ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಏಪ್ರಿಲ್ 21 ಶುಕ್ರವಾರ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ : ಅಶ್ವಿನೀ, ಮಾಸ : ವೈಶಾಖ, ಪಕ್ಷ : ಶುಕ್ಲ, ವಾರ : ಶುಕ್ರ, ತಿಥಿ : ಪ್ರತಿಪತ್, ನಿತ್ಯನಕ್ಷತ್ರ : ಭರಣೀ, ಯೋಗ : ಪ್ರೀತಿ, ಕರಣ : ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 16ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಮಟೆ 45 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 10:58 ರಿಂದ 12:31ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:39 ರಿಂದ 05:12ರ ವರೆಗೆ, ಗುಳಿಕ ಕಾಲ ಬೆಳಗ್ಗೆ 07:50 ರಿಂದ 09:24ರ ವರೆಗೆ.
ಸಿಂಹ: ಉನ್ನತ ಅಧಿಕಾರಕ್ಕೆ ಹೋಗುವ ಸಂಭವಿದ್ದರೂ ಹಿತಶತ್ರುಗಳ ಪಿತೂರಿಯಿಂದ ಅಥವಾ ಹಿಂದೆಂದೋ ಆಡಿದ ಮಾತಿನ್ನೇ ಇಟ್ಟುಕೊಂಡು ನಿಮಗೆ ಹುದ್ದೆಯನ್ನು ಕೊಡದೇಹೋಗಬಹುದು. ನಿಮ್ಮ ಸ್ಥಿರಾಸ್ತಿಯನ್ನು ಅತಿಕ್ರಮಣ ಮಾಡಲು ಹೊಂಚುಹಾಕುತ್ತಿದ್ದಾರೆ. ನೀವು ಎಚ್ಚೆತ್ತುಕೊಳ್ಳಬೇಕಾಗಿದೆ. ರಾಜಕೀಯದ ಹಿನ್ನೆಲೆಯನ್ನು ಇಟ್ಟುಕೊಂಡು ನೀವು ಮುಂದುವರಿಯಬೇಕು. ಹೊಂದಾಣಿಕೆಯಿಂದ ಕಲಹವನ್ನು ಸರಿಮಾಡಿಕೊಳ್ಳಿ. ಇಂದು ನಿಮಗೆ ಹೋಗಬೇಕಾದಲ್ಲಿಗೆ ಹೋಗಲು ಆಗಲಿಲ್ಲ ಎಂದು ಬಹಳ ಬೇಸರವಾದೀತು. ಮನೆಯವರನ್ನು ಶಪಿಸಲೂಬಹುದು. ಪಿತ್ರಾರ್ಜಿತ ಆಸ್ತಿಯನ್ನು ಪಡೆಯಲು ಸಕಾಲವಾಗಿದೆ.
ಕನ್ಯಾ: ಇಷ್ಟು ವರ್ಷದ ಪರಿಶ್ರಮವು ಇಂದು ವ್ಯರ್ಥವಾಗುವುದು. ವಿಶೇಷವಾಗಿ ವಿದ್ಯಾರ್ಥಿಗಳು ಈ ವಿಚಾರದಲ್ಲಿ ಹತಾಶೆಗೊಳ್ಳುವರು. ಕುಟುಂಬದ ವಿಚಾರದಲ್ಲಿ ನಿಮಗೆ ಸಂತೋಷವು ಅಷ್ಟಾಗಿ ಆಗದು. ನಿಮ್ಮವರನ್ನು ತಮಾಷೆಮಾಡಲು ಹೋಗಿ ಗಂಭೀರವಾದೀತು. ಜ್ವರಾದಿ ರೋಗಗಳು ಕಾಣಿಸಿಕೊಂಡು ವೈದ್ಯರ ಮೂಲಕ ಕಡಿಮೆಯಾಗಲಿದೆ. ಭವಿಷ್ಯಕ್ಕೆ ಹಣವನ್ನು ಹೂಡುವ ಮನಸ್ಸಿದ್ದರೂ ಹಣದ ಕೊರತೆ ಇರಲಿದೆ. ಸ್ನೇಹಿತರ ಜೊತೆ ಭೋಜನಕೂಟ ಏರ್ಪಾಡಾಗಲಿದೆ. ಪ್ರೇಯಸಿಯನ್ನು ಕಾಣದೇ ಬೇಸರಿಸುವಿರಿ.
ತುಲಾ: ನಿಮ್ಮ ಕೆಲಸದ ಬಗ್ಗೆ ನಿಮ್ಮ ಗಮನವಿರಲಿ. ಇನ್ನೊಬ್ಬರ ಕುರಿತು ಟೀಕೆ ಮಾಡುವುದನ್ನು ನಿಲ್ಲಿಸಿ. ಅಶ್ಲೀಷಪದಗಳನ್ನು ಬಳಸಿ ಮನೆಯಲ್ಲಿ ಬೈಗುಳ ತಿನ್ನುವಿರಿ. ಹೊಸ ಆದಾಯದ ಮೂಲವನ್ನು ಕಂಡುಕೊಳ್ಳುವಿರಿ. ಆತುರದಲ್ಲಿ ಏನನ್ನಾದರೂ ಮಾಡಿಕೊಂಡುಬಿಟ್ಟೀರಿ. ಬೆಳಗಿನ ಹೊತ್ತಿನಲ್ಲಿ ಇಂದಿನ ಕೆಲಸದ ಪಟ್ಟಿಯನ್ನು ಕಂಡು ತಲೆಬಿಸಿಯಾಗಿತ್ತು. ಕಛೇರಿಯ ಹಾಗೂ ಮನೆಯ ಕೆಲಸವನ್ನು ನಿಭಾಯಿಸುವುದು ನಿಮಗೆ ಕಷ್ಟವೇ. ಆದರೂ ಅನಿವಾರ್ಯವಾಗಿರುತ್ತದೆ. ಕಾರ್ಯಕ್ಕಾಗಿ ಇಂದಿನ ಓಡಾಟವು ವ್ಯರ್ಥವೇ ಸರಿ. ನಿನ್ನೆಯ ಘಟನೆಯನ್ನು ನೆನಪಿಸಿಕೊಳ್ಳದೇ ಕಾರ್ಯಪ್ರವೃತ್ತರಾಗಿ.
ವೃಶ್ಚಿಕ: ಉದ್ಯೋಗದಲ್ಲಿ ಸ್ವಲ್ಪಮಟ್ಟಿನ ಹಿನ್ನಡೆ ಇರಲಿದೆ. ಬೇಸರಿಸಬೇಕಿಲ್ಲ. ಮುಂಬರುವ ದಿನಗಳು ಅವನ್ನೆಲ್ಲ ಸರಿದೂಗಿಸುವುದು ಅಧಿಕಾರಿಗಳು ನಿಮ್ಮ ಕಾರ್ಯವನ್ನು ಕಂಡು ಪ್ರಶಂಸಿಸುವರು. ನೀವು ಜನನಾಯಕರಾಗಿದ್ದರೆ ನಿಮಗೆ ಉತ್ತಮ ಬೆಂಬಲವು ಸಿಗಲಿದೆ. ರಾಜಕೀಯಕ್ಷೇತ್ರದವರು ಉತ್ತಮ ತಂತ್ರವನ್ನು ಈಗಿನಿಂದಲೇ ರೂಪಿಸಿಕೊಳ್ಳುವುದು ಉತ್ತಮ. ಕೊನೆಯ ಕ್ಷಣದವರೆಗೆ ಕಾಯಬೇಕಿಲ್ಲ. ಕಲಾವಿದರು ಕಲಾಪ್ರದರ್ಶನಕ್ಕೆ ವಿದೇಶಕ್ಕೆ ತೆರಳಬಹುದು. ಬೇಕಾದ ವ್ಯವಸ್ಥೆಯ ಜೊತೆ ಹೋಗಿ. ಹೊಸ ವಾತಾವರಣವು ನಿಮಗೆ ಪ್ರತಿಕೂಲವಾದೀತು. ಹಣವೂ ಗೊತ್ತಾಗದಂತೆ ಖಾಲಿಯಾದೀತು.
-ಲೋಹಿತಶರ್ಮಾ ಇಡುವಾಣಿ