ದಿನ, ಸಮಯ ಎಲ್ಲರಿಗೂ ಒಂದೇ ಆದ್ರೂ ಜೀವನದಲ್ಲಿ ನಡೆಯುವ ಘಟನೆಗಳು ವಿಭಿನ್ನ. ಇದಕ್ಕೆ ಕಾರಣ ನಮ್ಮ ಜನ್ಮ ರಾಶಿಗಳಲ್ಲಾಗುವ ಬದಲಾವಣೆ. ನಮ್ಮ ಆರೋಗ್ಯ, ಯಶಸ್ಸು, ಸಂತೋಷ, ನೆಮ್ಮದಿ ಎಲ್ಲವೂ ನಮ್ಮ ರಾಶಿಗಳ ಮೇಲೆ ಅವಲಂಬಿತವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಕೆಲವರು ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗಾದರೆ ಇಂದಿನ (2023 ಮಾರ್ಚ್ 29) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭ ಎಂದು ತಿಳಿದುಕೊಳ್ಳಿ.
ನಿತ್ಯ ಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ಮೀನ ಮಾಸ, ಮಹಾನಕ್ಷತ್ರ : ಉತ್ತರಾಭಾದ್ರ, ಮಾಸ : ಚೈತ್ರ, ಪಕ್ಷ : ಶುಕ್ಲ, ವಾರ : ಬುದೆ, ತಿಥಿ : ಅಷ್ಟಮೀ, ನಿತ್ಯನಕ್ಷತ್ರ : ಆರ್ದ್ರಾ, ಯೋಗ : ಶೋಭನ, ಕರಣ : ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 31 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 42 ನಿಮಿಷಕ್ಕೆ. ರಾಹು ಕಾಲ ಮಧ್ಯಾಹ್ನ 12:37 ರಿಂದ 02:09ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 08:03 ರಿಂದ 09:34ರ ವರೆಗೆ, ಗುಳಿಕ ಕಾಲ ಬೆಳಗ್ಗೆ 11:06 ರಿಂದ ಮಧ್ಯಾಹ್ನ 12:37ರ ವರೆಗೆ.
ಸಿಂಹ: ಇಂದು ಒಂದು ಕಡೆ ನಿಂತಲ್ಲಿ ನಿಲ್ಲಲಾರಿರಿ. ಅಧಿಕವಾದ ಓಡಾಟದಿಂದ ಆಯಾಸವು ಅತಿಯಾಗಲಿದೆ. ದಿನದ ಕೊನೆಯಲ್ಲಿ ಅನಾರೋಗ್ಯದಂತೆ ಇಂದು ಆಗಬಹುದು. ನಿಂತಲ್ಲೇ ಇರುವ ಬುದ್ಧಿ ಹಾಗೂ ಮನಸ್ಸಿನಿಂದ ಕೆಟ್ಟ ಆಲೋಚನೆಗಳು ಬರಲಿವೆ. ಸ್ವಾತಂತ್ರ್ಯವನ್ನು ಪಡೆಯಲು ಹವಣಿಸುವಿರಿ. ಮನೆಯಿಂದ ದೂರವಿರುವವರಿಗೆ ಮನೆಯ ನೆನಪಾಗಲಿದೆ. ಮನೆಯವರೊಂದಿಗೆ ದಿನವನ್ನು ಕಳೆಯುವಿರಿ. ಆಪ್ತವಲಯದಿಂದ ಆಘಾತಕಾರಿ ಸುದ್ದಿಯು ಬರಬಹುದು. ಅನಾರೋಗ್ಯವು ನಿಮ್ಮ ಅಲಕ್ಷ್ಯದಿಂದ ಹೆಚ್ಚಾಗಲಿದೆ. ಶಿವಾರಾಧನೆಯಿಂದ ಅನುಕೂಲವಾಗಲಿದೆ.
ಕನ್ಯಾ: ಹಣಸಂಪಾದನೆಯಲ್ಲಿ ಸ್ವಲ್ಪ ಹಿನ್ನಡೆಯಾಗಬಹುದು. ಹಿರಿಯರ, ಅನುಭವಿಗಳ ಮಾರ್ಗದರ್ಶನವನ್ನು ಪಡೆಯಿರಿ. ಶ್ರಮದ ಕೆಲಸವು ಆಯಾಸವನ್ನು ತರಲಿದೆ. ಅತಿಯಾದ ಆಲಸ್ಯದಿಂದ ನಿದ್ರಿಸುವ ಮನಸ್ಸಿನಲ್ಲಿ ಇರುವಿರಿ. ವಾಹನವು ನಾಷ್ಟವಾಗುವ ಸಾಧ್ಯತೆಯಿದೆ. ಯಾರೂ ನನಗೆ ಸಹಾಯಕ್ಕೆ ಬರಲಾರರು ಎಂಬ ಅನಾಥ ಪ್ರಜ್ಞೆಯನ್ನು ನೀವು ಹೊಂದುವಿರಿ. ಇಂದು ಕ್ಲಿಷ್ಟಕರವಾದ ಸನ್ನಿವೇಶದಲ್ಲಿ ಇರುವಿರಿ. ಸಮಾಧನಾದಿಂದ ಎದುರಿಸಬೇಕಾಗಬಹುದು. ಅಮೂಲ್ಯವಾದ ವಸ್ತುಗಳು ಕಳ್ಳರಿಂದ ಅಪಹೃತವಾದೀತು. ತಪ್ಪಿಸಿಕೊಳ್ಳಲು ಪ್ರಯತ್ನಿಸಿದರೂ ಕಷ್ಟವಾದೀತು. ಶನೈಶ್ಚರನ ಸ್ತೋತ್ರ ಮಾಡಿ.
ತುಲಾ: ನಿಮ್ಮ ಕಛೇರಿಯ ಕೆಲಸದಲ್ಲಿ ಅವಸರದ ನಿರ್ಧಾರವನ್ನು ತೆಗದುಕೊಳ್ಬೇಡಿ. ನಿಮ್ಮ ಮೇಲಧಿಕಾರಿಗಳ ಜೊತೆ ಚರ್ಚಿಸಿ. ಅವರ ಕಾರ್ಯಗಳನ್ನು ಅಚ್ಚುಕಟ್ಟಾಗಿ ಮಾಡಿಕೊಡಿ. ನಿಮ್ಮ ಆಲೋಚನೆ ಹಾಗೂ ಸಾಮರ್ಥ್ಯದಿಂದ ಉನ್ನತ ಹುದ್ದೆಗೆ ಹೋಗುವ ಅವಕಾಶವಿರಬಹುದು. ವ್ಯಕ್ತಿಗಳನ್ನು ದೂರುವ ಸ್ವಭಾವವನ್ನು ಬಿಡುವುದು ಒಳ್ಳೆಯದಲ್ಲ. ಆಂತರಿಕ ಕಲಹವು ಇಂದು ಜಗಜ್ಜಾಹಿರವು ಆಗಬಹುದು. ಬಾಡಿಗೆ ಮನೆಯಲ್ಲಿ ವಾಸವಿದ್ದರೆ ಮನೆಯನ್ನು ಬದಲಿಸುವ ಯೋಚನೆ ಮಾಡಬಹುದು ಇಂದು. ಗುರುವಿನ ದರ್ಶನವನ್ನು ಪಡೆದು ಬನ್ನಿ.
ವೃಶ್ಚಿಕ: ನಿಮ್ಮ ಮಾತಿನಿಂದ ಮನೆಯವರಲ್ಲಿ ಆತಂಕದ ವಾತಾವರಣವೂ ಸೃಷ್ಟಿಯಾಗಲಿದೆ. ಬೇಸರದ ಮನಸ್ಸನ್ನು ಮನೆಯವರಿಗೆ ತೋರಿಸಬೇಡಿ. ಅನಿರೀಕ್ಷಿತ ಜವಾಬ್ದಾರಿಗಳು ಸಿಕ್ಕಿ ಸ್ವಲ್ಪ ಒತ್ತಡವೆನಿಸಬಹುದು. ಮನೆಯಿಂದ ದೂರವಿರುವ ಆಲೋಚನೆಯನ್ನು ಮಾಡುವಿರಿ. ಇದರಿಂದ ಕುಟುಂಬವು ಬೇಸರಗೊಳ್ಳುವುದು. ಆದಾಯದ ಮಟ್ಟವು ಇಂದು ಅಧಿಕವಾಗಲಿದೆ. ಮನೆಯನ್ನು ಇಂದು ಬದಲಾಯಿಸುವಿರಿ. ಕೆಲಸಗಳು ನಿಧಾನಗತಿಯಲ್ಲಿ ಸಾಗಲಿವೆ. ಮನೆಗೆ ಬಂದವರನ್ನು ಗೌರವಿಸಿ, ಆದರಿಸಿ. ಕುಮಾರಸ್ವಾಮಿಯ ಕೃಪೆಯನ್ನು ಪಡೆದುಕೊಳ್ಳಿ.
-ಲೋಹಿತಶರ್ಮಾ, ಇಡುವಾಣಿ