Horoscope Today: ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಮಂಗಳವಾರದ ರಾಶಿ ಭವಿಷ್ಯ

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಮಾರ್ಚ್ 28) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope Today: ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಮಂಗಳವಾರದ ರಾಶಿ ಭವಿಷ್ಯ
ನಿತ್ಯಭವಿಷ್ಯ
Follow us
ವಿವೇಕ ಬಿರಾದಾರ
|

Updated on: Mar 28, 2023 | 6:00 AM

ಮಂಗಳವಾರ ದೇವಿ ವಾರವಾಗಿದೆ. ಇಂದು ದೇವಿಯ ಆರಾಧನೆಗೆ ಬಹಳ ಶ್ರೇಷ್ಠವಾದ ದಿನ. ಪ್ರತಿ ದಿನ ಸೂರ್ಯ, ಚಂದ್ರ ಹುಟ್ಟುತ್ತಾರೆ. ಭೂಮಿ ತಿರುಗುತ್ತಿರುತ್ತೆ. ಪ್ರತಿಯೊಬ್ಬರ ಜೀವನವು ನಡೆಯುತ್ತಲೇ ಇರುತ್ತೆ. ದಿನ, ಸಮಯ ಎಲ್ಲರಿಗೂ ಒಂದೇ ಆದ್ರೂ ಜೀವನದಲ್ಲಿ ನಡೆಯುವ ಘಟನೆಗಳು ವಿಭಿನ್ನ. ಇದಕ್ಕೆ ಕಾರಣ ನಮ್ಮ ಜನ್ಮ ರಾಶಿಗಳಲ್ಲಾಗುವ ಬದಲಾವಣೆ. ನಮ್ಮ ಆರೋಗ್ಯ, ಯಶಸ್ಸು, ಸಂತೋಷ, ನೆಮ್ಮದಿ ಎಲ್ಲವೂ ನಮ್ಮ ರಾಶಿಗಳ ಮೇಲೆ ಅವಲಂಬಿತವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಕೆಲವರು ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗಾದರೆ ಇಂದಿನ (2023 ಮಾರ್ಚ್ 28) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭ ಎಂದು  ತಿಳಿದುಕೊಳ್ಳಿ.

ಸಿಂಹ: ಅಪರಿಚಿತ ಕರೆಗಳು ನಿಮ್ಮನ್ನು ಕೆಲಸಕ್ಕೆಂದು ಕರೆಯಲಿವೆ. ಸಂಪೂರ್ಣ ಮಾಹಿತಿಯ ಜೊತೆ ಕೆಲಸಕ್ಕೆ ಮುಂದುವರಿಯಿರಿ. ವ್ಯಕ್ತಿಗಳ ನಿಂದನೆಯನ್ನು ಮಾಡುವ ಕೆಲಸಕ್ಕೆ ವಿರಾಮವನ್ನು ಹೇಳಿ. ಇಲ್ಲವಾದರೆ ನಿಮಗೇ ಕಂಟಕವಾದೀತು. ನಿರಂತರವಾದ ಶ್ರಮದಿಂದ ಬಳಲಲಿದ್ದೀರಿ. ಪಿತ್ರಾರ್ಜಿತ ಆಸ್ತಿಯ ಅನುಭವಿಸುವ ಬಯಕೆಯನ್ನು ಇಟ್ಟಿಕೊಂಡಿದ್ದೀರಿ. ಸಮಯವನ್ನು ಸದುಪಯೋಗ ಮಾಡಿಕೊಳ್ಳುವ ಕಲೆಯನ್ನು ಕರಗತ ಮಾಡಿಕೊಳ್ಳಿ. ನಿಮ್ಮ ಬಂಧುಗಳಿಗೆ ನಿಮ್ಮ ಬಗ್ಗೆ ಕೆಲವು ವಿಚಾರಗಳು ತಿಳಿಯಲಿವೆ. ಅವಕಾಶಗಳು ನಿಮಗೆ ಸಿಗದೇ ಕೊರಗುವ ಸಾಧ್ಯತೆ ಇದೆ.

ಕನ್ಯಾ: ಗೃಹನಿರ್ಮಾಣಕ್ಕೆ ಮನೆಯವರ ಜೊತೆ ಚರ್ಚೆಗಳನ್ನು ಮಾಡಲಿದ್ದೀರಿ‌. ನಿಮ್ಮನ್ನು ಇಷ್ಟಪಡುವವರ ಜೊತೆ ನೀವು ಕೆಲವು ಸಮಯವಿರಬೇಕಾಗುತ್ತದೆ. ರಾಜಕೀಯ ವ್ಯಕ್ತಿಗಳಿಂದ ಪ್ರೇರಿತರಾಗಿ ಕಾರ್ಯವನ್ನು ಮಾಡುವಿರಿ. ನಿಮಗೆ ಇಂದು ಆದರ್ಶವ್ಯಕ್ತಿತ್ವವು ಸಿಗಲಿದ್ದು ಅವರನ್ನು ಅನುಸರಿಸುವ ಸಾಧ್ಯತೆ ಇದೆ. ಸರಳ ಸಮಾರಂಭದಲ್ಲಿ ಭಾಗಿಯಾಗಬಹುದು. ಆಹಾರದ ವ್ಯತ್ಯಾಸದಿಂದ ರೋಗಗಳು ಬರಬಹುದು. ಸಮಯವನ್ನು ಕಳೆಯಲು ಬಹಳ ಪ್ರಯಾಸಪಡಲಿದ್ದೀರಿ. ಧಾರ್ಮಿಕವಾದ ಕೆಲಸಗಳನ್ನು ಮಾಡುವ ಹಂಬಲವಿರಲಿದೆ. ಶ್ರೀರಾಮನ ಮಂದಿರಕ್ಕೆ ಹೋಗುವ ಅವಕಾಶವು ತಾನಾಗಿಯೇ ಸಿಗಲಿದೆ. ಹೋಗಿಬನ್ನಿ.

ತುಲಾ: ಸ್ನೇಹಿತರ ಜೊತೆಗಿನ ಅತಿಯಾದ ಸಲುಗೆ ದ್ವೇಷಕ್ಕೆ ಕಾರಣವಾಗಬಹುದಿ. ನಿಮ್ಮ ದಾಂಪತ್ಯದ‌ ಪ್ರಕರಣವು ನ್ಯಾಯಾಲಯದ ಮೆಟ್ಟಿಲೇರಿದ್ದು ಅದಕ್ಕಾಗಿ ನಿಮ್ಮ ಹಣವನ್ನು ಖರ್ಚು ಮಾಡಬೇಕಾಗಿ ಬರಬಹುದು. ಭೂಮಿಯ ವ್ಯವಹಾರದಲ್ಲಿ ನೀವು ಹಣವನ್ನು ಸಂಪಾದಿಸಲಿದ್ದೀರಿ. ನೀವಿಂದು ಒಬ್ಬೊಂಟಿಯಾಗಿ ರಮಣೀಯ ಸ್ಥಳಕ್ಕೆ ಹೋಗಲಿದ್ದೀರಿ. ನೆಮ್ಮದಿಯು ನಿಮಗೆ ಆಗಲಿದೆ. ನಿಮ್ಮ ವ್ಯಾಪಾರವನ್ನು ಬಹಳ ಜಾಣ್ಮೆಯಿಂದ ಮಾಡಬೇಕಿದೆ. ಮೋಸ ಹೋಗುವ ಸಾಧ್ಯತೆಯು ಇರಲಿದೆ. ಕೈಯ್ಯಲ್ಲಿರುವ ಹಣವನ್ನು ಪೂರ್ತಿಯಾಗಿ ಖಾಲಿ ಮಾಡಿಕೊಳ್ಳುವಿರಿ. ಗಣಪತಿಗೆ ಪ್ರಿಯವಾದ ಮೋದಕವನ್ನು ನೈವೇದ್ಯ ಮಾಡಿ.

ವೃಶ್ಚಿಕ: ಯಾವುದಾರೂ ಪ್ರಾಣಿಯಿಂದಲೋ ಕೀಟದಿಂದಲೋ ಕಚ್ಚಿಕೊಳ್ಳಲಿದ್ದೀರಿ. ಅದು ಊತವಾಗಿ ಅಂಗವನ್ನು ವಿಕಾರಗೊಳಿಸಲಿದೆ. ಇನ್ನೊಬ್ಬರಿಂದ ಅಪಘಾತವಾಗಬಹುದು. ಭಯದ ವಾತಾವರಣದಲ್ಲಿ ಇಂದು ಇರಲಿದ್ದೀರಿ. ವೈದ್ಯಕೀಯ ಕ್ಷೇತ್ರಕ್ಕೆ ಹೋಗಲು ಬಯಸುವವರು ತಮ್ಮ ನಿರ್ಧಾರವನ್ನು ಗಟ್ಟಿ ಮಾಡಳ್ಳಬೇಕಿದೆ. ಅಪರಿಚಿತರ ವಾಹನವನ್ನು ಹತ್ತಬೇಡಿ. ವಿನಾಕಾರಣ ಸಂತೋಷವಾಗಿ ಇರುವಿರಿ. ಕಛೇರಿಯ ಕೆಲಸವು ನಿಧಾನವಾಗಿ ಮೇಲಧಿಕಾರಿಗಳಿಂದ ಬೈಯಿಸಿಕೊಳ್ಳುವ ಸಾಧ್ಯತೆ ಇದೆ. ಇದರಿಂದ ಕೆಲಸದಲ್ಲಿ ನಿರಾಸಕ್ತಿಯೂ ಆಗಲಿದೆ.

-ಲೋಹಿತಶರ್ಮಾ ಇಡುವಾಣಿ

ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಈ ಸೀಸನ್​ನ ಕೊನೆಯ ನಾಮಿನೇಷನ್​ನಲ್ಲಿ ಮಂಜಣ್ಣ ಟಾರ್ಗೆಟ್
ಈ ಸೀಸನ್​ನ ಕೊನೆಯ ನಾಮಿನೇಷನ್​ನಲ್ಲಿ ಮಂಜಣ್ಣ ಟಾರ್ಗೆಟ್