Horoscope Today: ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ ಭವಿಷ್ಯ ಹೀಗಿದೆ

ಇಂದಿನ(2023 ಮಾರ್ಚ್ 11) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ತಿಳಿದುಕೊಳ್ಳಿ.

Horoscope Today: ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ ಭವಿಷ್ಯ ಹೀಗಿದೆ
ಪ್ರಾತಿನಿಧಿಕ ಚಿತ್ರImage Credit source: bhaskar.com
Follow us
ಗಂಗಾಧರ​ ಬ. ಸಾಬೋಜಿ
| Updated By: ಕಿರಣ್ ಹನುಮಂತ್​ ಮಾದಾರ್

Updated on:Mar 11, 2023 | 6:41 AM

ಪ್ರತಿಯೊಬ್ಬರ ಜೀವನದಲ್ಲಿ ರಾಶಿ ಭವಿಷ್ಯ ವಿಭಿನ್ನವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಕೆಲವರು ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದ್ರೆ ಇಂದಿನ(2023 ಮಾರ್ಚ್ 11) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ತಿಳಿದುಕೊಳ್ಳಿ.

ಸಿಂಹ: ಅತಿಯಾದ ಚಿಂತನೆ ಮತ್ತು ಆರೋಗ್ಯ ಸಮಸ್ಯೆಗಳನ್ನು ಎದುರಿಸಲು ಸರಿಯಾದ ಆಹಾರ, ವಿಶ್ರಾಂತಿ, ವ್ಯಾಯಾಮ ಮಾಡಿ. ಜೋಪಾನವಾಗಿ ಇರಿಸಿಕೊಂಡಿರುವ ನಿಮ್ಮ ಅಮೂಲ್ಯವಾದ ವಸ್ತುಗಳು ಕಣ್ಮರೆಯಾಗಿದ್ದು ಇಂದು ತಿಳಿಯಲಿದೆ. ಏಕಾಂತವನ್ನು ಇಷ್ಟಪಡುವವರಿದ್ದೀರಿ. ನಿಮ್ಮ ಆಲೋಚನೆಗೆ ತಕ್ಕಂತೆ ಎಲ್ಲವೂ ನಡೆಯುತ್ತಿದೆ ಎಂದು ಅನ್ನಿಸಿದರೂ ಅದನ್ನು ಪರಿವರ್ತಿಸಲು ಅಸಾಧ್ಯವಾಗುವುದು. ಗೊತ್ತಿರಬೇಕಾದ ಎಷ್ಟೋ ವಿಚಾರಗಳು ಗೊತ್ತಲ್ಲವೆಂದು ಬೇಸರ ಪಡಬೇಕಾಗಿಬರಬಹುದು. ನಿಮಗೆ ಯಾವುದೇ ಆರೋಗ್ಯ ಸಮಸ್ಯೆಗಳಿದ್ದರೆ, ಅದರಿಂದ ಸಂಪೂರ್ಣ ಹೊರಬರುವ ಮಾರ್ಗಗಳನ್ನು ಅನುಸರಿಸಿ.

ಕನ್ಯಾ: ಭೂಮಿಯ ವ್ಯವಹಾರವನ್ನು ಸದ್ಯಕ್ಕೆ ನಿಲ್ಲಿಸುವುದು ಅಥವಾ ಕೆಲವು ದಿನಗಳ ಅನಂತರ ನಡೆಸುವುದು ಯೋಗ್ಯವಿದೆ. ಹೊಸತನವನ್ನು ಇಷ್ಟಪಟ್ಟು ನಿಮ್ಮ ಜೀವನಶೈಲಿಯನ್ನು ಬದಲಿಸಿಕೊಳ್ಳುವ ಪ್ರಯತ್ನವನ್ನು ಮಾಡುವಿರಿ. ಲಾಭಕ್ಕಾಗಿ ಕೆಲವು ಅತ್ಯುತ್ತಮ ಅವಕಾಶಗಳಿದ್ದರೂ, ಯಾವುದೇ ಹಣಕಾಸಿನ ಬದ್ಧತೆಗಳನ್ನು ಮಾಡುವುದನ್ನು ತಪ್ಪಿಸಿ. ಭವಿಷ್ಯದ ಕುರಿತು ನಿಮಗೆ ನಿಮ್ಮದೇ ಕಲ್ಪನೆಗಳಿದ್ದು ಅದು ಸಾಕಾರಗೊಳ್ಳುವುದೋ ಇಲ್ಲವೋ ಎನ್ನುವ ಭಯವು ಕಾಡಲಿದೆ. ಅಪಮಾನವನ್ನು ಎದುರಿಸಬೇಕಾಗಬಹುದು ಎಂಬ ಆತಂಕವೂ ಮನೆ ಮಾಡಿರುತ್ತದೆ. ಹಣಕಾಸು ನಿರ್ವಹಣೆ ಮತ್ತು ಸಕಾರಾತ್ಮಕ ಕ್ರಮಗಳು ನಂತರದ ಭಾಗದಲ್ಲಿ ಕ್ರಮೇಣ ಮುನ್ನಡೆಯಲು ಮತ್ತು ಏಳಿಗೆಗೆ ದಾರಿ ಮಾಡಿಕೊಡುತ್ತದೆ.

ತುಲಾ: ಸಂಗಾತಿಯೊಂದಿಗಿನ ಭಿನ್ನಾಭಿಪ್ರಾಯ ಹಗೆತನದ ಸಂಭಾಷಣೆಗೆ ಕಾರಣವಾಗಬಹುದು. ಇಂದಿನ ನಿಮ್ಮ ಕೆಲಸವು ಶಿಸ್ತಿನಿಂದ ಇದ್ದರೂ ನಿಮ್ಮ ಜೊತೆಗಾರರು ಅದನ್ನು ಮೂದಲಿಸಲಿದ್ದಾರೆ. ವೈದ್ಯರನ್ನು ಬೇಟಿಯಾಗಿ ನಿಮಗೆ ಆಗುತ್ತಿರುವ ಶಾರೀರಿಕ ಸಮಸ್ಯೆಗಳನ್ನು ಅವರಲ್ಲಿ ಹೇಳಿಕೊಳ್ಳಿ. ನಿಮ್ಮವರ ಮೇಲೆ ತಪ್ಪು ತಿಳಿವಳಿಕೆಯನ್ನು ಹೊಂದಿ ಅವರ ತೇಜೋವಧೆಯನ್ನು ಮಾಡಿದ್ದಿರಿ. ಅದಕ್ಕೆ ಇಂದು ಪಶ್ಚಾತ್ತಾಪವನ್ನು ಅನುಭವಿಸುವಿರಿ. ದೂರದ ಪ್ರಯಾಣವನ್ನು ಮಾಡುವ ನಿರ್ಧಾರವನ್ನು ಮಾಡಲಿದ್ದೀರಿ. ವ್ಯವಸ್ಥೆಯ ಬಗ್ಗೆ ಮೊದಲೇ ತಿಳಿದುಕೊಳ್ಳಿ. ಮಕ್ಕಳು ನಿಮ್ಮ ಬಗ್ಗೆ ಅಸಡ್ಡೆಯ ಭಾವವನ್ನು ತೋರಿಸಲಿದ್ದು ಅದರಿಂದ ಬೇಸರಗೊಳ್ಳುವಿರಿ.

ವೃಶ್ಚಿಕ: ಸಹೋದ್ಯೋಗಿಗಳೊಂದಿಗೆ ನೀವು ಕೆಲವು ಸಮಸ್ಯೆಗಳನ್ನು ಎದುರಿಸಬಹುದು. ವಿದೇಶದಲ್ಲಿ ಕೆಲಸಮಾಡಲು ನಿಮಗೆ ಅನೇಕ ಅವಕಾಶಗಳು ಸಿಗಬಹುದು. ಹಣದ ವಿಚಾರದಲ್ಲಿ ಜಾಗರೂಕರಾಗಿರಿ. ಅನಿರೀಕ್ಷಿತ ಧನವ್ಯಯವು ಆಗಬಹುದು. ವಿದ್ಯಾರ್ಥಿಗಳು ನಿಮ್ಮ ಮುಂದಿನ ವಿಷಯಗಳ ಕುರಿತು ಚರ್ವೆಗಳನ್ನು ಮಾಡಿ ಮುಂದುವರಿಯಿರಿ. ದಾಂಪತ್ಯದಲ್ಲಿ ಉಂಟಾದ ಕಲಹವು ಮಕ್ಕಳ‌ ಮೇಲೆ ಪ್ರಭಾವವನ್ನು ಬೀರಲಿದೆ. ಉದ್ಯೋಗಸ್ಥಾನದಲ್ಲಿ ಕೆಲವು ಮಾತುಗಳು ನಿಮ್ಮ ವಿರುದ್ಧವಾಗಿಯೂ ಇರಬಹುದು.

-ಲೋಹಿತಶರ್ಮಾ, ಇಡುವಾಣಿ

Published On - 6:41 am, Sat, 11 March 23

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ