Daily Horoscope: ಧನು, ಮಕರ, ಕುಂಭ, ಮೀನ ರಾಶಿಯವರ ಏಪ್ರಿಲ್ 19ರ ಭವಿಷ್ಯ ಹೀಗಿದೆ
ನೀವು ಧನು, ಮಕರ, ಕುಂಭ, ಮೀನ ರಾಶಿಯವರೇ? ಹಾಗಿದ್ದರೆ ಇಂದಿನ (2023 ಏಪ್ರಿಲ್ 19) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.
ಶುಭೋದಯ ಓದುಗರೇ. ಪ್ರತಿಯೊಬ್ಬರ ಜೀವನದಲ್ಲಿ ರಾಶಿ ಭವಿಷ್ಯ ವಿಭಿನ್ನವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದ್ರೆ ಇಂದಿನ (2023 ಏಪ್ರಿಲ್ 19) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ತಿಳಿದುಕೊಳ್ಳಿ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ: ಅಶ್ವಿನೀ, ಮಾಸ: ಚೈತ್ರ, ಪಕ್ಷ: ಕೃಷ್ಣ, ವಾರ: ಬುಧ, ತಿಥಿ: ಚತುರ್ದಶೀ, ನಿತ್ಯನಕ್ಷತ್ರ: ಪೂರ್ವಾಭಾದ್ರ, ಯೋಗ: ಐಂದ್ರ, ಕರಣ: ಭಸದರ, ಸೂರ್ಯೋದಯ ಬೆಳಗ್ಗೆ 06 ಗಂಟೆ 17 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 45 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:32 ರಿಂದ 02:00ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 7:51 ರಿಂದ 09:25ರ ವರೆಗೆ, ಗುಳಿಕ ಕಾಲ ಬೆಳಗ್ಗೆ 10:58 ರಿಂದ ಮಧ್ಯಾಹ್ನ 12:32ರ ವರೆಗೆ.
ಧನು: ಎಲ್ಲವನ್ನೂ ಸಿಟ್ಟಿನಿಂದ ಸರಿ ಮಾಡುತ್ತೇನೆ ಎಂಬುದನ್ನು ಬಿಡಿ. ಪ್ರೀತಿಯಿಂ ಸರಿ ಮಾಡುವ ವಿಧಾನವನ್ನು ಕಂಡುಕೊಳ್ಳಿ. ನಿಮ್ಮಮೆಲೆಯೂ ಪ್ರೀತಿ ಬರಬಹುದು. ಎದುರಾಳಿಯ ಬಲವನ್ನು ಕಂಡು ಯುದ್ಧಸಾರಬೇಕು. ನಮ್ಮ ಬಳಿ ಇರುವ ವಸ್ತು, ವ್ಯಕ್ತಿಗಳ ಮೇಲಲ್ಲ. ಸಮಾಜದಲ್ಲಿ ನಿಮ್ಮನ್ನು ಗುರುತಿಸಿ ಗೌರವವನ್ನು ಕೊಡುವರು. ಆಟ, ಓಟ, ಓದಿನಲ್ಲಿ ಆಸಕ್ತಿ ಇರಲಿದೆ. ಮಕ್ಕಳು ನಿಮ್ಮನ್ನು ಬಹಳ ಹಚ್ಚಿಕೊಳ್ಳುತ್ತಾರೆ. ಆತುರದ ನಿರ್ಧಾರಕ್ಕೆ ಹೋಗಬೇಡಿ. ಸಮಯಕ್ಕಾಗಿ ಕಾಯಿರಿ. ಎಲ್ಲವನ್ನೂ ಕಾಲವೇ ತಿಳಿಸುತ್ತದೆ. ಅದಕ್ಕೋಸ್ಕರ ನಿಮ್ಮ ಶ್ರಮವನ್ನು ವ್ಯರ್ಥಮಾಡಿಕೊಳ್ಳಬೇಡಿ. ಮಾಡುತ್ತಿರುವ ವ್ಯಾಪಾರದಲ್ಲಿ ಅಭಿವೃದ್ಧಿಯಾಗಲಿದೆ. ಅದನ್ನು ಯೋಜನೆ ಗೊಳಿಸಿ.
ಮಕರ: ಸಂಕಟ ಬಂದಾಗ ವೆಂಕಟರಮಣ ಎನ್ನುವಂತೆ ಇಂದು ನೀವು ದೇವರ ಮೊರೆ ಹೊಗುವಿರಿ. ಹೂಡಿಕೆಗೆ ಸಕಾಲವಲ್ಲ. ಭೂಮಿಯ ವ್ಯವಹಾರವನ್ನು ನೋಡಿಕೊಳ್ಳುವವರಿಗೆ ಅಧಿಕ ಲಾಭವಿದೆ. ಪುರಾತನ ದೇವಾಲಯದ ದರ್ಶನವನ್ನು ಮಾಡಲಿದ್ದೀರಿ. ನಿಮ್ಮಲ್ಲಿರವ ದುರ್ಗುಣಗಳು ನಿಮಗೆ ಅರ್ಥವಾಗಿ ಅವುಗಳನ್ನು ಬಿಡುವತ್ತ ಯೋಜನೆಗಳನ್ನು ರೂಪಿಸಿಕೊಳ್ಳುವಿರಿ. ಸಾಲ ಕೊಟ್ಟವರು ಕಟುವಾಗಿ ಮಾತನಾಡಬಹುದು. ಸಮಾಧಾನದಿಂದ ಅವರಿಗೆ ಉತ್ತರಕೊಟ್ಟು ಕೆಲವು ದಿನಗಳ ಅನಂತರ ಪಾವತಿಸುವೆನು ಎಂದು ಹೇಳಿ. ಅಳುಕುವ ಅವಶ್ಯಕತೆ ಇಲ್ಲ. ಧೈರ್ಯವಾಗಿರಿ.
ಕುಂಭ: ಸಾಲಗಾರರ ಕಾಟದಿಂದ ನೀವು ಮುಕ್ತರಾಗುವಿರಿ. ಅನಿರೀಕ್ಷಿತ ಧನಲಾಭವು ನಿಮ್ಮ ನಿಶ್ಚಿಂತೆಗೆ ಕಾರಣವಾಗಲಿದೆ. ದೀರ್ಘಪ್ರಯಾಣವನ್ನು ಇಚ್ಛಿಸುವ ನೀವು ಆರೋಗ್ಯದ ಮೇಲೂ ಗಮನವನ್ನು ಇಟ್ಟಕೊಳ್ಳಿ. ಯಾರದ್ದೋ ಮಾತನ್ನು ಕೇಳಿ ಕೆಲಸಗಳನ್ನು ಮಾಡಬೇಡಿ. ನಿಮ್ಮ ಮನಸ್ಸಿಗೆ ಅದು ಒಪ್ಪಿಗೆಯಾಗಲಿ. ಹಿರಿಯರಿಂದ ಸಂಪತ್ತು ಸಿಗಬಹುದು ಅಥವಾ ಉತ್ತಮಮಾರ್ಗದಿಂದ ಬರುವ ಸಂಪತ್ತು ನಿಮ್ಮನ್ನು ಖುಷಿಯಾಗಿಡಲಿದೆ. ಸಾಲಬಾಧೆಯಿಂದ ಮುಕ್ತರಾಗಲು ಯೋಜನೆ ರೂಪಿಸುವಿರಿ. ಸ್ವಾಭಿಮಾನಕ್ಕೆ ಧಕ್ಕೆಯಾಗಬಹುದು. ಮನಶ್ಚಾಂಚಲ್ಯವನ್ನು ಕಡಿಮೆ ಮಾಡಿಕೊಳ್ಳಿ. ಚಂದ್ರನು ನಿಮ್ಮ ಮನಸ್ಸನ್ನು ಆಡಿಸುವನು. ಧ್ಯಾನದಿಂದ ಮನಸ್ಸು ನಿಯಂತ್ರಿಸಿ. ನಿರ್ಲಿಲ್ತತೆಯು ಕಡಲವುದನ್ನು ಸರಿ ಮಾಡುತ್ತದೆ.
ಮೀನ: ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿಯನ್ನು ಕಾಣಬಹುದು. ದೀರ್ಘಕಾಲದ ಬಂಧಗಳು ಮುಕ್ತಾಯವಾಗುವುದು. ಸ್ತ್ರೀಯರಿಗೆ ಶುಭವಾರ್ತೆಯೊಂದು ಬರಲಿದೆ. ಅಂಜಿಕೆಯಿಲ್ಲದೇ ನೀವು ಮಾಡುವ ಕಾರ್ಯದಲ್ಲಿ ಮುನ್ನುಗ್ಗಿ. ಆರೋಗ್ಯವಾಗಿದ್ದರೆ ಎಂತಹ ಕಾರ್ಯವನ್ನೂ ಉತ್ತಮ ಆರೋಗ್ಯವಿದ್ದರೆ ಏನಾದರೂ ಸಾಧಿಸಬಹುದು. ಸಾಮಾಜಿಕವಾಗಿ ಮನ್ನಣೆ ಸಿಗುವ ಸಾಧ್ಯತೆ ಇದೆ. ಯಾರಾದರೂ ಹೊಗಳಿದರೆ ಹಿಗ್ಗಬೇಡಿ. ಕೊಡುಕೊಳ್ಳುವ ವ್ಯವಹಾರದಲ್ಲಿ ಬೇಸರವಾಗಬಹುದು. ವಿವಾಹದ ಮಾತುಕತೆ ನಡೆಯಬಹುದು.
-ಲೋಹಿತಶರ್ಮಾ ಇಡುವಾಣಿ