AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nithya Bhavishya: ಇಂದಿನ ರಾಶಿ ಭವಿಷ್ಯ, ಈ ರಾಶಿಯ ಅವಿವಾಹಿತರಿಗೆ ವಿವಾಹವಾಗುವ ಸೂಚನೆಯು ಬರಲಿದೆ

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಮೇ 6) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Nithya Bhavishya: ಇಂದಿನ ರಾಶಿ ಭವಿಷ್ಯ, ಈ ರಾಶಿಯ ಅವಿವಾಹಿತರಿಗೆ ವಿವಾಹವಾಗುವ ಸೂಚನೆಯು ಬರಲಿದೆ
ಇಂದಿನ ರಾಶಿ ಭವಿಷ್ಯ
Rakesh Nayak Manchi
|

Updated on: May 06, 2023 | 6:00 AM

Share

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಮೇ 6 ಶನಿವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ : ಭರಣೀ, ಮಾಸ : ವೈಶಾಖ, ಪಕ್ಷ : ಶುಕ್ಲ, ವಾರ : ಕೃಷ್ಣ, ತಿಥಿ : ಅಮಾವಾಸ್ಯಾ, ನಿತ್ಯನಕ್ಷತ್ರ : ವಿಶಾಖಾ, ಯೋಗ : ವ್ಯತಿಪಾತ್, ಕರಣ : ಬಾಲವ, ಸೂರ್ಯೋದಯ ಬೆಳ್ಳಿಗೆ 06 ಗಂಟೆ 09 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 49 ನಿಮಿಷಕ್ಕೆ. ರಾಹು ಕಾಲ ಬೆಳಗ್ಗೆ 09:19 ರಿಂದ 10:54ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 02:04 ರಿಂದ 03:39ರ ವರೆಗೆ, ಗುಳಿಕ ಕಾಲ ಬೆಳಗ್ಗೆ 06:09 ರಿಂದ 07:44ರ ವರೆಗೆ.

ಸಿಂಹ: ನಿಮ್ಮವರೇ ನಿಮ್ಮ‌ಮೇಲೆ ಅಪವಾದವನ್ನು ಹೇರುವ ಪ್ರಯತ್ನವನ್ನು ಮಾಡಬಹುದು.‌ ನಿಸ್ವಾರ್ಥವಾಗಿ ಇಷ್ಟಪಡುವವರ ಮೇಲೆ‌ ಅನುಮಾನ ಬೇಡ. ನೀವು ನಡೆಯಬೇಕಾದ ದಾರಿಯು ಸರಿ ಇದ್ದು ಅತ್ತ ಸಾಗುವಿರಿ. ಮನೆಯ ಆಗುಹೋಗುಗಳ ಬಗ್ಗೆ ಹಿರಿಯರೊಡನೆ ಚರ್ಚೆ ನಡೆಸಿ ತೀರ್ಮಾನಕ್ಕೆ ಬನ್ನಿ. ನಕಾರಾತ್ಮಕ ಆಲೋಚನೆಗಳು ನಿಮ್ಮ ಗಮನದ ವ್ಯತ್ಯಾಸಕ್ಕೆ ಕಾರಣವಾಗಬಹುದು. ನಿಮ್ಮ ಸುತ್ತಲೂ ಉತ್ಸಾಹದಿಂದ ಇರುವಂತೆ ನೋಡಿಕೊಳ್ಳಿ. ಕೆಲವು ಚಟಗಳು ನಿಮ್ಮ ಓದಿಗೆ ಅಡ್ಡಿಯಾಗಬಹುದು. ಇಂದು ವೈದ್ಯಕೀಯ ವಿದ್ಯಾರ್ಥಿಗಳಿಗೆ ಚೆನ್ನಾಗಿರಬಹುದು. ನಿಮ್ಮ ಅಧ್ಯಯನದಿಂದ ನಿಮ್ಮನ್ನು ವಿಚಲಿತಗೊಳಿಸುವ ಅನಗತ್ಯ ವಾದಗಳನ್ನು ತಪ್ಪಿಸಿ.

ಕನ್ಯಾ: ಅವಿವಾಹಿತರಿಗೆ ವಿವಾಹವಾಗುವ ಸೂಚನೆಯು ಬರಲಿದೆ. ಮನೆಯಲ್ಲಿ ದೇವಕಾರ್ಯಗಳು ನಡೆಯಲಿದೆ. ವ್ಯಕ್ತಿಯು ಅವನ ಯೋಗ್ಯತೆಗೆ ಅನುಸಾರವಾಗಿ ಅಭಿವೃದ್ಧಿಯನ್ನು ಹೊಂದುವನು. ಎಲ್ಲ ಬಗೆಯ ಬೆಂಬಲ ಹಾಗೂ ಸಹಕಾರಗಳನ್ನು ಜನರು ಕೊಡಬಹುದು. ಒಂದು ದೊಡ್ಡ ಕೆಲಸವನ್ನು ಇಂದು ಪೂರ್ಣಗೊಳಿಸುವಿರಿ. ನೀವು ಇಂದು ತುಂಬಾ ಸಂತೋಷದಿಂದ ಇರುವಿರಿ. ಹೊಸ ಯೋಜನೆಗಳನ್ನು ಪ್ರಾರಂಭಿಸುವ ಸಮಯವು ಇದಾಗಿಲ್ಲ. ದೀರ್ಘಕಾಲ ಸ್ನೇಹಿತರು ವಿವಾಹಕ್ಕೆ ಹಿರಿಯರ ಅನುಮತಿಯನ್ನು ಪಡೆಕೊಳ್ಳಿ. ದಿನದ ಕೆಲವು ಸಮಯದಲ್ಲಿ ನಿಮಗೆ ಉತ್ತಮ ಜೀವನದ ಸೂಚನೆ ಸಿಗಲಿದೆ.

ತುಲಾ: ಇಂದು ನೀವು ಉದ್ವೇಗಕ್ಕೆ ಒಳಗಾಗಲು ಅನೇಕ ಸಂದರ್ಭಗಳು ಬರಬಹುದು. ತಾಳ್ಮೆಯಿಂದಲೇ ಇರಿ. ಹಣಕಾಸಿನ ಒತ್ತಡದಿಂದ ಮನೆಯಲ್ಲಿ ಅಶಾಂತಿಯು ಉಂಟಾಗಬಹುದು. ಮನಸ್ಸನ್ನು ಹಿಡಿತದಲ್ಲಿರಿಸಿಕೊಳ್ಳಿ. ತಂತ್ರಜ್ಞಾನ ಕ್ಷೇತ್ರದಲ್ಲಿ ನೀವು ಸಾಧ್ಯವಾದಷ್ಟು ಜ್ಞಾನವನ್ನು ಪಡೆಯಲು ಪ್ರಯತ್ನಿಸುವಿರಿ. ನಿಮ್ಮ ಆರೋಗ್ಯವು ಸುಧಾರಿಸಿಬಹುದು. ಇದು ನಿಮಗೆ ಸಂತೋಷವನ್ನು ನೀಡುತ್ತದೆ. ಆಹಾರದ ಮೇಲೆ ನಿಗಾ ಇಟ್ಟುಕೊಳ್ಳಿ. ಉಪಯೋಗುವ ಕೆಲಸಕ್ಕೆ ವೆಚ್ಚ ಮಾಡಿ. ಹಣದ ದುಂದುವೆಚ್ಚ ಬೇಡ. ಭೂಮಿಯಿಂದ ಲಾಭವನ್ನು ಗಳಿಸುವಿರಿ. ವ್ಯವಸಾಯಗಾರರಿಗೆ ಧನ ಲಾಭವು ಆಗಬಹುದು.

ವೃಶ್ಚಿಕ: ಇಂದು ಕೆಲಸವನ್ನು ಕಂಡು ಮೇಲಧಿಕಾರಿಗಳು ನಿಮ್ಮನ್ನು ಪ್ರಶಂಸಿಸಿಯಾರು. ಪ್ರವಾಸವನ್ನು ಮಾಡುವ ನಿರ್ಧಾರಕ್ಕೆ ಬರಲಿದ್ದೀರಿ. ಮನಸ್ಸಿಗೆ ಖುಷಿಯಾಗುವಂಥ ಕೆಲಸಗಳನ್ನು ಮಾಡಲಿದ್ದೀರಿ.‌ ಅಪರಿಚಿತರು ನಿಮ್ಮ ಹಾದಿಯನ್ನು ತಪ್ಪಿಸಬಹುದು. ಆರ್ಥಿಕ ಲಾಭವು ನಿಮಗೆ ಗೌರವವನ್ನು ನೀಡಬಹುದು. ವ್ಯಾಪಾರಸ್ಥರು ಆಪ್ತರ ಸಲಹೆಯನ್ನು ಸ್ವೀಕರಿಸಿ. ಇಂದು ನಿಮ್ಮ ಕೆಲಸವು ಅಡೆತಡೆಗಳಿಲ್ಲದೆ ಮುಂದೆ ಸಾಗುತ್ತದೆ. ಸರ್ಕಾರಿ ನೌಕರರಿಗೂ ಈಗ ಶುಭವಾಗಲಿದೆ. ವಿದೇಶ ಪ್ರಯಾಣದ ಸಂದರ್ಭವೂ ಬರಬಹುದು. ಆರೋಗ್ಯ ಉತ್ತಮವಾಗಿರಲಿದೆ. ಮನಸ್ಸಿಗೆ ಹಿತವಾದ ಸಂಗತಿಗಳು ನಡೆಯಲಿದೆ.

-ಲೋಹಿತಶರ್ಮಾ ಇಡುವಾಣಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ