AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Horoscope: ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ ರಾಶಿ ಭವಿಷ್ಯ

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಏಪ್ರಿಲ್​ 20) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Daily Horoscope: ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ ರಾಶಿ ಭವಿಷ್ಯ
ಇಂದಿನ ರಾಶಿ ಭವಿಷ್ಯ
ಗಂಗಾಧರ​ ಬ. ಸಾಬೋಜಿ
|

Updated on: Apr 20, 2023 | 6:00 AM

Share

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಏಪ್ರಿಲ್​ 20 ಗುರುವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ: ಅಶ್ವಿನೀ, ಮಾಸ: ಚೈತ್ರ, ಪಕ್ಷ: ಕೃಷ್ಣ, ವಾರ: ಗುರು, ತಿಥಿ: ಅಮಾವಾಸ್ಯಾ, ನಿತ್ಯನಕ್ಷತ್ರ: ಅಶ್ವಿನೀ, ಯೋಗ: ವಿಷ್ಕಂಭ, ಕರಣ: ಕಿಂಸ್ತುಘ್ನ, ಸೂರ್ಯೋದಯ ಬೆಳಗ್ಗೆ 06 ಗಂಟೆ 17 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 45 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 02:05 ರಿಂದ 03:39ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 6:17 ರಿಂದ 07:51ರ ವರೆಗೆ, ಗುಳಿಕ ಕಾಲ ಬೆಳಗ್ಗೆ 09:24 ರಿಂದ ಮಧ್ಯಾಹ್ನ 10:58ರ ವರೆಗೆ.

ಸಿಂಹ: ಇಂದು ನೀವು ಹಲವು ದಿನಗಳಿಂದ ಕಾಡುತ್ತಿರುವ ಅಥವಾ ಅನುಭವಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರವನ್ನು ಹುಡುಕಿಕೊಳ್ಳುವಿರಿ. ಪೂರ್ವಯೋಚನೆ ಇಲ್ಲದೇ ಆರಂಭಮಾಡಿದ ಕೆಲಸವನ್ನು ಆಮೇಲೆ ಪರಿಶೀಲಿಸದರೆ ಏನು ಬಂತು? ಪೂರ್ವಸಿದ್ಧತೆ ಚೆನ್ನಾಗಿರಬೇಕಾಗುತ್ತದೆ. ಸ್ನೇಹಿತರಿಂದ ಅಪಹಾಸ್ಯಕ್ಕೆ ಒಳಗಾಗುವಿರೊ. ಸರ್ಕಾರಿ ಉದ್ಯೋಗದಲ್ಲಿ ಇದ್ದವರಿಗೆ ಕೆಲವೊಂದಿಷ್ಟು ಗೊಂದಲಗಳು ಆಗಬಹುದು. ಬೇರೆ ಕಡೆಗೆ ಇಟ್ಟಿದ್ದ ಗಮನವನ್ನು ಬದಲಿಸಿ, ನಿಮ್ಮ ಜೀವನದ ಬಗ್ಗೆ ಯೋಚಿಸುವುದು ಒಳ್ಳೆಯದು ಎಂದು ಅನ್ನಿಸಬಹುದು. ಸಪ್ತಮದ ಶನಿಯು ವಿವಾಹಕ್ಕೆ ಸಂಬಂಧಿಸಿದ ವಿಷಯದಲ್ಲಿ ನಿಧಾನ ಮಾಡುವನು. ಶಿವಾರಾಧನೆಯನ್ನು ಮಾಡಿ.

ಕನ್ಯಾ: ತಾಳ್ಮೆಯಿಂದ ಆದಷ್ಟು ವ್ಯವಹಿರಿಸಿ. ಅಪರೂಪದ ವಿಚಾರಗಳು ನಿಮಗೆ ಗೊತ್ತಾಗಲಿದೆ. ನೆರೆ ಹೊರೆಯರ ಜೊತೆ ಚೆನ್ನಾಗಿರಿ. ಅತಿಯಾದ ಸಲುಗೆಯಿಂದ ನಿಮಗೆ ಕಷ್ಟವಾಗಬಹುದು. ಪತಿಯ ಮೇಲೆ ಸಿಟ್ಟುಗೊಳ್ಳುವ ಸಾಧ್ಯತೆ ಇದೆ. ನಿಮ್ಮ ನಡೆ ಹಾಗು ನುಡಿಗಳು ಅವರಿಗೆ ವಿರೋಧದಂತೆ ಕಾಣಬಹುದು. ಮನಸ್ಸನ್ನು ನಕಾರಾತ್ಮಕವಾಗಿ ಹರಿಯಲು ಬಿಡಬೇಡಿ. ಕೃಷಿಗೆ ಸಂಬಂಧಿಸಿದ ಚಟುವಟಿಕೆಲ್ಲಿ ಭಾಗವಹಿಸುವಿರಿ. ಮಕ್ಕಳ ಜೊತೆ ಸಮಯವನ್ನು ಕಳೆಯುವಿರಿ. ಗುಡ್ಡ ಬೆಟ್ಟಗಳ, ನದಿಪ್ರದೇಶಗ ಸುತ್ತಿವ ಮನಸ್ಸಾದೀತು. ಗಣಪತಿಗೆ ದೂರ್ವಾಪತ್ರವನ್ನು ಹಾಕಿ.

ತುಲಾ: ಉದ್ಯಮವನ್ನು ನಡೆಸುತ್ತಿದ್ದರೆ, ಹೊಸಮಾರ್ಗವನ್ನು ಯೋಚಿಸಿ. ನಿಮ್ಮ ಆಸ್ತಿಯನ್ನು ಮಾರಾಟಮಾಡಲು ಆಲೋಚಿಸಿಸುವಿರಿ. ನೂತನ ವಾಹನಖರೀದಿಯನ್ನು ಮಾಡಲಿದ್ದೀರಿ. ಮಾನಸಿಕ ಒತ್ತಡದಿಂದ ಸ್ವಲ್ಪ ಸಮಸ್ಯೆಯನ್ನು ಅನುಭವಿಸುವಿರಿ. ಶ್ರಮವಹಿಸಿದ ಕಾರ್ಯಕ್ಕೆ ಫಲವು ಸಿಗಬಹುದಿ. ಒಳ್ಳೆಯವರ ಸಂಗ ಸಿಗಬಹುದು ಅಥವಾ ಉತ್ತಮ ಪುಸ್ತಕವನ್ನು ಓದುವಿರಿ. ನಿಮಗೆ ಆಸ್ತಿಯ ವಿಚಾರದಲ್ಲಿ ವಂಚನೆಯಾಗಲಿದೆ. ಕೋಪ ಮಾಡಿಕೋಳ್ಳದೇ ಸಹಜವಾಗಿರಿ ಇರಿ. ಆಭರಣಗಳನ್ನು ಖರೀದಿಸಬಹುದು ಇಂದು. ದೇಹಕ್ಕೆ ಆಯುಧದಿಂದ ಹೊಡೆತಬೀಳಬಹುದು. ದುರ್ಗಾರಾಧನೆಯನ್ನು ಮಾಡಿ.

ವೃಶ್ಚಿಕ: ನಿಮ್ಮ ಮತಿಕೌಶಲಕ್ಕೆ ಕಛೇರಿಯಲ್ಲಿ ಬೆರಗಾಗುವರು. ಉದ್ಯೋಗದಲ್ಲಿ ಭಡ್ತಿಯನ್ನು ಪಡೆಯಬಹುದು. ಪರರಿಗೆ ಸಹಾಯ ಮಾಡಲು ಅವಕಾಶ ಬಂದರೆ ಮಾಡಿ. ಹಿಂದೆ ಹೆಜ್ಜೆ ಇಡಬೇಡಿ. ಮುಂದೆ ನಿಮಗೇ ಅಪಾಯವು ಬಂದಾಗ ಸಹಾಯವಾಗುವುದು. ನಿಮ್ಮವರ ಬಳಿ ವಿಧೇಯತೆಯನ್ನು ಇಟ್ಟುಕೊಳ್ಳುವುದು ಉತ್ತಮ. ಕೆಲಸವನ್ನು ಬದಲಿಸುವ ಮನಸ್ಸು ಮಾಡುವಿರಿ. ಹಿತಶತ್ರುಗಳು ನಿಮಗೆ ಏನನ್ನಾದರೂ ಮಾಡಲು ಇಚ್ಛಿಸುವರು. ಆರ್ಥಿಕವಿಚಾರದಲ್ಲಿ ಹಿನ್ನಡೆಯಾಗಲಿದೆ. ನೂತನಗೃಹದ ಪ್ರವೇಶ ಮಾಡುವಿರಿ. ಅನಾರೋಗ್ಯ ನಿಮ್ಮನ್ನು ಕಾಡಬಹುದು. ಗಮನವಿರಲಿ.

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು