Horoscope: ನಿತ್ಯ ಭವಿಷ್ಯ; ಸಲಹೆ ಪಡೆಯದೆ ಹಣಕಾಸಿನ ಹೂಡಿಕೆ ಮಾಡುವಿರಿ, ದುಂದುವೆಚ್ಚ ಸಾಧ್ಯತೆ
ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 18 ಏಪ್ರಿಲ್ 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ ಅಶುಭ ದಿನವಾ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಎಂಬಿತ್ಯಾದಿ ಮಾಹಿತಿಗಳನ್ನು ಇಂದಿನ ರಾಶಿಭವಿಷ್ಯದಿಂದ ತಿಳಿದುಕೊಳ್ಳಿ.
ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಏಪ್ರಿಲ್ 18) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ: ಅಶ್ವಿನೀ, ಮಾಸ: ಚೈತ್ರ, ಪಕ್ಷ: ಶುಕ್ಲ, ವಾರ: ಗುರು, ತಿಥಿ: ದಶಮೀ, ನಿತ್ಯನಕ್ಷತ್ರ: ಮಘಾ, ಯೋಗ: ಗಂಡ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 18 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 45 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 02:05 ರಿಂದ 03:39ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 06:18 ರಿಂದ 07:52 ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 09:25 ರಿಂದ ಮಧ್ಯಾಹ್ನ 10:59ರ ವರೆಗೆ.
ಮೇಷ ರಾಶಿ: ಮನೆಯ ಹಲವು ಕಾರ್ಯಗಳನ್ನು ಒಬ್ಬರೇ ಮಾಡಬೇಕಾಗುವುದು. ಆದರೆ ನಿಮ್ಮ ಆರೋಗ್ಯವನ್ನೂ ನೀವು ಉಳಿಸಿಕೊಳ್ಳಬೇಕಾಗುವುದು. ನಿಮ್ಮ ಉಳಿತಾಯವನ್ನು ಸ್ಥಿರವಾದ ಆಯ್ಕೆಗಳಲ್ಲಿ ಹೂಡಿಕೆ ಮಾಡುವ ಮೂಲಕ ನಿಮ್ಮ ಸಂಪತ್ತನ್ನು ನೀವು ಹೆಚ್ಚಿಸಬಹುದು. ಉದ್ಯೋಗಿಗಳಿಗೆ ಇಂದು ಹೆಚ್ಚಿನ ಕೆಲಸದ ಹೊರೆ ಬರಬಹುದು. ಹಿರಿಯರ ಸಹಕಾರದಿಂದ ಸಮಯಕ್ಕೆ ಸರಿಯಾಗಿ ಮಾರ್ಗವು ತೆರೆಯುವುದು. ಮೋಹದ ಕಾರಣದಿಂದ ನಿಮ್ಮವರ ತಪ್ಪನ್ನು ಹೇಳಲು ನೀವು ತಯಾರಿರುವುದಿಲ್ಲ. ಮಕ್ಕಳ ಜೊತೆ ಸಂತೋಷದಿಂದ ಕಳೆಯುವುದು ಅವರಿಗೂ ಖುಷಿಯಾಗುವುದು. ಬರಬೇಕಾದ ಹಣದ ಚಿಂತೆ ಬಹಳ ಕಾಡಬಹುದು. ದೊಡ್ಡ ವಿಚಾರವನ್ನು ಸಣ್ಣದಾಗಿ ಮಾಡಿ, ಯಾರಿಗೂ ಗೊತ್ತಾಗದಂತೆ ಮಾಡುವಿರಿ. ಗೌಪ್ಯತೆಯ ವಿಚಾರದಲ್ಲಿ ವರ್ತನೆಯು ಎಲ್ಲರೂ ಮೆಚ್ಚುವಂಥದ್ದಾಗಿರಲಿದೆ.
ವೃಷಭ ರಾಶಿ: ಇಂದು ನಿಮ್ಮ ಬಲವಾದ ಆತ್ಮವಿಶ್ವಾಸವು ಎಲ್ಲ ಕೆಲಸವೂ ಬೇಗ ಮುಗಿಯುವಂತೆ ಮಾಡುವುದು. ಹಗುರವಾದ ಕೆಲಸದ ಹೊರೆಯು ನಿಮಗೆ ವಿಶ್ರಾಂತಿ ಪಡೆಯಲು ಸಾಕಷ್ಟು ಸಮಯವನ್ನು ನೀಡುತ್ತದೆ. ಮೊದಲು ಸಲಹೆ ಪಡೆಯದೆ ಇಂದು ಹಣಕಾಸಿನ ಹೂಡಿಕೆ ಮಾಡುವುದನ್ನು ತಪ್ಪಿಸಿ. ಇಂದು ನೀವು ಎಲ್ಲ ಕೆಲಸಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಲು ಪ್ರಯತ್ನಿಸಿ. ಸದುಪಯೋಗ ಆಗುವಂತಹ ಕೆಲಸದ ಕಡೆ ಗಮನವಿರಲಿ. ಸುಲಭದ ಕಾರ್ಯವನ್ನು ಸಂಕೀರ್ಣ ಮಾಡಿಕೊಂಡು ಚಿಂತಿಸುವಿರಿ. ಖರೀದಿಯ ವಸ್ತುಗಳು ಕಳೆದುಹೋಗುವ ಸಂಭವವಿದೆ. ಉದ್ಯೋಗದಲ್ಲಿ ನೀವು ಸಡಿಲಾಗುವುದು ಬೇಡ. ನಿಮ್ಮ ಸ್ಥಾನವನ್ನು ಬಿಡುವುದು ಬೇಡ. ಒತ್ತಡವನ್ನು ನೀವಾಗಿಯೇ ತಂದುಕೊಳ್ಳುವ ಸಾಧ್ಯತೆ ಇದೆ. ದುಂದುವೆಚ್ಚವು ನಿಮಗೆ ಆಗಿಬರದು.
ಮಿಥುನ ರಾಶಿ: ಮನಸ್ಸಿಗೆ ಬೇಕಾದ ವಿಶ್ರಾಂತಿಗೆ ಸ್ಥಳವನ್ನು ಹುಡುಕುವಿರಿ. ನಿಮ್ಮ ಮಗುವಿನ ಬಗ್ಗೆ ನೀವು ಹೆಮ್ಮೆಪಡುತ್ತೀರಿ. ನೀವು ಕೆಲವು ನಷ್ಟಗಳನ್ನು ಪೂರ್ಣಗೊಳಿಸಲು ಪ್ರಯತ್ನಿಸಬೇಕು. ಮದುವೆಗೆ ಸಂಬಂಧಿಸಿದ ಎಲ್ಲ ಅಡೆತಡೆಗಳು ನಿವಾರಣೆಯಾಗುತ್ತವೆ. ಸಂಗಾತಿಯ ಜೊತೆಗಿನ ವೈಮನಸ್ಯವು ದೂರಾಗಿ ಸಂತೋಷವು ಇಂದು ನೆಲೆಸುವುದು. ಮನೆಯಲ್ಲಿ ನಿಮಗೆ ಪೂರಕವಾದ ವಾತಾವರಣ ಇರಲಿದೆ. ಅಪ್ರಾಮಾಣಿಕತೆಯು ನಿಮಗೆ ಇಷ್ಟವಾಗದು. ನಾಯಕರು ತಮ್ಮ ಬಗ್ಗೆ ಒಳ್ಳಯ ಸುದ್ದಿಯನ್ನು ಕೇಳುವರು. ಅಸಾಧ್ಯವಾದ ಕಾರ್ಯವನ್ನು ಮಾಡಿ ಸಮಯವನ್ನು ವ್ಯರ್ಥ ಮಾಡುವುದು ಬೇಡ. ಶರೀರಪೀಡೆಯನ್ನು ನೀವು ಅನುಭವಿಸುವುದು ಕಷ್ಡವಾಗಬಹುದು. ಎಲ್ಲ ಕಾರ್ಯಗಳನ್ನು ಭಯದಿಂದ ಮಾಡುವಿರಿ.
ಕರ್ಕ ರಾಶಿ: ನಿಮ್ಮ ಅಸತ್ಯದ ಮಾತು ಎಲ್ಲರಿಗೂ ಗೊತ್ತಾಗುವುದು. ಯಾರನ್ನೂ ಅವಲಂಬಿಸಬೇಕು ಅನ್ನಿಸದು. ನೀವು ಹಣಕಾಸಿನ ಲಾಭವನ್ನು ಆನಂದಿಸುವ ಸಾಧ್ಯತೆ ಇದೆದೆ. ನಿಮ್ಮ ಎಲ್ಲ ಕಾರ್ಯಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಲು ಪ್ರಯತ್ನಿಸಿ. ನಿರೀಕ್ಷೆಯು ಹುಸಿಯಾಗಿ ಬೇಸರವಾಗಬಹುದು. ಸಂಗಾತಿಗೆ ಉದ್ಯೋಗವನ್ನು ಕೊಡಿಸಲು ಓಡಾಟ ಮಾಡುವಿರಿ. ಯಾವುದನ್ನೂ ಪ್ರೀತಿಯಿಂದ ಸ್ವೀಕರಿಸುವ ಮನಃಸ್ಥಿತಿ ಇರದು. ನಿಮ್ಮ ಬಳಿಯೇ ಎಲ್ಲವೂ ಇದ್ದರೂ ಇನ್ನೊಬ್ಬರ ಸ್ವತ್ತಿಗೆ ಕಣ್ಣು ಹಾಕುವಿರಿ. ನಿಮ್ಮ ವ್ಯವಹಾರದಲ್ಲಿ ಲೆಕ್ಕವು ತಪ್ಪಾಗಿ ನೀವು ಹಣವನ್ನು ಕಳೆದುಕೊಳ್ಳಬಹುದು. ಸ್ನೇಹಿತರ ಜೊತೆ ಎಲ್ಲಿಗಾದರೂ ಹೋಗಬೇಕು ಎನಿಸುವುದು. ವಿದ್ಯಾರ್ಥಿಗಳು ಕೆಲವುದರಲ್ಲಿ ಸೋಲಬಹುದು. ಸಕಾರಾತ್ಮಕವಾಗಿ ಸ್ವೀಕರಿಸಿ ಮುಂದೆ ಸಾಗಿ.