Daily Horoscope: ಮಹಿಳಾ ಸ್ನೇಹಿತರು ಈ ರಾಶಿಯವರಿಗೆ ಬೇಕಾದ ಸಹಾಯ ಮಾಡಲಿದ್ದಾರೆ
ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಏಪ್ರಿಲ್ 23) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.
ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಏಪ್ರಿಲ್ 23 ಭಾನುವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ : ಅಶ್ವಿನೀ, ಮಾಸ : ವೈಶಾಖ, ಪಕ್ಷ : ಶುಕ್ಲ, ವಾರ : ಭಾನು, ತಿಥಿ : ತೃತೀಯಾ, ನಿತ್ಯನಕ್ಷತ್ರ : ರೋಹಿಣೀ, ಯೋಗ : ಸೌಭಾಗ್ಯ, ಕರಣ : ಗರಜ, ಸೂರ್ಯೋದಯ ಬೆಳಗ್ಗೆ 06 ರಿಂದ 15 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 46 ನಿಮಿಷಕ್ಕೆ, ರಾಹು ಕಾಲ ಸಂಜೆ 05:12 ರಿಂದ 06:46ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:31 ರಿಂದ 02:05ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:38 ರಿಂದ 05:12ರ ವರೆಗೆ.
ಸಿಂಹ: ನಿಮ್ಮವರ ಬಗ್ಗೆ ನೀವೆಲ್ಲೇ ಇದ್ದರೂ ಸಂತೋಷದ ಸುದ್ದಿಯು ಬರಲಿದೆ. ಯಾರ ಬಗ್ಗೆಯೂ ಅಸೂಯೆಪಡಬೇಕಾದ ಅವಶ್ಯಕತೆ ಇಲ್ಲ. ನಿಮ್ಮ ಕೆಲಸದ ವಿಧಾನವನ್ನು ಬದಲಾಯಿಸಿಕೊಳ್ಳಿ. ವಿದೇಶಕ್ಕೆ ಹೋಗಲು ಉದ್ಯೋಗದ ಸ್ಥಳದಿಂದ ಕರೆ ಬರಬಹುದು. ವ್ಯಾಪಾರದಲ್ಲಿ ನಿಮ್ಮದೇ ವಿಧಾನವನ್ನು ರೂಪಿಸಿಕೊಳ್ಳಿ. ಹೆಚ್ಚು ಆದಾಯ ಗಳಿಸಿ. ಮಕ್ಕಳ ಯಶಸ್ಸಿನಿಂದ ನೀವು ನಿಮ್ಮಲ್ಲಿ ಉತ್ಸಾಹವು ಅಧಿಕವಾಗುವುದು. ಹೊಸ ಯೋಜನೆಗಳು ನಿಮ್ಮನರಿಸಿ ಬರಲಿವೆ. ದಾಂಪತ್ಯದಲ್ಲಿ ಕಿರಿಕಿರಿಯ ಅನುಭವವಾದರೆ ತಟಸ್ಥರಾಗಿ. ಎಲ್ಲವೂ ತಾನಾಗಿಯೇ ತಿಳಿದು ಬರುತ್ತದೆ. ಪೂರ್ವಾಪರ ಯೋಚನೆ ಇಲ್ಲದೇ ಮಾತನಾಡಿ ಸಂಬಂಧವನ್ನು ಹಾಳುಮಾಡಿಕೊಳ್ಳಬೇಡಿ.
ಕನ್ಯಾ: ಸಂಪತ್ತನ್ನು ಇಂದು ಕಳೆದುಕೊಳ್ಳುವಿರಿ. ಇಷ್ಟು ದಿನ ಆಗಮನ ಮಾತ್ರ ಆಗಿತ್ತು. ಇನ್ನು ಧನಗಮನವೇ ಹೆಚ್ಚಾಗುವುದು. ನಿಮ್ಮ ಮುಂದೆ ನೀವೇ ಹಾಕಿಕೊಂಡ ಯೋಜನೆಗಳು ಇರಲಿದ್ದು ಅವುಗಳಿಗೆಂದೇ ಕೂಡಿಟ್ಟ ಹಣವು ನಷ್ಟವಾಗುವುದು. ಮೊದಲೇ ಕೂಡಿಟ್ಟ ಹಣವು ತೆಗೆಯಲು ಬಾರದೇ ಉಳಿದುಕೊಳ್ಳುತ್ತದೆ. ವ್ಯಾಪಾರಸ್ಥರಾಗಿದ್ದರೆ ಇಂದು ಕಲಹವೂ ಆಗಬಹುದು. ಇಷ್ಟು ದಿನವಿದ್ದ ಗೌರವ, ವಿಶ್ವಾಸವು ಹಾದಿತಪ್ಪಲಿದೆ. ಏನಾಗುತ್ತಿದೆ ಎಂಬ ಯಾವ ಸೂಚನೆಯೂ ನಿಮಗೆ ಸಿಗದಾಗುವುದು. ವ್ಯಾಪಾರವನ್ನು ಮುಚ್ಚಬೇಕು ಎನ್ನುವ ಸ್ಥಿತಿಯವರೆಗೆ ಹೋಗಬಹುದು. ಆಪ್ತರಾದ ಮಾತ್ರಕ್ಕೆ ಎಲ್ಲವನ್ನೂ ಸರಿಯಾಗಿ ಹೇಳುತ್ತಾರೆ ಎಂದಿಲ್ಲ. ಕುಲದೇವರ ಪ್ರಾರ್ಥಿಸಿ ಮುನ್ನಡೆಯಿರಿ.
ತುಲಾ: ಉದ್ಯೋಗವು ಸಾಕೆನಸುವಷ್ಟು ಕಳೆಗುಂದಿದೆ. ಒಂದೇ ರೀತಿಯ ಕೆಲಸಕ್ಕೆ ತನಗೆ ಇಷ್ಟವಾದುದಲ್ಲ ಎಂದು ಅನ್ನಿಸಬಹುದು. ಆದರೆ ಅನಿವಾರ್ಯವಾಗಿ ಮಾಡಬೇಕಾಗಬಹುದು. ನೀವು ನಿಮ್ಮ ಸ್ನೇಹಿತರ ಮೇಲೆ ಹೆಚ್ಚು ಅವಲಂಬಿತರಾಗಿರಲಿದ್ದೀರಿ. ನಿಮ್ಮ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಲು ಸತತ ಪ್ರಯತ್ನವಂತೂ ಅವಶ್ಯಕ. ಕಛೇರಿಯಲ್ಲಿ ನಿಮ್ಮ ನಾಯಕನ ಜೊತೆಗೆ ನೀವು ಉತ್ತಮ ಬಾಂಧವ್ಯವನ್ನು ಹೊಂದಿರುತ್ತೀರಿ. ಮಹಿಳಾ ಸ್ನೇಹಿತರು ನಿಮಗೆ ಬೇಕಾದ ಸಹಾಯವನ್ನು ಮಾಡುವರು. ನಿಮ್ಮ ಆದಾಯವನ್ನು ಹೇಳಿಕೊಳ್ಳಲು ಹೋಗಬೇಡಿ. ನಿಮಗೇ ತೊಂದರೆಯಾದೀತು.
ವೃಶ್ಚಿಕ: ನಿಮ್ಮ ಮಕ್ಕಳಿಗೆ ಹಿತೋಪದೇಶವನ್ನು ಮಾಡಲಿದ್ದೀರಿ. ಭವಿಷ್ಯದ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡುವಿರಿ. ಆಸ್ತಿಯನ್ನು ಮಾರುವ ಆಲೋಚನೆ ಬರಲಿದೆ. ಕಛೇರಿಯಲ್ಲಿ ಎಲ್ಲ ಕೆಲಸವನ್ನೂ ನೀವೊಬ್ಬರೇ ಮಾಡಲಾಗದು. ಯಾರದ್ದಾದರೂ ಸಹಾಯವನ್ನು ಪಡೆಯಿರಿ. ಹಣವು ಬೇಕಾದಷ್ಟು ಇದ್ದರೂ ಇನ್ನೂ ಬೇಕೆನ್ನುವ ಆಸೆ ಇರಲಿದೆ. ಕುಟುಂಬದ ಮದುವೆಗೆ ಸಿದ್ಧತೆಗಳನ್ನು ಪ್ರಾರಂಭಿಸುವಿರಿ. ನಿಮ್ಮ ಜೀವನಸಂಗಾತಿಗಾಗಿ ನೀವು ಸೌಮ್ಯಸ್ವಭಾವದವರು ಆಗಬೇಕಾಗಿಬರಬಹುದು. ಗೆಳೆಯರಿಗೆ ಅನೇಕ ದಿನಗಳ ಅನಂತರ ಸಮಯವನ್ನು ಕೊಡುವಿರಿ. ಕಲಹಕ್ಕೆ ಮಹತ್ತ್ವವನ್ನು ಕೊಡಬೇಡಿ. ಇರುವುದನ್ನು ಪ್ರೀತಿಯಿಂದ ಕೊಡಿ.
-ಲೋಹಿತಶರ್ಮಾ ಇಡುವಾಣಿ