Horoscope: ರಾಶಿಭವಿಷ್ಯ; ಈ ರಾಶಿಯವರು ಯಾರ ಸಹಕಾರವನ್ನು ಪಡೆಯದೆ ತಮ್ಮ ಕಾರ್ಯಗಳನ್ನು ಮಾಡಿಕೊಳ್ಳುವರು
ಒಂದಷ್ಟು ಮಂದಿ ಪ್ರತಿನಿತ್ಯ ತಮ್ಮ ಭವಿಷ್ಯ ನೋಡುತ್ತಾರೆ. ಹಾಗಿದ್ದರೆ, ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 29 ಫೆಬ್ರವರಿ 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ ಅಶುಭ ದಿನವಾ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಎಂಬಿತ್ಯಾದಿ ಮಾಹಿತಿಗಳನ್ನು ಇಂದಿನ ರಾಶಿಭವಿಷ್ಯದಿಂದ ತಿಳಿದುಕೊಳ್ಳಿ.
ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಫೆಬ್ರವರಿ 29) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಮಹಾನಕ್ಷತ್ರ: ಶತಭಿಷಾ, ಮಾಸ: ಮಾಘ, ಪಕ್ಷ: ಕೃಷ್ಣ, ವಾರ: ಗುರು, ತಿಥಿ: ಪಂಚಮೀ, ನಿತ್ಯನಕ್ಷತ್ರ: ಸ್ವಾತೀ, ಯೋಗ: ವೃದ್ಧಿ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 50 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 39 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 02:14 ರಿಂದ 03:42ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 06:51 ರಿಂದ 08:20ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 09:48 ರಿಂದ 11:17ರ ವರೆಗೆ.
ಮೇಷ ರಾಶಿ: ನಿಮ್ಮ ಸ್ನೇಹಿತರು ಅಹಿತಕರ ವರ್ತನೆಗೆ ಪ್ರೋತ್ಸಾಹಿಸಬಹುದು. ತಿರುಗಾಟದಲ್ಲಿ ವಿಶ್ರಾಂತಿಯ ಅಗತ್ಯವಿರುವುದು. ಯಾವುದೇ ಆಸೆಯಿಲ್ಲ ಎಲ್ಲವನ್ನೂ ಸ್ವೀಕರಿಸುವಿರಿ. ಸಂಗಾತಿಯ ನಡುವಿನ ಭಿನ್ನಾಭಿಪ್ರಾಯವು ದೂರವಾಗುವುದು. ಪ್ರೀತಿಯನ್ನು ಯಾರೆದರೂ ಪ್ರಕಟಿಸಲಾರಿರಿ. ಇಂದು ನಿಮ್ಮೊಳಗಿನ ಆತ್ಮವಿಶ್ವಾಸವೇ ಆಗಬೇಕಾದ ಕಾರ್ಯಗಳನ್ನು ಮಾಡಿಸಿಕೊಳ್ಳುವುದು. ಬೇಡವೆಂದು ಬಿಟ್ಟ ಕಾರ್ಯಗಳಿಂದಲೇ ಪ್ರಯೋಜನವಾದೀತು. ವಿದ್ಯಾರ್ಥಿಗಳಲ್ಲಿ ಉತ್ಸಾಹಿಗಳು ಎದ್ದು ಕಾಣಲಿವೆ. ಕೃಷಿಯ ಕುರಿತು ಕುತೂಹಲ ಹಾಗೂ ಆಸೆಯು ಬರಬಹುದು. ಸಣ್ಣ ಕಲಾವಿದರಿಗೆ ಪ್ರೋತ್ಸಾಹವು ಸಿಗಲಿದೆ. ಮಕ್ಕಳನ್ನು ವಿದ್ಯಾಭ್ಯಾಸಕ್ಕಾಗಿ ಮನೆಯಿಂದ ದೂರ ಕಳಿಸುವಿರಿ. ಹಿರಿಯರ ಭೇಟಿಯಿಂದ ಜೀವನಕ್ಕೆ ಹಲವು ಪ್ರಯೋಜನಗಳು ಆಗಲಿವೆ. ಸ್ಥಾನಮಾನವನ್ನು ಪಡೆಯಲು ಏನಾದರೂ ಮಾಡುವಿರಿ. ಸಣ್ಣ ಕಾರಣಕ್ಕೆ ಸ್ನೇಹವನ್ನು ಮುರಿದುಕೊಳ್ಳುವಿರಿ.
ವೃಷಭ ರಾಶಿ: ಇಂದು ನಿರಾಶೆಯ ಮನೋಭಾವವು ನಿಮ್ಮ ಅವಕಾಶಗಳಿಂದ ವಂಚಿಸಬಹುದು. ನಿಮ್ಮ ಆರ್ಥಿಕ ಭಾಗವು ಬಲಗೊಳ್ಳುವ ಸಾಧ್ಯತೆ ಇದೆ. ಮಾತುಗಳು ನಿಮ್ಮ ಬಳಿಯಿರುವ ಜನರನ್ನು ಆಕರ್ಷಿಸಬಹುದು. ನೀವು ಕೆಲವು ಪ್ರವಾಸೀ ತಾಣಗಳಿಗೆ ತೆರಳುವುದರಿಂದ ನಿಮ್ಮ ಪ್ರೇಮ ಜೀವನವವು ಆಪ್ತವಾಗುವುದು. ನೀವು ಸಮಸ್ಯೆಗಳನ್ನು ಪರಿಹರಿಸಲು ಯತ್ನಿಸುತ್ತಿದ್ದಂತೆ ಒತ್ತಡ ನಿಮ್ಮ ಮನಸ್ಸನ್ನು ಆವರಿಸುತ್ತದೆ. ಯಾರ ಸಹಕಾರವನ್ನೂ ಪಡೆಯದೇ ನಿಮ್ಮ ಕಾರ್ಯಗಳನ್ನು ಮಾಡಿಕೊಳ್ಳುವಿರಿ. ಇಷ್ಟವಾಗದವರ ಜೊತೆ ವೃಥಾ ಕಾಲಹರಣ ಮಾಡುವುದು ಬೇಡ. ನಿಮ್ಮಷ್ಟಕ್ಕೆ ನೀವು ಇದ್ದುಬಿಡಿ. ಹಣಕಾಸಿನ ತೊಂದರೆಯನ್ನು ಸರಿ ಮಾಡಿಕೊಳ್ಳುವ ಮಾರ್ಗದ ಅನ್ವೇಷಣೆ ಮಾಡುವಿರಿ. ನೀರಿನ ಭೀತಿಯು ಇರಲಿದೆ. ಅತಿಯಾದ ಮನೆಯ ಕೆಲಸದಿಂದ ಆಯಾಸವಾಗಬಹುದು. ಅನಿರೀಕ್ಷಿತ ವಾರ್ತೆಯನ್ನು ನೀವು ನಂಬಲಾರಿರಿ. ಮಕ್ಕಳ ಜೊತೆ ಹೆಚ್ಚು ಸಮಯವನ್ನು ಕಳೆಯಲು ಇಷ್ಟವಾಗುವುದು.
ಮಿಥುನ ರಾಶಿ: ಇಂದು ನಿಮಗೆ ಅಸಮಾಧಾನವನ್ನು ಉಂಟುಮಾಡಬಹುದಾದರೂ ಅದನ್ನು ನೀವು ಮಾಡಿಕೊಳ್ಳುವಿರಿ. ಅನವಶ್ಯಕವಾದ ಚಿಂತೆಗಳು ಮತ್ತು ಉದ್ವೇಗಗಳು ದೇಹದ ಮೇಲೆ ಪರಿಣಾಮ ಬೀರಬಹುದು. ಇಂದು ಭೂಮಿಗೆ ಸಂಬಂಧಿಸಿದ ಯಾವುದೇ ವಿಷಯಕ್ಕೆ ಹಣವನ್ನು ಖರ್ಚು ಮಾಡಬೇಕಾಗಿದೆ. ಏಕತಾನತೆಯನ್ನು ತಪ್ಪಿಸಿಕೊಳ್ಳಲು ಹೊರಾಂಗಣ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಿ. ಸಣ್ಣ ವ್ಯಾಪಾರಿಗಳಿಗೆ ಲಾಭದ ದಿನವಾಗಲಿದೆ. ಕುಟುಂಬಕ್ಕೆ ಸಾಕಷ್ಟು ಸಮಯವನ್ನು ನೀಡುವುದಿಲ್ಲ ಬೇಸರವೂ ಇರುವುದು. ಆರ್ಥಿಕ ಪರಿಸ್ಥಿತಿ ಸುಧಾರಿಸಿ ನೆಮ್ಮದಿ ಸಿಗುವುದು. ಉದ್ಯೋಗದಲ್ಲಿ ನಿಮ್ಮ ಸ್ಥಾನಕ್ಕೆ ಬರಲು ಯಾರಾದರೂ ಕಾಯುತ್ತಿರಬಹುದು. ಹಿತಶತ್ರುಗಳ ಕಿರುಕುಳವನ್ನು ನೀವು ಸಹಿಸಲಾರಿರಿ. ಮನೆಯ ವಾತಾವರಣವು ಸಂತೋಷವನ್ನು ಕೊಟ್ಟೀತು. ಎಲ್ಲ ವಿಚಾರಕ್ಕೂ ಸಿಟ್ಟು ಉಪಯೋಗಕ್ಕೆ ಬಾರದು. ಮಾತಗಳಲ್ಲಿ ವಕ್ರತೆಯನ್ನು ಕಡಿಮೆ ಮಾಡಿ.
ಕಟಕ ರಾಶಿ: ಇಂದು ನಿಮ್ಮ ಆರೋಗ್ಯವನ್ನು ಸುಧಾರಿಸಲು ಅನುಭವಿಗಳ ಮಾರ್ಗದರ್ಶನವನ್ನು ಪಡೆಯುವಿರಿ. ನಿಮ್ಮ ಪ್ರತಿಭೆಯನ್ನು ಸರಿಯಾಗಿ ಇತರರು ಬಳಸಿಕೊಳ್ಳುವರು. ನಿಮ್ಮ ಜೀವನಸಂಗಾತಿಯನ್ನು ಹಲವು ದಿನಗಳ ಅನಂತರ ಭೇಟಿಮಾಡುವಿರಿ. ನೀವು ಇಂದು ಬಂಧುಗಳ ಸತ್ಯವನ್ನು ಅರಿತುಕೊಳ್ಳುತ್ತೀರಿ. ನಿಮ್ಮ ಪಾಲುದಾರರು ಅವರ ಮಾತು ನಡೆಸದಿದ್ದರೆ ಬೇಸರಿಸಿಕೊಳ್ಳಬೇಡಿ. ವಿವಾದವಿಲ್ಲದೇ ಇರಲಾರದಷ್ಟು ನಿಮ್ಮ ಮಾನಸಿಕ ಸ್ಥಿತಿ ಬದಲಾಗಿದೆ. ನಿಮ್ಮ ಸಕಾರಾತ್ಮಕ ಆಲೋಚನೆಗಳೂ ನಿಮಗೆ ಸಹಕಾರವನ್ನು ಕೊಡದು. ಕುಟುಂಬದಲ್ಲಿ ಜವಾಬ್ದಾರಿಯ ಸ್ಥಾನವನ್ನು ಪಡೆಯಬೇಕಾಗುವುದು. ವಸ್ತುಗಳ ಖರೀದಿಯು ಖರ್ಚನ್ನು ಹೆಚ್ಚು ಮಾಡುವುದು. ಯಾರ ಜೊತೆಗೂ ನಿಮ್ಮ ವರ್ತನೆಯು ಸಹಜತವಾಗಿ ಇರದು. ಯಂತ್ರಗಳ ಕೆಲಸವು ನಿಮಗೆ ಸಾಕೆನಿಸಬಹುದು. ಆಸ್ತಿಯ ವಿಚಾರದಲ್ಲಿ ಆಕಸ್ಮಿಕ ತಿರುವು ಬರಬಹುದು. ಸಂಗಾತಿಯ ಮಾತಿನಿಂದ ಕೆಲವು ಮಾರ್ಪಾಡನ್ನು ಮಾಡಿಕೊಳ್ಳುವಿರಿ.