Daily Horoscope: ಧನು, ಮಕರ, ಕುಂಭ, ಮೀನ ರಾಶಿಯವರ ಏಪ್ರಿಲ್​ 18ರ ಭವಿಷ್ಯ ಹೀಗಿದೆ

ನೀವು ಧನು, ಮಕರ, ಕುಂಭ, ಮೀನ ರಾಶಿಯವರೇ? ಹಾಗಿದ್ದರೆ ಇಂದಿನ (2023 ಏಪ್ರಿಲ್​ 18) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Daily Horoscope: ಧನು, ಮಕರ, ಕುಂಭ, ಮೀನ ರಾಶಿಯವರ ಏಪ್ರಿಲ್​ 18ರ ಭವಿಷ್ಯ ಹೀಗಿದೆ
ಪ್ರಾತಿನಿಧಿಕ ಚಿತ್ರImage Credit source: maharashtratimes.com
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Apr 18, 2023 | 6:15 AM

ಶುಭೋದಯ ಓದುಗರೇ. ಪ್ರತಿಯೊಬ್ಬರ ಜೀವನದಲ್ಲಿ ರಾಶಿ ಭವಿಷ್ಯ ವಿಭಿನ್ನವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದ್ರೆ ಇಂದಿನ (2023 ಏಪ್ರಿಲ್​ 18) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ: ಅಶ್ವನೀ ಮಾಸ: ಚೈತ್ರ, ಪಕ್ಷ: ಕೃಷ್ಣ, ವಾರ: ಮಂಗಳ, ತಿಥಿ: ತ್ರಯೋದಶೀ, ನಿತ್ಯನಕ್ಷತ್ರ : ಶತಭಿಷಾ, ಯೋಗ: ಬ್ರಹ್ಮ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06-18 ಕ್ಕೆ, ಸೂರ್ಯಾಸ್ತ ಸಂಜೆ 06-45 ಕ್ಕೆ, ರಾಹು ಕಾಲ 03:39 – 05:12ರ ವರೆಗೆ, ಯಮಘಂಡ ಕಾಲ 09:25 – 10:58ರ ವರೆಗೆ, ಗುಳಿಕ ಕಾಲ 12:32 – 02:05 ರವರೆಗೆ.

ಧನು: ಹುಟ್ಟಿನಿಂದ ಬಂದ ಸ್ವಭಾವವನ್ನು ತಿದ್ದಲಾಗದು. ಮನೆಯಲ್ಲಿ ನಿಮ್ಮ ಸ್ವಭಾವವನ್ನು ತಿದ್ದಲು ಪ್ರಯತ್ನಿಸುವರು. ನಿಮ್ಮ ಕಾರ್ಯಕ್ಕೆ ಅಪರಿಚಿತರ ಸಹಾಯ ದೊರೆಯಬಹುದು. ಮಕ್ಕಳು ನಿಮ್ಮನ್ನು ಅತಿಯಾಗಿ ಹಚ್ಚಿಕೊಳ್ಳುವರು. ತುರ್ತು ನಿರ್ಧಾರವನ್ನು ತೆಗೆದುಕೊಳ್ಳುವುದು ಅಪಾಯಕಾರಿ. ಅನಾರೋಗ್ಯವು ನಿಮಗೆ ಅಭ್ಯಾಸವಾಗಿದ್ದರೂ ಗುಣಪಡಿಸಿಕೊಳ್ಳುವುದು ಉತ್ತಮ. ಓದುವ ಸಮಯವನ್ನು ಓದಲೆಂದೇ ಮೀಸಲಿಡಿ. ಅವಕಾಶಗಳಿಗೆ ಕಾಯಬೇಡಿ. ಮಾಡಬೇಕು ಎಂದು ಅನ್ನಿಸಿದ್ದನ್ನು ಮಾಡಿ‌ಮುಗಿಸಿ. ಧಾರ್ಮಿಕವಿಚಾರದಲ್ಲಿ ಆಸಕ್ತಿ ಇರಲಿದೆ.

ಮಕರ: ಐತಿಹಾಸಿಕ ದೇವಾಲಯವನ್ನು ನೋಡುವ ಹಂಬಲವಿರುವುದು. ನಿಮ್ಮಲ್ಲಿರವ ದುರ್ಗುಣಗಳು ನಿಮಗೆ ಅರ್ಥವಾಗಲಿಸೆ. ಅವುಗಳನ್ನು ಸರಿಮಾಡಿಕೊಳ್ಳಲು ಬಯಸುವಿರಿ. ನೀವು ನಿಮ್ಮ ಬಗ್ಗೆ ಮಾಡಿಕೊಳ್ಳುವ ಸಮರ್ಥನೆಯು ಅಹಂಕಾರವೆನಿಸುವುದು. ಮಂದಗತಿಯಲ್ಲಿ ಸಾಗುವ ಜೀವನ ಎಂದು ಮೂದಲಿಸದೇ ಖುಷಿಯಿಂದ ಮುನ್ನಡೆಯಿರಿ.‌ ಸಂತೋಷವು ಸಿಗಲಿದೆ. ದೇವರಲ್ಲಿ ಭಕ್ತಿ ಕಡಿಮೆಯಾಗಿದೆ. ಅದನ್ನು ಹೆಚ್ವುಮಾಡಿಕೊಳ್ಳಿ.‌ ಕುಟುಂಬವನ್ನೂ ರಕ್ಷಿಸುವ ಹೊಣೆಗಾರಿಕೆ ಇರಲಿದೆ.

ಕುಂಭ: ಸಾಲವನ್ನು ಮಾಡಬೇಕಾಗಿ ಬಂದರೆ ಅಗತ್ಯವನ್ನು ನೋಡಿ ಮಾಡಿ. ಮನಸ್ಸು ಒಂದು ಕಡೆ ನಿಲ್ಲದೇ ಓಡಾಡುವುದು. ಅದು ನಿಮ್ಮ ವ್ಯಕ್ತಿತ್ವವನ್ನೂ ತೋರಿಸುವುದು. ಸಾಲಗಾರರ ಕಾಟದಿಂದ ನೀವು ಮುಕ್ತರಾಗುವಿರಿ. ಕೆಟ್ಟ ಕನಸು ನಿಮ್ಮ ಚಿಂತಿತರನ್ನಾಗಿ ಮಾಡುವುದು. ನೀವಿಂದು ಕಷ್ಟದ ಕೆಲಸವನ್ನು ಸುಲಭವಾಗಿ ಮಾಡುವ ವಿಧಾನವನ್ನು ಹುಡುಕುವಿರಿ.ಮನೆಯಲ್ಲಿ ನೆಮ್ಮದಿಯ ವಾತಾವರಣ ಇರಲಿದೆ. ಹುಡುಗಾಟ ಬುದ್ಧಿಯನ್ನು ಕಡಿಮೆ ಮಾಡುವುದು ಒಳ್ಳೆಯದು. ಅತಿಯಾದ ಆತ್ಮವಿಶ್ವಾಸವು ಅಪಾಯಕಾರಿ.

ಮೀನ: ನಿಮ್ಮ ಬಟ್ಟೆಯನ್ನು ಕಂಡು ನಿಮ್ಮನ್ನು ಅಳೆಯಬಹುದು.‌ ಸಮಾರಂಭಕ್ಕೆ ಹೋಗುವಾಗ ಉತ್ತಮ‌ ಬಟ್ಟೆಯು ಇರಲಿ. ಸ್ತ್ರೀಯರಿಗೆ ತವರುಮನೆಯ ಕಡೆಯಿಂದ ಶುಭವಾದ ಸುದ್ದಿಯು ಬರಲಿದೆ. ತಿಳಿವಳಿಕೆ ಇಲ್ಲದ ಕೆಲಸದಲ್ಲಿ ಜಾಗರೂಕತೆಯಿಂದ ಹೆಜ್ಜೆ ಇಡಿ. ವಾಹನವನ್ನು ಖರೀದಿಸುವಾಗ ಅವಶ್ಯಕತೆಯ ಬಗ್ಗೆ ಅರಿವಿರಲಿ. ದೀರ್ಘಪ್ರಯಾಣವನ್ನು ಇಚ್ಛಿಸುವ ನೀವು ಆರೋಗ್ಯದ ಮೇಲೂ ಗಮನವಿಟ್ಟುಕೊಳ್ಳಿ. ಸ್ವಾಭಿಮಾನಕ್ಕೆ ಧಕ್ಕೆ ಬರುವ ಕೆಲಸವು ಎಂತದ್ದೇ ಆಗಿದ್ದರೂ ಇಂದು ಮಾಡಲಾರಿರಿ.

ಲೋಹಿತಶರ್ಮಾ ಇಡುವಾಣಿ – 8762924271 (what’s app only)

ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ