ಶುಭೋದಯ ಓದುಗರೇ. ಪ್ರತಿಯೊಬ್ಬರ ಜೀವನದಲ್ಲಿ ರಾಶಿ ಭವಿಷ್ಯ ವಿಭಿನ್ನವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದರೆ ಇಂದಿನ (2023 ಮೇ 6) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ತಿಳಿದುಕೊಳ್ಳಿ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ : ಭರಣೀ, ಮಾಸ : ವೈಶಾಖ, ಪಕ್ಷ : ಶುಕ್ಲ, ವಾರ : ಕೃಷ್ಣ, ತಿಥಿ : ಅಮಾವಾಸ್ಯಾ, ನಿತ್ಯನಕ್ಷತ್ರ : ವಿಶಾಖಾ, ಯೋಗ : ವ್ಯತಿಪಾತ್, ಕರಣ : ಬಾಲವ, ಸೂರ್ಯೋದಯ ಬೆಳ್ಳಿಗೆ 06 ಗಂಟೆ 09 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 49 ನಿಮಿಷಕ್ಕೆ. ರಾಹು ಕಾಲ ಬೆಳಗ್ಗೆ 09:19 ರಿಂದ 10:54ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 02:04 ರಿಂದ 03:39ರ ವರೆಗೆ, ಗುಳಿಕ ಕಾಲ ಬೆಳಗ್ಗೆ 06:09 ರಿಂದ 07:44ರ ವರೆಗೆ.
ಧನಸ್ಸು: ಬಹುದಿನದ ಆಸೆಗಳು ಕೈಗೂಡುವ ಹಂತದಲ್ಲಿ ಇದ್ದರೂ ತಪ್ಪಬಹುದು. ಇಂದು ನಿಮ್ಮ ಸಂಬಂಧದಲ್ಲಿ ಅನಗತ್ಯ ಮಾತುಗಳು, ವಿವಾದಗಳು ಉಂಟುಮಾಡಬಹುದು. ಆರೋಗ್ಯವಾಗಿರಲು ಚಿಕಿತ್ಸೆಯನ್ನು ನಿರಂತರ ಮಾಡುವುದು ಅವಶ್ಯಕ. ಸಕಾರಾತ್ಮಕ ಆಲೋಚನೆ ನಿಮ್ಮನ್ನು ಸರಿ ದಾರಿಗೆ ಕೊಂಡೊಯ್ಯಬಹುದು. ಪ್ರೀತಿಪಾತ್ರರ ಜೊತೆ ಹೆಚ್ಚು ಸಲುಗೆಯಿಂದ ಇರುವಿರಿ. ನಿಮ್ಮ ಕಷ್ಟಕ್ಕೆ ಆದವರನ್ನು ಮರೆಯಬೇಡಿ. ಒಬ್ಬರಮೇಲೆ ಒಬ್ಬರು ಆರೋಪ ಪ್ರತ್ಯಾರೋಪಗಳನ್ನು ಮಾಡುತ್ತ ಇಂದು ಇರಬಹುದು. ಇಂದು ಒತ್ತಡ ಇರುವುದರಿಂದ ಅಲ್ಪ ಭೋಜನವನ್ನು ಮಾಡುವ ಸಂದರ್ಭವೂ ಬರಲಿದೆ.
ಮಕರ: ಉತ್ತಮ ಕಾಲವು ಬರಲಿ ಎಂದು ನಿರೀಕ್ಷೆಯಲ್ಲಿ ಇರುವಿರಿ. ಮನೆಯಲ್ಲಿ ಯಾರೂ ಹೇಳಿಕೊಳ್ಳಲಾಗದ ಅಸಮಾಧಾನವಿರಲಿದೆ. ಸ್ತ್ರೀಮೂಲದಿಂದ ಧನಸಹಾಯವು ಆಗಬಹುದು. ಕೆಲವು ಕಷ್ಟಕರ ಸಂದರ್ಭಗಳಲ್ಲಿ ನಿಮಗೆ ಕಷ್ಟವಾದಿ. ಪರಿಸ್ಥಿತಿಯು ಋಣಾತ್ಮಕ ಅಂಶಗಳ ಮೇಲೆ ಗಮನಹರಿಸುವಿರಿ. ಸಮಸ್ಯೆಗಳನ್ನು ನಿಭಾಯಿಸಲು ನೀವು ಸೋಲಬಹುದು. ನೀವು ಅನಾರೋಗ್ಯದಿಂದ ಬಳಲುತ್ತಿದ್ದರೆ, ನೀವು ಬೇಗನೆ ಚೇತರಿಸಿಕೊಳ್ಳುವುದು ಉತ್ತಮ. ನಿಮ್ಮ ಕೆಲಸದಲ್ಲಿ ಸಮಯ ಮತ್ತು ಶ್ರಮವನ್ನು ಹಾಕಿದ್ದರೆ ನೀವು ಗುರಿಯನ್ನು ಸಾಧಿಸುವಿರಿ.
ಕುಂಭ: ಕಳೆದುಕೊಂಡದ್ದರ ಬಗ್ಗೆ ಚಿಂತೆ ಬಿಟ್ಟು ಮುಂದೇನು ಆಗಬೇಕು ಎಂಬ ಬಗ್ಗೆ ಆಲೋಚಿಸಿ ಸಂತೋಷವಾಗಿರಬಹುದು. ನಿಮ್ಮ ಸ್ವಭಾವಕ್ಕೆ ಯೋಗ್ಯರಾದವರನ್ನು ಆರಿಸಿಕೊಳ್ಳಲು ಕಷ್ಟವಾಗಬಹುದು. ಅನಿವಾರ್ಯ ಕಾರಣದಿಂದ ನಿಮಗೆ ಪ್ರಯಾಣ ಮಾಡಬೇಕಾದ ಸ್ಥಿತಿ ಬರುವ ಸಾಧ್ಯತೆ ಇದೆ. ಆಸಕ್ತಿದಾಯಕವಾದದ್ದನ್ನು ಮಾಡಲು ಅಥವಾ ನಿಮ್ಮ ಸ್ನೇಹಿತರೊಂದಿಗೆ ಮೋಜು ಮಾಡಲು ನೀವು ಸ್ಫೂರ್ತಿ ಪಡೆಯಬಹುದು. ನಿಮ್ಮ ವೈಯಕ್ತಿಕ ಜೀವನ ಮತ್ತು ನಿಮ್ಮ ಆರೋಗ್ಯವು ನಿಮ್ಮ ಕೈಯ್ಯಲಿದೆ. ವಾಹನವನ್ನು ಚಲಾಯಿಸುವಾಗ ಬಹಳ ಎಚ್ಚರಿಕೆ ಅಗತ್ಯ.
ಮೀನ: ನಿಮ್ಮ ಅತಿಯಾದ ಲೆಕ್ಕಾಚಾರವು ಬುಡ ಮೇಲಾಗುವ ಸಾಧ್ಯತೆ ಇದೆ. ವಾಹನವನ್ನು ರಿಪೇರಿ ಮಾಡಿಸುವ ಕೆಲಸವೇ ಇಂದು ಹೆಚ್ಚಾದೀತು. ಯಾವ ಕೆಲಸವೂ ಆಗದೇ ಕಿರಿಕಿರಿಯಿಂದ ಸಿಟ್ಟುಗೊಳ್ಳುವಿರಿ. ಕೃಷಿಕರಿಗೆ ಇಂದು ಸ್ವಲ್ಪ ಜಾಡ್ಯವೂ ಇರಬಹುದು. ಆಪ್ತರನ್ನು ಭೇಟಿಯಾಗುವ ಮನಸ್ಸೂ ಇಲ್ಲದೇ ಮನೆಯಲ್ಲಿಯೇ ವಿಶ್ರಾಂತಿ ಪಡೆಯುವಿರಿ. ಮಕ್ಕಳ ಪ್ರಶ್ನೆಗಳಿಗೆ ನೀವು ಉತ್ತರ ಕೊಡಲು ಕಷ್ಟ ಪಡಬೇಕಾದೀತು. ಯಾವುದನ್ನೂ ಯೋಚಿಸದೇ ಇಂದು ನಿಶ್ಚಿಂತೆಯಿಂದ ಇರಲು ಇಚ್ಛಿಸುವಿರಿ. ತಂದೆಯಿಂದ ಬೈಗುಳಗಳು ಸಿಕ್ಕಿಯಾವು.
-ಲೋಹಿತಶರ್ಮಾ ಇಡುವಾಣಿ