Horoscope Today: ಧನು, ಮಕರ, ಕುಂಭ, ಮೀನಾ ರಾಶಿಯವರ ಮಾ.29ರ ರಾಶಿ ಭವಿಷ್ಯ ಹೀಗಿದೆ

ನೀವು ಧನು, ಮಕರ, ಕುಂಭ, ಮೀನಾ ರಾಶಿಯವರೇ? ಹಾಗಿದ್ದರೆ ಇಂದಿನ (2023 ಮಾರ್ಚ್ 29) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope Today: ಧನು, ಮಕರ, ಕುಂಭ, ಮೀನಾ ರಾಶಿಯವರ ಮಾ.29ರ ರಾಶಿ ಭವಿಷ್ಯ ಹೀಗಿದೆ
ಇಂದಿನ ರಾಶಿ ಭವಿಷ್ಯ
Follow us
Rakesh Nayak Manchi
|

Updated on: Mar 29, 2023 | 6:00 AM

ದಿನ, ಸಮಯ ಎಲ್ಲರಿಗೂ ಒಂದೇ ಆದ್ರೂ ಜೀವನದಲ್ಲಿ ನಡೆಯುವ ಘಟನೆಗಳು ವಿಭಿನ್ನ. ಇದಕ್ಕೆ ಕಾರಣ ನಮ್ಮ ಜನ್ಮ ರಾಶಿಗಳಲ್ಲಾಗುವ ಬದಲಾವಣೆ. ನಮ್ಮ ಆರೋಗ್ಯ, ಯಶಸ್ಸು, ಸಂತೋಷ, ನೆಮ್ಮದಿ ಎಲ್ಲವೂ ನಮ್ಮ ರಾಶಿಗಳ ಮೇಲೆ ಅವಲಂಬಿತವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಕೆಲವರು ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗಾದರೆ ಇಂದಿನ (2023 ಮಾರ್ಚ್ 29) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭ ಎಂದು  ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ಮೀನ ಮಾಸ, ಮಹಾನಕ್ಷತ್ರ : ಉತ್ತರಾಭಾದ್ರ, ಮಾಸ : ಚೈತ್ರ, ಪಕ್ಷ : ಶುಕ್ಲ, ವಾರ : ಬುದೆ, ತಿಥಿ : ಅಷ್ಟಮೀ, ನಿತ್ಯನಕ್ಷತ್ರ : ಆರ್ದ್ರಾ, ಯೋಗ : ಶೋಭನ, ಕರಣ : ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 31 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 42 ನಿಮಿಷಕ್ಕೆ. ರಾಹು ಕಾಲ ಮಧ್ಯಾಹ್ನ 12:37 ರಿಂದ 02:09ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 08:03 ರಿಂದ 09:34ರ ವರೆಗೆ, ಗುಳಿಕ ಕಾಲ ಬೆಳಗ್ಗೆ 11:06 ರಿಂದ ಮಧ್ಯಾಹ್ನ 12:37ರ ವರೆಗೆ.

ಧನು: ವಿವೇಚನೆಯಿಲ್ಲದೇ ಯಾವ ಕೆಲಸವನ್ನೂ ಮಾಡಬೇಡಿ, ಯಾವ ಮಾತನ್ನೂ ಆಡಬೇಡಿ. ಮೇಲಿನಿಂದ ಬಿದ್ದು ಪೆಟ್ಟು‌‌ಮಾಡಿಕೊಳ್ಳುವಿರಿ. ನೀವಿಂದು ಪ್ರೀತಿಸಲು ಆರಂಭಿಸುವಿರಿ. ಆಧಿಕಾರದ ದುರುಪಯೋಗವನ್ನು ಮಾಡಿಕೊಳ್ಳುವಿರಿ. ಅವಸರದಲ್ಲಿ ಅನಾಹುತವಾದೀತು. ಧಾರ್ಮಿಕ‌ಕ್ಷೇತ್ರಗಳಿಗೆ ಭೇಟಿ ನೀಡಲಿದ್ದೀರಿ. ನಿಮ್ಮ ವ್ಯಕ್ತಿತ್ವವನ್ನು ಕಂಡು ಕೆಲವರು ಸಲಹೆಗಳನ್ನು ಕೊಡಲು ಬರಬಹುದು. ಯಾವುದೇ ಪ್ರತ್ಯುತ್ತರಗಳನ್ನು ಕೊಡಲು ಹೋಗಬೇಡಿ. ಸ್ತ್ರೀಯರಿಂದ ನಿಮಗೆ ಲಾಭವಾಗಲಿದೆ. ಸ್ತ್ರೀಯರು ನಿಮಗೆ ಬೆಂಬಲವನ್ನು ನೀಡುವರು. ಆರೋಗ್ಯ ಇಂದು ಚೆನ್ನಾಗಿರಲಿದೆ.

ಮಕರ: ಇನ್ನೊಬ್ಬರ ಕಷ್ಟಕ್ಕೆ ಸ್ಪಂದಿಸಲಿದ್ದೀರಿ. ಒತ್ತಡವನ್ನು ನಿಭಾಯಿಸುವ ಕಲೆ ನಿಮಗೆ ಸಿದ್ಧಿಸಿದ್ದು ಅದನ್ನು ಚೆನ್ನಾಗಿ ನಿರ್ವಹಿಸಬಲ್ಲಿರಿ. ನಿಮ್ಮ ಸಮಯೋಚಿತ ಪೂರ್ವಾಲೋಚನೆಯಿಂದ ನೀವಿಂದು ದೊಡ್ಡ ಅಪಾಯದಿಂದ ನೀವು ಹೊರಬರಲಿದ್ದೀರಿ. ಇಬ್ಬರು ಸ್ನೇಹಿತರ ಕಲಹವನ್ನು ತಪ್ಪಿಸಲು ಹೋಗಿ ನಿಮಗೆ ಅಪಮಾನವಾಗಬಹುದು. ಎಂದೋ‌ ಮಾಡಿದ ಇಂದು ನಿಮ್ಮ ಆಪತ್ತಿಗೆ ಬರಲಿದೆ. ಎಲ್ಲರ ಜೊತೆ ಬೆರೆತು ಬದುಕುವ ನಿಮ್ಮ ಗುಣವು ಮೆಚ್ಚುಗೆಯಾಗಲಿದೆ. ಆರ್ಥಿಕತೆಯನ್ನು ನಿಭಾಯಿಸುವುದನ್ನು ಕಲಿಯಿರಿ. ಪಿತ್ತಸಂಬಂಧಿಯಾದ ರೋಗವು ಬರಬಹುದು. ಹನುಮಾನ್ ಚಾಲೀಸ್ ಪಠಿಸಿ.

ಕುಂಭ: ಆನಾರೋಗ್ಯದ ಕಾರಣದಿಂದ ನಿಮ್ಮ ಸಂಪತ್ತು ವ್ಯಯವಾಗಲಿದೆ. ಸತ್ಯವನ್ನೇ ನಂಬಿ ಬದುಕುವವರು ಎಂದು ಇದುವರೆಗೆ ತಿಳಿದದ್ದು ಸುಳ್ಳು ಮಾಡುವಿರಿ. ಮಾತಿಗೆ ಬೆಲೆಯು ಕಡಿಮೆಯಾದೀತು. ನಿಮ್ಮನ್ನು ನೀವು ಆದ್ಯಂತವಾಗಿ ನೋಡಿಕೊಳ್ಳಿ. ದಾಂಪತ್ಯದಲ್ಲಿ ಹೊಂದಾಣಿಕೆ ಇರಲಿದೆ. ತಪ್ಪುಗಳಿದ್ದರೆ ಅದನ್ನು ಒಪ್ಪಿಕೊಂಡು ಮುನ್ನಡೆಯಿರಿ. ಬಂಧುಗಳ ಭೇಟಿಯಿಂದ ಸಂತೋಷವಾಗಲಿದೆ. ಕೋಪದಲ್ಲಿ ಏನನ್ನಾದರೂ ಹೇಳಿಬಿಡಬೇಡಿ. ಸರಳತೆಯನ್ನು ರೂಢಿಸಿಕೊಳ್ಳುವಿರಿ. ಶಿವನಿಗೆ ಅಭಿಷೇಕ ಮಾಡಿ. ಚಂದ್ರನಿಂದು ಷಷ್ಠದಲ್ಲಿದ್ದು ಮಾನಸಿಕ ಕಿರಿಕಿರಿಯನ್ನು ತರುವನು.

ಮೀನ: ಸ್ವಂತ ಉದ್ಯಮವನ್ನು ನಡೆಸುತ್ತಿದ್ದರೆ ನಿಮಗೆ ಅಲ್ಪ ಲಾಭದ ನಿರೀಕ್ಷೆಯನ್ನು ಮಾಡಬಹುದು. ಗೊಂದಲವನ್ನು ಪರಿಹರಿಸಲು ನಿಮಗೆ ನೂರಾರು ಮಾರ್ಗಗಳಿವೆ. ಶಾಂತಚಿತ್ತರಾಗಿ ಯೋಚಿಸಿ. ನಿಮ್ಮ ಆಯ್ಕೆಗಳು ಸರಿಯಾಗಿರಲಿ. ಗೊಂದಲವನ್ನು ಇಟ್ಟುಕೊಳ್ಳುವುದು ಬೇಡ. ಶತ್ರುಗಳು ನಿಮಗೆ ತೊಂದರೆ ಕೊಡಲಿದ್ದು ಅದನ್ನು ಪರಿಹರಿಸಿಕೊಳ್ಳಲು ಧನವ್ಯಯವನ್ನು ಮಾಡಬೇಕಾಗಿಬರಬಹುದು. ಯಾರ ಕೊತೆ ದ್ವೇಷವನ್ನು ಬೆಳೆಸಿಕೊಳ್ಳಬೇಡಿ. ಯಾರ ಬಗ್ಗೆಯೂ ಪೂರ್ವಾಗ್ರಹಬುದ್ಧಿಯನ್ನು ಬಿಡುವುದು ಒಳ್ಳೆಯದು. ದ್ವಾದಶದ ಶನಿಯಿಂದ ಅನನುಕೂಲಗಳು ಆಗಲಿವೆ.

-ಲೋಹಿತಶರ್ಮಾ, ಇಡುವಾಣಿ

ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಈ ಸೀಸನ್​ನ ಕೊನೆಯ ನಾಮಿನೇಷನ್​ನಲ್ಲಿ ಮಂಜಣ್ಣ ಟಾರ್ಗೆಟ್
ಈ ಸೀಸನ್​ನ ಕೊನೆಯ ನಾಮಿನೇಷನ್​ನಲ್ಲಿ ಮಂಜಣ್ಣ ಟಾರ್ಗೆಟ್
ಬಿಎಂಟಿಸಿ ಟಿಕೆಟ್ ದರ ಹೆಚ್ಚಿರುವ ಬೆನ್ನಲ್ಲೇ ಮೆಟ್ರೋ ಪ್ರಯಾಣ ದರ ಏರಿಕೆ!
ಬಿಎಂಟಿಸಿ ಟಿಕೆಟ್ ದರ ಹೆಚ್ಚಿರುವ ಬೆನ್ನಲ್ಲೇ ಮೆಟ್ರೋ ಪ್ರಯಾಣ ದರ ಏರಿಕೆ!
ಜನಪ್ರತಿನಿಧಿಗಳು ಎಲೆಕ್ಟ್ರಾನಿಕ್ ಮಾಧ್ಯಮಗಳ ನ್ಯೂಸ್ ವೀಕ್ಷಿಸುವುದಿಲ್ಲವೇ?
ಜನಪ್ರತಿನಿಧಿಗಳು ಎಲೆಕ್ಟ್ರಾನಿಕ್ ಮಾಧ್ಯಮಗಳ ನ್ಯೂಸ್ ವೀಕ್ಷಿಸುವುದಿಲ್ಲವೇ?
ಡಿಕೆ ಸುರೇಶ್​ಗೆ ಕೆಪಿಸಿಸಿ ಅಧ್ಯಕ್ಷನಾಗುವ ಹಂಬಲವಿದೆಯೇ?
ಡಿಕೆ ಸುರೇಶ್​ಗೆ ಕೆಪಿಸಿಸಿ ಅಧ್ಯಕ್ಷನಾಗುವ ಹಂಬಲವಿದೆಯೇ?
ಸಚಿವೆಯನ್ನು ಮಾತಾಡಿಸಲು ಆಸ್ಪತ್ರೆಗೆ ಭೇಟಿ ನೀಡದಂತೆ ಜನರಿಗೆ ವೈದ್ಯರ ಮನವಿ
ಸಚಿವೆಯನ್ನು ಮಾತಾಡಿಸಲು ಆಸ್ಪತ್ರೆಗೆ ಭೇಟಿ ನೀಡದಂತೆ ಜನರಿಗೆ ವೈದ್ಯರ ಮನವಿ
ಸಿದ್ದರಾಮಯ್ಯ ತಮ್ಮ ಅಧಿಕಾರಾವಧಿಯನ್ನು ಪೂರ್ತಿಗೊಳಿಸಲ್ಲ: ವಿಜಯೇಂದ್ರ
ಸಿದ್ದರಾಮಯ್ಯ ತಮ್ಮ ಅಧಿಕಾರಾವಧಿಯನ್ನು ಪೂರ್ತಿಗೊಳಿಸಲ್ಲ: ವಿಜಯೇಂದ್ರ
ನಾನೇ ಬಿಜೆಪಿ ರಾಜ್ಯಾಧ್ಯಕ್ಷನಾಗಿ ಮುಂದುವರಿಯುತ್ತೇನೆ: ವಿಜಯೇಂದ್ರ
ನಾನೇ ಬಿಜೆಪಿ ರಾಜ್ಯಾಧ್ಯಕ್ಷನಾಗಿ ಮುಂದುವರಿಯುತ್ತೇನೆ: ವಿಜಯೇಂದ್ರ