AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nithya Bhavishya: ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ ಭವಿಷ್ಯ

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಮೇ 3) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Nithya Bhavishya: ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ ಭವಿಷ್ಯ
ಇಂದಿನ ರಾಶಿ ಭವಿಷ್ಯImage Credit source: DIANA LETO
Rakesh Nayak Manchi
|

Updated on: May 03, 2023 | 6:00 AM

Share

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಮೇ 3 ಬುಧವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ : ಭರಣೀ, ಮಾಸ : ವೈಶಾಖ, ಪಕ್ಷ : ಶುಕ್ಲ, ವಾರ : ಬುಧ, ತಿಥಿ : ತ್ರಯೋದಶೀ, ನಿತ್ಯನಕ್ಷತ್ರ : ಚಿತ್ರಾ, ಯೋಗ : ಹರ್ಷಣ, ಕರಣ : ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 10 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 48 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 03:39 ರಿಂದ 05:13ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 09:20 ರಿಂದ 10:55ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:29 ರಿಂದ 02:04ರ ವರೆಗೆ.

ಸಿಂಹ: ಕೆಲಸದಲ್ಲಿ ವಿಘ್ನವು ಬರುವ ಸಾಧ್ಯತೆ ಇದೆ. ವಿದೇಶಕ್ಕೆ ಹೋಗುವ ನಿಮ್ಮ‌ಕನಸು ನನಸಾಗಬಹುದು. ಹಿತಶತ್ರುಗಳು ನಿಮಗೆ ಯಶಸ್ಸು ಬಾರದಂತೆ ನೋಡಿಕೊಳ್ಳುವರು. ಸತ್ಯವನ್ನು ಮುಚ್ಚಿಡುವ ಪ್ರಯತ್ನವು ನಿಮ್ಮಿಂದ ನಡೆಯಲಿದೆ. ಅದು ಕುಟುಂಬಕ್ಕೆ ಗೊತ್ತಾಗಲಿದೆ. ನೇರ ಮಾತುಗಳಿಂದ ನಿಮ್ಮವರಿಗೆ ಬೇಸರವಾಗಬಹುದು. ಅತಿಯಾದ ಮಾತೂ ಕೇಳುಗರಿಗೆ ಕಿರಿಕಿರಿ ತರಿಸುವುದು. ಹೂಡಿಕೆಯ ವಿಚಾರದಲ್ಲಿ ನಿಮಗೆ ಸ್ಪಷ್ಟತೆ ಇಲ್ಲದೇ ಮಾಡಬೇಡಿ. ಮೋಸ ಹೋಗುವಿರಿ. ಸ್ವಲ್ಪ ವಿಳಂಬ ಮಾಡಿ. ಧ್ಯಾನದಿಂದ ಓಡುವ ಮನಸ್ಸನ್ನು ನಿಯಂತ್ರಿಸಬಹುದು. ಸ್ವಲ್ಪ ಕಾಲ ಸುಮ್ಮನೆ ಕುಳಿತುಕೊಳ್ಳುವುದು ಒಳ್ಳೆಯದು.

ಕನ್ಯಾ: ಮಕ್ಕಳು ನಿಮಗೆ ಖುಷಿಯನ್ನು ತಂದುಕೊಟ್ಟಾರು. ಬಂಧುಗಳ ವಿಯೋಗವಾಗಬಹುದು. ಸಾಲದ ಚಿಂತೆ ಬಹಳ ಕಾಡಲಿದೆ. ವಿವಾಹಕ್ಕೆ ಸಂಬಂಧಿಸಿದಂತೆ ಗೊಂದಲಗಳು ಉಂಟಾಗಬಹುದು. ಸ್ವಂತ ವಾಹನವನ್ನು ಚಲಾಯಿಸುವಾಗ ಅನ್ಯ ಯೋಚನೆಯಲ್ಲಿ ಮಗ್ನರಾಗಿ ಅಪಘಾತವಾಗಬಹುದು. ಶ್ರಮ ವಹಿಸಿ ಕೆಲಸ ಮಾಡುವವರಿಗೆ ಹೆಚ್ಚಿನ ಜವಾಬ್ದಾರಿಗಳು ಸಿಗಬಹುದು. ಸಮಾರಂಭಗಳಿಗೆ ಭೇಟಿ ನೀಡಲಿದ್ದೀರಿ. ವಿದ್ಯಾರ್ಥಿಗಳು ಬಹಳ ಜಾಡ್ಯರಾಗುವರು. ಸಂಗಾತಿಯ ಜೊತೆ ನಿಮಗಾದ ಸುಖ ಹಾಗೂ ದುಃಖವನ್ನು ಹಂಚಿಕೊಳ್ಳುವಿರಿ.

ತುಲಾ: ಇಂದು ನಿಮ್ಮ ಲೆಕ್ಕಾಚಾರಗಳು ಬುಡಮೇಲಾದೀತು. ಪ್ರಯಾಣ ಮಾಡುವ ಸಂದರ್ಭ ಬರಬಹುದು. ಯಾರದ್ದಾದರೂ ವಿಚಾರಕ್ಕೆ ಮೂಗು ತೂರಿಸಬೇಡಿ. ಜನ್ಮಾಂತರದ ಪುಣ್ಯವು ನಿಮ್ಮನ್ನು ಕಾಪಾಡಲಿದೆ. ಬಂಗಾರದ ಖರೀದಿಯನ್ನು ಮಾಡಲಿದ್ದೀರಿ. ಸಿಕ್ಕ ಉದ್ಯೋಗದಿಂದ ಅಸಮಾಧನವಿರಲಿದೆ. ಸದ್ಯ ಇದರಲ್ಲಿಯೇ ಮುಂದುವರಿಯುವುದು ಉತ್ತಮ. ಹಣ ಉಳಿತಾಯದ ಬಗ್ಗೆ ಗಮನವಿರಲಿ. ತಲೆನೋವು ಕಾಡೀತು ಇಂದು. ವಿದ್ಯಾರ್ಥಿಗಳು ಒಂದು ಹಂತದ ಓದನ್ನು ಮುಗಿಸಿ ಉದ್ಯೋಗಕ್ಕೆ ತೆರಳುವ ಆಲೋಚನೆ ಮಾಡುವರು.

ವೃಶ್ಚಿಕ: ಏಕಮುಖವಾದ ನಿರ್ಧಾರವನ್ನು ತೆಗದುಕೊಂಡು ನೀವು ಒಬ್ಬೊಟಿಯಾಗಬೇಕಾದೀತು. ಎಲ್ಲರ ಜೊತೆ ಚರ್ಚಿಸಿ ಅವರನ್ನು ತೆಗೆದುಕೊಂಡು ಹೋಗಿ. ಸಿಟ್ಟಿನಿಂದ ಏನನ್ನೂ ಸಾಧಿಸಲಾಗದು ಎಂಬ ಸತ್ಯವು ತಿಳಿಯಬಹುದು. ದಾಂಪತ್ಯದಲ್ಲಿನ ವಡವಾಗ್ನಿ ಸ್ಫೋಟವಾಗಬಹುದು. ಸ್ನೇಹಿತರ ಜೊತೆ ಹೆಚ್ವು ಸಮಯವನ್ನು ಹರಟೆಯ ಜೊತೆ ಕಳೆಯಬಹುದು. ಗಣ್ಯರು ನಿಮ್ಮನ್ನು ಭೇಟಿಯಾದಾರು. ನೀವು ಉದ್ಯಮವನ್ನು ನಡೆಸುತ್ತಿದ್ದರೆ ನಿಮಗೆ ಅವರಿಂದ ಸಹಾವಾಗಬಹುದು. ಇಂದು ನೀವು ಗೌರವವನ್ನು ಕೇಳಿ ಪಡೆದುಕೊಳ್ಳಲಿದ್ದೀರಿ. ನಿಮ್ಮವರು ಇದನ್ನು ಅಪಹಾಸ್ಯ ಮಾಡುವರು. ನಾಗಾರಾಧನೆಯನ್ನು ಮಾಡಿ.

-ಲೋಹಿತಶರ್ಮಾ ಇಡುವಾಣಿ

ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದು ಕಾಂಪೌಂಡ್ ಗೇಟ್​​ಗೆ ಗುದ್ದಿದ BMTC ಬಸ್
ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದು ಕಾಂಪೌಂಡ್ ಗೇಟ್​​ಗೆ ಗುದ್ದಿದ BMTC ಬಸ್
ಕೋಲಾರ: ಬೆಳ್ಳಂಬೆಳಗ್ಗೆ ಬಸ್, ಕಾರುಗಳ ನಡುವೆ ಭೀಕರ ಸರಣಿ ಅಪಘಾತ
ಕೋಲಾರ: ಬೆಳ್ಳಂಬೆಳಗ್ಗೆ ಬಸ್, ಕಾರುಗಳ ನಡುವೆ ಭೀಕರ ಸರಣಿ ಅಪಘಾತ
ಆಳಂದ ಮತಗಳ್ಳತನ: ಚಾರ್ಜ್​ಶೀಟ್ ಬಗ್ಗೆ ಸುಭಾಷ್ ಗುತ್ತೇದಾರ್ ಮಗ ಹೇಳಿದ್ದೇನು?
ಆಳಂದ ಮತಗಳ್ಳತನ: ಚಾರ್ಜ್​ಶೀಟ್ ಬಗ್ಗೆ ಸುಭಾಷ್ ಗುತ್ತೇದಾರ್ ಮಗ ಹೇಳಿದ್ದೇನು?
ರಾಶಿಕಾ ಕ್ಯಾಪ್ಟನ್ ಆಗಿದ್ದು ಇಷ್ಟ ಆಗಿಲ್ಲ ಎಂದ ಸೂರಜ್; ಆಪ್ತರಲ್ಲೇ ಕಿತ್ತಾಟ
ರಾಶಿಕಾ ಕ್ಯಾಪ್ಟನ್ ಆಗಿದ್ದು ಇಷ್ಟ ಆಗಿಲ್ಲ ಎಂದ ಸೂರಜ್; ಆಪ್ತರಲ್ಲೇ ಕಿತ್ತಾಟ
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ