Daily Horoscope: ಧನು, ಮಕರ, ಕುಂಭ, ಮೀನ ರಾಶಿಯವರ ಇಂದಿನ ಭವಿಷ್ಯ

ನೀವು ಧನು, ಮಕರ, ಕುಂಭ, ಮೀನ ರಾಶಿಯವರೇ? ಹಾಗಿದ್ದರೆ ಇಂದಿನ (2023 ಮೇ 1) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Daily Horoscope: ಧನು, ಮಕರ, ಕುಂಭ, ಮೀನ ರಾಶಿಯವರ ಇಂದಿನ ಭವಿಷ್ಯ
ಇಂದಿನ ರಾಶಿ ಭವಿಷ್ಯImage Credit source: istock
Follow us
Rakesh Nayak Manchi
|

Updated on: May 01, 2023 | 6:25 AM

ಶುಭೋದಯ ಓದುಗರೇ. ಪ್ರತಿಯೊಬ್ಬರ ಜೀವನದಲ್ಲಿ ರಾಶಿ ಭವಿಷ್ಯ ವಿಭಿನ್ನವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದ್ರೆ ಇಂದಿನ (2023 ಮೇ 1) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ : ಭರಣೀ, ಮಾಸ : ವೈಶಾಖ, ಪಕ್ಷ : ಶುಕ್ಲ, ವಾರ : ಸೋಮ, ತಿಥಿ: ಏಕಾದಶೀ, ನಿತ್ಯನಕ್ಷತ್ರ: ಉತ್ತರಾಫಲ್ಗುಣೀ, ಯೋಗ: ಧ್ರುವ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 11 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 47 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 07:46 ರಿಂದ 09:20 ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 10:55 ರಿಂದ ಮಧ್ಯಾಹ್ನ 12:30ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 02:04 ರಿಂದ 03:39ರ ವರೆಗೆ.

ಧನು: ನಿಮ್ಮ ಹಳೆಯ ವಾಹನವನ್ನು ಮಾರಾಟಮಾಡುವ ಆಲೋಚನೆ ಮಾಡುವಿರಿ. ಉದ್ಯೋಗದ ನಿಮಿತ್ತ ನೀವು ಹೊರದೇಶಕ್ಕೆ ಹೋಗಬಹುದು. ಅನೇಕ ವರ್ಷಗಳ ಅನಂತರ ಆದ ಸಂತಾನದಿಂದ ಸಂತಸ ಆಗಲಿದೆ. ವಿದ್ಯುತ್ ಉಪಕರಣವನ್ನು ನೀವು ಖರೀದಿಸುವಿರಿ. ವಿವಾಹ ಸಮಾರಂಭಗಳಿಗೆ ಭೇಟಿ ಕೊಡುವಿರಿ. ಹಳೆಯ ಸ್ನೇಹಿತರು ಸಿಕ್ಕಿ ಹಳೆಯ ವಿಚಾರಗಳನ್ನು ಸ್ಮರಿಸಿಕೊಳ್ಳುವಿರಿ. ಸ್ವಂತ ಉದ್ಯೋಗವಿದ್ದರೆ ಹೆಚ್ಚು ಶ್ರಮ ಆದೀತು. ನೀವು ಊಹಿಸದಂತೆ ಘಟನೆಗಳು ನಡೆಯುವುದು. ಕಂಡ ಕನಸನ್ನು ಕನಸಾಗಿಯೇ ಇಟ್ಟುಕೊಳ್ಳಿ.

ಮಕರ: ಅಸಂಬದ್ಧ ಮಾತುಗಳನ್ನು ಕೇಳಿ ನಿಮಗೆ ಬೇಸರವಾದೀತು. ಕೋಪ ಮಾಡಿಕೊಳ್ಳುವಿರಿ. ಧಾರ್ಮಿಕ ಕಾರ್ಯಕ್ರಮದಲ್ಲಿ ಭಕ್ತಿಯಿಂದ ಭಾಗವಹಿಸುವಿರಿ. ವಾಹನದಿಂದ ಆಗುವ ಅಪಘಾತವು ಸಣ್ಣ ಅಂತರದಿಂದ ರಕ್ಷಣೆಯಾಗುವಿರಿ. ಪುಣ್ಯದ ಸ್ಮರಣೆ ನಿಮಗಾಗಲಿದೆ. ಗೃಹಪ್ರವೇಶಕ್ಕೆ ಮನೆಯು ಸಿದ್ಧವಾಗಿದ್ದು ಪ್ರವೇಶಕ್ಕೆಂದು ಒಳ್ಳೆಯ ದಿನವನ್ನು ಹುಡುಕುತ್ತಿರುವಿರಿ. ಸ್ನೇಹಿತರ ಅಥವಾ ಕುಟುಂಬದ ಜೊತೆ ಪ್ರವಾಸಕ್ಕೆ ಹೋಗುವ ಮನಸ್ಸಾಗುವುದು. ಆರ್ಥಿಕವಾಗಿ ದುರ್ಬಲವಲ್ಲದಿದ್ದರೂ ಸಮಯಕ್ಕೆ ಸರಿಯಾಗಿ ಹಣವಂತೂ ಸಿಗದು.

ಕುಂಭ: ದಾಂಪತ್ಯವು ಸುಖವಾಗಿರಲು ಇಬ್ಬರೂ ಪ್ರಯತ್ನಿಸಬೇಕು. ಜಟಕಾ ಬಂದಿಯಂತಿದ್ದರೆ ಸರಸಜೀವನ. ಇಲ್ಲವಾದರೆ ವಿರಸವಾಗುವುದು. ನಿಮ್ಮನ್ನು ಅರ್ಥಮಾಡಿಕೊಳ್ಳಲು ಜನರು ಬಹಳ ಪ್ರಯತ್ನಿಸಬಹುದು. ನಿಮ್ಮ ನಡೆಯು ಸುಲಭಕ್ಕೆ ತಿಳಿಯದು. ಐಷಾರಾಮಿಯಾಗಿ ಇರಲು ಈ ದಿನವನ್ನು ಇಷ್ಟಪಡುವಿರಿ. ಅನಿರೀಕ್ಷಿತವಾಗಿ ಧನಾಗಮನದಿಂದ ಸಂತೋಷ ಸಿಗಲಿದೆ. ಸ್ನೇಹಿತರಿಗೆ ಸಹಾಯವನ್ನು ಮಾಡುವಿರಿ. ಕಾರ್ಯವು ನಿಧಾನವಾಗಿದೆ ಎಂದು ಕಂಡರೂ ಚಿಂತೆ ಬೇಡ.‌ ಪೂರ್ಣವಾಗಲಿ ಸರಿಯಾಗಿ.

ಮೀನ: ಮನೆಯಲ್ಲಿಯೇ ಇರುವ ನಿಮಗೆ ಮನೆಯವರ ಮಾತುಗಳು ಕಿರಿಕಿರಿ‌ ಎನಿಸಬಹುದು. ಮನೆಯ ಕೆಲಸಗಳನ್ನು ಮಾಡಲು ನೀವು ಹಿಂಜರಿಯುವಿರಿ. ನೀವು ಇಂದು ನಡೆದಾಡಲೂ ಇಷ್ಟಪಡುವುದಿಲ್ಲ. ಒಂದು ಸಂದರ್ಭದಂತೆ ಮತ್ತೊಂದು ಸಂದರ್ಭವನ್ನು ಊಹಿಸಿಕೊಳ್ಳಬೇಡಿ. ನಿಮ್ಮ ವೇಗವನ್ನು ಹಿಮ್ಮೆಟ್ಟಿಸಲು ನಾನಾ ತಂತ್ರಗಳು ನಡೆಯಬಹುದು. ನಿಮ್ಮ ಕೆಲಸವೇ ಅವರಿಗೆ ಉತ್ತರವಾಗಲಿ. ಮಾತು ಆದಷ್ಟು ಕಡಿಮೆ ಇರುವುದೇ ಒಳ್ಳೆಯದು. ಅಸಹಜವಾದ ಖುಷಿಯಿಂದ ಇರುವಿರಿ. ಕಾಲಕ್ಕೆ ಆಗಬೇಕಾದುದು ಆಗುವುದು.

-ಲೋಹಿತಶರ್ಮಾ ಇಡುವಾಣಿ

ಬಿಗ್ ಬಾಸ್ ಮನೆಗೆ ನುಗ್ಗಿದ ಅಭಿಮಾನಿಗಳು; ಭಯಬಿದ್ದ ಸ್ಪರ್ಧಿಗಳು
ಬಿಗ್ ಬಾಸ್ ಮನೆಗೆ ನುಗ್ಗಿದ ಅಭಿಮಾನಿಗಳು; ಭಯಬಿದ್ದ ಸ್ಪರ್ಧಿಗಳು
Hanuman Chalisa: ಹನುಮಾನ್ ಚಾಲಿಸಾದ ವಿಶೇಷ ಹಾಗೂ ಮಹತ್ವ
Hanuman Chalisa: ಹನುಮಾನ್ ಚಾಲಿಸಾದ ವಿಶೇಷ ಹಾಗೂ ಮಹತ್ವ
ರವಿ ಮಕರ ರಾಶಿಯಲ್ಲಿ, ಚಂದ್ರ ತುಲಾ ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದೆ
ರವಿ ಮಕರ ರಾಶಿಯಲ್ಲಿ, ಚಂದ್ರ ತುಲಾ ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದೆ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ಸಂಜು; ವಿಡಿಯೋ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ಸಂಜು; ವಿಡಿಯೋ
ಅತಿ ಎತ್ತರದ ಮಾನವ ಪಿರಮಿಡ್ ನಿರ್ಮಿಸಿ ಭಾರತೀಯ ಸೇನೆಯಿಂದ ವಿಶ್ವ ದಾಖಲೆ
ಅತಿ ಎತ್ತರದ ಮಾನವ ಪಿರಮಿಡ್ ನಿರ್ಮಿಸಿ ಭಾರತೀಯ ಸೇನೆಯಿಂದ ವಿಶ್ವ ದಾಖಲೆ
ಕುಡಿದ ನಶೆಯಲ್ಲಿ ಏನೇನೋ ಮಾತನಾಡಿದ ಎನ್ನುವ ಕಾರಣಕ್ಕೆ ಹೊಡೆದು ಕೊಂದರು!
ಕುಡಿದ ನಶೆಯಲ್ಲಿ ಏನೇನೋ ಮಾತನಾಡಿದ ಎನ್ನುವ ಕಾರಣಕ್ಕೆ ಹೊಡೆದು ಕೊಂದರು!
ಶ್ರೀರಾಮುಲು-ಜನಾರ್ಧನ ರೆಡ್ಡಿ ಜಗಳದ ಹಿನ್ನೆಲೆಯಲ್ಲಿ ಹಿರಿಯರ ಸಭೆ?
ಶ್ರೀರಾಮುಲು-ಜನಾರ್ಧನ ರೆಡ್ಡಿ ಜಗಳದ ಹಿನ್ನೆಲೆಯಲ್ಲಿ ಹಿರಿಯರ ಸಭೆ?
ಯಾರು ಬಿಗ್ ಬಾಸ್ ಗೆಲ್ತಾರೆ ಅಂತ ನಾನು ಹೇಳಲ್ಲ: ಪ್ರಥಮ್ ಖಡಕ್ ಮಾತು
ಯಾರು ಬಿಗ್ ಬಾಸ್ ಗೆಲ್ತಾರೆ ಅಂತ ನಾನು ಹೇಳಲ್ಲ: ಪ್ರಥಮ್ ಖಡಕ್ ಮಾತು
ನಿಯೋಗ ಹೊತ್ತು ತಂದಿದ್ದ ಕಬ್ಬನ್ನು ಕಚೇರಿಯಲ್ಲೇ ಮುರಿದು ತಿಂದ ಸಿದ್ದರಾಮಯ್ಯ
ನಿಯೋಗ ಹೊತ್ತು ತಂದಿದ್ದ ಕಬ್ಬನ್ನು ಕಚೇರಿಯಲ್ಲೇ ಮುರಿದು ತಿಂದ ಸಿದ್ದರಾಮಯ್ಯ
ಕೆಡಿಪಿ ಸಭೆಗಳನ್ನು ಹಗುರವಾಗಿ ಪರಿಗಣಿಸುವ ಪ್ರವೃತ್ತಿ ನಿಲ್ಲಬೇಕು
ಕೆಡಿಪಿ ಸಭೆಗಳನ್ನು ಹಗುರವಾಗಿ ಪರಿಗಣಿಸುವ ಪ್ರವೃತ್ತಿ ನಿಲ್ಲಬೇಕು