Horoscope: ಉದ್ಯೋಗದಲ್ಲಿ ವರ್ಗಾವಣೆ ಆಗುವ ಸಾಧ್ಯತೆ, ಮನೆಯಿಂದ ದೂರವಿರಬೇಕಾದೀತು
ಭವಿಷ್ಯದ ಬಗ್ಗೆ ಚಿಂತೆ ಎಲ್ಲರು ಮಾಡುತ್ತಾರೆ. ಹೀಗಾಗಿ ಒಂದಷ್ಟು ಮಂದಿ ನಿತ್ಯಭವಿಷ್ಯ ನೋಡುತ್ತಾರೆ. ಹಾಗಿದ್ದರೆ, ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಫೆಬ್ರವರಿ 17, 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಶುಭ-ಅಶುಭ ಇದೆಯಾ ಎಂಬಿತ್ಯಾದಿ ಮಾಹಿತಿಗಳು ಇಲ್ಲಿವೆ.

ರಾಶಿ ಭವಿಷ್ಯ (Horoscope) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಫೆಬ್ರವರಿ 17) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮಕರ ಮಾಸ, ಮಹಾನಕ್ಷತ್ರ : ಧನಿಷ್ಠಾ, ಮಾಸ : ಮಾಘ, ಪಕ್ಷ : ಶುಕ್ಲ, ವಾರ : ಶನಿ, ತಿಥಿ : ಅಷ್ಟಮೀ, ನಿತ್ಯನಕ್ಷತ್ರ : ರೋಹಿಣೀ, ಯೋಗ: ಐಂದ್ರ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 57 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 6 ಗಂಟೆ 36 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 09:52 ರಿಂದ 11:19ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 02:14 ರಿಂದ 03:42ರ ವರೆಗೆ, ಗುಳಿಕ ಕಾಲ ಬೆಳಗ್ಗೆ 06:57 ರಿಂದ 08:25ರ ವರೆಗೆ.
ಮೇಷ ರಾಶಿ: ದುಡುಕಿ ಏನನ್ನಾದರೂ ಮಾಡಿಕೊಳ್ಳಬಹುದು. ಕೊಟ್ಟ ಮಾತನ್ನು ಉಳಿಸಿಕೊಳ್ಳಲು ಕಷ್ಟಪಡುವಿರಿ. ವಾಹನ ಚಾಲನೆಯಿಂದ ಆಯಾಸವಾದೀತು. ಸಹೋದ್ಯೋಗಿಗಳ ಜೊತೆ ತೆರೆಮರೆಯ ಗುದ್ದಾಟವಿರುವುದು. ಹತ್ತಿರದಿಂದ ತಿಳಿಯದೇ ಯಾರ ಮೇಲೂ ಆರೋಪವನ್ನು ಮಾಡುವುದು ಬೇಡ. ಮನೆಯ ಬೇಕಾದ ವಸ್ತುಗಳನ್ನು ಖರೀದಿ ಮಾಡುವಿರಿ. ವಾಹನ ಖರೀದಿಗೆ ಮನೆಯಲ್ಲಿ ಮನಸ್ಸು ಮಾಡುವುದಿಲ್ಲ. ಹತ್ತಾರು ವಿಚಾರವು ನಿಮ್ಮ ತಲೆಯಲ್ಲಿ ಓಡುವುದು. ಗೊಂದಲದಲ್ಲಿ ನೀವು ಇರಬೇಕಾದೀತು. ನಿಮ್ಮೆದುದು ಅಸಭ್ಯವಾಗಿ ಯಾರಾದರೂ ವರ್ತಿಸಿದರೆ ಅದಕ್ಕೆ ಪ್ರತಿಕ್ರಿಯೆ ಕೊಡುವುದು ಬೇಡ. ಇಂದು ಗಳಿಸಿದ ಹಣವು ಇಂದೇ ಖಾಲಿಯಾಗುವುದು. ನಿಮ್ಮನ್ನು ಕೆಲಸಕ್ಕೋಸ್ಕರ ಪ್ರಶಂಸಿಸಬಹುದು. ನಿಮ್ಮ ಇಂದಿನ ನೋವನ್ನು ನೀವೇ ಇಟ್ಟುಕೊಳ್ಳುವಿರಿ. ನಿಮ್ಮವರನ್ನು ನೀವು ಬಿಟ್ಟಕೊಡಲು ಇಷ್ಟಪಡುವುದಿಲ್ಲ. ವಿದ್ಯಾಭ್ಯಾಸಕ್ಕೆ ಬೇಕಾದ ವಾತಾವರಣವನ್ನು ನೀವು ನಿರ್ಮಿಸಿಕೊಳ್ಳುವಿರಿ.
ವೃಷಭ ರಾಶಿ: ಕಾನೂನಿಗೆ ವಿರುದ್ಧವಾದ ಕಾರ್ಯಗಳಿಂದ ನಿಮಗೆ ತೊಂದರೆಯಾದೀತು. ಅಪರಿಚಿತರು ನಿಮ್ಮ ಸಖ್ಯವನ್ನು ಬಯಸಬಹುದು. ಉದ್ಯಮಕ್ಕೆ ಸಂಬಂಧಿಸಿದ ನಿರ್ಧಾರದಲ್ಲಿ ಗೊಂದಲವಿರುವುದು. ನಿಮ್ಮವರನ್ನು ಕಂಡು ನೀವು ಅಸೂಯೆಪಡಬಹುದು. ದೂರ ಪ್ರಯಾಣದಿಂದ ಆರೋಗ್ಯವು ಹದಗೆಟ್ಟು ವಿಶ್ರಾಂತಿಯನ್ನು ಪಡಯಬೇಕಾದೀತು. ಕಾರ್ಯದ ಆರಂಭದಲ್ಲಿ ಒತ್ತಡವು ಹೆಚ್ಚು ಇರುವುದು. ಉಪಕಾರದ ಕೃತಜ್ಞತೆ ಇರಲಿ. ನಿಮ್ಮ ಇಂದಿನ ಖರ್ಚಿಗೆ ಕಡಿವಾಣ ಹಾಕುವುದು ಅಸಾಧ್ಯವಾಗಬಹುದು. ದುರ್ಬಲರ ಮೇಲೆ ನೀವು ಸಿಟ್ಟಾಗುವಿರಿ. ಸಂಗಾತಿ ಮತ್ತು ಮಕ್ಕಳನ್ನು ಅವರಷ್ಟಕ್ಕೆ ಬಿಟ್ಟು ನೀವು ನಿಮ್ಮ ಕಾರ್ಯದಲ್ಲಿ ಮಗ್ನರಾಗುವಿರಿ. ಯಾವುದೇ ಕಾರ್ಯಕ್ಕೂ ನೀವು ಮುನ್ನುಗ್ಗುವುದು ಇಷ್ಟವಾಗದು. ನಿಮ್ಮ ಬಗ್ಗೆ ಇತರರು ಏನಂದುಕೊಂಡಾರು ಎಂಬ ಭಯವಿರುವುದು.
ಮಿಥುನ ರಾಶಿ: ಇಂದು ಯಾರಿಂದಲಾದರೂ ನಿಮಗೆ ಬೇಕಾದುದನ್ನು ಪಡೆದುಕೊಳ್ಳುವಿರಿ. ಹಲವರ ಮಾತಿನಿಂದ ನಿಮ್ಮ ನಿರ್ಧಾರವು ಗೊಂದಲವಾಗಿಯೇ ಉಳಿಯುವುದು. ನೀವು ಹೊಗಳಿಕೆ ನಾಚಿಕೊಳ್ಳುವಿರಿ. ಆದರೆ ನಿಮ್ಮನ್ನು ಇನ್ನೂ ಹೆಚ್ಚು ಗುರುತಿಸಬೇಕು ಎನ್ನುವುದು ಇರುವುದು. ಏನಾದರೊಂದು ಕಾರ್ಯವನ್ನು ನೀವು ಮಾಡುತ್ತಲೇ ಇರುವುದು ನಿಮಗೆ ಇಷ್ಟವಾಗುವುದು. ಕಛೇರಿಯಲ್ಲಿ ಸ್ತ್ರೀಯರಿಂದ ಅಪಮಾನವಾಗಬಹುದು. ನಿಮ್ಮ ತಪ್ಪುಗಳು ನಿಮಗೆ ಗೊತ್ತಾಗದೇ ಇನ್ನೊಬ್ಬರು ತಿಳಿಸಬೇಕಾಗುವುದು. ಪ್ರಯಾಣವು ಅನಿವಾರ್ಯವಾದರೂ ಅದರಿಂದ ಶುಭ ಸುದ್ದಿಯು ನಿಮಗೆ ಇರುವುದು. ಪ್ರಾಣಿಗಳ ಮೇಲೆ ಪ್ರೀತಿಯು ಅತಿಯಾದೀತು. ನಿಮ್ಮದೊಂದೇ ಸಮಸ್ಯೆ ಎನ್ನುವಂತೆ ಬಹಳ ಚಿಂತೆಯಿಂದ ಇರುವಿರಿ. ಇಂದು ನಿಮಗೆ ಕುಟುಂಬದ ಜೊತೆ ಇರುವುದು ಖುಷಿ ಕೊಡದು.
ಕರ್ಕ ರಾಶಿ: ಸ್ಥಿರಾಸ್ತಿಯ ವಿಚಾರಕ್ಕಾಗಿ ಕುಟುಂಬದ ಹಿರಿಯರ ಜೊತೆ ಮಾತುಕತೆ ನಡೆಸುವಿರಿ. ನಿಮ್ಮಮೇಲೇ ನಿಮಗೆ ಅಪನಂಬಿಕೆ ಉಂಟಾಗಬಹುದು. ಯಾವುದೂ ಸರಿಯಾಗಿ ಕೈಗೂಡದು ಎಂಬ ಹತಾಶೆಯು ನಿಮ್ಮಲ್ಲಿ ಮೂಡುವುದು. ವಿದ್ಯಾರ್ಥಿಗಳ ಕನಸು ಸಾಕಾರವಾಗಿ ಸಂತೋಷಪಡುವರು. ಉದ್ಯೋಗದಲ್ಲಿ ವರ್ಗಾವಣೆ ಆಗುವ ಸಾಧ್ಯತೆ ಇದ್ದು, ಮನೆಯಿಂದ ದೂರವಿರಬೇಕಾದೀತು. ಇಷ್ಟಾರ್ಥವು ನಿನಗೆ ಸಿದ್ಧಿಯಾಗುವ ಬಗ್ಗೆ ನಿಮಗೆ ಅನುಮಾನವಿರಲಿದೆ. ಇನ್ನೊಬ್ಬರ ಬಗ್ಗೆ ಸದಾ ಅಸಮಾಧಾನವಿರಲಿದೆ. ಕೋಪಗೊಂಡ ಸಂಗಾತಿಯನ್ನು ನೀವು ಸಮಾಧಾನ ಮಾಡಬೇಕಾದೀತು. ಅತಿಯಾದ ಆತ್ಮವಿಶ್ವಾಸವು ನಿಮ್ಮ ಕಾರ್ಯವನ್ನು ಹಾಳುಮಾಡಬಹುದು. ವ್ಯವಸ್ಥೆ ವ್ಯವಹಾರದಿಂದ ಚುರುಕುತನದ ಅವಶ್ಯಕತೆ ಇರುವುದು. ನಿಮ್ಮ ಮಾತು ನೇರವಾಗಿಯೂ ಸ್ಪಷ್ಟವಾಗಿಯೂ ಇರಲಿ. ಹುಡುಗಾಟದ ಮನೋಭಾವದಿಂದ ಹೊರಬರುವಿರಿ.




