ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಜೂ.6ರ ರಾಶಿ ಭವಿಷ್ಯದಲ್ಲಿ ಮೇಷ ರಾಶಿಯಿಂದ ಕಟಕ ರಾಶಿಯವರೆಗೆ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ವೃಷಭ ಮಾಸ, ಮಹಾನಕ್ಷತ್ರ: ರೋಹಿಣೀ, ಮಾಸ: ವೈಶಾಖ, ಪಕ್ಷ: ಕೃಷ್ಣ, ವಾರ: ಗುರು, ತಿಥಿ: ಚತುರ್ದಶೀ, ನಿತ್ಯನಕ್ಷತ್ರ: ಕೃತ್ತಿಕಾ, ಯೋಗ: ಸುಕರ್ಮ, ಕರಣ: ಶಕುನಿ, ಸೂರ್ಯೋದಯ ಬೆಳಗ್ಗೆ 06 ಗಂಟೆ 03 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 59 ನಿಮಿಷಕ್ಕೆ, ರಾಹು ಕಾಲ 14:08ರಿಂದ 15:45ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 06:04ರಿಂದ ಬೆಳಗ್ಗೆ 07:41ರ ವರೆಗೆ, ಗುಳಿಕ ಕಾಲ ಬೆಳಗ್ಗೆ 09:18 ರಿಂದ 10:55ರ ವರೆಗೆ.
ಧನು ರಾಶಿ : ಆರ್ಥಿಕ ವಿಚಾರಕ್ಕೆ ಸಂಗಾತಿಯ ಜೊತೆ ವೈಮನಸ್ಯ ಉಂಟಾಗುವುದು. ಮನೆಯಲ್ಲಿ ನಿಮ್ಮ ಮಾತಿಗೆ ಬೆಲೆ ಸಿಗುತ್ತದೆ. ದಿನಚರಿಯ ವ್ಯತ್ಯಾಸದಿಂದ ಆರೋಗ್ಯ ಕೆಡಬಹುದು. ಅನಿರೀಕ್ಷಿತ ಸಂಪತ್ತು ಸಿಗುವ ಸಾಧ್ಯತೆ ಇದೆ. ನೀವು ಬಳಸುತ್ತಿರುವ ಹಳೆಯ ವಾಹನವನ್ನು ಮಾರಾಟ ಮಾಡುವಿರಿ. ಸಮಾರಂಭಗಳಲ್ಲಿ ಭಾಗವಹಿಸಲು ಆಸಕ್ತಿ ವಹಿಸುವಿರಿ. ಎಲ್ಲರ ಜೊತೆ ಪ್ರೀತಿ ದಿಂದ ನಡೆದುಕೊಳ್ಳುವಿರಿ. ಕುಟುಂಬಕ್ಕೆ ಸಂಬಂಧಪಟ್ಟಂತೆ ಅನೇಕ ಧಾರ್ಮಿಕ ಕಾರ್ಯಗಳನ್ನು ಮಾಡುವಿರಿ. ಸಂಗಾತಿಯ ಜೊತೆಯಿಂದ ಮನಸ್ತಾಪವು ದೂರವಾಗಲಿದೆ. ಸ್ಪರ್ಧೆಯ ವಿಷಯದಲ್ಲಿ ಮುನ್ನುಗ್ಗುವ ಸ್ವಭಾವವು ಇರಲಿದೆ. ದೂರ ಪ್ರಯಾಣವನ್ನು ನೋವು ಹೆಚ್ಚು ಇಷ್ಟಪಡುವಿರಿ. ತಂದೆಯಿಂದ ಸಹಕಾರವನ್ನು ಪಡೆಯುವಿರಿ. ನಿಮ್ಮ ನೇರ ಮಾತಿನಿಂದ ತೊಂದರೆ ಆಗಬಹುದು. ಪ್ರೇಮದಲ್ಲಿ ಯಾರನ್ನಾದರೂ ನಿಮ್ಮವರನ್ನಾಗಿ ಮಾಡಿಕೊಳ್ಳುವ ಕಲೆ ನಿಮಗೆ ತಿಳಿಯದು.
ಮಕರ ರಾಶಿ : ನೀವು ಸಣ್ಣ ಬುದ್ಧಿಯನ್ನು ಬಿಟ್ಟು ವ್ಯವಹರಿಸಿದರೆ ವ್ಯಾಪರಕ್ಕೆ ಅನುಕೂಲವಿದೆ. ಅನೇಕ ಶುಭಸೂಚನೆಗಳು ನಿಮಗೆ ಕಾಣಿಸುವುದು. ನಿಮ್ಮನ್ನು ಗಮನಿಸುವವರು ಹತ್ತಾರು ಮಂದಿಯಿರುತ್ತಾರೆ. ಅವರೇನೇ ಹೇಳಿದರೂ ನಿಮ್ಮ ಸನ್ಮಾರ್ಗವನ್ನು ಬಿಡಬೇಡಿ. ಮನಸ್ಸಿಲ್ಲದಿದ್ದರೂ ಕುಟುಂಬದ ಜವಾಬ್ದಾರಿಗಳನ್ನು ಒಪ್ಪಿಕೊಳ್ಳಬೇಕಾಗುತ್ತದೆ. ಕೆಲವು ಸಮಸ್ಯೆಗಳು ಮರುಕಳಿಸುತ್ತವೆ. ಆತ್ಮೀಯರ ಸಹಕಾರ ದೊರೆಯುವ ಕಾರಣ ನೆಮ್ಮದಿಗೆ ಕೊರತೆ ಇಲ್ಲ. ಇಷ್ಟವಿಲ್ಲದಿದ್ದರೂ ವಿವಾಹ ಮಾತುಕತೆ ನಡೆಯಲಿದೆ. ಕೆಲಸ ಕಾರ್ಯಗಳಲ್ಲಿ ನಿಮ್ಮಲ್ಲಿದ್ದ ಉತ್ಸಾಹ ಕಡಿಮೆಯಾಗಲಿದೆ. ಕೆಲವೊಂದು ಕೆಲಸ ಕಾರ್ಯಗಳು ಅಪೂರ್ಣಗೊಳ್ಳಲಿದೆ. ಪಾಲುದಾರಿಕೆಯಲ್ಲಿ ಸಣ್ಣ ವಿಷಯವನ್ನೂ ಗಂಭೀರವಾಗಿ ಪರಿಹಣಿಸುವಿರಿ. ಸಹೋದ್ಯೋಗಿಗಳ ಕಿರಿಕಿರಿಯಿಂದ ಉದ್ಯೋಗವನ್ನು ಬದಲಿಸುವಿರಿ. ಇಂದು ಸ್ತ್ರೀಯರಿಗೆ ಅನಿರೀಕ್ಷಿತ ತೊಂದರೆಗಳು ಬರಬಹುದು. ನೆರೆಹೊರೆಯರ ಜೊತೆ ವಾಗ್ವಾದ ಬೇಡ.
ಕುಂಭ ರಾಶಿ :ಇಂದು ನಿಮ್ಮ ಕೆಲವು ಮಾತುಗಳು ಬೇರೆಯವರು ಆತುರದ ನಿರ್ಧಾರವನ್ನು ತೆಗದುಕೊಳ್ಳುವಂತೆ ಮಾಡಬಹುದು. ಕುಟುಂಬದ ಅಪರೂಪದ ವ್ಯಕ್ತಿಗಳನ್ನು ಭೇಟಿಯಾಗುವ ಸಂದರ್ಭ ಬರಬಹುದು. ಸಮಯಕ್ಕೆ ಸರಿಯಾಗಿ ದೊರೆಯುವ ಹಣವು ನಿಮ್ಮ ಸಮಸ್ಯೆಯನ್ನು ದೂರ ಮಾಡುತ್ತದೆ. ಆತ್ಮೀಯ ಸ್ನೇಹಿತರ ಒಡನಾಟ ಮನದ ಸಂತೋಷವನ್ನು ಹೆಚ್ಚಿಸುತ್ತದೆ. ಬೇರೆಯವರ ವಿಚಾರವಾಗಿ ಕುಟುಂಬದಲ್ಲಿ ಅಶಾಂತಿ ಮೂಡುತ್ತದೆ. ವ್ಯವಹಾರದಲ್ಲಿ ಉತ್ತಮ ಆದಾಯ ದೊರೆಯುತ್ತದೆ. ಅನವಶ್ಯಕ ಸಮಯವೂ ವ್ಯರ್ಥವಾಗಲಿದೆ. ಇದರಿಂದ ನೀವು ಯಾವುದೇ ಕೆಲಸ ಮಾಡಲು ಬಯಸುವುದಿಲ್ಲ. ವ್ಯಾಪಾರ ಮಾಡುವ ಜನರ ಜೊತೆ ಸೇರಿ ಕೆಲವು ಕೆಲಸಗಳನ್ನು ಮಾಡಲು ಅವಕಾಶವಿದೆ. ನೀವು ಎಣಿಸಿದ್ದನ್ನು ಬಂಧುಗಳು ಮಾಡಿಕೊಡುವರು. ನಿಮ್ಮ ವಿನಂತಿಯನ್ನು ಯಾರೂ ಪುರಸ್ಕರಿಸದೇ ಇರಬಹುದು.
ಮೀನ ರಾಶಿ :ನಿಮ್ಮ ಬಳಿ ಧಾರ್ಮಿಕ ಕಾರ್ಯಗಳಿಗೆ ಹಣವನ್ನು ಕೇಳಬಹುದು. ಇದನ್ನು ನೀವು ಪ್ರೀತಿಯಿಂದ ಕೊಡುವಿರಿ. ದಿಟ್ಟತನದ ನಡೆ ನುಡಿ ಕೆಲವರಲ್ಲಿ ಬೇಸರ ಮೂಡಿಸುತ್ತದೆ. ಪಾಲುಗಾರಿಕೆಯ ವ್ಯವಹಾರದಲ್ಲಿ ತೊಡಗಿಸಿದ್ದ ಹಣವನ್ನು ಮರಳಿ ಪಡೆಯುವಿರಿ. ಕುಟುಂಬದ ಸದಸ್ಯರ ಜೊತೆಯಲ್ಲಿ ಕಿರು ಪ್ರವಾಸ ಮಾಡುವಿರಿ. ಸಂಗಾತಿಯ ಜೊತೆಯಲ್ಲಿ ಉತ್ತಮ ಪ್ರೀತಿ ವಿಶ್ವಾಸ ಇರಲಿದೆ. ಸಂದೇಹ ಬಂದವರ ಜೊತೆ ಸಹವಾಸ ಇರದು. ಜೀವನದಲ್ಲಿ ಹೊಸ ರೀತಿಯ ಕೆಲಸವನ್ನು ಮಾಡುವ ಸಾಮರ್ಥ್ಯವಿರುತ್ತದೆ. ಬಂಧುಗಳು ಮನೆಗೆ ಬಂದ ಕಾರಣ ಖರ್ಚು ಹೆಚ್ಚಾದೀತು. ನಿಮ್ಮ ಸಣ್ಣ ಮನಸ್ಸನ್ನು ಅವರಿಗೆ ತೋರಿಸಬೇಡಿ. ಉನ್ನತ ಅಧ್ಯಯನವನ್ನು ಬಯಸಿ ಬೇರೆ ಕಡೆಗೆ ತೆರಳುವಿರಿ. ವ್ಯರ್ಥ ಸುತ್ತಾಟದಿಂದ ನೀವು ಸಿಟ್ಟಾಗುವಿರಿ.
-ಲೋಹಿತ ಹೆಬ್ಬಾರ್-8762924271 (what’s app only)