Daily Horoscope: ಈ ರಾಶಿಯವರು ಇಂದು ಪ್ರೀತಿ ಪ್ರೇಮದ ಸೆಳೆತಕ್ಕೆ ಸಿಲುಕುವ ಸಾಧ್ಯತೆ ಇದೆ

ನೀವು ಧನು, ಮಕರ, ಕುಂಭ, ಮೀನ ರಾಶಿಯವರೇ? ಹಾಗಿದ್ದರೆ ಇಂದಿನ (2023 ಏಪ್ರಿಲ್​ 17) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Daily Horoscope: ಈ ರಾಶಿಯವರು ಇಂದು ಪ್ರೀತಿ ಪ್ರೇಮದ ಸೆಳೆತಕ್ಕೆ ಸಿಲುಕುವ ಸಾಧ್ಯತೆ ಇದೆ
ಇಂದಿನ ರಾಶಿ ಭವಿಷ್ಯImage Credit source: istock
Follow us
Rakesh Nayak Manchi
|

Updated on: Apr 17, 2023 | 7:30 AM

ಶುಭೋದಯ ಓದುಗರೇ. ಪ್ರತಿಯೊಬ್ಬರ ಜೀವನದಲ್ಲಿ ರಾಶಿ ಭವಿಷ್ಯ ವಿಭಿನ್ನವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದ್ರೆ ಇಂದಿನ (2023 ಏಪ್ರಿಲ್​ 17) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ: ಅಶ್ವನೀ ಮಾಸ: ಚೈತ್ರ, ಪಕ್ಷ: ಕೃಷ್ಣ, ವಾರ: ರವಿ, ತಿಥಿ: ಏಕಾದಶೀ, ನಿತ್ಯನಕ್ಷತ್ರ : ಶ್ರವಣಾ, ಯೋಗ: ಶುಭ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06-18 ಕ್ಕೆ, ಸೂರ್ಯಾಸ್ತ ಸಂಜೆ 06-44 ಕ್ಕೆ, ರಾಹು ಕಾಲ 07:52 – 09:25ರ ವರೆಗೆ, ಯಮಘಂಡ ಕಾಲ 10:59 – 12:32ರ ವರೆಗೆ, ಗುಳಿಕ ಕಾಲ 02:05 – 03:39 ರವರೆಗೆ.

ಧನುಸ್ಸು: ಸಂಶೋಧಕರಿಗೆ ಸಂಶೋಧನೆಯಲ್ಲಿ ಉತ್ತಮ ಫಲಿತಾಂಶ ದೊರೆಯುವ ಸಾಧ್ಯತೆಗಳಿವೆ. ಉದ್ಯೋಗದ ನಿಮಿತ್ತ ದೂರದ ಸ್ಥಳಕ್ಕೆ ಹೋಗಿ ಬರುವ ಸಾಧ್ಯತೆ ಇದೆ. ವೃತ್ತಿಯಲ್ಲಿ ಇಂದು ನಾನಾ ಸಮಸ್ಯೆಗಳು ಎದುರಾದರೂ ಅದನ್ನು ಧೈರ್ಯದಿಂದ ಎದುರಿಸಿ ಗೆಲ್ಲುವಿರಿ. ನಿಮ್ಮ ಚಾಣಾಕ್ಷದ ನಿರ್ಧಾರಗಳು ನಿಮ್ಮನ್ನು ಗುಂಪಿನಲ್ಲಿ ತೂಕದ ವ್ಯಕ್ತಿಯನ್ನಾಗಿಸುತ್ತದೆ. ಉದ್ಯೋಗದಲ್ಲಿ ತಾಂತ್ರಿಕ ಪರಿಣತರಿಗೆ ಹೆಚ್ಚಿನ ಸ್ಥಾನ ದೊರೆತು ಸಂತಸವಾಗುತ್ತದೆ. ಸಂಗಾತಿಯ ಆಸ್ತಿ ಬಳುವಳಿಯಾಗಿ ಬರಬಹುದು.

ಮಕರ: ತಂತ್ರಜ್ಞರಿಗೆ ಹೊಸ ಹೊಸ ಅವಕಾಶಗಳು ದೊರೆಯುವ ಸಾಧ್ಯತೆ ಇದೆ. ದಂತ ವೈದ್ಯರಿಗೆ ಹೆಚ್ಚು ಅನುಕೂಲವಿರುತ್ತದೆ. ಬಂಧುಗಳ ಸಹಕಾರ ನಿಮಗೆ ಹೆಚ್ಚಾಗಿ ದೊರೆಯುತ್ತದೆ. ಆಸ್ತಿ ವಿಚಾರದಲ್ಲಿ ಸ್ವಲ್ಪಮಟ್ಟಿನ ಹಿನ್ನಡೆ ಇರುತ್ತದೆ. ಕ್ರೀಡಾಪಟುಗಳಿಗೆ ನಿರೀಕ್ಷಿತ ಮಟ್ಟಕ್ಕಿಂತ ಹೆಚ್ಚಿನ ಸೌಲಭ್ಯ ದೊರೆಯುತ್ತದೆ. ಪ್ರೀತಿ ಪ್ರೇಮದ ಸೆಳೆತಕ್ಕೆ ಸಿಲುಕುವ ಸಾಧ್ಯತೆ ಇದೆ. ಸರ್ಕಾರಿ ವ್ಯವಹಾರಗಳಲ್ಲಿ ಸ್ವಲ್ಪಮಟ್ಟಿನ ಹಿನ್ನಡೆ ಇರುತ್ತದೆ. ತಂದೆಯಿಂದ ನಿಮ್ಮ ವ್ಯವಹಾರಗಳಿಗೆ ಸಹಕಾರ, ಸಹಾಯ ದೊರೆಯುತ್ತದೆ. ವೃತ್ತಿಯಲ್ಲಿ ಯಾವುದೇ ರೀತಿ ವ್ಯತ್ಯಾಸವಿಲ್ಲ. ಒಂದೇ ರೀತಿಯಲ್ಲಿ ಕೆಲಸವು ಸಾಗುವುದು. ನಿಮ್ಮ ಉದ್ಯೋಗವನ್ನು ಸುಧಾರಿಸಲು ಮತ್ತು ಸರಿದಾರಿಗೆ ತರಲು ಸಾಕಷ್ಟು ಅವಕಾಶಗಳು ಒದಗುತ್ತವೆ.

ಕುಂಭ: ಯುವಕರು ಪ್ರಯಾಣದ ಸಮಯದಲ್ಲಿ ಆಲಸ್ಯದಿಂದ ಅಮೂಲ್ಯ ವಸ್ತುಗಳನ್ನು ಕಳೆದುಕೊಳ್ಳಬಹುದು. ವಿಚಾರ ಸಂಕೀರ್ಣದಲ್ಲಿ ಭಾಗವಹಿಸುವ ಅವಕಾಶ ದೊರೆಯುತ್ತದೆ. ನೂತನ ವಸ್ತ್ರವನ್ನು ಖರೀದಿ ಮಾಡಲಿದ್ದೀರಿ. ಕೌಟುಂಬಿಕವಾದ ಕೆಲವು ಜವಾಬ್ದಾರಿಗಳನ್ನು ಮಕ್ಕಳಿಗೆ ಕೊಟ್ಟು ಆರಾಮಾಗಿ ಇರುವಿರಿ. ಸಣ್ಣ ವ್ಯಾಪಾರಿಗಳಿಗೆ ಹೆಚ್ಚು ವ್ಯವಹಾರ ಆಗುವ ಸಾಧ್ಯತೆಗಳಿವೆ. ಧನದ ಆದಾಯವು ನಿರೀಕ್ಷೆಯನ್ನು ಪೂರ್ಣವಾಗಿ ತಲುಪದು. ಕೆಲವರಿಗೆ ಹಣಕಾಸಿನ ವ್ಯವಹಾರಗಳಲ್ಲಿ ವ್ಯತ್ಯಾಸವಾಗಿ ವೃತ್ತಿಯಲ್ಲಿ ಛೀಮಾರಿಯ ಪ್ರಸಂಗ ಬರಬಹುದು. ಸಿದ್ಧ ಉಡುಪು ತಯಾರಕರಿಗೆ ಮಾರುಕಟ್ಟೆಯಲ್ಲಿ ಬೇಡಿಕೆ ಇರಲಿಸೆ.

ಮೀನ: ವೈದ್ಯವೃತ್ತಿಯನ್ನು ನಡೆಸುತ್ತಿರುವವರು ಆರ್ಥಿಕವಾಗಿ ಬಲಗೊಳ್ಳುವರು. ವಿದೇಶದಲ್ಲಿರುವ ಕುಟುಂಬಸ್ಥರು ಆರ್ಥಿಕವಾದ ಸಹಕಾರವನ್ನು ನೀಡುವರು. ಪಾದಗಳಲ್ಲಿ ನೋವು ಕಾಣಿಸಬಹುದು. ಔಷಧೋಪಚಾರದಿಂದ ಸರಿ‌ಮಾಡಿಕೊಳ್ಳಿ. ಮಕ್ಕಳ ಕಣ್ಣಿನ ಬಗ್ಗೆ ಎಚ್ಚರವಿರಲಿ. ಮೊಬೈಲ್ ಮುಂತಾದ ಉಪಕರಣಕ್ಕೆ ಒಗ್ಗಿ ಕಣ್ಣು ಹಾಳಾಗುವುದು. ಕಲುಷಿತ ಆಹಾರದಿಂದ ಆರೋಗ್ಯದಲ್ಲಿ ವ್ಯತ್ಯಾಸದ ಸಾಧ್ಯತೆ ಇದೆ. ಬರಹಗಾರರಿಗೆ ತಮ್ಮ ಬರಹವನ್ನು ವಿರೋಧಿಸುವವರ ಮಧ್ಯದಲ್ಲಿ ವೇದಿಕೆಯನ್ನು ಹಂಚಿಕೊಳ್ಳುವ ಸಂದರ್ಭವಿದೆ. ಕೋರ್ಟ್ ವ್ಯವಹಾರಗಳಲ್ಲಿ ನಿಮಗೆ ಶುಭಸಮಾಚಾರವಿರುತ್ತದೆ.

-ಲೋಹಿತಶರ್ಮಾ ಇಡುವಾಣಿ

ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?