Nithya Bhavishya: ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ ಭವಿಷ್ಯ

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಮೇ 14) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Nithya Bhavishya: ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ ಭವಿಷ್ಯ
ಪ್ರಾತಿನಿಧಿಕ ಚಿತ್ರImage Credit source: hindirush.com
Follow us
ಗಂಗಾಧರ​ ಬ. ಸಾಬೋಜಿ
|

Updated on: May 14, 2023 | 6:10 AM

ಶುಭೋದಯ ಓದುಗರೇ. ಪ್ರತಿಯೊಬ್ಬರ ಜೀವನದಲ್ಲಿ ರಾಶಿ ಭವಿಷ್ಯ ವಿಭಿನ್ನವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದರೆ ಇಂದಿನ (2023 ಮೇ​ 13) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ : ಕೃತ್ತಿಕಾ, ಮಾಸ : ವೈಶಾಖ, ಪಕ್ಷ : ಕೃಷ್ಣ, ವಾರ : ಭಾನು, ತಿಥಿ : ದಶಮೀ, ನಿತ್ಯನಕ್ಷತ್ರ : ಶತಭಿಷಾ, ಯೋಗ : ಐಂದ್ರ, ಕರಣ : ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 06 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 51 ನಿಮಿಷಕ್ಕೆ, ರಾಹು ಕಾಲ ಸಂಜೆ 05:16 ರಿಂದ 06:51ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:29 ರಿಂದ 02:04ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:40 ರಿಂದ 05:16ರ ವರೆಗೆ,

ಸಿಂಹ: ಸ್ವಂತ ಕಾರ್ಯ ನಿಮಿತ್ತ ದೂರ ಪ್ರಯಾಣ ಮಾಡುವಿರಿ.‌ ಅಂದುಕೊಂಡ ಕೆಲಸವು ಪೂರ್ಣವಾಗುವುದು. ಅಪರಿಚಿತ ಕೆಲಸದಲ್ಲಿ ಮುನ್ನುಗ್ಗಲು ಭಯಪಡುವಿರಿ. ನಿಮ್ಮ ವರ್ತನೆಯು ಅಹಂಕಾರದಂತೆ ತೋರೀತು. ನಕಾರಾತ್ಮಕ ಹೇಳಿಕೆಗಳಿಗೆ ಸ್ಪಂದಿಸುವ ಅವಶ್ಯಕತೆ ಇರುವುದಿಲ್ಲ. ಎಲ್ಲವನ್ನೂ ಕಳೆದುಕೊಳ್ಳುತ್ತೇನೆ‌ ಎಂಬ ಭೀತಿಯು ನಿಮ್ಮಲ್ಲಿ ಉಂಟಾಗಬಹುದು. ಮಾನಸಿಕ ನೋವನ್ನು ತಡೆದುಕೊಂಡು ಇಂದಿನ ದಿನವನ್ನು ಕಳೆಯುವಿರಿ. ಸಂಗಾತಿಯ ಮಾತುಗಳನ್ನು ಕೇಳುವ ತಾಳ್ಮೆ ಇರದು. ನಿಮಗೆ ಅಗೌರವ ತೋರಿಸಿಯಾರು. ಇಂತಹುದನ್ನು ನಿರ್ಲಕ್ಷಿಸುವುದು ಉತ್ತಮ.

ಕನ್ಯಾ: ಮನೆಯ ಕೆಲಸ ಕಾರ್ಯಗಳು ಪರ್ವತಾಕಾರದಲ್ಲಿ ತೋರುವುದು. ಆರಂಭದ ಗೊಂದಲೂ ಆದೀತು. ವಾಹನ ಖರೀದಿಗೆ ಪರ ಊರಿಗೆ ಹೋಗುವಿರಿ. ಹೊಸ ಉದ್ಯಮವನ್ನು ಆರಂಭಿಸುವ ಯೋಚನೆ ಇರಲಿದೆ. ನಿಮ್ಮ ಕುಟುಂಬದರ ಬೆಂಬಲ ನಿಮಗೆ ಕಡಿಮೆ ಇರಲಿದೆ. ಮನವೊಲಿಸುವ ಪ್ರಯತ್ನ ಮಾಡುವಿರಿ. ಸಾಲ ಮರುಪಾವತಿಯ ವಿಚಾರದಲ್ಲಿ ಆತಂಕವಿರಲಿದೆ. ಇಂದಿನ ನಿಮ್ಮ ಸ್ಥಿತಿಯನ್ನು ನೋಡಿ ಆಡಿಕೊಳ್ಳುವರು. ಆಪ್ತರ ಭೇಟಿಯು ನಿಮ್ಮ ಉತ್ಸಾಹವನ್ನು ಹೆಚ್ಚಿಸುವುದು. ಇಂದು ಹೆಚ್ಚು ನಗಲಿದ್ದೀರಿ. ಯಾವುದೇ ಗೌಪ್ಯವನ್ನು ನೀವು ಬಿಟ್ಟುಕೊಡಲಾರಿರಿ.

ತುಲಾ: ಕಷ್ಟವೇ ನಿಮಗೆ ಎತ್ತರಕ್ಕೇರುವ ಸಾಧನವಾಗಲಿದೆ. ಧೈರ್ಯಗೆಡುವ ಅಗತ್ಯವಿಲ್ಲ. ಸಾಮಾಜಿಕ ಜೀವನ ನಿಮಗೆ ಸಾಕೆನಿಸುವುದು. ಪ್ರೇಮವ್ಯವಹಾರದಲ್ಲಿ ಸಿಕ್ಕಿಕೊಂಡು ಒದ್ದಾಡುವಿರಿ. ನಿಮ್ಮ ತೀರ್ಮಾನಗಳು ಸಮಂಜಸವಾಗಿದ್ದರೂ ಅದನ್ನು ಒಪ್ಪುವ ಸ್ಥಿತಿ ಇರುವುದಿಲ್ಲ. ಮಕ್ಕಳ ವಿಚಾರದಲ್ಲಿ ನಿಮಗೆ ತಲೆನೋವಾದೀತು. ಬಂಧುಗಳ ಸಹಾಯವನ್ನು ಪಡೆದು ನೆಮ್ಮದಿಯಿಂದ ಇರಿ. ಸುಳ್ಳಾಡಿ ಸಿಕ್ಕಿಕೊಳ್ಳುವಿರಿ. ನಿಮ್ಮ‌ ಮೇಲಿನ ವಿಶ್ವಾಸವು ಕಡಿಮೆ ಆದೀತು. ಏಕಾಂತವನ್ನು ನೀವು ಇಂದು ಹೆಚ್ಚು ಬಯಸುವಿರಿ.

ವೃಶ್ಚಿಕ: ನೀವು ಇಂದು ಪ್ರಾಮಾಣಿಕತೆಯ ಫಲವನ್ನು ಕಾಣಲಿದ್ದೀರಿ. ಸಂಗಾತಿಯಿಂದ ಶುಭಸಮಾಚಾರವು ಬರಲಿದೆ. ಪ್ರಯಾಣವೂ ನಿಮಗೆ ಹಿತವಾದ ಅನುಭವವನ್ನು ಕೊಡುವುದು. ನಿಮ್ಮ ಅಭಿಪ್ರಾಯಗಳನ್ನು ಜನರು ಬೆಂಬಲಿಸುವರು. ಆರ್ಥಿಕ ನಷ್ಟವನ್ನು ಸರಿದೂಗಿಸಿಕೊಳ್ಳಲು ಹೆಚ್ಚಿನ ಆದಾಯದ ಕೆಲಸವನ್ನು ಅನ್ವೇಷಣೆ ಮಾಡುವಿರಿ. ಇದಕ್ಕೆ ಸಂಬಂಧಿಸಿದಂತೆ ನಿಮ್ಮವರ ಸಲಹೆಯನ್ನು ಪಡೆಯಿರಿ. ಮನೋರಂಜನೆಯನ್ನು ಇಷ್ಟಪಡುವಿರಿ. ಹಿತಶತ್ರುಗಳಿಂದ ಆದಷ್ಟು ದೂರವಿರುವುದು ಒಳ್ಳೆಯದು. ಮಾನಸಿಕ ಸ್ವಾಸ್ಥ್ಯವು ಸ್ವಲ್ಪ ಕೆಡಬಹುದು. ನಿರೀಕ್ಷೆಗಳು ಹುಸಿಯಾಗಿ ಹತಾಶ ಭಾವವು ಬರಬಹುದು.

ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?