Daily Horoscope: ಈ ರಾಶಿಯವರು ಇಂದು ಸಹೋದ್ಯೋಗಿಗಳ ಕುತಂತ್ರಕ್ಕೆ ಬಲಿಯಾಗುವ ಸಾಧ್ಯತೆ ಇದೆ

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಏಪ್ರಿಲ್​ 25) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Daily Horoscope: ಈ ರಾಶಿಯವರು ಇಂದು ಸಹೋದ್ಯೋಗಿಗಳ ಕುತಂತ್ರಕ್ಕೆ ಬಲಿಯಾಗುವ ಸಾಧ್ಯತೆ ಇದೆ
ಇಂದಿನ ರಾಶಿ ಭವಿಷ್ಯImage Credit source: Shutterstock
Follow us
Rakesh Nayak Manchi
|

Updated on: Apr 25, 2023 | 6:00 AM

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಏಪ್ರಿಲ್​ 25 ಮಂಗಳವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ : ಅಶ್ವಿನೀ, ಮಾಸ : ವೈಶಾಖ, ಪಕ್ಷ : ಶುಕ್ಲ, ವಾರ : ಮಂಗಳ, ತಿಥಿ : ಪಂಚಮೀ, ನಿತ್ಯನಕ್ಷತ್ರ : ಆರ್ದ್ರಾ, ಯೋಗ : ಅತಿಗಂಡ, ಕರಣ : ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 14 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 46 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 03:38 ರಿಂದ 05:13ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 09:22 ರಿಂದ 10:56ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:30 ರಿಂದ 02:04ರ ವರೆಗೆ.

ಸಿಂಹ: ಆಸ್ತಿಯ ವಿಚಾರದಲ್ಲಿ ಕಾನೂನಿನ ತೊಂದರೆಗಳು ಇದ್ದು ಅದನ್ನು ಸರಿಪಡಿಸಿಕೊಳ್ಳಲು ಓಡಾಟಗಳಾಗಬಹುದು. ವೃತ್ತಿಯಲ್ಲಿ ಬರುವ ಯಾವುದೇ ಹೊಸ ಜವಾಬ್ದಾರಿಗಳನ್ನು ಅಲ್ಲಗಳೆಯಬೇಡಿ. ಸಂಪೂರ್ಣವಾಗಿ ತಿಳಿದುಕೊಂಡು ಒಪ್ಪಿಕೊಳ್ಳಿ. ಸಹೋದ್ಯೋಗಿಗಳ ಕುತಂತ್ರಕ್ಕೆ ಬಲಿಯಾಗುವ ಸಾಧ್ಯತೆ ಇದೆ. ಓದಿನಲ್ಲಿ ಆಸಕ್ತಿ ಹೆಚ್ಚಾಗುತ್ತದೆ. ಉನ್ನತ ವ್ಯಾಸಂಗಕ್ಕೆ ತೆರಳುವ ಮನಸ್ಸು ಮಾಡುವಿರಿ. ಸಾಮಾಜಿಕ ಕಾರ್ಯಕ್ರಮಗಳ ಬಗ್ಗೆ ಹೆಚ್ಚು ಆಸಕ್ತಿ ಮೂಡಲಿದೆ. ಸಂಗಾತಿಗೆ ಉಡುಗೊರೆಯನ್ನು ಕೊಟ್ಟು ಸಂತೋಷಗೊಳಿಸುವಿರಿ.

ಕನ್ಯಾ: ಯಾರ ಮಾತನ್ನು ಕೇಳುವುದು ಬಿಡುವುದು ಎಂಬ ಗೊಂದಲಾಗುವುದು. ಮಿತ್ರರ ಸಹಾಯದಿಂದ ಕೆಲಸವನ್ನು ಗಿಟ್ಟಿಸಿಕೊಳ್ಳುವಿರಿ. ಸಾಲ ಮಾಡಿ ಬದುಕುವುದು ಇಷ್ಟವಿಲ್ಲದಿದ್ದರೂ ಪರಿಸ್ಥಿರಿ ಹಾಗೆ ಬರಲಿದೆ. ಅಸಂಬದ್ಧವನ್ನು ಮಾತನಾಡಿ ಎಲ್ಲರಿಂದ ಅಪಹಾಸ್ಯಕ್ಕೆ ಗುರಿಯಾಗುವಿರಿ. ಆರೋಗ್ಯದ ಬಗ್ಗೆ ಗಮನವಿರಲಿ. ಆಹಾರದೋಷದಿಂದ ಜ್ವರಾದಿ ವ್ಯಾಧಿಗಳು ಬರಬಹುದು. ದುಷ್ಕೃತ್ಯಕ್ಕೆ ಹಣದ ಸಹಾಯವನ್ನು ಮಾಡಿದರೆ ನಿಮಗೆ ಮುಂಬರುವ ದಿನಗಳ ತೊಂದರೆಗಳು ಬರಬಹುದು. ರುಚಿಯಾದ ಆಹಾರವನ್ನು ಸೇವಿಸುವಿರಿ.

ತುಲಾ: ಬಂಗಾರದ ವ್ಯಾಪಾರಿಗಳಿಗೆ ಲಾಭವು ಚನ್ನಾಗಿರಲಿದ್ದು ಹಣವು ಮಾತ್ರ ಸಿಗದಾಗಿದೆ. ಸತತ ಪ್ರಯತ್ನದಿಂದ ನಿಮಗೆ ಸಫಲತೆಯು ಸಿಗಬಹುದು. ಆದಾಯವು ನಿರೀಕ್ಷಿತ ಮಟ್ಟದಲ್ಲಿದ್ದರೂ ಖರ್ಚು ಅದನ್ನು ಮೀರಿರುತ್ತದೆ. ಅದಷ್ಟು ಖರ್ಚನ್ನು ಕಡಿಮೆ ಮಾಡಲು ಪ್ರಯತ್ನಿಸಿ. ಕಫ ಮತ್ತು ವಾತದ ಉದ್ರೇಕದಿಂದ ನಿಮಗೆ ಅನಾರೋಗ್ಯ ಬರಬಹುದು. ಕೃಷಿಯು ನಿಮಗೆ ಬೇಸರ ತರಿಸಬಹುದು. ಕೃಷಿಯಲ್ಲಿ ಬದಲಾವಣೆಯನ್ನು ಮಾಡಲು ಆಲೋಚಿಸುವಿರಿ. ಯಂತ್ರೋದ್ಯಮವನ್ನು ಮಾಡುತ್ತಿದ್ದರೆ ಲಾಭವಾಗಲಿದೆ. ನಂಬಿಕೆಯನ್ನು ಉಳಿಸಿಕೊಳ್ಳಲು ಪ್ರಯತ್ನಿಸುವಿರಿ.

ವೃಶ್ಚಿಕ: ವಿದ್ಯಾರ್ಥಿಗಳಿಗೆ ಪ್ರೋತ್ಸಾಹದ ಅವಶ್ಯಕತೆ ಇರಲಿದೆ. ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ ಇರಲಿದೆ. ಆರಕ್ಷಕ ಹುದ್ದೆಯ ಆಕಾಂಕ್ಷಿಗಳಿಗೆ ಹುದ್ದೆಯು ಸಿಗಬಹುದು. ವಾಹನ ಚಾಲನೆ ವೇಳೆ ಆತುರ ಬೇಡ. ಖರ್ಚು ಸಾಮಾಜಿಕ ಜೀವನದಲ್ಲಿ ಮತ್ತು ಭಾವನಾತ್ಮಕ ಪ್ರಪಂಚದಲ್ಲಿ ಹೆಚ್ಚು ಪ್ರಗತಿ ಕಾಣುವಿರಿ. ಕಳೆದು ಹೋಗಿದ್ದ ಸರ್ಕಾರಿ ದಾಖಲೆಗಳು ಈಗ ಸಿಗುವ ಸಾಧ್ಯತೆಗಳಿವೆ. ಹಣಕಾಸಿನ ಸಂಸ್ಥೆಯ ದಾಖಲೆ ಮೇಲ್ವಿಚಾರಕರು ಹೆಚ್ಚು ಎಚ್ಚರದಿಂದ ಕೆಲಸ ಮಾಡುವುದು ಒಳ್ಳೆಯದು. ಅಪರಚಿತ ಊರಿಗೆ ಹೋಗಬಹುದು. ಅಲ್ಲಿಯ ಬಗ್ಗೆ ವಿವರಣೆ ಇರಲಿ.

-ಲೋಹಿತಶರ್ಮಾ ಇಡುವಾಣಿ

ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ