Horoscope: ದಿನ ಭವಿಷ್ಯ; ಇಂದು ಈ ರಾಶಿಯವರ ಮಾತಿನ ಮೇಲೆ ನಿಯಂತ್ರಣ ಇರಲಿ
ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ. ಮೇ 25 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮೇ 25) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ವೃಷಭ ಮಾಸ, ಮಹಾನಕ್ಷತ್ರ: ಕೃತ್ತಿಕಾ, ಮಾಸ: ವೈಶಾಖ, ಪಕ್ಷ: ಶುಕ್ಲ, ವಾರ: ಶನಿ, ತಿಥಿ: ದ್ವಿತೀಯಾ, ನಿತ್ಯನಕ್ಷತ್ರ: ಮೂಲಾ, ಯೋಗ: ಸಿದ್ಧಿ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 04 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 55 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 09:17 ರಿಂದ ಮಧ್ಯಾಹ್ನ 10:53ರ ವರೆಗೆ, ಯಮಘಂಡ ಕಾಲ 02:06ರಿಂದ 03:42ರ ವರೆಗೆ, ಗುಳಿಕ ಕಾಲ ಬೆಳಗ್ಗೆ 06:04 ರಿಂದ 07:41ರ ವರೆಗೆ.
ಸಿಂಹ ರಾಶಿ : ಇಂದು ಸಾಮಾಜಿಕವಾದ ಕೆಲಸ ಮಾಡುತ್ತಿದ್ದರೆ ನಿಮಗೆ ಠೀಕೆಗಳು ಬರಲಿದೆ. ಅದು ನಿಮ್ಮ ಪರೀಕ್ಷೆಯ ಕಾಲವೂ ಆಗಬಹುದು. ಕಟ್ಟಡವನ್ನು ನಿರ್ಮಿಸುವ ಕಾರ್ಯದಲ್ಲಿ ನೀವು ಯಶಸ್ವಿಯಾಗುವಿರಿ. ಸ್ಥಿರಾಸ್ತಿಯ ಖರೀದಿಯನ್ನು ಮಾಡುವಿರಿ. ಸಮಾಜಸೇವೆಯಿಂದ ನಿಮಗೆ ಕೀರ್ತಿಯು ಲಭಿಸುವುದು. ಇಷ್ಟು ದಿನ ಕಷ್ಟಪಟ್ಟು ಕಟ್ಟುತ್ತಿದ್ದ ಸಾಲವು ಇಂದಿಗೆ ಮುಕ್ತಾಯವಾಗಿ ನೆಮ್ಮದಿಯನ್ನು ಕಾಣುವಿರಿ. ಆರ್ಥಿಕವಾಗಿ ಇಂದು ಸಬಲರಾಗುವಿರಿ. ವಾತಾವರಣದ ಕಾರಣದಿಂದ ಅನಾರೋಗ್ಯವು ಉಂಟಾಗಬಹುದು. ಪ್ರೀತಿಯ ಜೀವನದಲ್ಲಿ ಹೆಚ್ಚಿನ ನಿರೀಕ್ಷೆಗಳು ನಿರಾಸೆಗೆ ಕಾರಣವಾಗಬಹುದು. ಅಜಾಗರೂಕರಾಗಿ ಯಾರ ಜೊತೆಯೂ ವರ್ತಿಸುವುದು ಬೇಡ. ಸಮಸ್ಯೆಗಳೆಲ್ಲವೂ ಪರಿಹಾರವಾಗಲಿದೆ. ವೈವಾಹಿಕ ಜೀವನವನ್ನು ಇಂದು ಕೂಡ ಅತ್ಯಂತ ಸಂತೋಷದಿಂದ ಕಳೆಯುವಿರಿ. ಆರೋಗ್ಯದ ವಿಷಯದಲ್ಲಿ ಇಂದು ಸ್ವಲ್ಪ ತೊಂದರೆಯಾಗಬಹುದು. ಉದ್ಯಮಕ್ಕೆ ಹೊಸ ದಿಕ್ಕನ್ನು ಕೊಡುವ ಸಾಧ್ಯತೆ ಇದೆ.
ಕನ್ಯಾ ರಾಶಿ : ನಿಮ್ಮ ವೇಗಕ್ಕೆ ಕೆಲಸಗಳು ಆಗುತ್ತಿಲ್ಲ ಎಂಬ ತುಡಿತ ಇರಲಿದೆ. ಆರೋಗ್ಯಕ್ಕೆ ಸಂಬಂಧಿಸಿದಂತೆ ಇಂದು ನೀವು ನಿಶ್ಚಿಂತರು. ಆಲಂಕಾರಿಕ ವಸ್ತುಗಳನ್ನು ಇಷ್ಟಪಟ್ಟು ಖರೀದಿಸುವಿರಿ. ಏಕಾಗ್ರತೆಗಾಗಿ ಮಾಡಿದ ಪ್ರಯತ್ನಗಳು ಇಂದು ನಿಮಗೆ ಫಲವನ್ನು ಕೊಡುವುದು. ಉದ್ಯೋಗವನ್ನು ಬದಲಿಸುವ ಆಲೋಚನೆಗಳನ್ನು ಮಾಡುವಿರಿ. ಸಂಗಾತಿಯಿಂದ ಹಣದ ಸಹಾಯವು ದೊರೆಯಬಹುದು. ನಿಮಗೆ ಕುಟುಂಬವು ಬೆಂಬಲವನ್ನು ನೀಡುತ್ತದೆ. ನಿಮ್ಮ ವೃತ್ತಿಯಲ್ಲಿ ಪ್ರಸಿದ್ಧರಾಗುತ್ತೀರಿ. ಇನ್ನೊಬ್ಬರ ವಸ್ತುಗಳ ಮೇಲೆ ಬಯಕೆ ಆಗಬಹುದು. ಆಸೆಗಳನ್ನು ಹಿಡಿತದಲ್ಲಿ ಇಡಿ. ಶುಭ ಕಾರ್ಯದ ಚಿಂತನೆ ಅನಿರೀಕ್ಷಿತವಾಗಿ ನಡೆಯಲಿದೆ. ವ್ಯವಹಾರದಲ್ಲಿಯೂ ಹೊಸ ಅಧ್ಯಾಯ ತೆರೆಯಲಿದೆ. ಹೂಡಿಕೆ ವಿಸ್ತರಣೆಗೆ ಅವಸರ ಬೇಡ. ನಿಮ್ಮ ವಿರೋಧಿಗಳಿಗೆ ನೀವು ತಲೆನೋವಾಗಿ ಉಳಿಯುತ್ತೀರಿ. ನಿಮ್ಮ ನೇರ ಮಾತುಗಳು ಇಷ್ಟವಾಗದ ಕಾರಣ ನಿಮ್ಮಿಂದ ಯಾರಾದರೂ ದೂರವಿರಬಹುದು.
ತುಲಾ ರಾಶಿ : ಇಂದು ನಿಮ್ಮ ಆಕಸ್ಮಿಕ ಪ್ರಯಾಣದಲ್ಲಿ ತೊಡಕಾಗಬಹುದು. ಪ್ರೀತಿಯನ್ನು ನೀವು ಒಪ್ಪಿಕೊಳ್ಳುವುದು ನಿಮಗೆ ಅನಿವಾರ್ಯವಾದೀತು. ಸಣ್ಣ ಕಾರಣಕ್ಕೆ ಜೀವನ ಸಂಗಾತಿಯಿಂದ ದೂರಾಗುವ ಸಾಧ್ಯತೆಯಿದೆ. ಸ್ನೇಹಿತರಿಗೆ ಸಹಾಯ ಮಾಡಲು ಅವಕಾಶವಿರುತ್ತದೆ. ಉದ್ಯೋಗ ಮತ್ತು ವ್ಯವಹಾರ ಕ್ಷೇತ್ರದಲ್ಲಿ ನಡೆಯುತ್ತಿರುವ ಪ್ರಯತ್ನಗಳಿಂದ ಊಹಿಸಲಾಗದ ಯಶಸ್ಸನ್ನು ಸಾಧಿಸುವಿರಿ. ನೀವು ಮಕ್ಕಳ ಕಡೆಯಿಂದ ತೃಪ್ತಿದಾಯಕ ಒಳ್ಳೆಯ ಸುದ್ದಿ ಪಡೆಯುತ್ತೀರಿ. ಮಕ್ಕಳಿಂದ ಬೇಸರವಾಗುವ ಸಾಧ್ಯತೆ ಇದೆ. ವ್ಯಾಪಾರ, ವ್ಯವಹಾರಗಳ ಮುನ್ನಡೆಗಾಗಿ ಪ್ರಯಾಣದ ಮಾತುಕತೆಯ ಸಾಧ್ಯತೆ ಇರುತ್ತದೆ. ದಾಯಾದಿಗಳ ಆಗಮನ ಕಿರಿಕಿರಿ ತರಲಿದೆ. ಕೆಲವು ಕೆಲಸದ ಭರಾಟೆಯಲ್ಲಿ ಇಂದು ಸಮಯವು ನಿಮ್ಮದಾಗಿರದು. ಲಭ್ಯತೆಯನ್ನು ರೂಢಿಸಿಕೊಳ್ಳಿ.
ವೃಶ್ಚಿಕ ರಾಶಿ : ನಿಮ್ಮ ಬಳಿ ಸಂಪತ್ತಿರುವುದು ತಿಳಿದು ಅದನ್ನು ಪಡೆಯಲು ನಿಮ್ಮವರು ಪ್ರಯತ್ನಿಸಬಹುದು. ಸದವಕಾಶಗಳು ಸಿಗಲಿವೆ ಇಂದು ನಿಮಗೆ. ಬಹಳ ದಿನದ ಕಾರ್ಯಗಳನ್ನು ಬೇಗನೆ ಮುಗಿಸಲಿದ್ದೀರಿ. ಮಕ್ಕಳು ನಿಮಗೆ ಅಪಮಾನ ಮಾಡುವ ಸಾಧ್ಯತೆ ಇದೆ. ನಿಮ್ಮ ನಾಯಕತ್ವವು ಎಲ್ಲರಿಗೂ ತಿಳಿಯುವುದು. ಅಧಿಕಾರಿಗಳಿಂದ ಮೆಚ್ಚುಗೆಯು ಸಿಗಲಿದೆ. ಮುಂದಿನ ದಿನಕ್ಕೆ ಲಾಭವೂ ಸಿಗುವುದು. ಕುಟುಂಬದ ಕೀರ್ತಿಯನ್ನು ಬೆಳೆಸುವವರಿದ್ದೀರಿ. ರಕ್ಷಣೆಯ ವ್ಯವಸ್ಥೆಯಲ್ಲಿ ಇರುವವರಿಗೆ ಶುಭಸುದ್ದಿ ಇರಲಿದೆ. ಚಿಂತಿತ ವ್ಯವಹಾರಗಳು ಹಂತ ಹಂತವಾಗಿ ಬಲಗೊಳ್ಳಲಿವೆ. ಅದೃಷ್ಟ ಬಲದಿಂದ ಹೂಡಿಕೆಗಳು ಲಾಭದಾಯಕವಾಗಲಿವೆ. ನಿಮ್ಮ ಸ್ಥಾನವು ಆರ್ಥಿಕವಾಗಿ ಸದೃಢವಾಗಿರುತ್ತದೆ. ಮನೆಯಲ್ಲಿ ಸಹಕಾರ ಮತ್ತು ಸಂತೋಷದ ವಾತಾವರಣವೂ ಇರುತ್ತದೆ. ಯಾವುದೇ ವೆಚ್ಚದಲ್ಲಿ ಮಾತಿನ ಮೇಲಿನ ನಿಯಂತ್ರಣವನ್ನು ಕಳೆದುಕೊಳ್ಳಬೇಡಿ. ಇಲ್ಲದಿದ್ದರೆ ನಷ್ಟವು ನಿಮ್ಮದಾಗುತ್ತದೆ.




