Horoscope 23 Feb: ವ್ಯಾಪಾರಿಗಳಿಗೆ ದುಡಿಮೆಗೆ ತಕ್ಕ ಪ್ರತಿಫಲ ಸಿಗಲಿದೆ, ಮಾನಸಿಕ ಕಿರಿಕಿರಿ ದೂರ ಮಾಡಿಕೊಳ್ಳುವಿರಿ

Nitya Bhavishya: 2024 ಫೆಬ್ರವರಿ 23ರ ಶುಕ್ರವಾರದಂದು 12 ರಾಶಿಗಳ ರಾಶಿಫಲ ಹೇಗಿದೆ ಎನ್ನುವುದು ತಿಳಿದುಕೊಳ್ಳಿ. ಈ ದಿನ ಯಾರಿಗೆ ಯೋಗ, ಶುಭ ಸಂಯೋಗ, ಗ್ರಹಗಳ ಸ್ಥಾನ ಬದಲಾವಣೆಗಳಿಂದ ಮೇಷದಿಂದ ಮೀನ ರಾಶಿವರೆಗಿನ ಇಂದಿನ ರಾಶಿ ಭವಿಷ್ಯ ಹೇಗಿರಲಿದೆ? ಇಂದಿನ ಶುಭಕಾಲ ಹೇಗಿದೆ? ಯಾವ ರಾಶಿಯವರಿಗೆ ಅದೃಷ್ಟ ಕಾದಿದೆ. ಯಾವ ರಾಶಿಯವರು ಇಂದು ಜಾಗೃಕರಾಗಿರಬೇಕು ಎಂದು ನಿತ್ಯ ಭವಿಷ್ಯದಿಂದ ತಿಳಿಯಿರಿ.

Horoscope 23 Feb: ವ್ಯಾಪಾರಿಗಳಿಗೆ ದುಡಿಮೆಗೆ ತಕ್ಕ ಪ್ರತಿಫಲ ಸಿಗಲಿದೆ, ಮಾನಸಿಕ ಕಿರಿಕಿರಿ ದೂರ ಮಾಡಿಕೊಳ್ಳುವಿರಿ
ಪ್ರಾತಿನಿಧಿಕ ಚಿತ್ರ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಗಂಗಾಧರ​ ಬ. ಸಾಬೋಜಿ

Updated on: Feb 23, 2024 | 12:02 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಫೆಬ್ರವರಿ​​​​ 23) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಭವಿಷ್ಯ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಮಹಾನಕ್ಷತ್ರ : ಧನಿಷ್ಠಾ, ಮಾಸ : ಮಾಘ, ಪಕ್ಷ : ಶುಕ್ಲ, ವಾರ : ಶುಕ್ರ, ತಿಥಿ : ಚತುರ್ದಶೀ, ನಿತ್ಯನಕ್ಷತ್ರ : ಆಶ್ಲೇಷಾ, ಯೋಗ : ಶೋಭನ, ಕರಣ : ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 54 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 38 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 11:18 ರಿಂದ 12:46ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:42 ರಿಂದ 05:10ರ ವರೆಗೆ, ಗುಳಿಕ ಕಾಲ ಬೆಳಗ್ಗೆ 08:22 ರಿಂದ 09:50ರ ವರೆಗೆ.

ಮೇಷ ರಾಶಿ: ಇಂದು ನೀವು ಎಲ್ಲರ ಮಾತನ್ನು ಕೇಳುವುದು ಸೂಕ್ತವಾದರೂ ಅದನ್ನು ಪಾಲಿಸುವ ಬಗ್ಗೆ ಪೂರ್ಣ ಮನಸ್ಸು ಇರದು. ಧೈರ್ಯದಿಂದ ಹೊಸ ಸವಾಲುಗಳನ್ನು ಎದುರಿಸಲು ದಾರಿ ಸುಲಭವಾಗುವುದು. ಆಸ್ತಿಗೆ ಸಂಬಂಧಿಸಿದ ಕೆಲಸಗಳಿಗೆ ಓಡಾಟ ಮಾಡಬೇಕಾದೀತು. ಮಹಿಳೆಯರು ವ್ಯವಹಾರವನ್ನು ಆರಂಭಿಸಲು ಇಷ್ಟಪಡುವರು. ತಂದೆಯು ನಿಮ್ಮ ಪ್ರಗತಿಯನ್ನು ನಿರೀಕ್ಷಿಸುವಿರಿ. ಯೋಜನೆಯು ಮಸುಕಾಗಿದ್ದು ಮುಂದಿನ ದಾರಿ ಸರಿಯಾಗಿ ಗೊತ್ತಾಗದೇ ಇರಬಹುದು. ಪ್ರೇಮಿಯನ್ನು ಭೇಟಿಯಾಗಲು ದೂರದ ಊರಿಗೆ ಪ್ರಯಾಣ ಮಾಡಬೇಕಾಗುವುದು. ಹೂಡಿಕೆಯ ಬಗ್ಗೆ ತಜ್ಞರಿಂದ ಮಾಹಿತಿ ಪಡೆದು ಮುಂದುವರಿಯಿರಿ. ಸಾಮಾಜಿಕ ಮುಖಂಡರು ಸಂಘಟನೆಯಲ್ಲಿ ತೊಡಗುವರು. ತಂತ್ರಜ್ಞಾನವನ್ನು ನೀವು ಅತಿಯಾಗಿ ಬಳಸುವಿರಿ. ಸಣ್ಣ ಕಾರಣಕ್ಕೆ ನೆರೆಯವರ ಜೊತೆ ಕಲಹವಾಗಬಹುದು. ಮಕ್ಕಳಿಂದ ಹಣವನ್ನು ಪಡೆಯುವಿರಿ. ಇಂದು ಮಾತುಗಳನ್ನು ಕಡಿಮೆ ಆಡುವಿರಿ.

ವೃಷಭ ರಾಶಿ: ನಿಮಗೆ ಏನನ್ನಾದರೂ ಮಾಡುತ್ತೇನೆ ಎಂಬ ಧೈರ್ಯವು ಹೆಚ್ಚಿರುವುದು. ಆದರೆ ಅದು ನಿಮ್ಮ ಹುಂಬುತನವಾದೀತು. ಈ ದಿನ ಉದ್ಯಮಿಗಳಿಗೆ ತಮ್ಮ ಜಾಣತನದಿಂದ ಪ್ರಯೋಜನವನ್ನು ಪಡೆಯುವರು. ಹಣಕಾಸಿನ ಪರಿಸ್ಥಿತಿಯಲ್ಲಿ ಸುಧಾರಣೆಯ ಜೊತೆ ಖರ್ಚನ್ನು ಮಾಡುವ ಮನಃಸ್ಥಿತಿಯೂ ಬರಬಹುದು. ಹೊಸ ಕೆಲಸದಲ್ಲಿ ಕೆಲವು ಅಡೆತಡೆಗಳು ಉಂಟಾಗಬಹುದು. ನೂತನ ಉದ್ಯೋಗದ ಅನ್ವೇಷಣೆಯನ್ನು ನೀವು ಮಾಡಬೇಕಾಗುವುದು. ಸಾಲವನ್ನು ದಿನದ ಮೊದಲೇ ತೀರಿಸಿ ಪ್ರಶಂಸೆ ಗಳಿಸುವಿರಿ. ಎರಡೆರಡು ಕಾರ್ಯವನ್ನು ಮಾಡುವ ಸಂದರ್ಭವು ಬರಬಹುದು. ಕುಟುಂಬವು ನಿಮಗೆ ಕೊಡುವ ಕಿಮ್ಮತ್ತು ಕಡಿಮೆ ಆಗಿದೆ ಎಂದು ಅನ್ನಿಸುವುದು. ಸಂಗಾತಿಯಿಂದ ಕಿರಿಕಿರಿ ಉಂಟಾಗುವ ಸಾಧ್ಯತೆ ಇದೆ. ಸದಾ ಉತ್ಸಾಹದಿಂದ ಇರಲು ನೀವು ನಿಮ್ಮದೇ ಆದ ಯೋಜನೆಗಳನ್ನು ರೂಪಿಸಿಕೊಳ್ಳುವುದು ಉತ್ತಮ. ಕುಟುಂಬದ ಪ್ರೀತಿಯು ಸಿಗಲಿದೆ.

ಮಿಥುನ ರಾಶಿ: ಇಂದು ನೀವು ಮಾತನಾಡುವಾಗ ಅಳೆದು ತೂಗಿ ಮಾತನಾಡುವುದು ಉಚಿತ. ಹಣದ ವಿಚಾರದಲ್ಲಿ ಅತಿಯಾದ ಮುಂದಾಲೋಚನೆಯನ್ನು ಮಾಡುವಿರಿ. ಹೊಸ ಕಲಿಕೆಯ ಬಗ್ಗೆ ಆಸಕ್ತಿ ಉಂಟಾಗಬಹುದು. ಕುಟುಂಬದಲ್ಲಿ ಸಂತೋಷದ ವಾತಾವರಣವು ಇದ್ದು ಉತ್ಸಾಹದಿಂದ ಇರುವಿರಿ. ವಾಹನವನ್ನು ಚಲಾಯಿಸುವ ಬೇರೆಯ ಯಾವ ಚಟುವಟಿಕೆಗಳನ್ನು ಮಾಡುವುದು ಬೇಡ. ಭೂಮಿಯ ವ್ಯವಹಾರದಲ್ಲಿ ಅನುಭವಿಗಳನ್ನು ಜೊತೆಯಲ್ಲಿ ಇರಿಸಿಕೊಳ್ಳಿ. ಆಹಾರದಿಂದ ಆರೋಗ್ಯವು ಕೆಡಲಿದೆ. ವೇತನವು ಹೆಚ್ಚಾಗುವ ಸಾಧ್ಯತೆ ಇದೆ. ತಾಯಿಗೆ ಅಮೂಲ್ಯವಾದ ಉಡುಗೊರೆಯನ್ನು ಕೊಡುವಿರಿ. ನಿಮ್ಮ ಬಗ್ಗೆ ನೀವು ಹೇಳಿಕೊಳ್ಳದೇ ಇರುವ ಹಲವು ವಿಚಾರಗಳು ಸ್ನೇಹಿತರು ಹೇಳುವರು. ಸಂಗಾತಿಗೆ ನೀವು ಸಹಾಯವನ್ನು ಮಾಡುವಿರಿ. ವ್ಯವಹಾರದಲ್ಲಿ ಮಧ್ಯಪ್ರವೇಶವನ್ನು ಮಾಡಲಾರಿರಿ.

ಕರ್ಕ ರಾಶಿ: ಎಲ್ಲದಕ್ಕೂ ಇಂದೇ ಉಪಾಯವಿರದು. ಕಷ್ಟವಾಗದ ಮಾರ್ಗದ ಕಡೆ ಸೆಳೆತ ಇರುವುದು. ನಿಮ್ಮ ತಿಳುವಳಿಕೆ ಮತ್ತು ಸಭ್ಯತೆಯಿಂದ ಪ್ರಭಾವಿತರಾಗುವರು. ಆರ್ಥಿಕ ಕ್ಷೇತ್ರಕ್ಕೆ ಸಂಬಂಧಿಸಿದ ಜನರು ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯುವರು. ಸಹೋದರರ ಕೊಡುಗೆಯನ್ನು ನಿರಾಕರಿಸುವಿರಿ. ನಿಮ್ಮ ವಿಚಾರವನ್ನು ಇತರರ ಮುಂದೆ ಬಹಿರಂಗವಾಗಿ ಇರಿಸಿ. ನೀವು ನಿಮ್ಮವರನ್ನು ಗ್ರಹಿಸುತ್ತ ಇರುವಿರಿ. ಅತಿವೇಗದ ಮಾತು ಇತರರಿಗೆ ಸ್ಪಷ್ಟವಾಗದೇ ಹೋಗಬಹುದು. ನಿಮ್ಮ ಅದೃಷ್ಟದ ನಿರೀಕ್ಷೆಯಲ್ಲಿ ನೀವು ಇರುವಿರಿ. ಬಂಧುಗಳ ಆಗಮನವು ನಿಮಗೆ ಸಂತೋಷವನ್ನು ಕೊಡುವುದು. ತಾಯಿಯ ಮೇಲೆ ನಿಮ್ಮ ಕೋಪವನ್ನು ತೋರಿಸುವಿರಿ. ಇಕ್ಕಟ್ಟಿನಿಂದ ಹೊರಬರಲು ಮನಸ್ಸು ಮಾಡುವಿರಿ. ಆದರೂ ಕಷ್ಟವಾದೀತು. ಕುಟುಂಬದ ಸದಸ್ಯರನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ. ಆಪ್ತರ ಒಡನಾಟವು ಖುಷಿಯನ್ನು ಕೊಡಬಹುದು.

ಸಿಂಹ ರಾಶಿ: ನೀವು ಎಲ್ಲರ ಜೊತೆ ವಿನಯದಿಂದ ಮಾತನಾಡುವಿರಿ. ರಾಜಕೀಯದಲ್ಲಿ ಬೇರೆ ಬೇರೆ ವ್ಯಕ್ತಿಗಳ ಸಂಪರ್ಕವನ್ನು ಮಾಡಬೇಕಾದೀತು. ಕೆಲವು ಹೊಸ ಅವಕಾಶಗಳು ಪಡೆದುಕೊಳ್ಳುವ ಸಂದರ್ಭವು ಬರಬಹುದು. ಹಣದ ವ್ಯವಹಾರಗಳಲ್ಲಿ ಯಶಸ್ಸು ಇರುತ್ತದೆ. ಉತ್ತಮ ಕೆಲಸದಿಂದಾಗಿ, ಉದ್ಯೋಗದಲ್ಲಿ ಬಡ್ತಿ ಮತ್ತು ಉನ್ನತ ಸ್ಥಾನ ಪಡೆಯುವಿರಿ. ನೀವು ಯಾವುದಕ್ಕೂ ವಿಚಲಿತರಾಗದೇ ಮುಂದುವರಿಯುವುದು ಉತ್ತಮ. ಸಹೋದರನ ಕುಟುಂಬದಲ್ಲಿ ನಿಮ್ಮ ಮಧ್ಯಪ್ರವೇಶವು ಆಗಬೇಕಾಗಬಹುದು. ಧಾರ್ಮಿಕ ಕಾರ್ಯದಲ್ಲಿ ನಿಮ್ಮ ತೊಡಗುವಿಕೆ ಹೆಚ್ಚಿರುವುದು. ಶಿಕ್ಷಣಕ್ಷೇತ್ರದಲ್ಲಿ ಯಶಸ್ಸು ಸಿಗುವುದು. ಸಕಾಲಕ್ಕೆ ಆರ್ಥಿಕ ನೆರವು ಸಿಗಲಿದ್ದು ಸ್ವಲ್ಪ ನೆಮ್ಮದಿ ಸಿಗುವುದು. ನಿಮ್ಮ ಸುರಕ್ಷಿತ ತಾಣವನ್ನು ನೀವೇ ಆರಿಸಿಕೊಳ್ಳಿ. ಸಾಲದ ಕಾರಣಕ್ಕೆ ತಲೆ ಮರೆಸಿಕೊಳ್ಳಬಹುದು. ದಾಂಪತ್ಯ ಜೀವನದಲ್ಲಿ ಕೆಲವು ಅನಿರೀಕ್ಷಿತ ತಿರುವುಗಳು ಬರಲಿದ್ದು ಅದಕ್ಕೆ ಹೊಂದಿಕೊಳ್ಳುವುದು ಅನಿವಾರ್ಯವಾದೀತು.

ಕನ್ಯಾ ರಾಶಿ: ನಿಮ್ಮ ಹೊಸ ಗುರಿಯು ನಿಮಗೆ ಉತ್ಸಾಹವನ್ನು ಕೊಡಬಹುದು. ನಿಮ್ಮ ಪ್ರಯತ್ನಗಳನ್ನು ಬೇರೆ ವಿಧಾನದಲ್ಲಿ ಮಾಡಿಕೊಳ್ಳುವಿರಿ. ನೀವು ಕೆಲವು ವ್ಯವಹಾರಗಳನ್ನು ಜಾಣ್ಮೆಯಿಂದ ನಿಭಾಯಿಸಬೇಕಾಗುವುದು. ಯಾವುದೇ ಕೆಲಸವನ್ನು ಆರಂಭಿಸುವಾಗ ನಿಮ್ಮ ಮನಸ್ಸನ್ನು ನಿರ್ಮಲವಾಗಿಸಿಕೊಳ್ಳಿ. ಅತಿಥಿಗಳ ಆಗಮನವನ್ನು ಎದುರು ನೋಡಬಹುದು. ಕಠಿಣ ಪರಿಶ್ರಮದ ಕಡೆ ನಿಮ್ಮ ಮನಸ್ಸು ತಯಾರಿರುವುದು. ದೇವರ ಕೃಪೆಯನ್ನು ಬೇಡಿ ಇಂದು ನೀವು ಮಾಡುವ ಕೆಲಸಕ್ಕೆ ಕೇಳಿಕೊಳ್ಳಿ. ಹೊಸ ವ್ಯವಹಾರವನ್ನು ಪ್ರಾರಂಭಿಸಿವರು ಉತ್ಸಾಹದ ಕಾರಣ ಉತ್ತಮ ಲಾಭವನ್ನು ಪಡೆಯಬಹುದು. ವಕೀಲವೃತ್ತಿಯವರಿಗೆ ಹೆಚ್ಚಿನ ಕಾರ್ಯವು ಬರಲಿದ್ದು ನಿಭಾಯಿಸುವ ಕಲೆಯನ್ನು ಕಲಿತಿರುವಿರಿ. ಮನಸ್ಸಿನಲ್ಲಿ ಹತಾಶೆಯ ಭಾವವು ಪುನಃ ಪುನಃ ಬರಲಿದೆ. ಗೊಂದಲಗಳಿಂದ ಏನನ್ನೂ ಮಾಡಲಾಗದ ಸ್ಥಿತಿಯು ಬರಲಿದೆ. ಹೊಸ ವಸ್ತುಗಳ ಖರೀದಿಗೆ ಉತ್ಸಾಹವು ಅಧಿಕವಾಗಿರಲಿದೆ.

ತುಲಾ ರಾಶಿ: ನೀವು ಇಂದು ಶುಭ ವಾರ್ತೆಯ ನಿರೀಕ್ಷೆಯಲ್ಲಿ ಇರುವಿರಿ. ಕಠಿಣ ಪರಿಶ್ರಮದ ಆಧಾರದ ಮೇಲೆ, ಕಷ್ಟಕರವಾದ ಕೆಲಸಗಳನ್ನು ಕೂಡ ಸುಲಭವಾಗಿ ದಾಟುವಿರಿ. ಸಮಯಕ್ಕೆ ಸರಿಯಾಗಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸಾಧ್ಯವಾಗುವುದು. ವ್ಯಾಪಾರದಲ್ಲಿ ಲಾಭದ ಅಂಶವು ಹೆಚ್ಚಿರುವುದು. ಕೆಲವು ಸ್ಥಳದಿಂದ ಹಣ ಪಡೆಯುವ ಸಾಧ್ಯತೆಗಳಿವೆ. ಹಣದ ಉಳಿತಾಯವು ಸಾಕೆಂದು ಅನ್ನಿಸದು. ನೀವು ಮಾಡುವ ಕೆಲಸದಲ್ಲಿ ಜಾಣ್ಮೆಯು ಅವಶ್ಯಕವಾಗಿರುವುದು. ಹಿತಮಿತವಾದ ಮಾತುಗಾರಿಕೆಯಿಂದ ಎಲ್ಲರಿಗೂ ಹಿತವಾಗುವುದು. ಯಾರ ಜೊತೆಗೂ ಹುಡುಗಾಟವನ್ನು ಮಾಡುವುದು ಬೇಡ. ತಂದೆಯ ಆಸೆಯನ್ನು ಪೂರ್ಣ ಮಾಡಿ, ಅವರಿಗೆ ಖುಷಿಯನ್ನು ಕೊಡುವಿರಿ. ಮಂದಗತಿಯಲ್ಲಿ ಸಾಗುವ ನಿಮ್ಮ ಕೆಲಸದಿಂದ ಸಹೋದ್ಯೋಗಿಗಳು ಆಡಿಕೊಳ್ಳುವರು. ಬಂಧುಗಳ ಆಶ್ರಯದಲ್ಲಿ ಇಂದು ನೀವು ಇರಬೇಕಾದೀತು. ಸಂಗಾತಿಗೆ ನೀವು ಉತ್ತಮ ಕೆಲಸವು ಕೊಡಿಸುವಿರಿ.

ವೃಶ್ಚಿಕ ರಾಶಿ: ನಿಮ್ಮ ಕಾರಣಕ್ಕೆ ಕುಟುಂಬದಲ್ಲಿ ಸಾಮರಸ್ಯ ಹೆಚ್ಚಿರಲಿದೆ. ವೃತ್ತಿಪರ ಜೀವನದಲ್ಲಿ ಪ್ರತಿಯೊಂದು ವಿಷಯದ ಬಗ್ಗೆ ಸ್ಪಷ್ಟ ನಿಲುವನ್ನು ಇರುವುದು ಒಳ್ಳೆಯದು. ವ್ಯವಹಾರದ ದೃಷ್ಟಿಯಿಂದ ಎಲ್ಲವನ್ನೂ ಸರಿಮಾಡಿಳ್ಳಿ. ವಿದೇಶಕ್ಕೆ ಹೋಗುವ ಶುಭ ಸುದ್ದಿ ಸಿಗಬಹುದು. ಸಂಕಟವನ್ನು ಯಾರ ಬಳಿಯೂ ಹೇಳಿಕೊಳ್ಳಲಾರಿರಿ. ಇಂದಿನ ಕಾರ್ಯವನ್ನು ಮಾಡಲು ಹಣವು ಬೇಕಾದೀತು. ಅನೇಕ ರೀತಿಯ ಫಲಗಳನ್ನು ನೀವು ಪಡೆಯಲಿದ್ದು ಕೋಪ ನಿಯಂತ್ರಿಸಬೇಖಾಗುವುದು. ಪ್ರವಾಸದಲ್ಲಿ ಇರುವವರಿಗೆ ಆಹಾರದ ವ್ಯತ್ಯಾಸದಿಂದ ಕಷ್ಟವಾಗುವುದು. ಸಂಶೋಧನೆಯ ವಿದ್ಯಾರ್ಥಿಗಳು ಉತ್ಸಾಹದಿಂದ ಕಾರ್ಯದಲ್ಲಿ ಪ್ರವೃತ್ತರಾಗುವರು. ಸ್ಪರ್ಧೆಯಲ್ಲಿ ಭಾಗವಹಿಸಿದವರಿಗೆ ಯಶಸ್ಸು ಸಿಗುವುದು. ನಿಮ್ಮನ್ನು ಅನುಕರಣೆ ಮಾಡಬಹುದು. ಎಲ್ಲ ಸಂದರ್ಭದಲ್ಲಿಯೂ ನಿಮ್ಮ ಮಾತು ನಡೆಯುತ್ತದೆ ಎನ್ನುವ ಕಲ್ಪನೆ ಬೇಡ.

ಧನು ರಾಶಿ: ಇಂದು ಮಹಿಳೆಯರು ಬೇಕಾಗಿದ್ದನ್ನು ಪಡೆದುಕೊಳ್ಳುವರು. ಶ್ರಮದ ಪರಿಣಾಮವು ಸ್ವಲ್ಪ ಸಂತೋಷ ತರುತ್ತದೆ. ನೀವು ನಿಮ್ಮನ್ನು ಶಕ್ತಿಯುತವಾಗಿ ಮಾಡಿಕೊಳ್ಳುವಿರಿ. ಸ್ಥಗಿತಗೊಂಡ ಕೆಲಸದಲ್ಲಿ ವೇಗವನ್ನು ಪಡೆಯಬೇಕಾಗುವುದು. ಕುಟುಂಬದ ಆಸ್ತಿಯನ್ನು ಪಡೆಯುವ ಸಾಧ್ಯತೆಗಳಿವೆ. ವಿದ್ಯಾರ್ಥಿಗಳ ಮನಸ್ಸು ಅಧ್ಯಯನದಲ್ಲಿ ತೊಡಗುತ್ತದೆ. ತಂದೆಯ ಜೊತೆ ವೈಮನಸ್ಯವಾಗಿದ್ದು ಇಂದು ಸಂಬಂಧವು ಸುಧಾರಿಸುವುದು. ಹೊಸ ಜೀವನದಲ್ಲಿ ಪ್ರೀತಿ ಹೆಚ್ಚಾಗಿರುವುದು. ವ್ಯಾಪಾರದಲ್ಲಿ ಚಾಣಕ್ಷತೆಯಿಂದ ಲಾಭವನ್ನು ಪಡೆಯುವಿರಿ. ಸಹೋದರಿಯ ಜವಾಬ್ದಾರಿಯೂ ನಿಮಗೆ ಬರಲಿದ್ದು ನಿಮ್ಮ ಜವಾಬ್ದಾರಿ ಹೆಚ್ಚಾಗುವುದು. ಭೂಮಿಯ ವ್ಯವಹಾರವು ಪಾಲುದಾರರ ಸಹಕಾರದಿಂದ ಸುಗಮವಾಗಿ ಸಾಗಲಿದೆ. ನಿಮ್ಮ ಪ್ರಭಾವ ಹೆಚ್ಚಾಗಿ ಇರುವುದರಿಂದ ಶತ್ರುಗಳು ದೂರ ಹೋಗುತ್ತಾರೆ.

ಮಕರ ರಾಶಿ: ಇಂದು ನೀವು ಸಾಕಷ್ಟು ಪ್ರಶಂಸೆ ಪಡೆಯವಿರಿ. ಮಹತ್ವದ ಕೆಲಸವು ಹಲವು ದಿನಗಳವರೆಗೆ ಬಾಕಿಯಿದ್ದರೆ, ಅವುಗಳನ್ನು ಮುಗಿಸಿ ಬಿಡಿ. ನೀವು ಉತ್ತಮ ಹಣಕಾಸು ಯೋಜನೆಯನ್ನು ತಯಾರಿಸಿಕೊಳ್ಳಬಹುದು. ಪರಿಶ್ರಮದಿಂದ ಹೊಸ ಉದ್ಯೋಗಗಳನ್ನು ಪಡೆಯುವ ಸಾಧ್ಯತೆಯಿದೆ. ಮನೆಯ ವೆಚ್ಚದಲ್ಲಿ ಇಳಿಕೆಯಾಗಬಹುದು. ಪ್ರೀತಿ ಮತ್ತು ವಿಶ್ವಾಸ ಭದ್ರವಾಗಿರುವಂತೆ ನೋಡಿಕೊಳ್ಳಿ. ಇಂದು ವ್ಯಾಪಾರಿಗಳಿಗೆ ದುಡಿಮೆಗೆ ತಕ್ಕ ಪ್ರತಿಫಲ ಸಿಗಲಿದೆ. ಕಚೇರಿಯಲ್ಲಿ ಉತ್ತಮವಾದ ವಾತಾವರಣದ ಉತ್ಸಾಹದಿಂದ ಇರುವಿರಿ. ಜಾಣ್ಮೆಯಿಂದ ಮಾಡಿದ ವ್ಯವಹಾರಕ್ಕೆ ಪ್ರಶಂಸೆ ಸಿಗಲಿದೆ. ಬಯಸಿದ್ದನ್ನು ಪಡೆದುಕೊಳ್ಳುವ ಅರ್ಹತೆ ನಿಮಗೆ ಬರಲಿದೆ. ಶಿಸ್ತನ್ನು ಬಿಡದೇ ಪಾಲಿಸುವುದು ನಿಮಗೆ ಗೌರವವನ್ನು ತಂದು ಕೊಡುವುದು. ಶಿಸ್ತುಬದ್ಧವಾದ ವ್ಯವಹಾರದಿಂದ ನಿಮಗೆ ಹೊಗಳಿಕೆ ಸಿಗುವುದು. ಹಲವು ಪ್ರಯತ್ನದ ಬಳಿಕ ಮಾನಸಿಕ ಕಿರಿಕಿರಿಯನ್ನು ನೀವು ದೂರ ಮಾಡಿಕೊಳ್ಳುವಿರಿ.

ಕುಂಭ ರಾಶಿ: ನಿಮ್ಮ ಇಂದಿನ ಆರಂಭವು ನಿರುತ್ಸಾಹದದಿಂದ ಇರಬಹುದು. ನೀವು ಹಣದ ಖರ್ಚನ್ನು ಬಹಳ ಜಾಣ್ಮೆಯಿಂದ ಮಾಡುವಿರಿ. ನೀವು ಕುಟುಂಬದ ಸದಸ್ಯರ ಜೊತೆ ವ್ಯಾಪಾರ ಮಾಡಲು ಯೋಚಿಸುತ್ತಿದ್ದರೆ ಒಳ್ಳೆಯದು. ಕೆಲಸದ ಪರಿಸ್ಥಿತಿಗಳು ಸುಧಾರಿಸುವ ಸಾಧ್ಯತೆಯಿದೆ. ಸಂಘರ್ಷವು ನಿಮಗೆ ಪ್ರಯೋಜನವಾಗದು. ನೀವು ಮಾಡುವ ಕೆಲಸ ಕೆಲಸದಿಂದ ಲಾಭ ಪಡೆಯುವಿರಿ. ಕುಟುಂಬದಲ್ಲಿ ನಿಮ್ಮ ವಿವಾಹದ ಕುರಿತು ಚರ್ಚೆಯಾಗುವುದು. ನಿಮಗಾಗಿ ಅನುಕೂಲಕರ ವಾತಾವರಣವನ್ನು ಸಿದ್ಧ ಮಾಡುವರು. ಪ್ರೀತಿಯಲ್ಲಿ ಇಂದು ಸಮಯ ಸರಿಯುವುದೇ ಗೊತ್ತಾಗದು. ಇಂದು ನಡೆಯುವ ತಪ್ಪಿಗೆ ನೀವೇ ಕಾರಣರಾಗುವಿರಿ. ಸಮಯದ ಹೊಂದಾಣಿಕೆಯಿಂದ ಕಾರ್ಯವನ್ನು ಸಾಧಿಸಬಹುದು. ಹೂಡಿಕೆಯನ್ನು ಅನೇಕ ಜನರು ಸೇರಿ ಮಾಡುವವರಿದ್ದೀರಿ. ನಿಮ್ಮ ಒರಟಾದ ಮಾತು ಇನ್ನೊಬ್ಬರಿಗೆ ಬೇಸರವನ್ನು ಕೊಡುವುದು.

ಮೀನ ರಾಶಿ: ಇಂದು ನೀವು ಆತ್ಮವಿಶ್ವಾಸ ಮತ್ತು ಕಠಿಣ ಪರಿಶ್ರಮದಿಂದ ಗುರಿಯನ್ನು ಸಾಧಿಸಬಹುದು. ವ್ಯಾಪಾರವನ್ನು ವಿಸ್ತರಿಸಲು ಸಾಲ ತೆಗೆದುಕೊಳ್ಳಬಹುದು. ಯಾರಿಗೋ ಕೊಟ್ಟಿರುವ ಹಣವನ್ನು ನೀವು ಮರಳಿ ಪಡೆಯಬಹುದು. ಹೊಸ ಉದ್ಯೋಗದಿಂದ ನೀವು ಸಾಕಷ್ಟು ಯಶಸ್ಸನ್ನು ಪಡೆಯುತ್ತೀರಿ. ನಿಮ್ಮ ಮನೆಯಲ್ಲಿ ಇರುವಂತಹವರ ಆರೋಗ್ಯದ ಬಗ್ಗೆ ಚಿಂತೆ ಮಾಡಬೇಡಿ. ಅವರ ಆರೋಗ್ಯವೂ ಚೇತರಿಕೆ ಕಾಣುವುದು. ಇಂದು ನಿಮ್ಮ ಆದಾಯವನ್ನು ಇಮ್ಮಡಿಗೊಳಿಸಿಕೊಳ್ಳಬಹುದು. ಮಕ್ಕಳಿಗೆ ಬೇಕಾದ ವಿದ್ಯಾಭ್ಯಾಸವನ್ನು ಕೊಡಲು ಸಾಲ ಮಾಡಬೇಕಾದೀತು. ಆದಾಯದ ಮೂಲವು ಬದಲಾಗಬಹುದು. ಕಾನೂನಿಗೆ ಸಂಬಂಧಿಸಿದಂತೆ ಹೆಚ್ಚಿನ ಓಡಾಟವಾಗಬಹುದು. ಆಸ್ತಿ ವ್ಯವಹಾರದಲ್ಲಿ ಹಿನ್ನಡೆಯಾದಂತೆ ಅನ್ನಿಸಬಹುದು. ಬರಬೇಕಾದ ಹಣವನ್ನು ನೀವು ಬಹಳ ಶ್ರಮದಿಂದ ಪಡೆಯಬೇಕಾಗಬಹುದು.

ಲೋಹಿತ ಹೆಬ್ಬಾರ್ – 8762924271 (what’s app only)