AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nithya Bhavishya: ಇಂದಿನ ರಾಶಿ ಭವಿಷ್ಯ, ಈ ರಾಶಿಯವರ ಪ್ರೇಮ ವ್ಯವಹಾರ ಕುಟುಂಬ ಜೀವನಕ್ಕೆ ಬಿಸಿ ತುಪ್ಪವಾಗಬಹುದು

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಮೇ 15) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Nithya Bhavishya: ಇಂದಿನ ರಾಶಿ ಭವಿಷ್ಯ, ಈ ರಾಶಿಯವರ ಪ್ರೇಮ ವ್ಯವಹಾರ ಕುಟುಂಬ ಜೀವನಕ್ಕೆ ಬಿಸಿ ತುಪ್ಪವಾಗಬಹುದು
ಇಂದಿನ ರಾಶಿ ಭವಿಷ್ಯImage Credit source: freepik
Rakesh Nayak Manchi
|

Updated on:May 15, 2023 | 10:38 PM

Share

ಶುಭೋದಯ ಓದುಗರೇ. ಪ್ರತಿಯೊಬ್ಬರ ಜೀವನದಲ್ಲಿ ರಾಶಿ ಭವಿಷ್ಯ ವಿಭಿನ್ನವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದರೆ ಇಂದಿನ (2023 ಮೇ​ 15) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ: ಕೃತ್ತಿಕಾ, ಮಾಸ: ವೈಶಾಖ, ಪಕ್ಷ: ಕೃಷ್ಣ, ವಾರ: ಸೋಮ, ತಿಥಿ: ಏಕಾದಶೀ, ನಿತ್ಯನಕ್ಷತ್ರ: ಪೂರ್ವಾಭಾದ್ರ, ಯೋಗ: ವೈಧೃತಿ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 06 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 51 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 07:42 ರಿಂದ 09:17ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 10:53 ರಿಂದ ಮಧ್ಯಾಹ್ನ 12:29ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 02:04 ರಿಂದ 03:40ರ ವರೆಗೆ.

ಸಿಂಹ: ನೀವು ಸ್ವಲ್ಪ ಸಮಯದಲ್ಲಿ ವ್ಯಕ್ತಿಗಳ ಗಮನವನ್ನು ಸೆಳೆಯಲು ಪ್ರಯತ್ನಿಸುವಿರಿ. ಅದೃಷ್ಟವು ನಿಮ್ಮನ್ನು ಕೈ ಬಿಡದು. ಈ ಕ್ಷಣದಲ್ಲಿ ಬದುಕುವುದನ್ನು ಕಲಿಯಿರಿ. ಬೇಡದ ಸಂಗತಿಗಳನ್ನು ಹೊರಗೆ ಕಳುಹಿಸಿ. ನೆಮ್ಮದಿ ಅನ್ನಿಸೀತು. ಇಂದು ನಿಮಗೆ ಸಾಕಷ್ಟು ಸಮಯವಿರುವಂತೆ ಭಾಸವಾದೀತು. ನಿಮ್ಮ ಸಂಗಾತಿಯು ನಿಮ್ಮ ಬಗ್ಗೆ ಉತ್ತಮ ಮನೋಭಾವವನ್ನು ಹೊಂದಿರುವಿರಿ. ಅದಕ್ಕೆ ಘಾಸಿಯಾಗಂತೆ ನೋಡಿಕೊಳ್ಳುತ್ತೀರಿ ಕೂಡ. ಈ ದಿನ ತಪ್ಪುಯಿಂದ‌ ಹೊರಬರುವಿರಿ. ವಾಸ್ತವದಲ್ಲಿ ಇರುವಿರಿ.

ಕನ್ಯಾ: ವೃತ್ತಿಜೀವನದಲ್ಲಿ ಯಶಸ್ಸನ್ನು ಪಡೆಯಲೇ ಬೇಕು ಎಂಬ ಮಹದಾಸೆ ನಿಮ್ಮಲ್ಲಿ ಇರಲಿದೆ. ನಿಮ್ಮ ಉದ್ಯೋಗ ಯಶಸ್ಸಿಗೆ ನೀವು ಹೊಸ ಆಲೋಚನೆಗಳ ಜೊತೆ ಮುಂದುವರಿಯಬೇಕು. ಈ ವಿಷಯದಲ್ಲಿ, ಹಿರಿಯ ಅಧಿಕಾರಿಗಳ ಸಲಹೆಯು ನಿಮಗೆ ಪ್ರಯೋಜನವಾಗಲಿದೆ. ಆರ್ಥಿಕವಾದ ಅಭಿವೃದ್ಧಿಗೆ ಹೊಸ ಯೋಜನೆಯನ್ನು ಮಾಡುವಿರಿ. ಇದರಿಂದ ಹಣವನ್ನು ಉಳಿಸುವಲ್ಲಿ ನೀವು ಯಶಸ್ವಿಯಾಗುವಿರಿ. ಸಂಗಾತಿಯ ಜೊತೆ ಸಮಯವನ್ನು ಇಂದು ಸಂತೋಷದಿಂದ ಕಳೆಯುವಿರಿ. ನಿಮ್ಮ ಜೀವನದ ಮೇಲೆ ನಿಮಗೆ ಹೆಮ್ಮೆ ಉಂಟಾಗಬಹುದು.‌ ಇಂದು ನಿಮಗೆ ಇಷ್ಟವಾದವರ ಜೊತೆ ಹರಟೆ ಹೊಡೆಯುವಿರಿ.

ತುಲಾ: ಇಂದು ನಿಮ್ಮ ವಿದ್ಯಾಭ್ಯಾಸಕ್ಕೆ ಒಳ್ಳೆಯ ದಿನ. ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದರೆ ಉತ್ತಮ‌ ಫಲಿತಾಂಶವು ಸಿಗಬಹುದು. ಸಂಶೋಧಕರಿಗೆ ಹೆಚ್ಚಿನ ಪ್ರಶಂಸೆಯು ಸಿಗಬಹುದು. ಇಂದಿನ ಸಂದರ್ಭಗಳು ನಿಮಗೆ ಅನುಕೂಲಕರವಾಗಿರುವುದು.‌ ಪ್ರೀತಿಪಾತ್ರರೊಂದಿಗೆ ಉದ್ವಿಗ್ನತೆಗೆ ಒಳಗಾಗಿ ಮಾತನಾಡಬೇಡಿ. ನಿಮ್ಮ ಕೈ ಮೀರುವ ಪರಿಸ್ಥಿತಿಯನ್ನು ನಿಯಂತ್ರಿಸಬಲ್ಲಿರಿ. ಸಹೋದ್ಯೋಗಿಗಳ ಜೊತೆ ನೀವು ವಿವಾದವನ್ನು ಮಾಡಿಕೊಳ್ಳಬಹುದು, ಜಾಗರೂಕರಾಗಿರಿ. ಇಂದು ನಿಮ್ಮ ಕಾರ್ಯವು ನಿಮಗೆ ಸಂತೋಷವನ್ನು ತರಬಹುದು. ನಿಮ್ಮ ಕೆಲಸವು ಮೇಲಧಿಕಾರಿಗಳ ಬೆಂಬಲಕ್ಕೆ ಪೂರಕವಾಗುವುದು‌.

ವೃಶ್ಚಿಕ: ಇಂದು ನಿಮ್ಮ ಕುಟುಂಬದವರ ಜೊತೆ ಕಲಹವಾಗಬಹುದು. ನಿಮ್ಮ ಕೋಪವನ್ನು ಸಾಧ್ಯವಾದಷ್ಟು ನಿಯಂತ್ರಿಸುವುದು ಮುಖ್ಯ. ಇಂದು ನೀವು ಬಹಳ ಮುಖ್ಯವಾದ ಮತ್ತು ನಿಮಗೆ ಪ್ರಿಯವಾದ ವಸ್ತುವೊಂದನ್ನು ಪಡೆಯಲಿದ್ದೀರಿ. ಅದು ಬಹಳ ಅಮೂಲ್ಯವಾಗಿರಲಿದೆ‌ ನಿಮ್ಮ ಪಾಲಿಗೆ. ಅದನ್ನು ಬಹಳ ಎಚ್ಚರಿಕೆಯಿಂದ ಕಾಯ್ದುಕೊಳ್ಳಿ. ನಿಮ್ಮ ಪ್ರೇಮ ವ್ಯವಹಾರಗಳು ಕುಟುಂಬ ಜೀವನಕ್ಕೆ ಬಿಸಿ ತುಪ್ಪದಂತೆ ಆಗಬಹುದು. ನಿಮಗೆ ಅನುಗುಣವಾಗಿ ವರ್ತಿಸುವ ನಿಮ್ಮ ಸಂಗಾತಿಯ ಬಗ್ಗೆ ಯೋಚಿಸಿ. ವಿದೇಶಿ ವ್ಯಾಪಾರದಿಂದ ತೊಂದರೆ ಎದುರಾಗಬಹುದು.

-ಲೋಹಿತಶರ್ಮಾ ಇಡುವಾಣಿ

Published On - 6:03 am, Mon, 15 May 23

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ