Daily Horoscope: ಧನು, ಮಕರ, ಕುಂಭ, ಮೀನ ರಾಶಿಯವರ ಏಪ್ರಿಲ್​ 11ರ ಭವಿಷ್ಯ ಹೀಗಿದೆ

|

Updated on: Apr 11, 2023 | 6:15 AM

ನೀವು ಧನು, ಮಕರ, ಕುಂಭ, ಮೀನ ರಾಶಿಯವರೇ? ಹಾಗಿದ್ದರೆ ಇಂದಿನ (2023 ಏಪ್ರಿಲ್​ 11) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Daily Horoscope: ಧನು, ಮಕರ, ಕುಂಭ, ಮೀನ ರಾಶಿಯವರ ಏಪ್ರಿಲ್​ 11ರ ಭವಿಷ್ಯ ಹೀಗಿದೆ
ಪ್ರಾತಿನಿಧಿಕ ಚಿತ್ರ
Image Credit source: maharashtratimes.com
Follow us on

ಶುಭೋದಯ ಓದುಗರೇ. ಪ್ರತಿಯೊಬ್ಬರ ಜೀವನದಲ್ಲಿ ರಾಶಿ ಭವಿಷ್ಯ ವಿಭಿನ್ನವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದ್ರೆ ಇಂದಿನ (2023 ಏಪ್ರಿಲ್​ 11) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ತಿಳಿದುಕೊಳ್ಳಿ.

ಧನುಸ್ಸು: ಮಕ್ಕಳ ಮುಂದಿನ ವಿದ್ಯಾಭ್ಯಾಸದ ಚಿಂತೆ ಇರಲಿದೆ. ಒತ್ತಾಯ ಪೂರ್ವಕವಾಗಿ ನಿಮಗೆ ಇಚ್ಛೆಯಿರುವ ವಿಷಯವನ್ನು ಹೇರಬೇಡಿ. ಆಯ್ಕೆ ಮಾಡಲು ಅವರಿಗೆ ಸ್ವಾತಂತ್ರ್ಯವಿರಲಿ. ದೊಡ್ಡ ಸಮಾರಂಭಕ್ಕೆ ಭೇಟಿ ಕೊಡುವಿರಿ. ಅನವಶ್ಯಕವಾಗಿ ಖರೀದಿಸಿದ ವಿದ್ಯುದುಪಕರಣಗಳಿಂದ ಹಣವ್ಯಯವಾಗಲಿದೆ. ನಿಮ್ಮ ಬಗ್ಗೆ ನಿಮಗಾಗದವರು ಅಫ್ರಚಾರವನ್ನು ಮಾಡುವರು. ಇದರಿಂದ ನಿಮಗೆ ನಿರಾಸೆಯಾಗಲಿದೆ. ಬಹಳ ಬೇಸರಗೊಳ್ಳುವಿರಿ. ಹಣವೂ ನಷ್ಟ ಶ್ರಮವೂ ನಷ್ಟವಾಗಿ ದುಃಖಿಸುವಿರಿ.

ಮಕರ: ವಿಧಿಯನ್ನು ಹಳಿದು ನಿಮಗೆ ಸಮಾಧಾನವನ್ನು ತಂದುಕೊಳ್ಳುವಿರಿ. ನಿಮ್ಮ ಮಾತುಗಳಿಂದ ಕೆಲವರು ಪ್ರೇರಣೆ ಪಡೆದರೆ, ಕೆಲವರು ನಿಮ್ಮ ಮಾತನ್ನೇ ಆಡಿಕೊಳ್ಳುವರು. ವಿದ್ಯಾರ್ಥಿಗಳು ವಿದ್ಯಾಭ್ಯಾಸದಲ್ಲಿ ತಲ್ಲೀನರಾಗಿ ಹೊರ ಜಗತ್ತನ್ನು ಮರೆಯುವರು. ಸ್ವಲ್ಪ ವಿಶ್ರಾಂತಿಯನ್ನು ಕೊಟ್ಟು ಓದುವುದು ಯೋಗ್ಯ. ಮನೆ ಮತ್ತು ಉದ್ಯೋಗವೆಂದು ಅಲೆಯುತ್ತಿದ್ದರೆ ಸ್ವಲ್ಪ ದಿನ ವಿರಾಮ ಪಡೆದು ಆಮೇಲೆ ಹೋಗಿ. ಕೆಲಸವು ಚೆನ್ನಾಗಿ, ಉತ್ಸಾಹದಿಂದ ನಡೆಯುವುದು. ನಿಮ್ಮ ವಿರುದ್ಧ ಮಾತನಾಡಿದವರಿಗೆ ಇಂದು ಕಾಲವೇ ಉತ್ತರಿಸುವುದು.

ಕುಂಭ: ಮನಸ್ಸಿನಲ್ಲಿ ನಕಾರಾತ್ಮಕ ಭಾವನೆಗಳನ್ನು ತೆಗೆದುಹಾಕಿ. ಧನಾತ್ಮಕ ಅಂಶಗಳನ್ನು ಹುಡುಕಿ ಮುನ್ನಡೆಯಿರಿ. ದಾರಿ ತಾನಾಗಿಯೇ ತೆರದುಕೊಳ್ಳುವುದು. ಆಸ್ತಿಯ ವಿಚಾರವಾಗಿ ಮಾತುಗಳು ನಡೆಯುವುದು. ನಿಮ್ಮ ಮನಸ್ಸಿಗೆ ತೋಚಿದ್ದನ್ನು ಮಾಡಿ, ಆದರೆ ಇನ್ನೊಬ್ಬರಿಗೆ ತೊಂದರೆಯಾಗದಂತೆ ನೋಡಿಕೊಳ್ಳಿ. ಕಲಾವಿದರಿಗೆ ತಿಳಿವಳಿಕಯಿಂದ‌ ಕೂಡಿದ ನಿಮ್ಮ ಜೀವನ ಸುಗಮವಾಗಲಿದೆ. ನೀವು ಸಹಾಯ ಮಾಡುತ್ತೀರೆಂಬ ನಂಬಿಕೆಯಿಂದ ಜನರು ನಿಮ್ಮ ಬಳಿ ಕೇಳುವರು. ಶನೈಶ್ಚರನು ನಿಮಗೆ ಇಂತಹ ಸಂದರ್ಭವನ್ನೂ ತರುವನು. ಅದನ್ನು ಸರಿಯಾಗಿ ನಿಭಾಯಿಸಿ.

ಮೀನ: ಭವಿಷ್ಯಕ್ಕೆ ಕೂಡಿಟ್ಟ ಹಣವು ಇಂದು ನಿಮ್ಮ ಸಮಯಕ್ಕೆ ಸರಿಯಾಗಿ ಸಿಗುವುದು. ನಿಮ್ಮಿಂದ ಪ್ರೀತಿಯನ್ನು ಬಯಸುವವರಿಗೆ ಪ್ರೀತಿಯನ್ನು ಕೊಡಿ. ನಿರೀಕ್ಷಿತ ವ್ಯಕ್ತಿಗಳ ಭೇಟಿಯಿಂದ ಸಂತಸವಾಗಲಿದೆ. ಅವರ ಜೊತೆ ನಿಮ್ಮ ಕನಸನ್ನು ಹಂಚಿಕೊಳ್ಳುವಿರಿ. ನಿಮ್ಮ ಕೆಲಸವು ನಿಧಾನವಾಗಿ ಸಾಗುವುದು. ಇಂದಿನ ಸನ್ನಿವೇಶವನ್ನು ನಿಭಾಯಿಸುವ ಸಾಮರ್ಥ್ಯವು ಕಂಡು ಸಹೋದ್ಯೋಗಿಗಳು ಆಶ್ಚರ್ಯಪಡುವರು. ವಿದ್ಯಾಭ್ಯಾಸವನ್ನು ಮುಗಿಸಿದ ನಿಮಗೆ ಕೆಲಸವೂ ಶೀಘ್ರವಾಗಿ ಸಿಗಲಿದೆ.

-ಲೋಹಿತಶರ್ಮಾ ಇಡುವಾಣಿ