Daily Horoscope: ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ ರಾಶಿ ಭವಿಷ್ಯ
ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಏಪ್ರಿಲ್ 17) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.
ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಏಪ್ರಿಲ್ 17 ಸೋಮವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ: ಅಶ್ವನೀ ಮಾಸ: ಚೈತ್ರ, ಪಕ್ಷ: ಕೃಷ್ಣ, ವಾರ: ರವಿ, ತಿಥಿ: ಏಕಾದಶೀ, ನಿತ್ಯನಕ್ಷತ್ರ : ಶ್ರವಣಾ, ಯೋಗ: ಶುಭ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06-18 ಕ್ಕೆ, ಸೂರ್ಯಾಸ್ತ ಸಂಜೆ 06-44 ಕ್ಕೆ, ರಾಹು ಕಾಲ 07:52 – 09:25ರ ವರೆಗೆ, ಯಮಘಂಡ ಕಾಲ 10:59 – 12:32ರ ವರೆಗೆ, ಗುಳಿಕ ಕಾಲ 02:05 – 03:39 ರವರೆಗೆ.
ಸಿಂಹ: ಸಂಪಾದನೆಯನ್ನೇ ವೃತ್ತಿಯಾಗಿಸಿಕೊಂಡವರಿಗೆ ಇಂದು ಏನೂ ಸಿಗದೇ ಹೋಗಬಹುದು. ಕೆಲವರು ನಿಮ್ಮನ್ನು ನಾಯಕನನ್ನಾಗಿ ಮಾಡಿ ಅಪಹಾಸ್ಯ ಮಾಡುವರು. ನ್ಯಾಯವಾದಿಗಳಿಗೆ ಹೆಚ್ಚಿನ ಬೇಡಿಕೆ ಇದ್ದು ಆದಾಯವೂ ಹೆಚ್ಚಬಹುದು. ವಿದ್ಯಾರ್ಥಿಗಳು ಅಂತ್ಯಕಾಲದಲ್ಲಿ ಅಧ್ಯಯನ ಮಾಡಿದರೆ ಯಾವ ಪ್ರಯೋಜನವಿಲ್ಲ. ಇಂದಿನ ಆಹಾರ ವ್ಯತ್ಯಾಸದಿಂದ ಅನಾರೋಗ್ಯ ಉಂಟಾಗಬಹುದು. ವ್ಯವಹಾರವನ್ನು ವ್ಯವಹಾರವಾಗಿಯೇ ಮಾಡಿ. ಆಗ ನಿಮ್ಮ ಮಾತಿಗೆ ಹೆಚ್ಚು ಬೆಲೆ ಬಂದೀತು. ವಿದೇಶಿ ಕಂಪನಿಗಳ ಮೇಲೆ ಹೂಡಿದ್ದ ಹಣ ದ್ವಿಗುಣಗೊಳ್ಳುವ ಸಾಧ್ಯತೆ ಇದೆ. ಅದನ್ನು ಪಡೆದುಕೊಳ್ಳಲು ಕಷ್ಟವಾದೀತು.
ಕನ್ಯಾ: ನಿಮ್ಮ ಭಾವನೆಗಳಿಗೆ ಘಾಸಿಯಾಗುವ ಸಮಾಚಾರವು ಇಂದು ಬರಲಿದೆ. ಮಾತುಗಳನ್ನು ಹೆಚ್ಚು ಎಚ್ಚರದಿಂದ ಆಡಿ. ಇಲ್ಲದಿದ್ದರೆ ಮುಜುಗರಕ್ಕೆ ಒಳಗಾಗುವ ಸಂದರ್ಭವಿದೆ. ಹಣದ ಒಳಹರಿವು ಮಂದಗತಿಯಲ್ಲಿ ಇರಬಹುದು. ನಿರುದ್ಯೋಗಿಗಳು ಬಹಳ ದಿನಗಳಿಂದ ಉದ್ಯೋಗದ ಅನ್ವೇಷಣೆಯಲ್ಲಿ ಇರಲಿದ್ದು, ಉದ್ಯೋಗವು ಲಭ್ಯವಾಗುವುದು. ಧಾರ್ಮಿಕ ಆಚರಣೆಗಳಲ್ಲಿ ಆಸಕ್ತಿ ಕಡಿಮೆಯಾಗಬಹುದು. ಚಿತ್ತ ಚಾಂಚಲ್ಯ ನಿಮ್ಮನ್ನು ಒಂದು ಕಡೆಗೆ ಇರಲು ಬಿಡದು. ವೃತ್ತಿಯಲ್ಲಿ ಹೆಚ್ಚು ತಿರುಗಾಟವಿರಲಿದೆ. ಸಂಗಾತಿಯ ಸಿಡುಕಿನ ನುಡಿಗಳು ನಿಮಗೆ ನೋವು ತರುತ್ತದೆ.
ತುಲಾ: ಆರ್ಥಿಕಸಮಸ್ಯೆಯನ್ನು ಸಮಸ್ಯೆಯಾಗಿ ಇಟ್ಟುಕೊಳ್ಳದೇ ಅದರ ಮುಂದಿನ ಹಂತಕ್ಕೆ ಹೋಗಬೇಕಾಗಿದೆ. ಹೊರಬರಲು ಸರಿಯಾದ ಅವಕಾಶವಿದೆ. ಅಧಿಕಾರಿಗಳಿಂದ ಬಡ್ತಿ, ಹೆಚ್ಚಳ, ಮೆಚ್ಚುಗೆ ಮತ್ತು ಪ್ರೋತ್ಸಾಹಗಳು ಉದ್ಯೋಗದಲ್ಲಿ ಸಿಗಲಿದೆ. ಇಂದಿನ ಯೋಜಿತ ಕೆಲಸಗಳು ಪೂರ್ಣಗೊಳ್ಳುತ್ತವೆ. ಗುಂಪಿನಲ್ಲಿದ್ದಾಗ ನೀವೇನು ಹೇಳುತ್ತೀರೆಂದು ಎಚ್ಚರ ವಹಿಸಿ-ನಿಮ್ಮ ಹಠಾತ್ ಟೀಕೆಗಳಿಗೆ ನೀವು ತೀವ್ರವಾಗಿ ಟೀಕೆ ಎದುರಿಸಬೇಕಾಗಬಹುದು. ನಿಮ್ಮ ಶಕ್ತಿ ಮತ್ತು ಉತ್ಸಾಹವನ್ನು ಮರಳಿ ತರುವ ಒಂದು ಆನಂದಮಯ ಪ್ರವಾಸಕ್ಕೆ ಹೋಗುವ ಸಾಧ್ಯತೆ ಇದೆ.
ವೃಶ್ಚಿಕ: ಮನೆ ನಿರ್ಮಾಣ ಮಾಡುತ್ತಿದ್ದವರಿಗೆ ಇದ್ದ ಅಡೆತಡೆಗಳು ಸ್ವಲ್ಪಮಟ್ಟಿಗೆ ದೂರವಾಗಲಿದೆ. ಸಾಹಿತ್ಯದಲ್ಲಿ ಆಸಕ್ತಿಯನ್ನು ಹೊಂದಿದವರಿಗೆ ಹೆಚ್ಚಿನ ಕೆಲಸ ದೊರೆಯುತ್ತದೆ. ಬಂಧುಗಳ ಗಲಾಟೆಗಳಲ್ಲಿ ಮಧ್ಯಸ್ಥಿಕೆ ವಹಿಸುವುದು ನಿಮಗೆ ದುಬಾರಿಯಾಗಬಹುದು. ಪೋಷಕರಿಂದ ಮಕ್ಕಳ ಆಸೆಗೆ ಪ್ರೋತ್ಸಾಹ ದೊರೆಯುತ್ತದೆ. ಯಂತ್ರೋಪಕರಣಗಳನ್ನು ದುರಸ್ತಿ ಮಾಡುವವರಿಗೆ ಹೆಚ್ಚಿನ ಕೆಲಸ ದೊರತು ಸಂಪಾದನೆಯಾಗುತ್ತದೆ. ಹೊಸ ಆಭರಣವನ್ನು ಖರೀದಿಸುವ ಮನಸ್ಸು ಮಾಡುವಿರಿ. ಮೂಳೆ ತೊಂದರೆ ಇರುವವರು ಚಿಕಿತ್ಸೆ ಪಡೆಯುವುದು ಒಳ್ಳೆಯದು. ಕೃಷಿ ಭೂಮಿ ವಿಸ್ತರಣೆಯನ್ನು ಮಾಡುವ ಕಾರ್ಯಕ್ಕೆ ಈಗ ಮುಂದಾಗುವಿರಿ.
-ಲೋಹಿತಶರ್ಮಾ ಇಡುವಾಣಿ