Daily Horoscope: ಧನು, ಮಕರ, ಕುಂಭ, ಮೀನ ರಾಶಿಯವರ ಏಪ್ರಿಲ್​ 9ರ ಭವಿಷ್ಯ ಹೀಗಿದೆ

ನೀವು ಧನು, ಮಕರ, ಕುಂಭ, ಮೀನ ರಾಶಿಯವರೇ? ಹಾಗಿದ್ದರೆ ಇಂದಿನ (2023 ಏಪ್ರಿಲ್​ 09) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Daily Horoscope: ಧನು, ಮಕರ, ಕುಂಭ, ಮೀನ ರಾಶಿಯವರ ಏಪ್ರಿಲ್​ 9ರ ಭವಿಷ್ಯ ಹೀಗಿದೆ
ಇಂದಿನ ರಾಶಿ ಭವಿಷ್ಯImage Credit source: freepik
Follow us
Rakesh Nayak Manchi
|

Updated on: Apr 09, 2023 | 6:16 AM

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಏಪ್ರಿಲ್​ 9 ಭಾನುವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ಮೀನ ಮಾಸ, ಮಹಾನಕ್ಷತ್ರ : ಅಶ್ವಿನೀ, ಮಾಸ : ಚೈತ್ರ, ಪಕ್ಷ : ಕೃಷ್ಣ, ವಾರ : ಭಾನು, ತಿಥಿ : ತೃತೀಯಾ, ನಿತ್ಯನಕ್ಷತ್ರ : ವಿಶಾಖಾ, ಯೋಗ : ಸಿದ್ಧಿ, ಕರಣ : ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 23 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 44 ನಿಮಿಷಕ್ಕೆ, ರಾಹು ಕಾಲ ಸಂಜೆ 05:12 ರಿಂದ 06:44ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:34 ರಿಂದ 02:07ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:39 ರಿಂದ 05:12ರ ವರೆಗೆ.

ಧನುಸ್ಸು: ದಾಂಪತ್ಯವು ಇನ್ನೊಬ್ಬರು ಕಿವಿ ಕಚ್ಚಿದ್ದರಿಂದ ಹಾಳಾಗಬಹುದು. ಸಂತಾನೋತ್ಸವದ ಶುಭ ಸಮಾಚಾರವು ನಿಮಗೆ ಬರಲಿದೆ. ಇಂದು ನೀವು ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳುವಿರಿ. ಅದು ನಿಮ್ಮ ಮನಸ್ಸನ್ನು ಸಂತೋಷಪಡಿಸುತ್ತದೆ. ಸಹೋದರಿಯ ಸಹಾಯದಿಂದ ನಿಮ್ಮ ಸಮಸ್ಯೆಗಳು ಕೊನೆಗೊಳ್ಳುವುದು. ಆದರೆ ದುಂದು ವೆಚ್ಚಗಳನ್ನು ತಪ್ಪಿಸಿ. ಅವಶ್ಯಕತೆಯಿದ್ದಷ್ಟು ಮಾತ್ರ ಹಣವನ್ನು ಬಳಸಿ. ಸಂದರ್ಭದ ವರ್ತನೆಯನ್ನು ಕಂಡು ಯಾರ ಬಗ್ಗೆಯೂ ತೀರ್ಮಾನಕ್ಕೆ ಬರಬೇಡಿ.

ಮಕರ: ನಿಮಗೆ ಮಕ್ಕಳ ಕಡೆಯಿಂದ ಸಮಸ್ಯೆಗಳು ಬರಬಹುದು. ಹೊರಗೆ ತಿನ್ನುವುದು ಮತ್ತು ಕುಡಿಯುವುದನ್ನು ತಪ್ಪಿಸಿ, ಇಲ್ಲದಿದ್ದರೆ ನಿಮ್ಮ ಆರೋಗ್ಯವು ಹದಗೆಡಬಹುದು. ಸ್ವಾವಲಂಬೆನೆಯತ್ತ ನಿಮ್ಮ ಗಮನ ಇರಲಿದೆ. ಅದರ ಬಗ್ಗೆ ಹಿರಿಯರ ಜೊತೆ ಚರ್ಚಿಸುವಿರಿ. ನಿಮ್ಮವರಿಂದ ನಿಮಗೆ ಕಷ್ಟಗಳು ಬರಬಹುದು ಎಂಬ ನಿರೀಕ್ಷೆಯಲ್ಲಿ ಇರುವಿರಿ. ಆಸ್ತಿ ಖರೀದಿಯ ಬಗ್ಗೆ ಚಿಂತನೆ ಇರುವುದು. ಲಾಭಕ್ಕೋಸ್ಕರ ಕೆಲಸವನ್ನು ಮಾಡದೇ ಖುಷಿಗೆ ಉದ್ಯೋಗವನ್ನು ಪ್ರಾರಂಭಿಸುವ ಮನಸ್ಸು ಮಾಡುವಿರಿ.

ಕುಂಭ: ಇಂದು ನೀವು ಕುಟುಂಬದ ಅಗತ್ಯತೆಗಳನ್ನು ಪೂರೈಸಲು ಓಡಾಟ ನಡೆಸಲಿದ್ದೀರಿ. ನಿಮ್ಮ ತಾಯಿಯು ಕಿರಿಯ ಮಗನಾದ ನಿಮಗೆ ಬೆಂಬಲವನ್ನು ಕೊಡುವರು. ಯಂತ್ರೋದ್ಯಮಿಗಳು ಇಂದು ಉತ್ತಮ ಲಾಭವನ್ನು ಪಡೆಯುವರು. ಹಿರಿಯರ ಆಸೆಗಳನ್ನು ಪೂರ್ಣಗೊಳಿಸುವ ಒಮ್ಮನಸ್ಸು ಇರಲಿದೆ. ಇಂದು ಆಸ್ತಿಯ ವಿವಾದವು ಬಗೆಹರಿಯಲಿದೆ. ಆರ್ಥಿಕ ಪರಿಸ್ಥಿತಿಯು ಮಧ್ಯದಲ್ಲಿ ಇರಲಿದೆ. ಯಾರಾದರೂ ನಿಮ್ಮನ್ನು ಕಂಡು ಅವಮಾನಿಸುವರು. ಉತ್ತರಿಸಿ ಇನ್ನಷ್ಟು ಹತಾಶರಾಗಬೇಡಿ.

ಮೀನ: ಇಂದು ನೀವು ವಾಹನಕ್ಕೆ ಸಂಬಂಧಿಸಿದ ಸಮಸ್ಯೆಯನ್ನು ಎದುರಿಸಬೇಕಾಗಬಹುದು. ಧಾರ್ಮಿಕ ಕಾರ್ಯಗಳನ್ನು ನಡೆಸುವ ಉದ್ದೇಶವಿದ್ದರೆ ಇಂದೇ ಮಾಡಿಕೊಳ್ಳಿ. ನಿಮ್ಮ ಬಗ್ಗೆ ಮನೆಯಲ್ಲಿ ಮಾತನಾಡುವರು. ವಿದ್ಯಾರ್ಥಿಗಳು ತಮ್ಮ ಉಜ್ವಲ ಭವಿಷ್ಯವನ್ನು ನಿರ್ಧರಿಸಿಕೊಳ್ಳಲಿದ್ದಾರೆ. ಇಂದು ನೀವು ಕಾರ್ಯದ ಒತ್ತಡದಲ್ಲಿ ಇದ್ದರೂ ನೀವು ಕುಟುಂಬಕ್ಕಾಗಿ ಸಮಯವನ್ನು ಕೊಡುವಿರಿ. ಸಂಗಾತಿಯು ನಿಮಗೆ ಸಂಪೂರ್ಣ ಬೆಂಬಲ ನೀಡುವರು. ತಾಯಿಯ ಕಡೆಯ ಬಂಧುಗಳು ನಿಮ್ಮನ್ನು ಭೇಟಿಯಾಗಲಿದ್ದಾರೆ.

-ಲೋಹಿತಶರ್ಮಾ ಇಡುವಾಣಿ

ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್