Astrology: ದಿನಭವಿಷ್ಯ: ಈ ರಾಶಿಯವರು ಮನೆಯಿಂದ ದೂರ ಇರಬೇಕಾದೀತು
ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 29 ಮೇ 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ ಅಶುಭ ದಿನವಾ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಎಂಬಿತ್ಯಾದಿ ಮಾಹಿತಿಗಳನ್ನು ಇಂದಿನ ರಾಶಿಭವಿಷ್ಯದಿಂದ ತಿಳಿದುಕೊಳ್ಳಿ.
ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಮೇ 29ರ ರಾಶಿ ಭವಿಷ್ಯದಲ್ಲಿ ಮೇಷ ರಾಶಿಯಿಂದ ಕಟಕ ರಾಶಿಯವರೆಗೆ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ವೃಷಭ ಮಾಸ, ಮಹಾನಕ್ಷತ್ರ: ರೋಹಿಣೀ, ಮಾಸ: ವೈಶಾಖ, ಪಕ್ಷ: ಕೃಷ್ಣ, ವಾರ: ಬುಧ, ತಿಥಿ: ಷಷ್ಠೀ, ನಿತ್ಯನಕ್ಷತ್ರ: ಧನಿಷ್ಠಾ, ಯೋಗ: ಐಂದ್ರ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 03 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 56 ನಿಮಿಷಕ್ಕೆ, ರಾಹು ಕಾಲ 12:30ರಿಂದ 14:07ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 07:41 ರಿಂದ ಬೆಳಿಗ್ಗೆ 09:17ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 10:54 ರಿಂದ ಮಧ್ಯಾಹ್ನ12:30ರ ವರೆಗೆ.
ಮೇಷ ರಾಶಿ :ಇಂದಿನ ನಿಮ್ಮ ಮಾತು ಅಲ್ಪವಿದ್ದರೂ ಖಾರವಾಗಿರುವುದು. ಸ್ವಂತ ಉದ್ಯಮವನ್ನು ನಡೆಸುತ್ತಿದ್ದರೆ ನಿಮಗೆ ಅಲ್ಪ ಲಾಭದ ನಿರೀಕ್ಷೆಯನ್ನು ಮಾಡಬಹುದು. ಗೊಂದಲವನ್ನು ಪರಿಹರಿಸಲು ನಿಮಗೆ ನೂರಾರು ಮಾರ್ಗಗಳಿವೆ. ಶಾಂತಚಿತ್ತರಾಗಿ ಯೋಚಿಸಿ. ನಿಮ್ಮ ಆಯ್ಕೆಗಳು ಸರಿಯಾಗಿರಲಿ. ಗೊಂದಲವನ್ನು ಇಟ್ಟುಕೊಳ್ಳುವುದು ಬೇಡ. ಎಲ್ಲ ಕಾರ್ಯಕ್ಕೂ ನಿಮ್ಮದೇ ಆದ ದಾರಿ ಇರುವುದು. ಯಾರ ಕೊತೆ ದ್ವೇಷವನ್ನು ಬೆಳೆಸಿಕೊಳ್ಳಬೇಡಿ. ಯಾರ ಬಗ್ಗೆಯೂ ಪೂರ್ವಾಗ್ರಹಬುದ್ಧಿಯನ್ನು ಬಿಡುವುದು ಒಳ್ಳೆಯದು. ವ್ಯಾಪಾರಸ್ಥರು ಯಾವುದಾರೂ ಸಮಸ್ಯೆಯಲ್ಲಿ ಸಿಕ್ಕಿಕೊಳ್ಳಬಹುದು. ಇಂದಿನ ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುವುದು. ಯಾರ ಮಾತನ್ನೂ ಆಲಿಸುವ ವ್ಯವಧಾನ ಇಂದು ಇರದು. ಪ್ರೀತಿಪಾತ್ರರು ನಿಮಗೆ ಬೇಕಾದ ಸಹಕಾರ ಮಾಡುವರು. ಆಗಿದಹೋದ ವಿಚಾರವನ್ನು ಸಂಗಾತಿಯ ಜೊತೆ ಚರ್ಚಿಸುವಿರಿ.
ವೃಷಭ ರಾಶಿ :ನಿಮ್ಮ ಮಾರ್ಗವು ಯೋಗ್ಯವಲ್ಲದೇ ಇರಬಹುದು. ಸತ್ಯವನ್ನೇ ನಂಬಿ ಬದುಕುವವರು ಎಂದು ಇದುವರೆಗೆ ತಿಳಿದದ್ದು ಸುಳ್ಳು ಮಾಡುವಿರಿ. ಮಾತಿಗೆ ಬೆಲೆಯು ಕಡಿಮೆಯಾದೀತು. ನಿಮ್ಮನ್ನು ನೀವು ಆದ್ಯಂತವಾಗಿ ನೋಡಿಕೊಳ್ಳಿ. ದಾಂಪತ್ಯದಲ್ಲಿ ಹೊಂದಾಣಿಕೆ ಇರಲಿದೆ. ತಪ್ಪುಗಳಿದ್ದರೆ ಅದನ್ನು ಒಪ್ಪಿಕೊಂಡು ಮುನ್ನಡೆಯಿರಿ. ನಿಮ್ಮ ಕೆಲವು ಅಭ್ಯಾಸವನ್ನು ನೀವು ಬಿಡಬೇಕಾಗಿಬರಬಹುದು. ಸರಳತೆಯನ್ನು ಪ್ರಯತ್ನಪೂರ್ವಕವಾಗಿ ರೂಢಿಸಿಕೊಳ್ಳುವಿರಿ. ಬಂಧುಗಳ ಆಗಮನದಿಂದ ಹೆಚ್ಚು ಸಂತೋಷವು ಇರುವುದು. ಉತ್ತಮ ವಿದ್ಯೆಯ ಕಾರಣ ಉತ್ತಮ ಆದಾಯದ ಕೆಲಸವೂ ಸಿಗಲಿದೆ. ಹೊಸತನ ಅನ್ವೇಷಣೆಯಲ್ಲಿ ನೀವು ಇರುವಿರಿ. ದೈವವನ್ನು ದೂರುತ್ತ ಕೂರುವುದು ಬೇಡ. ಬಂಧುಗಳ ವಿಚಾರದಲ್ಲಿ ನಿಮಗೆ ಪೂರ್ಣವಾದ ನಂಬಿಕೆ ಇರದು. ಯಾವುದನ್ನೂ ಉಳಿಸಿಕೊಂಡು ಹೋಗುವುದನ್ನು ಕಲಿಯಬೇಕು.
ಮಿಥುನ ರಾಶಿ :ಇಂದು ಸಂಕಷ್ಟದಲ್ಲಿ ಇರುವವರಿಗೆ ಸಹಾಯ ಮಾಡುವ ಮನಸ್ಸಾಗುವುದು. ಒತ್ತಡವನ್ನು ನಿಭಾಯಿಸುವ ಕಲೆ ನಿಮಗೆ ಸಿದ್ಧಿಸಿದ್ದು ಅದನ್ನು ಚೆನ್ನಾಗಿ ನಿರ್ವಹಿಸಬಲ್ಲಿರಿ. ನಿಮ್ಮ ಸಮಯೋಚಿತ ಪೂರ್ವಾಲೋಚನೆಯಿಂದ ನೀವಿಂದು ದೊಡ್ಡ ಅಪಾಯದಿಂದ ನೀವು ಹೊರಬರಲಿದ್ದೀರಿ. ಸಮಸ್ಯೆಗೆ ಬೇಕಾದ ಪರಿಹಾರವನ್ನು ತಿಳಿದೂ ಅದನ್ನು ಮಾಡಲಾರಿರಿ. ಎಂದೋ ಮಾಡಿದ ಇಂದು ನಿಮ್ಮ ಆಪತ್ತಿಗೆ ಬರಲಿದೆ. ಎಲ್ಲರ ಜೊತೆ ಬೆರೆತು ಬದುಕುವ ನಿಮ್ಮ ಗುಣವು ಮೆಚ್ಚುಗೆಯಾಗಲಿದೆ. ಆರ್ಥಿಕತೆಯನ್ನು ನಿಭಾಯಿಸುವುದನ್ನು ಕಲಿಯಿರಿ. ಪಿತ್ತಸಂಬಂಧಿಯಾದ ರೋಗವು ಬರಬಹುದು. ವ್ಯಾಪಾರದಲ್ಲಿ ಇಂದಿನ ನಿಮ್ಮ ಬೆಳವಣಿಗೆಯು ನಿಮಗೆ ಅಚ್ಚರಿಯನ್ನು ತರಬಹುದು. ನಿಮ್ಮ ಬಗ್ಗೆ ಪ್ರಶಂಸೆಯ ಮಾತುಗಳನ್ನು ನೀವು ಕೇಳಲು ಸಂಕೋಚಪಡುವಿರಿ. ಅವಕಾಶವನ್ನು ಬಿಟ್ಟು ನೀವು ದೊಡ್ಡವರಾಗುವುದು ಬೇಡ. ಕೆಟ್ಟ ಮಾತುಗಳನ್ನು ಇನ್ನೊಬ್ಬರ ಬಗ್ಗೆ ತಪ್ಪಿ ಆಡುವಿರಿ.
ಕಟಕ ರಾಶಿ :ನಿಮ್ಮ ಜಾಣತನವೇ ಮುಳುವಾಗಬಹುದು. ವಿವೇಚನೆಯಿಲ್ಲದೇ ಯಾವ ಕೆಲಸವನ್ನೂ ಮಾಡಬೇಡಿ. ಯಾವ ಮಾತನ್ನೂ ನೋವಾಗುವಂತೆ ಆಡಬೇಡಿ. ಮೇಲಿನಿಂದ ಬಿದ್ದು ಪೆಟ್ಟುಮಾಡಿಕೊಳ್ಳುವಿರಿ. ನೀವಿಂದು ಪ್ರೀತಿಸಲು ಆರಂಭಿಸುವಿರಿ. ಆಧಿಕಾರದ ದುರುಪಯೋಗವನ್ನು ಮಾಡಿಕೊಳ್ಳುವಿರಿ. ಅವಸರದಲ್ಲಿ ಅನಾಹುತವಾದೀತು. ಧಾರ್ಮಿಕಕ್ಷೇತ್ರಗಳಿಗೆ ಭೇಟಿ ನೀಡಲಿದ್ದೀರಿ. ನಿಮ್ಮ ಸಂತೋಷವನ್ನು ಯಾರೂ ಸಹಿಸಲಾರರು. ಯಾವುದೇ ಪ್ರತ್ಯುತ್ತರಗಳನ್ನು ಕೊಡಲು ಹೋಗಬೇಡಿ. ಸ್ತ್ರೀಯರಿಂದ ನಿಮಗೆ ಲಾಭವಾಗಲಿದೆ. ಸ್ತ್ರೀಯರು ನಿಮಗೆ ಬೆಂಬಲವನ್ನು ನೀಡುವರು. ನಿಮ್ಮ ಇಂದಿನ ಎಲ್ಲ ಕೆಲಸಗಳೂ ಬಹಳ ವಿಳಂಬವಾಗಿ ಆಗುವುದು. ನಿಮ್ಮನ್ನು ನಂಬಿದವರಿಗೆ ನೀವು ಮೋಸ ಮಾಡುವುದು ಬೇಡ. ನಿಮ್ಮ ಸಂಗಾತಿಯ ಮನಃಸ್ಥಿತಿಯು ಬದಲಾಗಿದ್ದು ನಿಮಗೆ ಸಮಸ್ಯೆಯಾಗುವುದು. ಕೆಲವನ್ನು ಬಿಟ್ಟುಕೊಡುವುದು ಅನಿವಾರ್ಯವಗಬಹುದು. ನೀವು ಜಾಣ್ಮೆಯಿಂದ ವರ್ತಿಸಬೇಕಾದೀತು. ಮನೆಯಿಂದ ದೂರ ಇರಬೇಕಾದೀತು.