AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Horoscope: ಧನು, ಮಕರ, ಕುಂಭ, ಮೀನಾ ರಾಶಿಯವರ ಏ.01ರ ರಾಶಿ ಭವಿಷ್ಯ ಹೀಗಿದೆ

ನೀವು ಧನು, ಮಕರ, ಕುಂಭ, ಮೀನಾ ರಾಶಿಯವರೇ? ಹಾಗಿದ್ದರೆ ಇಂದಿನ (2023 ಏಪ್ರಿಲ್​ 01) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Daily Horoscope: ಧನು, ಮಕರ, ಕುಂಭ, ಮೀನಾ ರಾಶಿಯವರ ಏ.01ರ ರಾಶಿ ಭವಿಷ್ಯ ಹೀಗಿದೆ
ನಿತ್ಯಭವಿಷ್ಯ
ವಿವೇಕ ಬಿರಾದಾರ
|

Updated on: Apr 01, 2023 | 6:15 AM

Share

ದಿನ, ಸಮಯ ಎಲ್ಲರಿಗೂ ಒಂದೇ ಆದ್ರೂ ಜೀವನದಲ್ಲಿ ನಡೆಯುವ ಘಟನೆಗಳು ವಿಭಿನ್ನ. ಇದಕ್ಕೆ ಕಾರಣ ನಮ್ಮ ಜನ್ಮ ರಾಶಿಗಳಲ್ಲಾಗುವ ಬದಲಾವಣೆ. ನಮ್ಮ ಆರೋಗ್ಯ, ಯಶಸ್ಸು, ಸಂತೋಷ, ನೆಮ್ಮದಿ ಎಲ್ಲವೂ ನಮ್ಮ ರಾಶಿಗಳ ಮೇಲೆ ಅವಲಂಬಿತವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಕೆಲವರು ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗಾದರೆ ಇಂದಿನ (2023 ಏಪ್ರಿಲ್​ 01) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭ ಎಂದು  ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ಮೀನ ಮಾಸ, ಮಹಾನಕ್ಷತ್ರ : ರೇವತಿ, ಮಾಸ : ಚೈತ್ರ, ಪಕ್ಷ : ಶುಕ್ಲ, ವಾರ : ಶನಿ, ತಿಥಿ : ಏಕಾದಶೀ, ನಿತ್ಯನಕ್ಷತ್ರ : ಆಶ್ಲೇಷ, ಯೋಗ : ಧೃತಿ, ಕರಣ : ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 29 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 43 ನಿಮಿಷಕ್ಕೆ. ರಾಹು ಕಾಲ 09:33 ರಿಂದ 11:05ರ ವರೆಗೆ, ಯಮಘಂಡ ಕಾಲ 02:08 ರಿಂದ 03:40ರ ವರೆಗೆ, ಗುಳಿಕ ಕಾಲ ಬೆಳಗ್ಗೆ 06:29ರಿಂದ 08 :01ರ ವರೆಗೆ.

ಧನು: ಇಂದು ಬಹಳ ದಿನಗಳಿಂದ ದೋಲಾಯಮಾನವಾಗಿದ್ದ ಕಂಕಣಭಾಗ್ಯವು ಇಂದು ಸ್ಪಷ್ಟ ನಿರ್ಧಾರಕ್ಕೆ ಬರಲಿದೆ. ರಾಜಕೀಯ ಕುಟಂಬದ ವ್ಯಕ್ತಿಯನ್ನು ನೀವು ಭೇಟಿ ಮಾಡಲಿದ್ದು ಕೆಲವು ಅನುಕೂಲತೆಗಳು ಆಗಲಿವೆ. ಅತಿಯಾದ ಆತ್ಮವಿಶ್ವಾಸದಿಂದ ನಿಮ್ಮ ಕೆಲಸವನ್ನು ಪೂರೈಸುವಿರಿ. ಸ್ನೇಹಿತರ ಆಗಮನವು ಸಂಕಟವನ್ನು ತಂದರೂ ಹೇಳಿಕೊಳ್ಳಲಾಗದ ಸ್ಥಿತಿಯಲ್ಲಿ ಇರುವುದಿಲ್ಲ. ಸ್ವಾವಲಂಬಿಗಳಾಗಿ ಬದುಕಬೇಕು ಎನ್ನುವುದು ನಿಮ್ಮ ದೃಢವಾದ ನಂಬುಗೆಯಾಗಿದೆ. ಯಂತ್ರೋದ್ಯಮವನ್ನು ನಡೆಸುತ್ತಿದ್ದರೆ ನಿಮಗೆ ಲಾಭವಿದೆ. ವೈವಾಹಿಕ ಜೀವನವು ನಿಮಗೆ ಬೇಸರವೆನಿಸಬಹುದು.

ಮಕರ: ನೀವು ಇಂದು ಹೊಸ ಕೆಲಸವೊಂದನ್ನು ಆರಂಭಿಸಲು ಯೋಚಿಸಿದ್ದೀರಿ. ನಿಮ್ಮವರೇ ನಕಾರಾತ್ಮಕ ಮಾತುಗಳನ್ನು ಹೇಳಿ ದಾರಿಬತಪ್ಪಿಸುವರು ಅಥವಾ ಅವಮಾನ ಮಾಡುವರು. ನೀವು ವೈದ್ಯವೃತ್ತಿಯಲ್ಲಿ ನಿರತರಾಗಿದ್ದರೆ ಇಂದು ಅತಿಯಾದ ಮಾನಸಿಕ ಒತ್ತಡದಲ್ಲಿ ಇರುವಿರಿ. ಸಂಪತ್ತನ್ನು ಅಪರಿಚಿತ ಸ್ಥಳದಲ್ಲಿ ಇಟ್ಟು ಕಳೆದುಕೊಳ್ಳುವಿರಿ. ಆರೋಗ್ಯದ ಬಗ್ಗೆ ಜಾಗರೂಕರಾಗಿರಿ. ಸಹೋದರಿಂದ ಸಂಪತ್ತಿನ ಸಹಾಯವು ಸಿಗಲಿದೆ. ದ್ವೇಷವನ್ನು ಬಿಟ್ಟು ಮುಂದುವರಿಯುವುದು ಒಳ್ಳೆಯದು.

ಕುಂಭ: ಇಂದು ಬಹಳ ಸುಖವಾಗಿರುವ ದಿನ. ಉತ್ತಮ ಭೋಜನ ಸಿಗಲಿದೆ. ನಿಮಗೆ ಪ್ರಶಂಸೆಗಳು ಸಿಗಲಿವೆ. ಯಾವುದನ್ನೂ ಪರಿಶೀಲಿಸದೇ ಸ್ವೀಕರಿಸಬೇಡಿ. ಅನಿರೀಕ್ಷಿತ ಹಣವೂ ಸಿಗಬಹುದು. ಆತ್ಮಗೌರವಕ್ಕೆ ಧಕ್ಕೆ ಬರುವ ಕಾರ್ಯಗಳನ್ನು ಬಿಡುವಿರಿ. ನಿಮ್ಮ ತಲೆಯಲ್ಲಿ ಇರುವ ನೂರಾರು ಯೋಜನೆಯನ್ನು ಹೇಳಲು ಹೋಗಿ ನಿಮ್ಮ ಮೌಲ್ಯವನ್ನು ಕಳೆದುಕೊಳ್ಳುವಿರಿ. ವಿದ್ಯಾರ್ಥಿಗಳು ಅಭ್ಯಾಸದತ್ತ ಗಮನಹರಿಸಬೇಕು. ಸ್ನೇಹಿತರ ಸಹವಾಸದಿಂದ ದುಶ್ಚಟಕ್ಕೆ ಬೀಳುವ ಸಾಧ್ಯತೆ ಇದೆ. ಆದಷ್ಟು ಎಚ್ಚರಿಕೆಯಿಂದ ಇರಿ.

ಮೀನ: ಇಂದು ನಿಮಗೆ ಹಿರಿಯರ, ಗುರುಸಮಾನರ ಭೇಟಿಯಾಗಲಿದೆ. ಅವರಿಂದ ಶುಭಾಶಂಸನೆ ಸಿಗಲಿದೆ. ಅತಿಯಾಗಿ ಉದ್ಯೋಗವನ್ನು ಬದಲಾಯಿಸುವುದು ಸೂಕ್ತವಲ್ಲ. ಅವಮಾನವಾಗು ಸಂದರ್ಭವಿದ್ದರೆ ಅಲ್ಲಿಂದ ದೂರನಡೆಯಿರಿ.‌ ನಿಮ್ಮ ವ್ಯಕ್ತಿತ್ವವನ್ನು ಹುಡುಕಿಕೊಂಡು ಬರುವವರಿದ್ದಾರೆ. ಒಳ್ಳೆಯ ಕೆಲಸವು ಆಗಿಲ್ಲ ಎಂಬ ನೋವು ಇರಲಿದೆ. ತಾಳ್ಮೆಯನ್ನು ಇಟ್ಟುಕೊಂಡು ವ್ಯವಹರಿಸವುದು ಉತ್ತಮ.‌ ಮನಃಶಾಂತಿಯನ್ನು ಬಯಸಿ ಪ್ರಶಾಂತವಾದ ಪ್ರದೇಶಕ್ಕೆ ಹೋಗಬಹುದು.

-ಲೋಹಿತಶರ್ಮಾ ಇಡುವಾಣಿ

‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ
ಶರಣಗೌಡ ಕಂದ್ಕೂರ್ ನೆರವಿಗೆ ಧಾವಿಸಿದ ಜೆಡಿಎಸ್ ಮತ್ತು ಬಿಜೆಪಿ ಶಾಸಕರು
ಶರಣಗೌಡ ಕಂದ್ಕೂರ್ ನೆರವಿಗೆ ಧಾವಿಸಿದ ಜೆಡಿಎಸ್ ಮತ್ತು ಬಿಜೆಪಿ ಶಾಸಕರು
ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ
ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ
ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ತಾವು ಮಾಡಿದ ಶಪಥ ರಿವೀಲ್ ಮಾಡಿದ ವೀರಕಪು
ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ತಾವು ಮಾಡಿದ ಶಪಥ ರಿವೀಲ್ ಮಾಡಿದ ವೀರಕಪು
ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಫಾಲ್ಸ್, ವಿಡಿಯೋ ನೋಡಿ
ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಫಾಲ್ಸ್, ವಿಡಿಯೋ ನೋಡಿ
ತಿಮರೋಡಿಯನ್ನು ಬಂಧಿಸುವ ಮುನ್ನ ಪೊಲೀಸ್ ಮತ್ತು ವಕೀಲರ ನಡುವೆ ವಾಗ್ವಾದ
ತಿಮರೋಡಿಯನ್ನು ಬಂಧಿಸುವ ಮುನ್ನ ಪೊಲೀಸ್ ಮತ್ತು ವಕೀಲರ ನಡುವೆ ವಾಗ್ವಾದ
ಮಹೇಶ್ ತಿಮರೋಡಿ ಮನೇಲಿ 4 ದಿನ ಇದ್ದೆ, ಊಟ ಮಾತ್ರ ಹಾಕಿದ್ದು: ಸುಜಾತ ಭಟ್
ಮಹೇಶ್ ತಿಮರೋಡಿ ಮನೇಲಿ 4 ದಿನ ಇದ್ದೆ, ಊಟ ಮಾತ್ರ ಹಾಕಿದ್ದು: ಸುಜಾತ ಭಟ್
ವೈಷ್ಣೋದೇವಿ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ ಅಪಘಾತ, ಓರ್ವ ಸಾವು
ವೈಷ್ಣೋದೇವಿ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ ಅಪಘಾತ, ಓರ್ವ ಸಾವು