Horoscope 01 Mar: ಆಪ್ತರನ್ನು ದೂರ ಮಾಡಿಕೊಳ್ಳುವಿರಿ, ಮನಸ್ಸು ಬಹಳ ಖಿನ್ನತೆಗೆ ಹೋಗಬಹುದು

Nitya Bhavishya: 2024 ಮಾರ್ಚ್​ 01ರ ಶುಕ್ರವಾರದಂದು 12 ರಾಶಿಗಳ ರಾಶಿಫಲ ಹೇಗಿದೆ ಎನ್ನುವುದು ತಿಳಿದುಕೊಳ್ಳಿ. ಈ ದಿನ ಯಾರಿಗೆ ಯೋಗ, ಶುಭ ಸಂಯೋಗ, ಗ್ರಹಗಳ ಸ್ಥಾನ ಬದಲಾವಣೆಗಳಿಂದ ಮೇಷದಿಂದ ಮೀನ ರಾಶಿವರೆಗಿನ ಇಂದಿನ ರಾಶಿ ಭವಿಷ್ಯ ಹೇಗಿರಲಿದೆ? ಇಂದಿನ ಶುಭಕಾಲ ಹೇಗಿದೆ? ಯಾವ ರಾಶಿಯವರಿಗೆ ಅದೃಷ್ಟ ಕಾದಿದೆ. ಯಾವ ರಾಶಿಯವರು ಇಂದು ಜಾಗೃಕರಾಗಿರಬೇಕು ಎಂದು ನಿತ್ಯ ಭವಿಷ್ಯದಿಂದ ತಿಳಿಯಿರಿ.

Horoscope 01 Mar: ಆಪ್ತರನ್ನು ದೂರ ಮಾಡಿಕೊಳ್ಳುವಿರಿ, ಮನಸ್ಸು ಬಹಳ ಖಿನ್ನತೆಗೆ ಹೋಗಬಹುದು
ದಿನಭವಿಷ್ಯ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Mar 01, 2024 | 12:01 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮಾರ್ಚ್​​​​ 01) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯ ಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಮಹಾನಕ್ಷತ್ರ: ಶತಭಿಷಾ, ಮಾಸ: ಮಾಘ, ಪಕ್ಷ: ಕೃಷ್ಣ, ವಾರ: ಶುಕ್ರ, ತಿಥಿ: ಷಷ್ಠೀ, ನಿತ್ಯನಕ್ಷತ್ರ: ವಿಶಾಖಾ, ಯೋಗ: ಧ್ರುವ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 50 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 39 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 11:16 ರಿಂದ 12:45ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:42 ರಿಂದ 05:11ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 08:19 ರಿಂದ 09:48ರ ವರೆಗೆ.

ಮೇಷ ರಾಶಿ : ನಿಮ್ಮ ಮಾತನ್ನು ಉಳಿಸಿಕೊಳ್ಳುವ ಭರದಲ್ಲಿ ಏನನ್ನಾದರೂ ಮಾಡಿಕೊಳ್ಳುವಿರಿ. ನಿಮ್ಮ ಪ್ರೇಮವನ್ನು ಸಾಬೀತುಪಡಿಸಬೇಕಾದೀತು. ಮನೋರಂಜನೆಯ ಬಗ್ಗೆ ನಿಮಗೆ ಆಸಕ್ತಿ ಇರದು. ನಿಮ್ಮ ಪ್ರೀತಿಗೆ ವಂಚನೆಯಾಗುವ ಸಾಧ್ಯತೆ ಇದೆ. ಆದಾಯದ ಮೂಲವನ್ನು ಹೆಚ್ಚು ಮಾಡಿಕೊಳ್ಳುವಿರಿ. ಸಣ್ಣ ಮಟ್ಟಿನ ಸಾಲವನ್ನು ನೀವು ಮಾಡಬೇಕಾದ ಸ್ಥಿತಿಯು ಬರಬಹುದು. ತಂದೆಯ ಕಡೆಯಿಂದ ನಿಮಗೆ ಯಾವ ಸಹಾಯವೂ ಸಿಗದೇಹೋಗಬಹುದು. ನಿರಂತರ ಕೆಲಸದಿಂದ ನಿಮಗೆ ಸ್ವಲ್ಪ ವಿಶ್ರಾಂತಿಯ ಅವಶ್ಯಕತೆ ಇದೆ. ಯಾವ ಬಂಧನಕ್ಕೂ ಒಳಪಡದೇ ಮನಸ್ಸು ಮುಕ್ತವಾಗಿರಲು ಬಯಸುವುದು. ಸಾಮರಸ್ಯದ ಅಭಾವವು ದ್ವೇಷಕ್ಕೆ ಕಾರಣವಾಗಬಹುದು. ಅಭ್ಯಾಸ ವಿಷಯದಲ್ಲಿ ನಿಮಗೆ ಪೂರ್ಣ ತೃಪ್ತಿ ಇರದು. ಯಾರ ಮೇಲೂ ನಂಬಿಕೆ‌ ಇಡದೇ ನಿಮ್ಮಷ್ಟಕ್ಕೆ ನೀವಿರುವಿರಿ. ನಾಗದೇವರ ಉಪಾಸನೆಯನ್ನು ಮಾಡಿ.

ವೃಷಭ ರಾಶಿ : ಇಂದು ನಿಮಗೆ ಎಲ್ಲರ ಮಾತೂ ಕಿರಿಕಿರಿಯನ್ನು ಉಂಟುಮಾಡಬಹುದು. ಯಾರ ಮಾತಿನ ಮೇಲೂ ನಿಮಗೆ ವಿಶ್ವಾಸವಿರದು. ಕ್ರಿಯಾತ್ಮಕವಾಗಿ ನೀವು ಯೋಚಿಸಲಾರಿರಿ. ಕೆಲವು ಅಸಮಾಧಾನವನ್ನು ನೀವು ನುಂಗಿಕೊಳ್ಳುವಿರಿ. ಹಿತಶತ್ರುಗಳನ್ನು ನೀವು ನಿಭಾಯಿಸುವುದು ಕಷ್ಟವಾದೀತು. ಅಮೂಲ್ಯ ವಸ್ತುವನ್ನು ನಿರ್ಲಕ್ಷ್ಯದಿಂದ ಎಲ್ಲಿಯೋ ಇಟ್ಟು ಕಳೆದುಕೊಳ್ಳುವಿರಿ. ನಿಮ್ಮ ವಿಶ್ರಾಂತಿಯ ಸಮಯವು ಬದಲಾಗಿ ಆರೊಗ್ಯದ ಮೇಲೆ ಕೆಟ್ಟ ಪರಿಣಾಮವನ್ನು ಬೀರುವುದು. ಬಹಳ ದಿನಗಳಿಂದ ಕೆಟ್ಟಿದ್ದ ಆರೋಗ್ಯವು ಸರಿಯಾದರೂ ಆರೋಗ್ಯ ಪೂರ್ಣ ಮನಸ್ಸು ಸರಿಯಾಗಲು ಸಮಯು ಬೇಕು. ನಿಮ್ಮ ಹೊಣೆಗಾರಿಕೆ ಕಡಿಮೆ ಆದಂತೆ ಅನ್ನಿಸುವುದು. ಆಪ್ತರನ್ನು ನೀವು ಕಳೆದುಕೊಳ್ಳುವ ಸಾಧ್ಯತೆ ಇದೆ. ನಿಮ್ಮ ಅನುಮಾನದ ಬುದ್ಧಿಯನ್ನು ಕಡಿಮೆ ಮಾಡಿ, ಯಾವುದಾದರೂ ಸದ್ವಿಚಾರಕ್ಕೆ ಗಮನಕೊಡಿ. ದುರ್ಗಾದೇವಿಯ ಆರಾಧನೆಯನ್ನು ಮಾಡಿ.

ಮಿಥುನ ರಾಶಿ : ನಿಮ್ಮ ಅಧ್ಯಾತ್ಮದ ಬಲವೇ ನಿಮ್ಮನ್ನು ಕಷ್ಟದ ಸ್ಥಿತಿಯಲ್ಲಿಯೂ ಸ್ಥಿರವಾಗಿ ಇರಿಸಿದೆ. ನಿಮ್ಮ ಯಾವುದಾದರೂ ವಸ್ತುವು ಕಣ್ಮರೆಯಾಗಬಹುದು. ಆಲಸ್ಯದಿಂದ ನೀವು ಜಾರಬೇಕಾಗಿದೆ. ಆತ್ಮವಂಚನೆಯನ್ನು ಮಾಡಿಕೊಳ್ಳಲು ನೀವು ಸಿದ್ಧರಿಲ್ಲ. ಮಾತನ್ನು ಅಧಿಕವಾಗಿ ಆಡಿ ಇತರರಿಗೆ ಬೇಸರವನ್ನು ತರಿಸುವಿರಿ. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ನಿಮ್ಮ ಗಮನ ಮುಖ್ಯವಾಗಿರಲಿ. ಸ್ನೇಹಿತರ ಜೊತೆ ಮೋಜಿನಲ್ಲಿ ಕಾಲ ಕಳೆಯುವಿರಿ. ಮನಸ್ಸು ಬಹಳ ಖಿನ್ನತೆಗೆ ಹೋಗಬಹುದು. ಯಾವ ವಿಚಾರವನ್ನೂ ತೀರ್ಮಾನಿಸಲಾಯಿತು ಆಗದು. ವ್ಯಾಪಾರದಲ್ಲಿ ನಿಮ್ಮ ಜಾಣ್ಮೆಯನ್ನು ತೋರಿಸುವಿರಿ. ಮಕ್ಕಳ ಶಿಕ್ಷಣದ ವಿಚಾರದಲ್ಲಿ ನಿಮಗೆ ಸಮಾಧಾನವು ಪೂರ್ಣವಾಗಿ ಇರದು. ಅಹಂಕಾರದ ಮಾತುಗಳು ಇತರರಿಗೆ ಹಿಂಸೆಯಾದೀತು. ಏಕಾಗ್ರತೆಯನ್ನು ಬೆಳೆಸಿಕೊಳ್ಳಲು ಅಭ್ಯಾಸ ಮಾಡುವಿರಿ.

ಕಟಕ ರಾಶಿ : ನಿಮ್ಮ ಕೋಪವನ್ನು ನಿಯಂತ್ರಣದಲ್ಲಿ ಇರಿಸಿದರೂ ಸುಲಭಕ್ಕೆ ಸಾಧ್ಯವಾಗದು. ಕಛೇರಿಯಲ್ಲಿ ಸಹೋದ್ಯೋಗಿಗಳ ಜೊತೆ ಮಾತು ನಡೆಯಬಹುದು. ಯಾರ ಬಗ್ಗೆಯೂ ನೀವೇ ತೀರ್ಮಾನ ತೆಗೆದುಕೊಳ್ಳುವುದು ಬೇಡ. ವಾಹನವನ್ನು ಪರೀಕ್ಷಿಸಿ ಖರೀದಿಸಿ. ಶತ್ರುಗಳು ನಿಮ್ಮ ಮೇಲೆ ಆರೋಪಗಳನ್ನು ಮಾಡಬಹುದು. ಎಲ್ಲದರಲ್ಲಿಯೂ ನೀವೇ ಬುದ್ಧಿವಂತರು ಎಂದು ತೋರಿಸಿಕೊಳ್ಳುವುದು ಬೇಡ. ಅಧಿಕಾರದಿಂದ ಕೂಡಿದ ಮಾತು ನಿಮಗೆ ಪ್ರಯೋಜನವಾಗದು. ನೀರಿನ ಉತ್ಪನ್ನಗಳನ್ನು ಮಾಡುವವರಿಗೆ ಲಾಭವು ಸಿಗುವ ಸಾಧ್ಯತೆ ಇದೆ. ಅತಿಥಿಗಳ ಆಗಮನದಿಂದ ನಿಮಗೆ ಸಂತೋಷವಾಗಲಿದೆ. ನಿಮ್ಮ ಸ್ವಭಾವದಲ್ಲಿ ಆದ ಬದಲಾವಣೆಯುಂದ ಅಚ್ಚರಿಯಾದೀತು. ನಿಮ್ಮದಲ್ಲದ್ದನ್ನು ನಿಮ್ಮದೆಂದು ವಾದಿಸಲು ಹೋಗಬೇಡಿ. ಮನೆಯ ಕೆಲಸವು ಬಹಳ ಆಯಾಸವನ್ನು ಕೊಡಬಹುದು. ಕುಲದೇವರ ಉಪಾಸನೆಯನ್ನು ಮಾಡಿ.

ಸಿಂಹ ರಾಶಿ : ಇಂದು ನಿಮ್ಮ ಸತತ ಪ್ರಯತ್ನದ ನಡುವೆಯೂ ನೀವು ಖರ್ಚನ್ನು ಖರ್ಚನ್ನು ಕಡಿಮೆ‌ ಮಾಡಿಕೊಳ್ಳಲು ಆಗದು. ಯಾವುದೋ ನಿಶ್ಚಿತ ಮೂಲದಿಂದ ಹಣ ಬರುವ ಭರವಸೆ ಇರುವುದು. ಸ್ನೇಹಿತರು ನಿಮ್ಮ ಸಮಯಪ್ರಜ್ಞೆಯನ್ನು ಇಷ್ಟಪಡುವರು. ಸಂಸ್ಥೆಯ ಮುಖ್ಯಸ್ಥರಾಗಿ ಆಯ್ಕೆಯಾಗುವ ಸಂಭವವಿದೆ. ಗೊತ್ತಿಲ್ಲದೇ ಕೆಟ್ಟ ಮಾರ್ಗವನ್ನು ನೀವು ಅನುಸರಿಸಬಹುದು. ನಿಮ್ಮ ಪ್ರಾಮಾಣಿಕತೆಗೆ ಬೆಲೆ ಇಲ್ಲವೆನಿಸುವುದು. ಹೂಡಿಕೆಗೆ ನಿಮ್ಮದಾದ ತಂತ್ರವನ್ನು ಬಳಸುವಿರಿ. ಉದ್ಯೋಗದ ಹುಡುಕಾಟಕ್ಕೆ ಓಡಾಡುವುದು ನಿಮಗೆ ಕಷ್ಟವಾದೀತು. ನಿಮ್ಮ ಜವಾಬ್ದಾರಿಗಳು ಹೆಚ್ಚಾಗಿ ಅದನ್ನು ಕಳೆದುಕೊಳ್ಳುವ ಆಲೋಚ‌ನೆ‌ಮಾಡುವಿರಿ. ಆರೋಗ್ಯದ ರಕ್ಷಣೆಯಲ್ಲಿ ಹಿನ್ನಡೆಯಾದೀತು. ಅಪರಿಚಿತರ ವಿದ್ಯಾಭ್ಯಾಸಕ್ಕೆ ನಿಮ್ಮಿಂದ ಸಹಾಯವು ಸಿಗಲಿದೆ. ಆದಿತ್ಯ ಹೃದಯವನ್ನು ಪಠಿಸಿ.

ಕನ್ಯಾ ರಾಶಿ : ಇಂದು ನೀವು ಭಯದ ವಾತಾವರಣದಲ್ಲಿ ಇರುವಿರಿ. ಮನೆಯಿಂದ ದೂರಾಗುವ ಸಂದರ್ಭವು ಬರಬಹುದು. ನಿಮ್ಮ ಮೆಚ್ಚಿನವರ ಭೇಟಿಯಾಗಲಿದೆ. ವಿನಾಕಾರಣ ವಾಗ್ವಾದದಿಂದ ದ್ವೇಷವನ್ನು ಬೆಳೆಸಿಕೊಳ್ಳುವಿರಿ. ಅತಿಯಾದ ಆಡಂಬರವು ನಿಮಗೇ ಮುಜುಗರವನ್ನು ತಂದೀತು. ಹಿತಶತ್ರುಗಳ ಸಂಚಿಗೆ ಬಲಿಯಾಗುವ ಸಾಧ್ಯತೆ ಇದೆ. ಉದ್ಯಮದಲ್ಲಿ ಉಂಟಾದ ಬೆಳವಣಿಗೆಯನ್ನು ಸಕಾರಾತ್ಮಕವಾಗಿ ಆಲೋಚಿಸಿ. ಕೆಲವು ತೀರ್ಮಾನದ ವಿಚಾರದಲ್ಲಿ ಮನಸ್ಸು ಗೊಂದಲವಾಗಿ ಇರುವುದು. ಯಾರನ್ನೋ ನಂಬಿ ನೀವು ಇರುವ ಸಣ್ಣ ಕೆಲಸವನ್ನೂ ಬಿಡುವಿರಿ. ಹಿತಶತ್ರುಗಳ ಪಿತೂರಿಯು ನಿಮ್ಮ ಶ್ರೇಯಸ್ಸಿಗೆ ತೊಂದರೆಯನ್ನು ಮಾಡೀತು. ಯಾರನ್ನೋ ಹೊಗಳಿ ನಿಮ್ಮ ಕೆಲಸವನ್ನು ಮಾಡಿಸಿಕೊಳ್ಳುವಿರಿ. ಗುರುವನ್ನು ಭೇಟಿಯಾಗಿ ಆಶೀರ್ವಾದವನ್ನು ಪಡೆಯುವಿರಿ. ಕಳೆದುದನ್ನು ಮತ್ತೆ ನೆನಪಿಸಿಕೊಳ್ಳಲು ಇಷ್ಟಪಡುವುದಿಲ್ಲ. ಲಕ್ಷ್ಮೀ ನಾರಾಯಣರ ಆರಾಧನೆ ಮಾಡಿ.

ತುಲಾ ರಾಶಿ : ಇಂದು ನಿಮ್ಮ ಅಧಿಕಾರದ ಮಾತಿಗೆ ಮನ್ನಣೆ ಸಿಗುವುದು. ನಿಮ್ಮ ಪರಿಶ್ರಮದಿಂದ ಎಲ್ಲವನ್ನೂ ಪಡೆದುಕೊಂಡ ಮಾನಸಿಕತೆ ಇರಲಿದೆ. ಹಣಕಾಸಿನ ಬಗ್ಗೆ ಸಂಗಾತಿ ಜತೆಗೆ ಚರ್ಚಿಸುವಿರಿ. ಅನಿವಾರ್ಯ ಸಂದರ್ಭದಲ್ಲಿ ಇಂದು ಸುಳ್ಳು ಹೇಳಿ ಸಿಕ್ಕಿಬೀಳುವಿರಿ. ವೃತ್ತಿಯಲ್ಲಿ ಪರಿಣಿತಿಯನ್ನು ಸಾಧಿಸಿಕೊಳ್ಳುವಿರಿ. ಸಹೋದ್ಯೋಗಿಗಳಿಂದ ಒತ್ತಡವು ಬರಬಹುದು. ಮರ ಮುಂತಾದ ಕೆಲಸಗಳಲ್ಲಿ ಆಸಕ್ತಿಯು ಹೆಚ್ಚುವುದು. ಸಂಗಾತಿಯ ಜೊತೆ ವ್ಯವಹಾರದ ವಿಚಾರಕ್ಕೆ ಕಲಹವಾಗಬಹುದು. ಅಪರೂಪದ ಮಿತ್ರರ ಭೇಟಿಯಿಂದ ಸಂತೋಷವಾಗಲಿದೆ. ದ್ವಿಚಕ್ರದ ವಾಹನವನ್ನು ಚಲಾಯಿಸುವಾಗ ಜಾಗರೂಕತೆ ಇರಲಿ. ನಿಮ್ಮ ಸ್ವಭಾವವು ಇತರರಿಗೂ ಗೊತ್ತಾದೀತು. ನಿಮ್ಮ ಗೌರವಕ್ಕೆ ತೊಂದರೆಯಾಗುವುದು. ಇನ್ನೊಬ್ಬರನ್ನು ನೀವು ನೋಡುವ ದೃಷ್ಟಿಯನ್ನು ಬದಲಿಕೊಳ್ಳಬೇಕು. ಲಕ್ಷ್ಮೀಸ್ತೋತ್ರವನ್ನು ಪಠಿಸಿ.

ವೃಶ್ಚಿಕ ರಾಶಿ : ಇಂದು ನಿಮ್ಮ ಕಡೆಯಿಂದ ಯಾವುದೇ ತಪ್ಪುಗಳು ಆಗದಂತೆ ನೋಡಿಕೊಳ್ಳಿ. ಧಾರ್ಮಿಕ ಆಚರಣೆಗಳಿಗೆ ಅಡ್ಡಿಗಳು ಬರಬಹುದು. ಪಿತ್ರಾರ್ಜಿತ ಆಸ್ತಿಯನ್ನು ಒಪ್ಪಂದದ ಆಧಾರದ ಮೇಲೆ ಬಗೆಹರಿಸಿಕೊಳ್ಳುವಿರಿ. ಇಂದು ನೀವು ನಿರೀಕ್ಷೆ ಮಾಡಿದಷ್ಟು ಆದಾಯ ಬರುವುದಿಲ್ಲ. ಇತರರ ಮೇಲೆ ದೋಷಾರೋಪ ಮಾಡುವ ಸ್ವಭಾವವನ್ನು ಬದಲಿಸಿ ಕೊಳ್ಳಬೇಕಾಗುವುದು. ನಿಮ್ಮ ಕೆಲಸಕ್ಕೆ ವೃತ್ತಿಯಲ್ಲಿ ಉತ್ತಮ ಪ್ರಶಂಸೆಯು ಸಿಗುವುದು. ಇಂದು ನಿಮಗೆ ಉತ್ಸಾಹದ ದಿನವೂ ಆಗಲಿದೆ. ರಾಜಕೀಯವಾದ ಲಾಭದ ಗಳಿಕೆಯು ಇರಲಿದೆ. ಸ್ನೇಹಿತರಿಗಾಗಿ ಮಾಡಿದ ಸಾಲವು ಕೊನೆಗೆ ನಿಮಗೇ ಸುತ್ತಿಕೊಳ್ಳುವುದು. ಸಂಶೋಧನೆಗೆ ಬೇಕಾದ ಸಿದ್ಧತೆಯನ್ನು ಮಾಡಿಕೊಳ್ಳುವಿರಿ. ಸರ್ಕಾರಿ ಉದ್ಯೋಗಿಗಳ ಸ್ಥಾನವು ಹೆಚ್ಚಾಗಬಹುದು. ಅನಪೇಕ್ಷಿತ ಸ್ಥಳದಲ್ಲಿ ಇರಲು ಇಷ್ಟಪಡುವುದಿಲ್ಲ. ಸುಬ್ರಹ್ಮಣ್ಯ ಸ್ತೋತ್ರವನ್ನು ಪಠಿಸಿ.

ಧನು ರಾಶಿ : ಇಂದು ನೀವು ಮಹತ್ತರವಾದ ಜವಾಬ್ದಾರಿಯನ್ನು ವಹಿಸಿಕೊಳ್ಳಲು ಹಿಂದೇಟು ಹಾಕುವಿರಿ. ಹೆಚ್ಚಿನ ಪ್ರತಿಫಲಾಪೇಕ್ಷೆ ಇಲ್ಲದೆ ನೀವು ಈ ಕೆಲಸವನ್ನು ಮಾಡುವ ಇಚ್ಛೆ ಇರುವುದು. ಹಿತಶತ್ರುಗಳು ನಿಮ್ಮ ವರ್ಚಸ್ಸಿಗೆ ಧಕ್ಕೆ ತರಬಹುದು. ಬಹಳ ಕಾಲದ ಕಳೆದಮೇಲೆ ಗೆಳೆಯರ ಭೇಟಿಯಿಂದ‌ ಸಂತೋಷವು ಸಿಗಲಿದೆ. ಆತ್ಮಸಂತೋಷವು ನಿಮ್ಮ ಕಾರ್ಯಕ್ಕೆ ಇನ್ನಷ್ಟು ಉತ್ಸಾಹವನ್ನು ಕೊಡುವುದು. ಸಂಗಾತಿಯ ಆರೋಗ್ಯದ ಸಮಸ್ಯೆಯನ್ನು ನೀವು ಬಗೆಹರಿಸುವುದು ಕಷ್ಟವಾದೀತು. ಸಿಟ್ಟಿನ ಸ್ವಭಾವದಿಂದ ಮನೆಯಲ್ಲಿ ಅಸಮಾಧಾನ ಇರುವುದು. ಎಲ್ಲ ವಿಚಾರದಲ್ಲಿಯೂ ಒಂದಿಲ್ಲೊಂದು ಕಿರಿಕಿರಿ ಕಾಣಿಸೀತು. ಸಮಾಧಾನದಿಂದ ಆಲೋಚಿಸಲು ನಿಮಗೆ ಬಾರದು. ಅನಬಾರದ್ದನ್ನು ಬಾಯ್ತಪ್ಪಿನಿಂದ ಹೇಳಿ ಬೇಸರ ಮಾಡಿಸುವಿರಿ. ಗುರುಚರಿತ್ರೆಯ ಪಾರಾಯಣ ಮಾಡಿ.

ಮಕರ ರಾಶಿ : ಇಂದು ನಿಮ್ಮವರು ನಿಮ್ಮ ದಿಕ್ಕನ್ನು ತಪ್ಪಿಬಹುದು. ಸಭ್ಯರಂತೆ ನೀವು ಕಾಣಿಸುವಿರಿ. ಬಂಧುಗಳು ನಿಮಗೆ ಬೇಸರವಾಗುವ ಮಾತುಗಳನ್ನು ಆಡಬಹುದು. ನಿಮ್ಮಿಂದಾ ಸಾಧ್ಯವಾದಲ್ಲಿ ಅಗತ್ಯ ಇರುವ ಒಬ್ಬರಿಗೆ ಸಹಾಯ ಮಾಡಿ. ಸಂಗಾತಿ ಮತ್ತು ಮಕ್ಕಳ ಮಾತಿನ ಬಗ್ಗೆ ನಿರ್ಲಕ್ಷ್ಯ ಇರುವುದು. ಸಾಹಸಕ್ಕೆ ಹೆಚ್ಚು ಒತ್ತು ಬೇಡ. ಸಿದ್ಧವಸ್ತುಗಳ ಮಾರಾಟದಿಂದ ಲಾಭವನ್ನು ಕಾಣುವಿರಿ. ವಿದ್ಯಾರ್ಥಿಗಳು ಪ್ರೇಮದಲ್ಲಿ ಬೀಳುವ ಸಾಧ್ಯತೆ ಇದೆ. ಮನೆಯವರ ಮಕ್ಕಳ ಮೇಲೆ ಗಮನ ಇರಿಸುವುದು ಮುಖ್ಯ. ಸಂಸ್ಥೆಯ ಜವಾಬ್ದಾರಿಯನ್ನು ಹೊತ್ತು ಅದನ್ನು ನಿಮ್ಮ ಹಿಡಿತದಲ್ಲಿ ಇರುವಂತೆ ನೋಡಿಕೊಳ್ಳಿ. ಜನರನ್ನು ನಿರ್ವಹಿಸುವ ಕಾರ್ಯಕ್ಕೆ ನಿಮಗೆ ಪ್ರಶಂಸೆ ಸಿಗಲಿದೆ. ಆಸ್ತಿಯ ಖರೀದಿಗೆ ಸಂಬಂಧಿಸಿದಂತೆ ದಾಖಲೆಗಳನ್ನು ಸರಿಯಾಗಿ ಪಡೆಯಿರಿ. ಇನ್ನೊಬ್ಬರ ಸಂಕಷ್ಟವನ್ನು ನಿವಾರಿಸಲು ಉತ್ಸಾಹದಿಂದ ಇರುವಿರಿ. ಶನೈಶ್ಚರನಿಗೆ ಎಳ್ಳೆಣ್ಣೆಯ ದೀಪವನ್ನು ಬೆಳಗಿಸಿ.

ಕುಂಭ ರಾಶಿ : ನಿಮ್ಮ ಯೋಜನೆಯನ್ನು ಕ್ರಮಬದ್ಧವಾಗಿ ರೂಪಿಸಿಕೊಳ್ಳುವಿರಿ. ನಿಮ್ಮ ಸ್ವಾವಲಂಬಿ ಬದುಕು ಇತರರಿಗೆ ಆದರ್ಶವಾದೀತು. ಆರ್ಥಿಕತೆಯಲ್ಲಿ ನೀವು ಸಾಲ ಮಾಡಬೇಕಾದೀತು. ಸ್ವಂತ ವ್ಯಾಪಾರ, ವ್ಯವಹಾರ ಮಾಡುವವರಿಗೆ ಅಲ್ಪ ಹಿನ್ನಡೆ. ಉತ್ಪನ್ನಗಾರರಿಗೆ ಸಂತೋಷದ ದಿನವು ಇದಾಗಲಿದೆ. ನೂತನ ಗೃಹನಿರ್ಮಾಣದ ಬಗ್ಗೆ ಮನೆಯವರ ಜೊತೆ ಮಾತನಾಡುವಿರಿ. ಸ್ನೇಹವು ದೂರ ಮಾಡಿಕೊಳ್ಳುವಿರಿ. ಹೊಸ ಕೆಲಸಗಳ ಕಡೆ ಗಮನ ಇರುವುದು. ಅಹಂಕಾರವು ಕಡಿಮೆ ಮಾಡಿಕೊಳ್ಳುವುದು ಉತ್ತಮ. ಯಾವ ಕಾರ್ಯವನ್ನೇ ಮಾಡುವುದಾದರೂ ಪ್ರಮಾಣದ ಅಗತ್ಯವಿರಲಿದೆ. ಮನೆಯ ಸದ್ಯರ ಜೊತೆ ಹೆಚ್ಚು ಸಮಯ ಕಾಲಹರಣ ಮಾಡುವಿರಿ. ಹಿತಶತ್ರುಗಳ ಬಾಧೆಯು ಕಾಣಿಸಿಕೊಳ್ಳುವುದು. ಶಿವಾರ್ಚನೆಯನ್ನು ಮಾಡಿ.

ಮೀನ ರಾಶಿ : ಇಂದು ನಿಮ್ಮ ಮಾತಿಗೆ ಎಲ್ಲರ ಒಪ್ಪಿಗೆ ಸಿಗುವುದಹ.‌ ಮಕ್ಕಳಿಂದ ವ್ಯಾಪಾರ- ವ್ಯವಹಾರಕ್ಕೆ ಆರ್ಥಿಕ ನೆರವನ್ನು ನೀವು ನಿರೀಕ್ಷಿಸಬಹುದು. ಹಳೆಯ ವಾಹನಗಳ ಮಾರಾಟ ಮಾಡುವ ಬಗ್ಗೆ ಆಲೋಚನೆ ಇರುವುದು. ಹೂಡಿಕೆಯ ಬಗ್ಗೆ ನಿಮಗೆ ಅಸಮಾಧಾನ ಬರಬಹುದು. ಉದ್ಯೋಗದ ಸ್ಥಳದಲ್ಲಿ ಹೆಚ್ಚು ಲವಲವಿಕೆ ಇರಲಿದೆ. ಸಣ್ಣ ಕಾರ್ಯಕ್ಕೆ ಹೆಚ್ಚು ಶ್ರಮವಹಿಸಬೇಕಾದೀತು. ಆಪ್ತರನ್ನು ದೂರ ಮಾಡಿಕೊಳ್ಳುವಿರಿ. ನೌಕರರಿಗೆ ನೀವು ಕೊಡುವ ವ್ಯವಸ್ಥೆಯಿಂದ ಸಂತೋಷವಾಗಲಿದೆ. ಸೋತರೂ ಗೆದ್ದವರ ಜೊತೆ ನಿಮ್ಮ ಪ್ರತಿಷ್ಠೆಯನ್ನು ತೋರಿಸುವಿರಿ. ಹಣದ ವಿಚಾರದಲ್ಲಿ ನಿಮಗೆ ಇಂದು ಲೋಭವು ಇರದು. ನೀವು ಇಂದು ಯಾರ ಮಾತನ್ನೂ ನಂಬುವ ಮನಃಸ್ಥಿತಿಯಲ್ಲಿ ಇಲ್ಲ. ಹನುಮಾನ್ ಚಾಲೀಸ್ ಪಠಣವನ್ನು ಬಿಡುವುದು ಬೇಡ.

-ಲೋಹಿತ ಹೆಬ್ಬಾರ್ – 8762924271 (what’s app only)

ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್