Horoscope Today: ಕಷ್ಟದಿಂದ ಮುಕ್ತಿ ಸಿಕ್ಕಿತೆಂಬ ಸಂತೋಷದಲ್ಲಿರುವಾಗಲೇ ಈ ರಾಶಿಯವರಿಗೆ ಅನಾರೋಗ್ಯ ಕಾಡಲಿದೆ

ನೀವು ಧನು, ಮಕರ, ಕುಂಭ, ಮೀನ ರಾಶಿಯವರೇ? ಹಾಗಿದ್ದರೆ ಇಂದಿನ (2023 ಏಪ್ರಿಲ್​ 26) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope Today: ಕಷ್ಟದಿಂದ ಮುಕ್ತಿ ಸಿಕ್ಕಿತೆಂಬ ಸಂತೋಷದಲ್ಲಿರುವಾಗಲೇ ಈ ರಾಶಿಯವರಿಗೆ ಅನಾರೋಗ್ಯ ಕಾಡಲಿದೆ
ಇಂದಿನ ರಾಶಿ ಭವಿಷ್ಯ
Follow us
Rakesh Nayak Manchi
|

Updated on: Apr 26, 2023 | 6:16 AM

ಶುಭೋದಯ ಓದುಗರೇ. ಪ್ರತಿಯೊಬ್ಬರ ಜೀವನದಲ್ಲಿ ರಾಶಿ ಭವಿಷ್ಯ ವಿಭಿನ್ನವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದ್ರೆ ಇಂದಿನ (2023 ಏಪ್ರಿಲ್ ​26) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ : ಅಶ್ವಿನೀ, ಮಾಸ : ವೈಶಾಖ, ಪಕ್ಷ : ಶುಕ್ಲ, ವಾರ : ಬುಧ, ತಿಥಿ : ಷಷ್ಠೀ, ನಿತ್ಯನಕ್ಷತ್ರ : ಪುನರ್ವಸು, ಯೋಗ : ಸುಕರ್ಮ, ಕರಣ : ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 13 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 46 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:30 ರಿಂದ 02:04ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 07:48 ರಿಂದ 09:22ರ ವರೆಗೆ, ಗುಳಿಕ ಕಾಲ ಬೆಳಗ್ಗೆ 10:56 ರಿಂದ ಮಧ್ಯಾಹ್ನ 12:30ರ ವರೆಗೆ.

ಧನು: ನಿಮ್ಮ ಮಾತಿನ ಶಕ್ತಿಯನ್ನು ದುರುಪಯೋಗ ಪಡಿಸಿಕೊಳ್ಳಬೇಡಿ. ಆಮೇಲೆ ಅದಕ್ಕೆ ಬೆಲೆಯೇ ಇಲ್ಲದಂತಾದೀತು. ಕೃಷಿಯ ಚಟುವಟಿಕೆಯಲ್ಲಿ ತೊಡಗುವ ಮನಸ್ಸಾದೀತು. ಉದರಬಾಧೆಯು ನಿಮ್ಮ ಉತ್ಸಾಹವನ್ನು ಕುಗ್ಗಿಸಬಹುದು. ಕೃಷಿಯಲ್ಲಿ ಇಂದು ಹೆಚ್ಚು ತೊಡಗಿಕೊಳ್ಳುವಿರಿ. ಉದ್ಯೋಗದಲ್ಲಿ ಸಿಗುವ ಪದೋನ್ನತಿಯು ಸಿಗುವುದು ತಪ್ಪಲಿದೆ. ಆಪ್ತರ ಜೊತೆ ಈ ಕುರಿತು ಸಮಾಲೋಚನೆ ಮಾಡುವಿರಿ. ಸಕಾರಾತ್ಮಕವಾದ ಚಿಂತನೆ ಇರಲಿ. ಹಿರಿಯರಿಗೆ ನೋವುಂಟು ಮಾಡದಂತೆ ಮಾತನಾಡಿ. ಮನಸ್ಸು ಭಾರವಾಗಬಹುದು. ಸಂಜೆ ವಾಯುವಿಹಾರ ಮಾಡಿ ಬನ್ನಿ.

ಮಕರ: ಸಣ್ಣ ಸಣ್ಣ ವಿಚಾರಕ್ಕೂ ಕಲಹ ಮಾಡುವುದನ್ನು ಕಡಿಮೆ ಮಾಡಿ. ನಿಮ್ಮ ಬಗ್ಗೆ ಹಿಂದಿನಿಂದ ಮಾತನಾಡಿಕೊಳ್ಳುವರು. ಇಂದು ಹಣದ ಅವಶ್ಯಕತೆಯಿದ್ದು ಸಹೋದರನನ್ನು ಕೇಳುವಿರಿ. ನೂತನ ವಾಹನವನ್ನು ಖರೀದಿಸುವ ಬಗ್ಗೆ ಯೋಚಿಸುವಿರಿ. ಆಪ್ತರಿಂದ ಹಣದ ವಿಚಾರದಲ್ಲಿ ಮೋಸ ಹೋಗುವಿರಿ. ನಿಮ್ಮನ್ನು ಇಷ್ಟಪಡುವ ವ್ಯಕ್ತಿಗಳು ಇರಲಿದ್ದಾರೆ. ಅವರ ಜೊತ ಸಮಯವನ್ನು ಕಳೆಯಲು ಬಯಸುವಿರಿ. ದೀಪದ ಬುಡ ಕತ್ತಲು ಎಂದು ಗೊತ್ತಿದ್ದೂ ನಿಮ್ಮನ್ನು ನಿಮ್ಮವರು ಗೌರವಿಸಬೇಕು ಎನ್ನುವುದು ಮೂರ್ಖತನವಾದೀತು. ಕಛೇರಿಯಲ್ಲಿ ಇಂದು ನೀವು ಸ್ವತಂತ್ರರು.

ಕುಂಭ: ನಿಮಗೆ ಕೆಲಸಗಳು ಒಂದಾದಮೇಲೆ‌‌ ಒಂದರಂತೆ ಬರಲಿದೆ. ಒತ್ತಡವಿದ್ದರೂ ಅದನ್ನು ನಿಭಾಯಿಸಿಕೊಂಡು ಹೋಗುವಿರಿ. ತಂದೆಯಿಂದ ಬರಬಹುದಾದ ಧನವು ವಿಳಂಬವಾಗಲಿದೆ. ನಿಮ್ಮ ವಿವಾಹವನ್ನು ಮಾಡಿಸಬೇಕೆಂಬ ಪ್ರಯತ್ನವು ವ್ಯರ್ಥವಾದೀತು. ರಾಜಕಾರಿಣಿಗಳಿಗೆ ಒಳ್ಳೆಯ ಬೆಂಬಲ ಸಿಗಲಿದೆ‌. ಮೂರನೆಯ ವ್ಯಕ್ತಿಯ ಮೂಲಕ ನಿಮ್ಮ ಕೆಲಸವನ್ನು ಮಾಡಿಸಿಕೊಳ್ಳುವಿರಿ. ಅಧಿಕಾರದಿಂದ ಕೆಳಗಿಳಿಯಬೇಕಾಗಿದೆ ಎಂಬ ಆತಂಕ ಇರಲಿದೆ. ಧನಲಾಭವಾಗುವುದೆಂದು ಕೆಟ್ಟ ಕಾರ್ಯದಲ್ಲಿ ಮಗ್ನರಾಗುವಿರಿ. ಎಷ್ಟೇ ಅನುಕೂಲವಿದ್ದರೂ ಪ್ರತಿಕೂಲ ಸನ್ನಿವೇಶಗಳನ್ನು ಚಿಂತಿಸುವಿರಿ.

ಮೀನ: ಅಧಿಕಾರದ ದುರುಪಯೋಗವನ್ನು ಮಾಡಿಕೊಳ್ಳುವಿರಿ. ಇದರಿಂದ ನಿಮ್ಮ ಕೆಳಗಿನವರು ಸಿಟ್ಟಗೊಂಡಾರು.‌ ನಿಮ್ಮ ಕೆಲಸದ ಮೇಲೆ ಇದರ ಪರಿಣಾಮವಿರಲಿದೆ. ವಿದೇಶಕ್ಕೆ ಹೋಗಲು ಇಚ್ಛಿಸಿದರೆ ನಿಮಗೆ ಅವಕಾಶವಿದೆ. ಕಳೆದುಕೊಂಡಿದ್ದರ ಕುರಿತು ಚಿಂತಿಸುತ್ತ ಸಮಯವನ್ನು ವ್ಯರ್ಥಮಾಡಿಕೊಳ್ಳಬೇಡಿ. ಸರಿಯಾಗಿ ಸಮಯವನ್ನು ಬಳಸಿ. ಕಷ್ಟದಿಂದ ಮುಕ್ತಿ ಸಿಕ್ಕಿತೆಂಬ ಸಂತೋಷದಲ್ಲಿರುವಾಗ ನಿಮಗೆ ಅನಾರೋಗ್ಯ ಉಂಟಾಗಲಿದೆ. ದೂರಪ್ರಯಾಣವನ್ನು ನಿಷೇಧಿಸಿ ಅಥವಾ ಮುಂದೂಡಿ. ಮಕ್ಕಳ ಜೊತೆ ಇರಲು ನಿಮಗೆ ಇಂದು ಅಸಾಧ್ಯವಾದೀತು. ಒಳ್ಳೆಯ ಕಾಲದ ನಿರೀಕ್ಷೆಯಲ್ಲಿ ಇರುವಿರಿ.

-ಲೋಹಿತಶರ್ಮಾ ಇಡುವಾಣಿ

ದೇವರು ನನ್ನ ಹೊಟ್ಟೆಗೆ ಕಲ್ಲು ಮಣ್ಣು ತುಂಬಿಸಿ ಬಿಟ್ಟ: ತಾಯಿ ಆಕ್ರಂದನ
ದೇವರು ನನ್ನ ಹೊಟ್ಟೆಗೆ ಕಲ್ಲು ಮಣ್ಣು ತುಂಬಿಸಿ ಬಿಟ್ಟ: ತಾಯಿ ಆಕ್ರಂದನ
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು
ಬಿಜೆಪಿ ಶಾಸಕ ಮುನಿರತ್ನಗೆ ಬಿತ್ತು ಮೊಟ್ಟೆ ಏಟು: ಇಲ್ಲಿದೆ ನೋಡಿ ವಿಡಿಯೋ
ಬಿಜೆಪಿ ಶಾಸಕ ಮುನಿರತ್ನಗೆ ಬಿತ್ತು ಮೊಟ್ಟೆ ಏಟು: ಇಲ್ಲಿದೆ ನೋಡಿ ವಿಡಿಯೋ