ ಆಪ್ತತೆ ಹೆಚ್ಚಾಗುತ್ತದೆ. ಸಂಗಾತಿಯ ಜೊತೆ ಭಿನ್ನಾಭಿಪ್ರಾಯಗಳು ಮುಂದುವರಿಯುವ ಸಾಧ್ಯತೆ ಇದೆ. ಮಾತುಕತೆಯಿಂದ ಇಂದೇ ಬಗೆಹರಿಸಿಕೊಳ್ಳಿ.

ತುಲಾ: ಹವಾಮಾನ ಬದಲಾವಣೆಯಿಂದ ನಿಮ್ಮ ದೇಹದ ಮೇಲೆ, ಮನಸ್ಸಿನ ಮೇಲೆ ಪ್ರಭಾವವನ್ನು ಬೀರುತ್ತವೆ. ದೇಹ ಹಾಗೂ ಮನಸ್ಸಿನ ಆರೋಗ್ಯವನ್ನು ಕಾಪಾಡಿಕೊಳ್ಳಲು ಪ್ರಯತ್ನಿಸಿ. ನಿಮ್ಮ ಪ್ರಯಾಣವು ಸರಿಯಾದ ಯೋಜನೆಯಿಂದ ಕೂಡಿರಲಿ. ತಪ್ಪು ತಿಳುವಳಿಕೆಯಿಂದ ಸಣ್ಣ ವಾಗ್ವಾದವಾಗಬಹುದು. ಸಹನೆಯಿಂದ ಇಬ್ಬರೂ ಸರಿಯಾಗಿ ಆಲಿಸಿ ಸರಿಮಾಡಿಕೊಳ್ಳಿ. ವಿದ್ಯಾರ್ಥಿಗಳಿಗೆ ಅಪೇಕ್ಷಿತ ಫಲಿತಾಂಶಗಳನ್ನು ಸಾಧಿಸಲು ತಾಳ್ಮೆಯೇ ಅತ್ಯವಶ್ಯ.

ವೃಶ್ಚಿಕ: ಇಂದು ಸಿದ್ಧಪಡಿಸಿದ ಆಹಾರವನ್ನು ತಯಾರಿಸುವವರಿಗೆ ಮಾರುಕಟ್ಟೆ ವಿಸ್ತರಣೆ ಮಾಡಬಹುದು. ನಿಮ್ಮ ಅಹಂಕಾರವೇ ನಿಮ್ಮನ್ನು ಜನರಿಂದ ದೂರವಿರುವಂತೆ ಮಾಡುವುದು. ಹಾಲಿನ ಉತ್ಪನ್ನಗಳ ಮಾರಾಟದಿಂದ ಅಧಿಕ ಲಾಭವಿರಲಿದೆ. ಸರ್ಕಾರಿ ಕೆಲಸದಲ್ಲಿರುವವರಿಗೆ ಉನ್ನತ ಸ್ಥಾನ ಹಾಗೂ ಜವಾಬ್ದಾರಿಗಳು ಸಿಗಲಿವೆ. ಸಂಗಾತಿಯ ಆದಾಯದಲ್ಲಿ ನಿಮಗೆ ಹಣ ಸಿಗಲಿದೆ. ಕೃಷಿಯ ಉದ್ಯೋಗವು ನಿಮಗೆ ಉತ್ತಮವೆನಿಸಬಹುದು. ಕಳೆದುಕೊಂಡಿದ್ದರ ಬಗ್ಗೆ ಆಸೆ ಬೇಡ.

-ಲೋಹಿತಶರ್ಮಾ ಇಡುವಾಣಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ