Daily Horoscope: ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ ಭವಿಷ್ಯ

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಮೇ 2) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Daily Horoscope: ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ ಭವಿಷ್ಯ
ಇಂದಿನ ರಾಶಿ ಭವಿಷ್ಯImage Credit source: freepik
Follow us
Rakesh Nayak Manchi
|

Updated on: May 02, 2023 | 6:00 AM

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಮೇ 2 ಮಂಗಳವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ : ಭರಣೀ, ಮಾಸ : ವೈಶಾಖ, ಪಕ್ಷ : ಶುಕ್ಲ, ವಾರ : ಮಂಗಳ, ತಿಥಿ : ದ್ವಾದಶೀ, ನಿತ್ಯನಕ್ಷತ್ರ: ಹಸ್ತಾ, ಯೋಗ: ವ್ಯಾಘಾತ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 10 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 48 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 03:39 ರಿಂದ 05:13ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 09:20 ರಿಂದ 10:55ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:29 ರಿಂದ 02:04ರ ವರೆಗೆ.

ಸಿಂಹ: ಅಧಿಕಾರವು ಸಿಕ್ಕ ಮಾತ್ರಕ್ಕೆ ಹೇಗಾದರೂ ಚಲಾಯಿಸಬೇಕೆಂದಿಲ್ಲ. ವ್ಯಕ್ತಿ, ಸಂದರ್ಭ, ಸಮಯವನ್ನು ನೋಡಿ ತೀರ್ಮಾನಿಸಿ. ಹಣಕಾಸಿನ ವಿಚಾರದಲ್ಲಿ ಇರುವ ಗೊಂದಲವನ್ನು ಆರ್ಥಿಕ ತಜ್ಞರ ಬಳಿ ಬಗೆಹರಿಸಿಕೊಳ್ಳಬಹದು. ಯಾರ ಬಗ್ಗೆಯೂ ತೀರ್ಮಾನ ಕೊಡುವ ಬದಲು ಪೂರ್ವಾಪರ ವಿಚಾರಗಳನ್ನು ಗಮನಸಿಕೊಳ್ಳಿ. ನಿಮ್ಮ ನೇರದ್ದು ಮಾತ್ರ ಸತ್ಯವಾಗಿ ಇರದು. ಬಂಗಾರದ ಕತ್ತಿಯೇ ಆದರೂ ಅದರಿಂದ ಮೂಗು ಕತ್ತರಿಸಿಕೊಳ್ಳುವುದು ಎಷ್ಟು ಸರಿ. ಜನರನ್ನು ಅವರ ಯೋಗ್ಯತೆಯ ಆಧಾರದ ಮೇಲೆ ಕೆಲಸಕ್ಕೆ ಜೋಡಿಸಿ. ತಾನು ಕಂಡಿದ್ದು ಮಾತ್ರ ಸರಿ ಎಂಬ ವಾದವು ನಿಮ್ಮವರಿಗೆ ಬೇಸರ ತರಿಸೀತು.

ಕನ್ಯಾ: ಕಛೇರಿಯಲ್ಲಿ ಇಂದು ಅಸಮಾಧನಕಾರ ವಾತಾವರಣ ಇರಲಿದೆ. ಕಛೇರಿಯ ಆರಂಭದಲ್ಲಿ ಮೇಲಧಿಕಾರಿಗಳಿಂದ ಬೈಗುಳ ತಿನ್ನಬೇಕಾಗಿಬರಬಹುದು. ನಿಮ್ಮ ವಿರುದ್ಧ ಯಾರೋ ಏನ್ನೋ ನಡೆಸುತ್ತಿದ್ದಾರೆ ಎಂಬ ಅನುಮಾನ ಕಾಡಲಿದೆ. ಕೆಲಸವು ಎಷ್ಟೇ ಚೆನ್ನಾಗಿದ್ದರೂ ಪ್ರಶಂಸೆ ಸಿಗುತ್ತಿಲ್ಲ ಎಂಬ ನೋವು ಹೆಚ್ಚಾಗಬಹುದು. ಕೆಲಸದಲ್ಲಿ ವೈರಾಗ್ಯವೂ ಬರುವ ಸಾಧ್ಯತೆ ಇದೆ. ನಕಾರಾತ್ಮಕತೆಯ ಬಗ್ಗೆ ಚಿಂತಿಸಿ, ಆದರೆ ಅದರದ್ದೇ ಆಲೋಚನೆಯಲ್ಲಿ ನೀವು ಮುಳುಗಿಹೋಗಬೇಡಿ. ಅನಿವಾರ್ಯವಾಗಿ ಕೊಟ್ಟ ಕೆಲಸವನ್ನು ಮಾಡಬೇಕಾಗಬಹುದು. ಆಗುವುದೆಲ್ಲ ಒಳ್ಳೆಯದಕ್ಕೆ ಎಂಬ ಮಾನಸಿಕತೆ ನಿಮ್ಮನ್ನು ಖುಷಿಯಿಂದ ಇಡಲಿದೆ.

ತುಲಾ: ವ್ಯಾಪಾರದಲ್ಲಿ ಇಷ್ಟವಿಲ್ಲದಿದ್ದರೂ ಲಾಭವನ್ನು ನಿರೀಕ್ಷಿಸುವುದು ಬೇಡ. ಹೂಡಿಕೆ ಮಾಡುವ ಮನಸ್ಸಿದ್ದರೆ ಸ್ವಲ್ಪ ಮಾಡಿ. ಆದರೆ ನೀವು ನಿರೀಕ್ಷಿಸಿದಷ್ಟು ಲಾಭವನ್ನು ಪಡೆಯುವುದು ಕಷ್ಟವಾಗಬಹುದು. ನಾಲ್ಕಾರು ಜನರ ಸಂಪತ್ತಿನಿಂದ ಬದುಕಬೇಕಾಗಬಹದು. ಕುಟುಂಬದಲ್ಲಿ ಹಿರಿಯರ ಮಾತನ್ನು ಅಲ್ಲಗಳೆಯಬಹುದು. ನೀವು ಸ್ವತಂತ್ರವಾಗಿ ಬದುಕುವ ಇಚ್ಛೆ ಹೊಂದುವಿರಿ. ಅನುಕೂಲತೆಯನ್ನು ನೋಡಿ ಮನೆಗೆ ಸಹಾಯ ಮಾಡುವಿರಿ. ಉಪಕಾರವನ್ನು ನೀವು ಸ್ಮರಿಸುವಿರಿ. ಅನವಶ್ಯವೆನಿಸಿದರೆ ಅಂತಹ ಖರ್ಚನ್ನು ಮಾಡಲೇ ಬೇಇ.

ವೃಶ್ಚಿಕ: ಹೊಸ ಕೆಲಸವನ್ನು ಮಾಡಲು ನಿಮಗೆ ಧೈರ್ಯ ಸಾಲದು. ನಿಮಗೆ ದೈರ್ಯವನ್ನು ತುಂಬುವವರೂ ಇಲ್ಲವಾಗಬಹುದು. ವಿಶ್ರಾಂತಿ ಬೇಕೆನಿಸಿದರೆ ಪಡೆದು ಮುನ್ನಡೆಯುವುದು ಉತ್ತಮ. ವ್ಯಾಪಾರವನ್ನು ಮಾಡುತ್ತಿದ್ದರೆ ಸಾಲವನ್ನು ಕೊಡಲು ಹೋಗಬೇಡಿ. ಸಾಲ ಕೊಡುವುದೇ ಹೆಚತಚಾದೀತು. ಪುರುಷರಿಂದ ಏನಾದರೂ ತೊಂದರೆಗಳು ಬರಬಹುದು. ಹಣ ಸಂಪಾದನೆಯನ್ನೇ ಮುಖ್ಯವಾಗಿಟ್ಟುಕೊಂಡು ಮನೆಯನ್ನು, ಮಕ್ಕಳನ್ನು ಮರೆಯಬಹುದು. ಅಕಾರಣವಾಗಿ ದುಃಖದ ಸನ್ನಿವೇಷಗಳು ಬರಬಹುದು. ಮನಸ್ಸಿಗೆ ಹಿಡಿಸುವ ಕೆಲಸವನ್ನು ಮಾಡಿ.

-ಲೋಹಿತಶರ್ಮಾ ಇಡುವಾಣಿ