Horoscope 18 April: ರಾಶಿ ಭವಿಷ್ಯ; ಉದ್ಯಮಿಗಳ ಜೇಬಿಗೆ ಕತ್ತರಿ ಬೀಳುವ ಸಾಧ್ಯತೆ, ನಿಷ್ಠುರದ ಮಾತು ಬೇಡ
Rashi Bhavishya: 2024 ಏಪ್ರಿಲ್ 18 ಗುರುವಾರದಂದು 12 ರಾಶಿಗಳ ರಾಶಿಫಲ ಹೇಗಿದೆ ಎನ್ನುವುದು ತಿಳಿದುಕೊಳ್ಳಿ. ಈ ದಿನ ಯಾರಿಗೆ ಯೋಗ, ಶುಭ ಸಂಯೋಗ, ಗ್ರಹಗಳ ಸ್ಥಾನ ಬದಲಾವಣೆಗಳಿಂದ ಮೇಷದಿಂದ ಮೀನ ರಾಶಿವರೆಗಿನ ಇಂದಿನ ರಾಶಿ ಭವಿಷ್ಯ ಹೇಗಿರಲಿದೆ? ಇಂದಿನ ಶುಭಕಾಲ ಹೇಗಿದೆ? ಯಾವ ರಾಶಿಯವರಿಗೆ ಅದೃಷ್ಟ ಕಾದಿದೆ ಎಂಬಿತ್ಯಾದಿ ಮಾಹಿತಿಯನ್ನು ನಿತ್ಯ ಭವಿಷ್ಯದಿಂದ ತಿಳಿಯಿರಿ.
ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಏಪ್ರಿಲ್ 18) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ: ಅಶ್ವಿನೀ, ಮಾಸ: ಚೈತ್ರ, ಪಕ್ಷ: ಶುಕ್ಲ, ವಾರ: ಗುರು, ತಿಥಿ: ದಶಮೀ, ನಿತ್ಯನಕ್ಷತ್ರ: ಮಘಾ, ಯೋಗ: ಗಂಡ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 18 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 45 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 02:05 ರಿಂದ 03:39ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 06:18 ರಿಂದ 07:52 ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 09:25 ರಿಂದ ಮಧ್ಯಾಹ್ನ 10:59ರ ವರೆಗೆ.
ಮೇಷ ರಾಶಿ: ಮನೆಯ ಹಲವು ಕಾರ್ಯಗಳನ್ನು ಒಬ್ಬರೇ ಮಾಡಬೇಕಾಗುವುದು. ಆದರೆ ನಿಮ್ಮ ಆರೋಗ್ಯವನ್ನೂ ನೀವು ಉಳಿಸಿಕೊಳ್ಳಬೇಕಾಗುವುದು. ನಿಮ್ಮ ಉಳಿತಾಯವನ್ನು ಸ್ಥಿರವಾದ ಆಯ್ಕೆಗಳಲ್ಲಿ ಹೂಡಿಕೆ ಮಾಡುವ ಮೂಲಕ ನಿಮ್ಮ ಸಂಪತ್ತನ್ನು ನೀವು ಹೆಚ್ಚಿಸಬಹುದು. ಉದ್ಯೋಗಿಗಳಿಗೆ ಇಂದು ಹೆಚ್ಚಿನ ಕೆಲಸದ ಹೊರೆ ಬರಬಹುದು. ಹಿರಿಯರ ಸಹಕಾರದಿಂದ ಸಮಯಕ್ಕೆ ಸರಿಯಾಗಿ ಮಾರ್ಗವು ತೆರೆಯುವುದು. ಮೋಹದ ಕಾರಣದಿಂದ ನಿಮ್ಮವರ ತಪ್ಪನ್ನು ಹೇಳಲು ನೀವು ತಯಾರಿರುವುದಿಲ್ಲ. ಮಕ್ಕಳ ಜೊತೆ ಸಂತೋಷದಿಂದ ಕಳೆಯುವುದು ಅವರಿಗೂ ಖುಷಿಯಾಗುವುದು. ಬರಬೇಕಾದ ಹಣದ ಚಿಂತೆ ಬಹಳ ಕಾಡಬಹುದು. ದೊಡ್ಡ ವಿಚಾರವನ್ನು ಸಣ್ಣದಾಗಿ ಮಾಡಿ, ಯಾರಿಗೂ ಗೊತ್ತಾಗದಂತೆ ಮಾಡುವಿರಿ. ಗೌಪ್ಯತೆಯ ವಿಚಾರದಲ್ಲಿ ವರ್ತನೆಯು ಎಲ್ಲರೂ ಮೆಚ್ಚುವಂಥದ್ದಾಗಿರಲಿದೆ.
ವೃಷಭ ರಾಶಿ: ಇಂದು ನಿಮ್ಮ ಬಲವಾದ ಆತ್ಮವಿಶ್ವಾಸವು ಎಲ್ಲ ಕೆಲಸವೂ ಬೇಗ ಮುಗಿಯುವಂತೆ ಮಾಡುವುದು. ಹಗುರವಾದ ಕೆಲಸದ ಹೊರೆಯು ನಿಮಗೆ ವಿಶ್ರಾಂತಿ ಪಡೆಯಲು ಸಾಕಷ್ಟು ಸಮಯವನ್ನು ನೀಡುತ್ತದೆ. ಮೊದಲು ಸಲಹೆ ಪಡೆಯದೆ ಇಂದು ಹಣಕಾಸಿನ ಹೂಡಿಕೆ ಮಾಡುವುದನ್ನು ತಪ್ಪಿಸಿ. ಇಂದು ನೀವು ಎಲ್ಲ ಕೆಲಸಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಲು ಪ್ರಯತ್ನಿಸಿ. ಸದುಪಯೋಗ ಆಗುವಂತಹ ಕೆಲಸದ ಕಡೆ ಗಮನವಿರಲಿ. ಸುಲಭದ ಕಾರ್ಯವನ್ನು ಸಂಕೀರ್ಣ ಮಾಡಿಕೊಂಡು ಚಿಂತಿಸುವಿರಿ. ಖರೀದಿಯ ವಸ್ತುಗಳು ಕಳೆದುಹೋಗುವ ಸಂಭವವಿದೆ. ಉದ್ಯೋಗದಲ್ಲಿ ನೀವು ಸಡಿಲಾಗುವುದು ಬೇಡ. ನಿಮ್ಮ ಸ್ಥಾನವನ್ನು ಬಿಡುವುದು ಬೇಡ. ಒತ್ತಡವನ್ನು ನೀವಾಗಿಯೇ ತಂದುಕೊಳ್ಳುವ ಸಾಧ್ಯತೆ ಇದೆ. ದುಂದುವೆಚ್ಚವು ನಿಮಗೆ ಆಗಿಬರದು.
ಮಿಥುನ ರಾಶಿ: ಮನಸ್ಸಿಗೆ ಬೇಕಾದ ವಿಶ್ರಾಂತಿಗೆ ಸ್ಥಳವನ್ನು ಹುಡುಕುವಿರಿ. ನಿಮ್ಮ ಮಗುವಿನ ಬಗ್ಗೆ ನೀವು ಹೆಮ್ಮೆಪಡುತ್ತೀರಿ. ನೀವು ಕೆಲವು ನಷ್ಟಗಳನ್ನು ಪೂರ್ಣಗೊಳಿಸಲು ಪ್ರಯತ್ನಿಸಬೇಕು. ಮದುವೆಗೆ ಸಂಬಂಧಿಸಿದ ಎಲ್ಲ ಅಡೆತಡೆಗಳು ನಿವಾರಣೆಯಾಗುತ್ತವೆ. ಸಂಗಾತಿಯ ಜೊತೆಗಿನ ವೈಮನಸ್ಯವು ದೂರಾಗಿ ಸಂತೋಷವು ಇಂದು ನೆಲೆಸುವುದು. ಮನೆಯಲ್ಲಿ ನಿಮಗೆ ಪೂರಕವಾದ ವಾತಾವರಣ ಇರಲಿದೆ. ಅಪ್ರಾಮಾಣಿಕತೆಯು ನಿಮಗೆ ಇಷ್ಟವಾಗದು. ನಾಯಕರು ತಮ್ಮ ಬಗ್ಗೆ ಒಳ್ಳಯ ಸುದ್ದಿಯನ್ನು ಕೇಳುವರು. ಅಸಾಧ್ಯವಾದ ಕಾರ್ಯವನ್ನು ಮಾಡಿ ಸಮಯವನ್ನು ವ್ಯರ್ಥ ಮಾಡುವುದು ಬೇಡ. ಶರೀರಪೀಡೆಯನ್ನು ನೀವು ಅನುಭವಿಸುವುದು ಕಷ್ಡವಾಗಬಹುದು. ಎಲ್ಲ ಕಾರ್ಯಗಳನ್ನು ಭಯದಿಂದ ಮಾಡುವಿರಿ.
ಕರ್ಕ ರಾಶಿ: ನಿಮ್ಮ ಅಸತ್ಯದ ಮಾತು ಎಲ್ಲರಿಗೂ ಗೊತ್ತಾಗುವುದು. ಯಾರನ್ನೂ ಅವಲಂಬಿಸಬೇಕು ಅನ್ನಿಸದು. ನೀವು ಹಣಕಾಸಿನ ಲಾಭವನ್ನು ಆನಂದಿಸುವ ಸಾಧ್ಯತೆ ಇದೆದೆ. ನಿಮ್ಮ ಎಲ್ಲ ಕಾರ್ಯಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಲು ಪ್ರಯತ್ನಿಸಿ. ನಿರೀಕ್ಷೆಯು ಹುಸಿಯಾಗಿ ಬೇಸರವಾಗಬಹುದು. ಸಂಗಾತಿಗೆ ಉದ್ಯೋಗವನ್ನು ಕೊಡಿಸಲು ಓಡಾಟ ಮಾಡುವಿರಿ. ಯಾವುದನ್ನೂ ಪ್ರೀತಿಯಿಂದ ಸ್ವೀಕರಿಸುವ ಮನಃಸ್ಥಿತಿ ಇರದು. ನಿಮ್ಮ ಬಳಿಯೇ ಎಲ್ಲವೂ ಇದ್ದರೂ ಇನ್ನೊಬ್ಬರ ಸ್ವತ್ತಿಗೆ ಕಣ್ಣು ಹಾಕುವಿರಿ. ನಿಮ್ಮ ವ್ಯವಹಾರದಲ್ಲಿ ಲೆಕ್ಕವು ತಪ್ಪಾಗಿ ನೀವು ಹಣವನ್ನು ಕಳೆದುಕೊಳ್ಳಬಹುದು. ಸ್ನೇಹಿತರ ಜೊತೆ ಎಲ್ಲಿಗಾದರೂ ಹೋಗಬೇಕು ಎನಿಸುವುದು. ವಿದ್ಯಾರ್ಥಿಗಳು ಕೆಲವುದರಲ್ಲಿ ಸೋಲಬಹುದು. ಸಕಾರಾತ್ಮಕವಾಗಿ ಸ್ವೀಕರಿಸಿ ಮುಂದೆ ಸಾಗಿ.
ಸಿಂಹ ರಾಶಿ: ತುರ್ತು ನಿರ್ಧಾರಗಳನ್ನು ತೆಗೆದುಕೊಳ್ಳಲು ಹಿಂಜರಿಯುವಿರಿ. ಸಮಯ ಮುಂದುವರೆದಂತೆ ನಿಮ್ಮ ಆಲೋಚನೆಗಳನ್ನು ಅಳವಡಿಸಿಕೊಳ್ಳುವುದು ಯಶಸ್ಸಿಗೆ ಕಾರಣವಾಗುತ್ತದೆ. ಹಿರಿಯರ ಮಾತು ನಿಮ್ಮ ದೃಷ್ಟಿಯನ್ನು ಬದಲಿಸುವುದು. ಸ್ನೇಹಿತರಿಂದ ಬಾಲಿಶ ಸಲಹೆ ಪಡೆಯುವುದನ್ನು ತಪ್ಪಿಸಬೇಕು. ಇದು ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ದಾರಿ ಮಾಡಿಕೊಡುತ್ತದೆ. ನಿರುದ್ಯೋಗಿಗಳಿಗೆ ಹೊಸ ಉದ್ಯೋಗ ದೊರೆಯಬಹುದು. ಆಪ್ತರ ಬಗ್ಗೆ ನಿಮಗೆ ಹಲವು ಅನುಮಾನಗಳು ಇರಬಹುದು. ಕಛೇರಿಯ ಕಿರಿಕಿರಿಯಿಂದ ಮನೆಯಲ್ಲಿಯೂ ನಿಮಗೆ ನೆಮ್ಮದಿ ಸಿಗದು. ಖುಷಿಯ ವಾತಾವರಣವಿದ್ದರೂ ನಿಮಗೆ ನಿಮ್ಮದೇ ಚಿಂತೆ ಕಾಡಬಹುದು. ಬಹಳ ದಿನಗಳ ಅನಂತರ ಪುಣ್ಯ ಸ್ಥಳಗಳಿಗೆ ಹೋಗುವಿರಿ. ಮನಸ್ಸು ಇಂದು ಒಂದೆಡೆ ಕುಳಿತುಕೊಳ್ಳಲು ಬಿಡದು.
ಕನ್ಯಾ ರಾಶಿ: ಖರೀದಿಯ ವ್ಯವಹಾರವನ್ನು ಗೌಪ್ಯವಾಗಿ ಮಾಡುವುದು ಬೇಡ. ಅನಂತರ ಪಶ್ಚಾತ್ತಾಪ ಪಡಬೇಕಾಗುವುದು. ನಿಮ್ಮ ಬಿಡುವಿನ ವೇಳೆಯನ್ನು ಸ್ವಯಂಸೇವಕರಾಗಿ ಅಥವಾ ಇತರರಿಗೆ ಸಹಾಯ ಮಾಡಲು ಕಳೆಯಿರಿ. ಬಹಳ ದಿನಗಳ ಅನಂತರ ಹಳೆಯ ಬಂಧುಗಳ ಭೇಟಿಯಾಗುವಿರಿ. ಗೌಪ್ಯ ವಿಷಯಗಳನ್ನು ನಿಮ್ಮ ಸಂಗಾತಿಯಿಂದ ಹಂಚಿಕೊಳ್ಳುವಿರಿ. ಸ್ತ್ರೀಯರಿಗೆ ತಾಳ್ಮೆಯ ಪರೀಕ್ಷೆ ಆಗಬಹುದು. ಮನೆಯ ಕೆಲಸದಲ್ಲಿ ಹೆಚ್ಚು ತೊಡಗಿಕೊಳ್ಳುವಿರಿ. ಸಹೋದರಿಯರ ನಡುವೆ ಕಲಹವಾಗಬಹುದು. ಅಮೂಲ್ಯವಾದ ವಸ್ತುಗಳನ್ನು ನಷ್ಟ ಮಾಡಿಕೊಳ್ಳುವ ಸಾಧ್ಯತೆ ಇದೆ. ಬಂಧುಗಳ ಆರೋಪವನ್ನು ನೀವು ನಿರಾಕರಿಸುವಿರಿ. ಮನೆಯಲ್ಲಿ ನಿಮ್ಮ ಮಾತಿಗೆ ಯಾವ ಉತ್ತರವೂ ಕೊಡದೇ ಇರುವುದು ನಿಮಗೆ ನೋವಾಗುವುದು. ಸ್ತ್ರೀಯರ ವಿಚಾರದಲ್ಲಿ ಅಧಿಕ ದುರ್ಬಲರಾಗುವಿರಿ. ಕೆಲಸವಾಗಲು ಮತ್ಯಾರನ್ನೋ ಖುಷಿಪಡಿಸುವಿರಿ.
ತುಲಾ ರಾಶಿ: ನಿಮ್ಮ ಸಂತೋಷವನ್ನು ಕಹಿಯಾದ ಮಾತುಗಳು ಕಸಿದುಕೊಳ್ಳಬಹುದು. ವಾಹನದ ಖರೀಗೆ ಸಾಲ ಮಾಡಬೇಕಾಗುವುದು. ಮಕ್ಕಳಿಗೆ ಹೆಚ್ಚಿನ ಗಮನವನ್ನು ಕೊಡಬೇಕಾಗುವುದು. ಜಾಗರೂಕತೆಯ ನೆಪದಲ್ಲಿ ಅವರ ಸ್ವಾತಂತ್ರ್ಯಕ್ಕೆ ತೊಂದರೆ ಆದೀತು. ಹೊಸ ಮಾರ್ಗಗಳು ನಿಮಗಾಗಿ ತೆರೆದುಕೊಳ್ಳಬಹುದು. ದಾಂಪತ್ಯದಲ್ಲಿ ಶಾಂತಿಯು ಬೇಕಾದರೆ ಸುಮ್ಮನಿರುವುದು ಉತ್ತಮ. ಕೋಪವನ್ನು ದೀರ್ಘಕಾಲ ಮುಂದುವರಿಸುವುದು ಬೇಡ. ಸ್ವಾಭಿಮಾನ ಬಂಧುಗಳ ಎದುರು ಕಾಣಿಸಿಕೊಳ್ಳಬಹುದು. ಎಲ್ಲ ವಿಚಾರದಲ್ಲಿ ಹಿನ್ನಡೆ ಇರಲಿದೆ. ನಿಮ್ಮ ಸ್ವಭಾವಕ್ಕೆ ಯೋಗ್ಯವಾದ ವ್ಯಕ್ತಿಯ ಗೆಳೆತನವಾಗಲಿದೆ. ಪ್ರೇಮವನ್ನು ನಿಭಾಯಿಸಲಾಗದು. ಇಷ್ಟಪಟ್ಟ ವಸ್ತುವನ್ನು ಪಡೆಯಲು ಹಣದ ಅಭಾವವು ಕಾಣಿಸಬಹುದು.
ವೃಶ್ಚಿಕ ರಾಶಿ: ಇಂದು ಸಾಮಾಜಿಕ ಕಾರ್ಯಗಳಿಂದ ಸಂತೋಷವೂ ಹೊಸತನವೂ ಸಿಗಲಿದೆ. ಹೊಸ ಒಪ್ಪಂದಗಳು ಬರುವ ಸಾಧ್ಯತೆ ಇದೆ. ಹಠಾತ್ ಹೂಡಿಕೆ ನಿರ್ಧಾರಗಳನ್ನು ತಪ್ಪಿಸಿ. ಕುಟುಂಬ ಮತ್ತು ಸ್ನೇಹಿತರೊಂದಿಗೆ ಗುಣಮಟ್ಟದ ಸಮಯವನ್ನು ಕಳೆಯಿರಿ. ಹೆಚ್ಚು ಹಸಿವಿನಂದ ಕಷ್ಟವಾಗುವುದು. ನೀವು ಹೊಸತನ್ನು ಒಮ್ಮನಸ್ಸಿನಿಂದ ಒಪ್ಪಿಕೊಳ್ಳಲಾರಿರಿ. ಸಹೋದರ ಸಹೋದರಿಯರ ಜೊತೆ ಆಸ್ತಿಯ ವಿಷಯಕ್ಕೆ ಸಂಬಂಧಿಸಿದಂತೆ ಜಗಳಗಳು ಆಗಬಹುದು. ಹೊಸ ಉದ್ಯೋಗವನ್ನು ಹುಡುಕುವವರಿಗೆ ಹೆಚ್ಚು ಗೊಂದಲವಾಗಬಹುದು. ಇಂದು ಒಂದು ಮಿತಿಯಲ್ಲಿ ನಿಮ್ಮ ಮಾತಿರಲಿ. ತಾಯಿಯ ವಿಚಾರದಲ್ಲಿ ಕೋಪಗೊಳ್ಳುವಿರಿ. ಸಹೋದರರ ಸಹಕಾರವು ನಿಮಗೆ ಬಲವನ್ನು ಕೊಡಬಹುದು. ತಾಯಿಯ ಪ್ರೀತಿಯು ನಿಮಗೆ ಅಪರೂಪವೆನಿಸುವಂತೆ ಆಗುವುದು. ನಿಮ್ಮ ಸ್ವಭಾವವನ್ನು ಬಿಟ್ಟು ಎಲ್ಲರ ಜೊತೆ ಹೊಂದಾಣಿಕೆಯಿಂದ ಇರುವಿರಿ.
ಧನು ರಾಶಿ: ಎಲ್ಲರಿಗೂ ಸಹಾಯ ಮಾಡುವ ನಿಮ್ಮ ನಿರಂತರ ಇಚ್ಛೆಯು ನಿಮಗೆ ದಣಿವನ್ನು ತರಬಹುದು. ದುರಭ್ಯಾಸದ ಜನರ ಸಹವಾಸ ಇರುವುದು. ವಿಶೇಷವಾದುದನ್ನು ಮಾಡಬೇಕೆಂಬ ನಿಮ್ಮ ಬಯಕೆ ಬಲವಾಗಿರುತ್ತದೆ. ಅಪರಿಚಿತರ ಮಾತುಗಳಿಂದ ದೂರವಿರಬೇಕು. ಕೆಲವು ಕೆಲಸಗಳಿಗಾಗಿ ನೀವು ಸ್ವಲ್ಪ ದೂರ ಪ್ರಯಾಣಿಸಬೇಕಾಗಬಹುದು. ಏನೂ ಮಾಡಿದರೂ ಆಗುತ್ತದೆ ಎಂದು ಏನನ್ನಾದರೂ ಮಾಡಲು ಹೋಗುವುದು ಬೇಡ. ಮಿಂಚಿದ ಕಾರ್ಯವನ್ನು ಎಷ್ಟೆಂದು ಚಿಂತಿಸುವಿರಿ. ಹಳೆಯ ಮನೆಯನ್ನು ಸುಂದರೀಕರಣ ಮಾಡುವ ಚಿಂತನೆ ನಡೆಸುವಿರಿ. ಕೊಟ್ಟ ಮಾತನ್ನು ಉಳಿಸಿಕೊಳ್ಳಲು ಸೋಲುವಿರಿ. ಅವಶ್ಯಕತೆ ಇದ್ದರಷ್ಟೇ ನಿಮ್ಮನ್ನು ಬಳಸಿಕೊಳ್ಳುವರು. ನಿಮ್ಮ ಬಗ್ಗೆ ತಪ್ಪು ಕಲ್ಪನೆ ಬರಬಹುದು. ಇನ್ನೊಬ್ಬರಿಗಾಗಿ ವಾಹನ ಚಲಾಯಿಸಬೇಕಾದೀತು.
ಮಕರ ರಾಶಿ: ನೀವು ಅನಗತ್ಯ ವಾದಗಳಿಗೆ ನಿಮ್ಮ ಶಕ್ತಿಯನ್ನು ವ್ಯರ್ಥ ಮಾಡಿಕೊಳ್ಳುವದರ ಜೊತೆ ಹೆಸರೂ ಹಾಳಾಗುವುದು. ಹೆಚ್ಚುವರಿ ಆದಾಯವನ್ನು ಗಳಿಸಲು ನಿಮ್ಮ ಕ್ರೀಯಾಶೀಲತೆ ಅಗತ್ಯವಾಗಿ ಬೇಕು. ಯಾವುದೂ ಮಾಯಾಜಾಲದಂತೆ ಆಗದು. ಕುಟುಂಬ ಸದಸ್ಯರ ಜೊತೆ ಸೇರಿ ಹಬ್ಬದ ವಾತಾವರಣವು ನಿರ್ಮಾಣ ಮಾಡುವಿರಿ. ನೀವು ಹೊಸ ಕೆಲಸಗಳಲ್ಲಿ ಹೂಡಿಕೆ ಮಾಡುವುದು ಉತ್ತಮ. ನಿಮ್ಮ ತಾಯಿಗೆ ಯಾವುದಾದರೂ ಹಳೆಯ ಕಾಯಿಲೆ ಮರುಕಳಿಸಬಹುದು. ಬಹಳ ದಿನಗಳ ಅನಂತರ ಹಳೆಯ ಗೆಳೆಯರನ್ನು ಭೇಟಿಯಾಗುವ ಸಂತಸ ಇರಲಿದೆ. ದೈವಭಕ್ತಿಯು ನಿಮ್ಮನ್ನು ಬಲ ಮಾಡುವುದು. ಎಂದೂ ನಂಬದವರ ಮಾತನ್ನು ನೀವು ಇಂದು ನಂಬಬೇಕಾದೀತು. ಹೂಡಿಕೆಯ ವಿಚಾರದಲ್ಲಿ ನಿಮಗೆ ಪೂರ್ಣ ಆಸಕ್ತಿ ಇರದು. ಇಂದು ಪರಿಶ್ರಮವಿದ್ದರೂ ಫಲವು ಅಲ್ಪವಿರಲಿದೆ.
ಕುಂಭ ರಾಶಿ: ಇಂದು ಉದಾರತೆಯು ಖರ್ಚಿನಿಂದ ಆರಂಭವಾಗುವುದು. ಮನೆಗೆ ಅತಿಥಿಗಳ ಆಗಮನವು ಹೊಸ ಮೆರುಗನ್ನು ಕೊಡುವುದು. ವೈಯಕ್ತಿಕ ಸಂತೋಷಗಳ ಮೇಲೆ ನಿಮ್ಮ ಗಮನವು ತಾತ್ಕಾಲಿಕವಾಗಿ ನಿಮ್ಮ ಗಮನವನ್ನು ಕೆಲಸದಿಂದ ಬದಲಾಯಿಸಬಹುದು ಸಾಮಾಜಿಕ ಕ್ಷೇತ್ರಗಳಲ್ಲಿ ಕೆಲಸ ಮಾಡುವ ಜನರು ಕೆಲವು ಅಪವಾದವನ್ನು ಕೇಳಬೇಕಾದೀತು. ನೀವು ಕೆಲವು ಹಳೆಯ ತಪ್ಪುಗಳಿಂದ ಕಲಿಯಬೇಕು. ಇಂದು ಹೆಚ್ಚಿನ ಸಮಯವನ್ನು ತಂದೆ-ತಾಯಿಯರ ಸೇವೆಯಲ್ಲಿ ಕಳೆಯಬೇಕು ಎನಿಸಬಹುದು. ಬಹಳ ದಿನಗಳಿಂದ ಒಂದೇ ತರದ ಕೆಲಸಗಳಿಂದ ಬೇಸರವಾಗುವುದು. ಇಂದು ನಡೆದ ಅಹಿತಕರ ಘಟನೆಯನ್ನು ಕೆಟ್ಟ ಗಳಿಗೆ ಎಂದು ಮರೆತುಬಿಡುವಿರಿ. ಯಾರಾದರೂ ನಿಮ್ಮವರ ಬಗ್ಗೆ ಬಂದು ಕಿವಿಕಚ್ಚಬಹುದು. ಸಾಲ ಬಾಧೆಯ ಕಾರಣ ಕಣ್ತಪ್ಪಿಸಿ ಓಡಾಡುವಿರಿ. ಮೊದಲು ನಿಷ್ಠುರದ ಮಾತಿನಾಡಿ ಅನಂತರ ಪಶ್ಚಾತ್ತಾಪಗೊಳ್ಳುವಿರಿ.
ಮೀನ ರಾಶಿ: ಇಂದು ಸಂತೋಷದ ಕ್ಷಣಗಳನ್ನು ನೀವೆ ಸೃಷ್ಟಿಸಿಕೊಳ್ಳುವಿರಿ. ಮನೋರಂಜನೆಗೆ ಹಣವು ಖರ್ಚಾಗುವುದು. ಮನೆಯಲ್ಲಿ, ನಿಮ್ಮ ಮಕ್ಕಳು ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಲಾರರು. ಆಸ್ತಿಗೆ ಸಂಬಂಧಿಸಿದ ಯಾವುದೇ ವಿಷಯವನ್ನು ಕಾನೂನಿನ ಕ್ರಮದಲ್ಲಿ ಮುಂದುವರಿದರೆ, ನೀವು ಅದರಲ್ಲಿ ಯಶಸ್ವಿಯಾಗುತ್ತೀರಿ. ರಾಜಕೀಯದಲ್ಲಿ ಕೆಲಸ ಮಾಡುವವರಿಗೆ ದೊಡ್ಡ ಹುದ್ದೆಗಳು ಸಿಗುತ್ತವೆ. ಉದ್ಯಮಿಗಳ ಜೇಬಿಗೆ ಕತ್ತರಿ ಬೀಳುವ ಸಾಧ್ಯತೆ ಇದೆ. ನಿಮ್ಮ ವ್ಯವಹಾರವನ್ನು ಕಾನೂನಾತ್ಮಕವಾಗಿ ನಡೆಸಿದರೆ ಉತ್ತಮ. ಆಕಸ್ಮಿಕವಾಗಿ ಬರುವ ಅಲ್ಪ ಸಂಪತ್ತೂ ಕೈಯಲ್ಲಿ ನಿಲ್ಲದು. ಕೋಪವನ್ನು ಮಾಡುವ ಸಂದರ್ಭವು ಎದರಾಗಲಿದ್ದು, ನಿಮ್ಮ ನಿಯಂತ್ರಣದಲ್ಲಿ ಇರಲಿ. ಆದಾಯದ ಮೂಲಗಳನ್ನು ನೀವು ಉಳಿಸಿಕೊಳ್ಳುವುದು ಕಷ್ಟವಾದೀತು. ಪರ ಊರಿನಲ್ಲಿ ಇಂದು ವಾಸವಾಗುವುದು.
-ಲೋಹಿತ ಹೆಬ್ಬಾರ್ – 8762924271 (what’s app only)