Horoscope Today: ಧನು, ಮಕರ, ಕುಂಭ, ಮೀನಾ ರಾಶಿ ಭವಿಷ್ಯ ಹೀಗಿದೆ

ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗಾದರೆ ಇಂದಿನ (2023 ಮಾರ್ಚ್ 30) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭ ಎಂದು  ತಿಳಿದುಕೊಳ್ಳಿ.

Horoscope Today: ಧನು, ಮಕರ, ಕುಂಭ, ಮೀನಾ ರಾಶಿ ಭವಿಷ್ಯ ಹೀಗಿದೆ
ಪ್ರಾತಿನಿಧಿಕ ಚಿತ್ರImage Credit source: istock
Follow us
ಗಂಗಾಧರ​ ಬ. ಸಾಬೋಜಿ
|

Updated on: Mar 30, 2023 | 6:15 AM

ದಿನ, ಸಮಯ ಎಲ್ಲರಿಗೂ ಒಂದೇ ಆದ್ರೂ ಜೀವನದಲ್ಲಿ ನಡೆಯುವ ಘಟನೆಗಳು ವಿಭಿನ್ನ. ಇದಕ್ಕೆ ಕಾರಣ ನಮ್ಮ ಜನ್ಮ ರಾಶಿಗಳಲ್ಲಾಗುವ ಬದಲಾವಣೆ. ನಮ್ಮ ಆರೋಗ್ಯ, ಯಶಸ್ಸು, ಸಂತೋಷ, ನೆಮ್ಮದಿ ಎಲ್ಲವೂ ನಮ್ಮ ರಾಶಿಗಳ ಮೇಲೆ ಅವಲಂಬಿತವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಕೆಲವರು ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗಾದರೆ ಇಂದಿನ (2023 ಮಾರ್ಚ್ 30) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭ ಎಂದು  ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ಮೀನ ಮಾಸ, ಮಹಾನಕ್ಷತ್ರ : ಉತ್ತರಾಭಾದ್ರ, ಮಾಸ : ಚೈತ್ರ, ಪಕ್ಷ : ಶುಕ್ಲ, ವಾರ : ಗುರು, ತಿಥಿ : ನವಮೀ, ನಿತ್ಯನಕ್ಷತ್ರ : ಪುನರ್ವಸು, ಯೋಗ : ಅತಿಗಂಡ, ಕರಣ : ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 30 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 43 ನಿಮಿಷಕ್ಕೆ. ರಾಹು ಕಾಲ ಮಧ್ಯಾಹ್ನ 02:08 ರಿಂದ 03:40ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 06:31 ರಿಂದ 08:02ರ ವರೆಗೆ, ಗುಳಿಕ ಕಾಲ ಬೆಳಗ್ಗೆ 09:34 ರಿಂದ ಮಧ್ಯಾಹ್ನ 11:05ರ ವರೆಗೆ.

ಧನುಸ್ಸು: ಆರೋಗ್ಯವನ್ನು ಕಾಪಾಡಿಕೊಳ್ಳು ಹೆಚ್ಚಿನ ಪ್ರಯತ್ನ ಅವಶ್ಯಕ. ಖರ್ಚುಗಳಿಗೆ ಸ್ವಂತ ಹಣವನ್ನು ಬಳಸಿ. ಬಾಕಿಯಿರುವ ಗೃಹಕೃತ್ಯಗಳನ್ನು ಪೂರೈಸಲು ಒಂದು ಅನುಕೂಲಕರ ದಿನ. ಘಟನೆಗಳು ಉತ್ತಮ ಮತ್ತು ಗೊಂದಲಮಯವಾಗಿರುವ ಒಂದು ದಿನ – ಇದು ನಿಮ್ಮನ್ನು ದಣಿವು ಹಾಗೂ ಗೊಂದಲದಲ್ಲಿರಿಸುತ್ತದೆ. ಮಕ್ಕಳ ಆರೋಗ್ಯದ ಮೇಲೆ ಗಮನಬೇಕಿದೆ. ಎಲ್ಲ ಹತಾಶೆ, ನೋವು, ಸಂಕಟ, ತುಮುಲಗಳನ್ನು ನಿವಾರಿಸಿಕೊಳ್ಳಲು ಒಳ್ಳೆಯ ಸಮಯವಾಗಿದೆ. ಆಪ್ತರು ಎನಿಸಿದ ಸ್ನೇಹಿತರ ಜೊತೆ ಆಗಿದ್ದ ನೋವನ್ನು ಹೇಳಿಕೊಂಡು ಹಗುರಾಗಿ.

ಮಕರ: ನಿಮ್ಮ ಕುಟುಂಬ ಜೊತೆ ಆನಂದದಿಂದ ಕಾಲವನ್ನು ಕಳೆಯುವ ಮನಸ್ಸಿರಲಿದೆ. ಕಾರ್ಯದ ಒತ್ತಡದಿಂದ ಪೂರ್ತಿಯಾಗಿ ಆಗದೇ ಹೋಗಬಹುದು. ಸಹೋದರರಿಂದ ಉದ್ಯೋಗಕ್ಕೆ ಸಂಬಂಧಿಸಿದ ಕೆಲವು ಮಾಹಿತಿಗಳು ಸಿಗಬಹುದು. ಮಕ್ಕಳ ವಿದ್ಯಾಭ್ಯಾಸಕ್ಕೆ ಹಣದ ಅಭಾವವಾಗಲಿದೆ. ಬ್ಯಾಂಕ್ ನಿಂದ ಸಾಲವನ್ನು ಪಡೆಯುವಿರಿ. ಇಂದು ನಿಮ್ಮ ಸಾಮಾರ್ಥ್ಯವನ್ನು ವ್ಯಕ್ತಪಡಿಸಲು ಸಕಾಲ. ಮನೆಯಲ್ಲಿ ಇಂದು ನಿಮ್ಮ ತುಂಬಾ ಕೀಳಾಗಿ ಮಾತನಾಡಬಹುದು. ಇದೇ ನಿಮಗೆ ಛಲವಾಗಿಯೂ ಪರಿಣಾಮ ಬೀರಿ ಉತ್ತಮವಾದ ಯೋಜನೆಗಳನ್ನು ರೂಪಿಸಿ. ಪ್ರೇಮವು ಅಂಕುರಿಸಬಹುದು. ಅಷ್ಟಮಾಧಿಪತಿಯು ತೃತೀಯದಲ್ಲಿರುವ ಪ್ರಭಾವು ಇಂದು ಸ್ವಲ್ಪ ಕಡಿಮೆ ಇರಬಹುದು. ಸೂರ್ಯಾಷ್ಟವನ್ನು ಓದಿ.

ಕುಂಭ: ಇಂದು ಯಾವುದೇ ವಿಚಾರಕ್ಕೆ ಯಾರನ್ನೂ ನಂಬಬೇಡಿ. ಹಣಕಾಸಿನ ವಿಚಾರದಲ್ಲಿ ಬಹಳ ಜಾಗರೂಕರಾಗಿರಿ. ಮೋಸ ಹೋಗುವ ಸಾಧ್ಯತೆ ಇದೆ. ಆತುರದ ತೀರ್ಮಾನ ಹಾಗೂ ಒತ್ತಡಗಳಿಗೆ ಸಿಲಿಕದೇ ಎಚ್ಚರಿಕೆಯಿಂದಿರಿ. ಕೊಟ್ಟ ಸಾಲ ಮರಳಿಬರಹುದು. ಸ್ನೇಹಿತರ ಒತ್ತಾಯ ಮೇರಗೆ ಸುತ್ತಾಟ ನಡೆಸುವಿರಿ. ಆಯಾಸವಾಗಿ ವಿಶ್ರಾಂತಿಯನ್ನು ಪಡೆಯುವಿರಿ. ನಿಮ್ಮ ವಿರುದ್ಧ ಸಲ್ಲದ ಮಾತುಗಳು ಕೇಳಿಬರಬಹುದು. ಸಮರ್ಥನೆಯನ್ನು ಕೊಟ್ಟು ಸಮಯವನ್ನು ವ್ಯರ್ಥಮಾಡಬೇಡಿ. ಸ್ವಲ್ಪ‌ಕಾಲದಲ್ಲಿ ಎಲ್ಲವೂ ಸ್ಪಷ್ಟವಾಗಿ ಗೋಚರವಾಗುವುದು. ಶಿವಕವಚವನ್ನು ಓದಿ.

ಮೀನ: ಸಾಲಬಾಧೆಯಿಂದ ಕೆಟ್ಟ ಕೆಲಸವನ್ನು ಮಾಡಲು ಪ್ರೇರಣೆಯಾಗಬಹುದು. ಇದರಿಂದ ಇನ್ನಷ್ಟು ತೊಂದರೆ ಸಿಕ್ಕಿಹಾಕಿಕೊಳ್ಳುವ ಸ್ಥಿತಿ ಎದುರಾದೀತು. ಸ್ನೇಹಿತರು ನಿಮ್ಮ ಜೊತೆಗೇ ಇದ್ದು ನಿಮ್ಮ ಎಲ್ಲ ಆಗುಹೋಗುಗಳಿಗೂ ಜೊತೆಯಾಗುವರು. ಉದ್ವಿಗ್ನಗೊಳ್ಳದೇ ಸಮಾಧಾನದಿಂದ ಇರಬೇಕಾದ ಅವಶ್ಯಕತೆಯಿದೆ. ಕೆಲಸದಲ್ಲಿ ಗೊಂದಲ, ಹತಾಶೆ, ನಿರುತ್ಸಾಹದ ಉಂಟಾಗಬಹುದು. ವ್ಯಸನಕ್ಕೆ ತುತ್ತಾಗಿ ಹಣವನ್ನೂ ಆರೋಗ್ಯವನ್ನೂ ಕಳೆದುಕೊಳ್ಳಬೇಕಾಗಬಹುದು. ತೈಲ‌ ಮುಂತಾದ ವ್ಯಾಪರದಲ್ಲಿ ಲಾಭವಾಗಲಿದೆ. ವಿದ್ಯಾರ್ಥಿಗಳು ಪರಿಶ್ರಮದ ಓದಿಗೆ ಫಲಸಿಗಬಹುದು.

ಲೋಹಿತಶರ್ಮಾ, ಇಡುವಾಣಿ

ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಈ ಸೀಸನ್​ನ ಕೊನೆಯ ನಾಮಿನೇಷನ್​ನಲ್ಲಿ ಮಂಜಣ್ಣ ಟಾರ್ಗೆಟ್
ಈ ಸೀಸನ್​ನ ಕೊನೆಯ ನಾಮಿನೇಷನ್​ನಲ್ಲಿ ಮಂಜಣ್ಣ ಟಾರ್ಗೆಟ್
ಬಿಎಂಟಿಸಿ ಟಿಕೆಟ್ ದರ ಹೆಚ್ಚಿರುವ ಬೆನ್ನಲ್ಲೇ ಮೆಟ್ರೋ ಪ್ರಯಾಣ ದರ ಏರಿಕೆ!
ಬಿಎಂಟಿಸಿ ಟಿಕೆಟ್ ದರ ಹೆಚ್ಚಿರುವ ಬೆನ್ನಲ್ಲೇ ಮೆಟ್ರೋ ಪ್ರಯಾಣ ದರ ಏರಿಕೆ!
ಜನಪ್ರತಿನಿಧಿಗಳು ಎಲೆಕ್ಟ್ರಾನಿಕ್ ಮಾಧ್ಯಮಗಳ ನ್ಯೂಸ್ ವೀಕ್ಷಿಸುವುದಿಲ್ಲವೇ?
ಜನಪ್ರತಿನಿಧಿಗಳು ಎಲೆಕ್ಟ್ರಾನಿಕ್ ಮಾಧ್ಯಮಗಳ ನ್ಯೂಸ್ ವೀಕ್ಷಿಸುವುದಿಲ್ಲವೇ?
ಡಿಕೆ ಸುರೇಶ್​ಗೆ ಕೆಪಿಸಿಸಿ ಅಧ್ಯಕ್ಷನಾಗುವ ಹಂಬಲವಿದೆಯೇ?
ಡಿಕೆ ಸುರೇಶ್​ಗೆ ಕೆಪಿಸಿಸಿ ಅಧ್ಯಕ್ಷನಾಗುವ ಹಂಬಲವಿದೆಯೇ?
ಸಚಿವೆಯನ್ನು ಮಾತಾಡಿಸಲು ಆಸ್ಪತ್ರೆಗೆ ಭೇಟಿ ನೀಡದಂತೆ ಜನರಿಗೆ ವೈದ್ಯರ ಮನವಿ
ಸಚಿವೆಯನ್ನು ಮಾತಾಡಿಸಲು ಆಸ್ಪತ್ರೆಗೆ ಭೇಟಿ ನೀಡದಂತೆ ಜನರಿಗೆ ವೈದ್ಯರ ಮನವಿ
ಸಿದ್ದರಾಮಯ್ಯ ತಮ್ಮ ಅಧಿಕಾರಾವಧಿಯನ್ನು ಪೂರ್ತಿಗೊಳಿಸಲ್ಲ: ವಿಜಯೇಂದ್ರ
ಸಿದ್ದರಾಮಯ್ಯ ತಮ್ಮ ಅಧಿಕಾರಾವಧಿಯನ್ನು ಪೂರ್ತಿಗೊಳಿಸಲ್ಲ: ವಿಜಯೇಂದ್ರ
ನಾನೇ ಬಿಜೆಪಿ ರಾಜ್ಯಾಧ್ಯಕ್ಷನಾಗಿ ಮುಂದುವರಿಯುತ್ತೇನೆ: ವಿಜಯೇಂದ್ರ
ನಾನೇ ಬಿಜೆಪಿ ರಾಜ್ಯಾಧ್ಯಕ್ಷನಾಗಿ ಮುಂದುವರಿಯುತ್ತೇನೆ: ವಿಜಯೇಂದ್ರ