Nithya Bhavishya: ಇಂದಿನ ರಾಶಿ ಭವಿಷ್ಯ, ಈ ರಾಶಿಯವರು ಅನಗತ್ಯ ಕೆಲಸಗಳಿಗೆ ಕೈ ಹಾಕಿ ಹಣವನ್ನು ಕಳೆದುಕೊಳ್ಳಬಹುದು

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಮೇ 20) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Nithya Bhavishya: ಇಂದಿನ ರಾಶಿ ಭವಿಷ್ಯ, ಈ ರಾಶಿಯವರು ಅನಗತ್ಯ ಕೆಲಸಗಳಿಗೆ ಕೈ ಹಾಕಿ ಹಣವನ್ನು ಕಳೆದುಕೊಳ್ಳಬಹುದು
ರಾಶಿಭವಿಷ್ಯ
Follow us
ಕಿರಣ್ ಹನುಮಂತ್​ ಮಾದಾರ್
|

Updated on: May 20, 2023 | 6:00 AM

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಮೇ 20  ಶನಿವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ವೃಷಭ ಮಾಸ, ಮಹಾನಕ್ಷತ್ರ: ಕೃತ್ತಿಕಾ, ಮಾಸ: ಜ್ಯೇಷ್ಠ, ಪಕ್ಷ: ಶುಕ್ಲ, ವಾರ: ಶನಿ, ತಿಥಿ: ಪ್ರತಿಪತ್, ನಿತ್ಯನಕ್ಷತ್ರ: ಕೃತ್ತಿಕಾ, ಯೋಗ: ಶೋಭನ, ಕರಣ: ಕಿಂಸ್ತುಘ್ನ, ಸೂರ್ಯೋದಯ ಬೆಳಗ್ಗೆ 06 ಗಂಟೆ 04 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 52 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 09:17 ರಿಂದ 10:53ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 02:05 ರಿಂದ 05:41ರ ವರೆಗೆ, ಗುಳಿಕ ಕಾಲ ಬೆಳಗ್ಗೆ 06:05 ರಿಂದ 07:41ರ ವರೆಗೆ.

ಸಿಂಹ: ಅಸೂಯೆಯಿಂದ‌ ನಿಮ್ಮ ಕೆಲಸವು ಹಿಂದುಳಿಯುವುದು. ಅನಗತ್ಯ ಕೆಲಸಗಳಿಗೆ ಕೈ ಹಾಕಿ ಹಣವನ್ನು ಕಳೆದುಕೊಳ್ಳಬಹುದು. ಸಂಗಾತಿಯ ಮಾತನ್ನು ಅನಾದರ ಮಾಡುವುದು ಬೇಡ. ದುರಭ್ಯಾಸಕ್ಕೆ ಶರಣಾಗಿ ಹಣವನ್ನು ಕಳೆದುಕೊಳ್ಳಬಹುದು. ಸರ್ಕಾರದ ಕೆಲಸವು ವಿಳಂಬವಾಗಿ ನಿಮಗೆ ಬೇಸರವನ್ನು ಕೊಟ್ಟೀತು. ಕಲಹದ ಸ್ಥಳಕ್ಕೆ ನಿಮ್ಮ ಮಾತನ್ನೂ ಹೇಳುವಿರಿ. ನಿಮ್ಮ ಉದ್ಯಮಕ್ಕೆ ಸ್ಪರ್ಧೆ ಉಂಟಾಗಬಹುದು. ದ್ವೇಷ ಸಾಧಿಸಲು ಹೋಗಿ ಸಮಯವನ್ನೂ ಹಣವನ್ನೂ ಜನರನ್ನೂ ಕಳೆದುಕೊಳ್ಳಬೇಕಾಗಬಹುದು. ಅತಿಯಾದ ನಂಬಿಕೆಯು ಮುಳುವಾದೀತು ನಿಮಗೆ.

ಕನ್ಯಾ: ನಿಮ್ಮ‌ ಆಸಕ್ತಿಯನ್ನು ನೀವು ಬದಲಾಯಿಸಿಕೊಳ್ಳುವುದು ಬೇಡ. ರಮಣೀಯ ಪ್ರದೇಶಗಳು ನಿಮಗೆ ರೋಮಾಂಚನವನ್ನು ಉಂಟುಮಾಡಿಯಾವು. ನೀವು ನಿಮ್ಮ ಕೆಲಸದ ಮೇಲೆ ಹೆಚ್ಚು ಗಮನವಿಡುವುದು ಒಳ್ಳೆಯದು.‌ ನಿಮ್ಮ ದಾರಿ ತಪ್ಪಿಸಲು ಕೆಲವು ಮಾತುಗಳು ಬರಬಹುದು. ವಿದ್ಯುತ್ ಉಪಕರಣಗಳಿಗೆ ಹಣವನ್ನು ಖರ್ಚು ಮಾಡುವಿರಿ. ಮಕ್ಕಳು ನಿಮಗೆ ಸಂತೋಷವನ್ನು ಕೊಟ್ಟಾರು. ತೀವ್ರತರವಾದ ಒತ್ತಡಗಳು ನಿಮಗೆ ಕಿರಿಕಿರಿ ಮಾಡೀತು. ನಿಮ್ಮ ಒಳ್ಳೆಯ ಸ್ವಭಾವವನ್ನು ದುರುಪಯೋಗ ಮಾಡಿಕೊಂಡಾರು. ಅಪಮಾನವಾಗುವ ಸ್ಥಳದಲ್ಲಿ ಇರಬೇಡಿ.

ತುಲಾ: ಅಸಾಮಾನ್ಯ ಕೆಲಸವನ್ನು ಮಾಡುವ ಗುರಿ ನಿಮ್ಮದಾಗಲಿದೆ. ಅಪರಿಚಿತ ವ್ಯಕ್ತಿಗಳೂ ನಿಮಗೆ ಸಹಾಯ ಮಾಡಬಹುದು. ಇಂದು ಹೂಡಕೆ‌ ಮಾಡಿ ಬಹುದಿನದ ಬಯಕೆಯನ್ನು ತೀರಿಸಿಕೊಳ್ಳುವಿರಿ. ಬೇರೆಯವರ ಬಗ್ಗೆ ಅಭಿಪ್ರಾಯಗಳನ್ನು ಹೇಳುವ ಚಟ ಒಳ್ಳೆಯದಲ್ಲ. ತಾಳ್ಮೆಯಿಂದ ಆಗುವ ಕೆಲಸವನ್ನು ತಣ್ಣಗೇ ಮಾಡಿ ಮುಗಿಸಿ. ನಿಮ್ಮವರಿಗೆ ನಿಮ್ಮ ಬಗ್ಗೆ ತಿಳಿದುಕೊಳ್ಳುವ ತುಡಿತ ಅತಿಯಾದೀತು‌. ಮುಂಬರುವ ದಿನಗಳನ್ನು ಇಂದೇ ಚಿಂತಿಸುವಿರಿ. ಕಳೆದ ದಿನಗಳನ್ನು ಪತ್ನಿಯ ಜೊತೆ ಮೆಲುಕು ಹಾಕುವಿರಿ. ಸ್ನೇಹಿತರ ಮನೆಯಲ್ಲಿ ಉತ್ತಮ‌ ಭೋಜನ ಮಾಡುವಿರಿ.

ವೃಶ್ಚಿಕ: ನಿಮಗೆ ಹಣವನ್ನು ಉಳಿಸುಕೊಳ್ಳಬೇಕು ಎಂಬ ಇಚ್ಛೆ ಇದ್ದರೂ ಬಂದ ಹಣವು ನಿಲ್ಲದೆ ಖಾಲಿಯಾಬಹುದು. ಕಛೇರಿಯಲ್ಲಿ ನಿಮ್ಮನ್ನು ಸೂಕ್ತ ವ್ಯಕ್ತಿ ಎಂದು ಆಯ್ಕೆ ಮಾಡಿದ್ದರೂ ನಿಮಗೆ ಹಿಂಜರಿಕೆ ಉಂಟಾಗಲಿದೆ. ವೃತ್ತಿಯ ಸಾಧನೆಯನ್ನು ಮನೆಯಲ್ಲಿ ಹೇಳಿಕೊಳ್ಳುವಿರಿ. ಇಂದು ನಿಮ್ಮ ತಾಯಿ ನಿಮಗೆ ಮಾನಸಿಕ ಬಲವನ್ನು ತುಂಬುವಳು. ಶತ್ರುಗಳ ಬಗ್ಗೆ ಮಾತನಾಡಿ ಸುಮ್ಮನೇ ಕಾಲಹರಣ ಮಾಡಬೇಡಿ. ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಅಗತ್ಯ. ಹೊಸತನ್ನು ಹುಡುಕುವ ಬಯಕೆ ಬಹಳ ಇರಲಿದೆ‌. ಮನೆಯೇ ನಿಮಗೆ ಸಮಾಧಾನದ ಸ್ಥಳವಾಗಬಹುದು.

-ಲೋಹಿತಶರ್ಮಾ ಇಡುವಾಣಿ

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್