ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಫೆಬ್ರವರಿ 15) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮಕರ ಮಾಸ, ಮಹಾನಕ್ಷತ್ರ : ಧನಿಷ್ಠಾ, ಮಾಸ : ಮಾಘ, ಪಕ್ಷ : ಶುಕ್ಲ, ವಾರ : ಗುರು, ತಿಥಿ : ಷಷ್ಠೀ, ನಿತ್ಯನಕ್ಷತ್ರ : ಭರಣೀ, ಯೋಗ: ಶುಭ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 58 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 6 ಗಂಟೆ 35 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 02:14 ರಿಂದ 03:41ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 06:58 ರಿಂದ 08:25ರ ವರೆಗೆ, ಗುಳಿಕ ಕಾಲ ಬೆಳಗ್ಗೆ 09:52 ರಿಂದ 11:20ರ ವರೆಗೆ.
ಮೇಷ ರಾಶಿ: ನಿಮ್ಮ ಕೆಲಸದಲ್ಲಿ ಒತ್ತಡ ಹೆಚ್ಚಾಗಿದ್ದರೂ ಸಮಚಿತ್ತದಿಂದ ಅದನ್ನು ಎದುರಿಸುವ ಧೈರ್ಯ ಮಾಡುವಿರಿ. ಮನೆಯ ಹಿರಿಯರ ಜೊತೆ ವಾಗ್ವಾದವನ್ನು ಮಾಡುವುದು ಸರಿ ಕಾಣದು. ಯಾವುದೇ ಕೆಲಸವು ತಪ್ಪಾಗಿದ್ದರೆ, ಅನಂತರ ನಿಧಾನವಾಗಿ ವಿವರಿಸಿ. ಯಂತ್ರದ ವ್ಯಾಪಾರವು ಲಾಭದಾಯಕವಾಗುವುದು. ನಿಮ್ಮ ಮಾತಿನಿಂದ ನಿಮಗಾಗದವರು ಹುಟ್ಟಿಕೊಳ್ಳುವರು. ಹಣಕಾಸಿನ ವಿಚಾರದಲ್ಲಿ ನೀವು ನಾಜೂಕುತನವನ್ನು ಇಟ್ಟುಕೊಳ್ಳುವಿರಿ. ಮನೆಯ ಕಾರ್ಯದಲ್ಲಿ ಇಂದು ಮಗ್ನರಾಗುವಿರಿ. ನಿಮ್ಮ ಬಗ್ಗಯೇ ನೀವು ಹೇಳಿಕೊಳ್ಳುವುದು ಉಚಿತವಾಗದು. ಸಂಗಾತಿಯ ಜೊತೆ ಜೀವನದ ಕುರಿತು ಆಪ್ತಸಮಾಲೋಚನೆಯನ್ನು ಮಾಡುವಿರಿ. ಗತಿಸಿದ್ದನ್ನು ಮತ್ತೆ ಸ್ಮರಿಸಿಕೊಳ್ಳುವುದು ಬೇಡ.
ವೃಷಭ ರಾಶಿ: ಇಂದು ನಿಮ್ಮ ಸಾಮಾಜಿಕ ಕಾರ್ಯಗಳು ಪ್ರಕಾಶಕ್ಕೆ ಬರುವುದು. ಅಮೂಲ್ಯ ವಸ್ತುಗಳ ಸಂಪಾದನೆಯನ್ನು ಕಷ್ಟವಾದರೂ ಮಾಡುವಿರಿ. ಮಕ್ಕಳು ಮತ್ತು ಕುಟುಂಬದವರ ಜೊತೆಗೆ ಉತ್ತಮ ಸಮಯವನ್ನು ಕಳೆಯುವಿರಿ. ಸಂಗಾತಿಯ ಅಪನಂಬಿಕೆಯನ್ನು ಪ್ರಶ್ನಿಸುವ ಮನಸ್ಸು ಮಾಡುವಿರಿ. ಸ್ನೇಹಿತರನ್ನು ದೂರ ಮಾಡಿಕೊಂಡು ಒಂಟಿಯಾಗಿ ಇರಲು ಇಚ್ಛಿಸುವಿರಿ. ಯಾರ ಮೇಲೂ ಹಗುರಾದ ಮನೋಭಾವ ಬೇಡ. ದುಃಸ್ವಪ್ನವು ನಿಮ್ಮ ನಿದ್ರೆಯನ್ನು ಕೆಡಿಸೀತು. ದೀರ್ಘಕಾಲದ ಗೆಳೆತನವು ಮಾತಿನಿಂದ ಒಡೆದುಹೋಗಬಹುದು. ಮನೆಯಲ್ಲಿ ಭಿನ್ನಾಭಿಪ್ರಾಯವು ಬರಬಹುದು. ಸ್ವಂತ ಕೆಲಸಗಳಿಗೆ ಸಮಯ ಹೊಂದಾಣಿಕೆ ಮಾಡುವುದು ಕಷ್ಟ. ವಿದ್ಯಾರ್ಥಿಗಳು ಗೊಂದಲದಲ್ಲಿ ಇರಬಹುದು. ಹೇಳಿಕೊಳ್ಳುವುದು ಸೂಕ್ತ. ಒರಟು ಮಾತುಗಳಿಂದ ಸಂಗಾತಿಗೆ ಬೇಸರ ತರಿಸುವಿರಿ.
ಮಿಥುನ ರಾಶಿ: ಇಂದು ನೆಮ್ಮದಿಯನ್ನು ಪ್ರಯತ್ನಪೂರ್ವಕವಾಗಿ ಪಡೆಯುವಿರಿ. ಅಸಂಬದ್ಧ ವಿಚಾರದಲ್ಲಿ ನಿಮಗೆ ಆಸಕ್ತಿಯು ಹೆಚ್ಚಾಗಿ ಇರುವುದು. ಸಂಗಾತಿಯನ್ನು ಎಲ್ಲಿಗಾದರೂ ದೂರ ಕರೆದುಕೊಂಡು ಹೋಗಲು ಆಸೆಯಾಗುವುದು. ಹಣಕಾಸಿನ ವ್ಯವಹಾರವನ್ನು ಬಹಳ ಜಾಗರೂಕತೆಯಿಂದ ಮಾಡಿಕೊಳ್ಳಿ. ಸಾಲವನ್ನು ಹಿಂದಿರುಗಿಸಲು ನಿಮ್ಮ ಹೂಡಿಕೆಯನ್ನು ತೆಗೆಯಬೇಕಾಗುವುದು. ಕೆಲವು ವ್ಯವಹಾರದಲ್ಲಿ ನೀವು ಹಿಂದುಳಿದಂತೆ ನಿಮಗೆ ಅರಿವಾಗುವುದು. ಕಛೇರಿಯಲ್ಲಿ ಇಂದು ಹೇಳಿದ್ದಷ್ಟನ್ನು ಮಾತ್ರ ಮಾಡಿ. ಸಮಾರಂಭಗಳಿಗೆ ಆಹ್ವಾನ ಬರಬಹುದು. ಸಂಗಾತಿಯ ವರ್ತನೆಯು ಹಿಡಿಸದೇ ಇದ್ದೀತು. ವ್ಯವಹಾರದಲ್ಲಿ ಗೊಂದಲವನ್ನು ಇಟ್ಟುಕೊಂಡು ಕೊರಗುವುದು ಬೇಡ. ತಮಾಷೆಯ ಅತಿಯಾಗಿ ವೈಮನಸ್ಯವು ಬರಬಹುದು.
ಕರ್ಕ ರಾಶಿ: ಇಂದು ನೀವು ಕಾನೂನಾತ್ಮಕ ವಿಚಾರಗಳಿಗೆ ಹೆಚ್ಚು ಸಮಯವನ್ನು ಕೊಡುವಿರಿ. ಮಕ್ಕಳ ವಿಚಾರದಲ್ಲಿ ನಿಮಗೆ ಸರಿಯಾದ ಮಾಹಿತಿ ದೊರಕದೇ ಬೇಸರಿಸುವಿರಿ. ಅತಿಥಿಗಳ ಆಗಮನದಿಂದ ಮನೆಯಲ್ಲಿ ಸಂತೋಷವು ಇರಲಿದೆ. ಮನಸ್ಸಿಗೆ ನೆಮ್ಮದಿಯು ಬೇಕೆಂದು ಅನ್ನಿಸುವುದು. ಎಲ್ಲಿಗಾದರೂ ದೂರ ಪ್ರಯಾಣವನ್ನು ಮಾಡುವಿರಿ. ಉನ್ನತವಾದ ವಿದ್ಯಾಭ್ಯಾಸದ ಕನಸನ್ನು ನೀವು ನನಸು ಮಾಡಿಕೊಳ್ಳುವಿರಿ. ಕೆಲವು ಸವಾಲುಗಳನ್ನು ನೀವು ಎದುರಿಸುವುದು ಅನಿವಾರ್ಯವಾದೀತು. ಮಕ್ಕಳಿಗಾಗಿ ಹಣವನ್ನು ಖರ್ಚು ಮಾಡುವಿರಿ. ಯಾರಾದರೂ ಪ್ರಾಬಲ್ಯವನ್ನು ಸಾಧಿಸಬಹುದು. ಆಲಸ್ಯದಿಂದ ಈ ದಿನವನ್ನು ಕಳೆಯುವಿರಿ. ಉನ್ನತಸ್ಥಾನಕ್ಕೆ ಏರಲು ನಿಮಗೆ ಎಲ್ಲ ಮಾರ್ಗಗಳೂ ಮುಚ್ಚಿದಂತೆ ಕಾಣಿಸುವುದು. ನಿಮ್ಮ ಪ್ರಾಮಾಣಿಕತೆಯು ಅಪ್ರಯೋಜಕ ಎನಿಸಬಹುದು.
ಸಿಂಹ ರಾಶಿ: ನೀವು ಯಾವ ವಿಚಾರದಲ್ಲಿಯೂ ರಾಜಿಯಾಗಲು ಒಪ್ಪಲಾರಿರಿ. ನಿಮ್ಮ ಗುಣಮಟ್ಟವು ನಿಮ್ಮದೇ ಕಾರಣದಿಂದ ತಗ್ಗಬಹುದು. ಆಡಳಿತದಲ್ಲಿ ಆಗಬೇಕಾದ ಬದಲಾವಣೆಯನ್ನು ನೀವು ತರುವಿರಿ. ಒಮ್ಮೆಲೇ ಎಲ್ಲವನ್ನೂ ಮಾಡಿ ಮುಗಿಸಬೇಕು ಎನ್ನುವ ಆತುರವು ಬೇಡ. ದೈನಂದಿನ ಬಳಕೆಯ ಉತ್ಪನ್ನಗಳ ವ್ಯಾಪಾರಿಗಳು ಲಾಭ ಗಳಿಸುವರು. ಕೆಲ ದಿನಗಳಿಂದ ನಿಮ್ಮ ಆರೋಗ್ಯ ಹದಗೆಟ್ಟಿದ್ದು, ಮನಸ್ಸೂ ಸರಿಯಾಗಿರದು. ಇಂದು ಸಹೋದರರ ನಡುವೆ ವಾಗ್ವಾದವು ಅಗಲಿದ್ದು ಹಿರಿಯ ಮಧ್ಯಸ್ತಿಕೆಯಿಂದ ಶಾಂತವಾಗುವುದು. ಶಿಸ್ತಿನಿಂದ ಇಂದಿನ ಕಾರ್ಯವನ್ನು ಮಾಡುವಿರಿ. ನಿಮ್ಮ ಬಗ್ಗೆ ಸುಳ್ಳು ವಿಚಾರವನ್ನು ಹೇಳುವರು. ಬಹಳ ಕೆಲಸವಿದ್ದರೂ ಒತ್ತಡದಿಂದ ಇರುವಿರಿ. ನಿಮ್ಮ ಬಗ್ಗೆ ನಿಮಗೇ ಪೂರ್ಣ ಪ್ರಮಾಣದ ನಂಬಿಕೆ ಸಾಲದು. ನಿಮ್ಮ ದೌರ್ಬಲ್ಯಗಳನ್ನು ಇತರರು ಆಡಿಕೊಂಡಾರು.
ಕನ್ಯಾ ರಾಶಿ: ಇಂದು ಅನಿವಾರ್ಯ ಓಡಾಟವು ಬರಲಿದ್ದು ವಾಹನ ಚಲಾಯಿಸುವಾಗ ನಿಮಗೆ ಜಾಗರೂಕತೆ ಬೇಕಾಗುವುದು. ಕಟ್ಟ ಅಭ್ಯಾಸದ ಕಡೆಗೆ ಮನಸ್ಸು ಸೆಳೆಯುವುದು. ಅದಕ್ಕೆ ಸ್ನೇಹಿತರ ಪ್ರೋತ್ಸಾಹವೂ ಇರುವುದು. ಕೊಡಬೇಕಾದವರಿಗೆ ಸರಿಯಾದ ಗೌರವವನ್ನು ಕೊಡಿ. ವೈದ್ಯರು ಇಂದು ಒತ್ತಡದಲ್ಲಿ ಇರುವರು. ಕೆಲಸಕ್ಕೆ ಅನುಗುಣವಾಗಿ ಸಮಯವನ್ನು ಹೊಂದಿಸಿಕೊಳ್ಳಿ. ನಿಮ್ಮ ಮನಸ್ಸಿಗೆ ತೋಚಿದ್ದನ್ನೆಲ್ಲವನ್ನೂ ಹೇಳುವಿರಿ. ತಪ್ಪುಗಳನ್ನು ಸರಿ ಮಾಡಿಯೇ ನಿಮಗೆ ಇಂದಿನ ಶ್ರಮವೆಲ್ಲ ವ್ಯರ್ಥವಾಗುವುದು. ಯಾವುದೇ ಊಹೆಗಳಿಗೆ ಬೆಲೆ ಕೊಡದೇ ಸ್ಪಷ್ಟವಾದುದನ್ನು ನಂಬಿ. ಸಂಗಾತಿಯ ಇಷ್ಟವನ್ನು ಕೇಳಿ ಅವರಿಗೆ ಸಂತೋಷವನ್ನು ನೀಡುವಿರಿ. ಇಂದು ಹೆಚ್ಚಿನ ಜನರ ಜೊತೆ ಒಡನಾಟ ಮಾಡುವಿರಿ. ಆಸ್ತಿಯ ಹಂಚಿಕೆಯನ್ನು ಮಾಡಬೇಕಾದೀತು.
ತುಲಾ ರಾಶಿ: ಇಂದು ಉದ್ಯಮಕ್ಕೆ ಸಂಬಂಧಿಸಿದ ನೂತನ ಒಪ್ಪಂದಕ್ಕೆ ಮುಂದುವರಿಯಿರಿ. ಎಲ್ಲದಕ್ಕೂ ತಡೆಯೊಡ್ಡುವ ವಿರೋಧಿಗಳು ಶರಣಾಗಲೂಬಹುದು. ಕಲಾವಿದರು ಬಹಳ ಸಂತೋಷವನ್ನು ಅನುಭವಿಸುವರು. ಸಂಗಾತಿಯ ಹೂಡಿಕೆಯನ್ನು ನೀವು ಬಳಸಿಕೊಳ್ಳುವಿರಿ. ಹೊಸ ಉದ್ಯೋಗಿಗಳನ್ನು ನಿಯೋಜಿಸಿಕೊಂಡು ಕಾರ್ಯವನ್ನು ವಿಸ್ತರಿಸಿ ಲಾಭವನ್ನು ಪಡೆಯುವ ದೀರ್ಘಕಾಲದ ಯೋಜನೆಯ ಕನಸನ್ನು ಕಾಣುವಿರಿ. ನೇರವಾಗಿ ಯಾರನ್ನೂ ದೂರುವುದಿಲ್ಲ. ಎಂತಹ ನೈಪುಣ್ಯವಿದ್ದರೂ ವ್ಯವಹಾರದಲ್ಲಿ ಒಮ್ಮೆ ಎಚ್ಚರ ತಪ್ಪುವ ಸಾಧ್ಯತೆ ಇದೆ. ನಿಮ್ಮ ಕರ್ಮವೇ ನಿಮಗೆ ಹಿಂದಿರುಗಿ ಬರುವಂತೆ ಕಾಣಿಸುವುದು. ನಿಮ್ಮ ಜವಾಬ್ದಾರಿಯ ಕಾರ್ಯಕ್ಕೆ ಕೆಲವು ವಿಘ್ನಗಳು ಬರಬಹುದು.
ವೃಶ್ಚಿಕ ರಾಶಿ: ನೀವು ಇಂದು ಉದ್ಯಮದ ಕಾರಣಕ್ಕೆ ಸ್ನೇಹಬಂಧವನ್ನು ಬಿಗಿ ಮಾಡಿಕೊಳ್ಳುವಿರಿ. ಕಚೇರಿಯಲ್ಲಿ ನೀವು ತಗ್ಗಿ ಬಗ್ಗಿ ನಡೆಯುವುದು ಒಳ್ಳೆಯದು. ಹಿರಿಯರ ಸೇವೆಯನ್ನು ಮಾಡುವ ಅವಕಾಶವು ಸಿಗಲಿದ್ದು, ಅದನ್ನು ಕಳೆದುಕೊಳ್ಳುವುದು ಬೇಡ. ತಾಳ್ಮೆಯಿಂದ ಏನನ್ನಾದರೂ ಸಾಧಿಸಲು ಪ್ರಯತ್ನಿಸಿ. ಹಿತಶತ್ರುಗಳನ್ನು ನೀವು ದೂರ ಮಾಡಿಕೊಳ್ಳಲಾಗದು. ನಿಮ್ಮ ಜುಟ್ಟವನ್ನು ಅವರೇ ಹಿಡಿದುಕೊಂಡು ಆಡಿಸುವರು. ನಿಮ್ಮ ಸಂಕಟವನ್ನು ಹೇಳಿಕೊಂಡರೂ ತೊಂದರೆ, ಸುಮ್ಮನೆ ಇದ್ದರೂ ತೊಂದರೆ ಆಗುವುದು. ಅಪರಿಚಿತ ಕರೆಗಳು ಹೆಚ್ಚಾಗುವುದು. ನಿಮ್ಮನ್ನು ನೀವು ಕೆಲಸದ ಮೂಲಕ ಪರಿಚಯಿಸಿಕೊಳ್ಳುವಿರಿ. ನಿಮ್ಮ ಸ್ವಾಭಿಮಾನಕ್ಕೆ ತೊಂದರೆಯನ್ನು ತಂದುಕೊಳ್ಳಲಾರಿರಿ. ಹಳಸಿಹೋದ ಹಳೆಯ ಸಂಬಂಧವು ಮತ್ತೆ ಚಿಗುರಬಹುದು.
ಧನು ರಾಶಿ: ನೀವು ಇಂದು ಮುಖ್ಯವಾದ ನಿರ್ಧಾರವನ್ನು ತೆಗೆದುಕೊಳ್ಳಲು ಸಮರ್ಥರಿರುವಿರಿ. ನಿಮ್ಮ ಮಾತನ್ನು ನಿಮ್ಮವರು ಕೇಳುಬರು. ಬಹು ಮೌಲ್ಯದ ವಸ್ತುಗಳನ್ನು ಕಳೆದುಕೊಳ್ಳುವ ಸಂದರ್ಭವು ಬರಬಹುದು. ಉದ್ಯಮಿಗಳು ಇಂದು ಹಣವನ್ನು ಗಳಿಸುವ ಸಾಧ್ಯತೆಯಿದೆ, ಉತ್ಪಾದನಾ ಕ್ಷೇತ್ರದಲ್ಲಿ ಕೊಂಚ ಹಿನ್ನಡೆ ಆಗಬಹುದು. ಹಲವು ದಿನಗಳಿಂದ ನಿರೀಕ್ಷಿಸುತ್ತಿದ್ದ ಘಟನೆಯು ಇಂದು ನಡೆಯುವುದು. ನಿಮ್ಮ ಧಾರ್ಮಿಕ ಶ್ರದ್ಧೆಗೆ ಇನ್ನಷ್ಟು ಬಲವು ಬರಲಿದೆ. ನಿಮ್ಮ ವಿದ್ಯಾಭ್ಯಾಸದ ಸಾಮರ್ಥ್ಯವನ್ನು ತೋರಿಸುವಿರಿ. ನಿಮ್ಮ ನಿಮಗೆ ಸಿಕ್ಕ ಬೆಂಬಲವನ್ನು ಇನ್ನೊಬ್ಬರಿಗೂ ಕೊಡುವ ಮನಸ್ಸು ಮಾಡಿ. ದೈಹಿಕ ಕಸರತ್ತನ್ನು ಮಿತವಾಗಿ ಮಾಡಿ. ಅತಿಯಾದ ಸಲುಗೆಯಿಂದ ನಿಮಗೆ ತೊಂದರೆ ಆಗಬಹುದು. ಸಾಲ ಕೊಟ್ಟವರು ಬೆನ್ನು ಬಿಡದೇ ನಿಮ್ಮನ್ನು ಪೀಡಿಸಬಹುದು.
ಮಕರ ರಾಶಿ: ಬಂಧುಗಳ ಆಗಮನದಿಂದ ಖರ್ಚೂ ಹೆಚ್ಚಳವಾಗುವುದು ಮತ್ತು ನಿಮ್ಮ ಕೆಲಸಗಳೂ ಹಿಂದೆ ಉಳಿಯುತ್ತವೆ. ಅತಿಯಾದ ದುರಾಸೆಯನ್ನು ನಿಮಗೆ ಸುಖ ಕೊಡದು. ಸಂಬಂಧವನ್ನು ಚೆನ್ನಾಗಿ ನಿಭಾಯಿಸುವ ಕಲೆಯು ಗೊತ್ತಿದೆ. ಯಾರಾದರೂ ಹೊಸ ಯೋಜನೆಗಳ ಬಗ್ಗೆ ಸಲಹೆಯನ್ನು ಕೊಡುವರು, ಉದ್ಯೋಗದ ಕಾರಣದಿಂದ ನೀವು ಓಡಾಟವನ್ನು ಮಾಡಬೇಕಾಗುವುದು. ಹಳೆಯ ಸ್ನೇಹಿತರನ್ನು ನೀವು ಭೇಟಿಯಾಗಿ ಎಲ್ಲ ಸಂಗತಿಗಳನ್ನು ಹಂಚಿಕೊಳ್ಳುವಿರಿ. ಚರಾಸ್ತಿಯ ವಿಷಯದಲ್ಲಿ ನೀವು ಅಸ್ವತಂತ್ರರಾಗಿ ಇರುವಿರಿ. ಮನೆಯ ಕಾರ್ಯದಲ್ಲಿ ನಿಮಗೆ ಒತ್ತಡವು ಅಧಿಕವಾಗಿ ಇರಲಿದೆ. ಯಾವುದೋ ಸಂಸ್ಥೆಯಲ್ಲಿ ಹಣ ಹೂಡಿಕೆಯನ್ನು ಮಾಡಲು ಹೋಗುವಿರಿ. ಕರಕುಶಲ ವಸ್ತುಗಳ ಮಾರಾಟವನ್ನು ನೀವು ಮಾಡಲು ಉತ್ಸಾಹದಿಂದ ಇರುವಿರಿ. ಕಛೇರಿಯ ಕೆಲಸದಲ್ಲಿ ಮೇಲಧಿಕಾರಿಗಳಿಂದ ಅಕ್ಷೇಪವು ಬರಬಹುದು. ಕುಟುಂಬದ ಸದಸ್ಯರ ಬಗ್ಗೆ ನಿಮಗೆ ಸಮಾಧಾನವಿರದು.
ಕುಂಭ ರಾಶಿ: ನಿಮಗೆ ಉತ್ಪಾದನೆಗೆ ಸಂಬಂಧಿಸಿದ ಆದಾಯವು ಇಂದು ಇರುವುದು. ಕಛೇರಿಯಲ್ಲಿ ಸಹೋದ್ಯೋಗಿಗಳ ಜೊತೆಗೆ ನಿಮ್ಮ ಸಂಬಂಧವನ್ನು ಸೌಹಾರ್ದಯುತವಾಗಿ ಇಟ್ಟುಕೊಳ್ಳಿ. ನಿಮಗೆ ಅನೇಕರು ಪ್ರಭಾವಿತರಾಗಬಹುದು. ಮೇಲಿಂದ ಮೇಲೆ ಒತ್ತಡಗಳು ಕಾಣಿಸಿಕೊಳ್ಳುವುದು. ವಿದ್ಯಾರ್ಥಿಗಳು ಓದಿನ ಬಗ್ಗೆ ಗಂಭೀರವಾದ ನಿರ್ಧಾರವನ್ನು ತೆಗೆದುಕೊಳ್ಳುವ ಅವಶ್ಯಕತೆ ಇದೆ. ಬಂಧುಗಳ ಆಗಮನದಿಂದ ಮನೆಯಲ್ಲಿ ಸಂತಸದ ವಾತಾವರಣ ಇರಲಿದೆ. ನಿಮ್ಮ ಆರೋಗ್ಯದ ಸಮಸ್ಯೆಯನ್ನು ತಳ್ಳಿಹಾಕುವುದು ಬೇಡ. ಗುರಿಯ ಬಗ್ಗೆ ಸ್ಪಷ್ಟತೆ ಇಲ್ಲದಿರುವುದು ವೈಫಲ್ಯಕ್ಕೆ ಕಾರಣವಾಗುವುದು. ದುರ್ಬಲವಾದ ಮನಸ್ಸನ್ನು ನೀವು ಬಲಮಾಡಿಕೊಳ್ಳುವ ಅವಶ್ಯಕತೆ ಇರಲಿದೆ. ಆತ್ಮತೃಪ್ತಿಗಿಂತ ಬೇರೆ ಸಂತೋಷವು ನಿಮಗೆ ಇರದು.
ಮೀನ ರಾಶಿ: ಇಂದು ನಿಮಗೆ ವ್ಯಾಪಾರದಲ್ಲಿ ಅನಿರೀಕ್ಷಿತವಾಗಿ ಆರ್ಥಿಕ ಲಾಭವು ಆಗಬಹುದು. ಇಂದಿನ ನಿಮ್ಮ ಎಲ್ಲ ಕೆಲಸಗಳೂ ಶಿಸ್ತಿನಿಂದ ಉತ್ಸಾಹವನ್ನು ತುಂಬಿಕೊಂಡು ಮಾಡುವಿರಿ. ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಅಹಂಕಾರವು ಬಂದೀತು, ನಿಮಗೆ ಸಾಮಾನ್ಯರ ಜೊತೆ ಸಾಮಾನ್ಯರಂತೆ ವರ್ತಿಸುವುದು ಇಷ್ಟವಾಗುವುದು. ವ್ಯಾಪಾರವನ್ನು ನೀವು ವಿಸ್ತಾರ ಮಾಡಿಕೊಳ್ಳುವ ಯೋಜನೆಯನ್ನು ಹೊಂದುವಿರಿ. ನೀವು ಸಂತೋಷಕ್ಕಾಗಿ ಹಣವನ್ನು ಖರ್ಚು ಮಾಡುವಿರಿ. ಅನಿವಾರ್ಯವಾಗಿ ಕಾರ್ಯಗಳನ್ನು ಮಾಡಬೇಕಾಗಬಹುದು. ಕುಟುಂಬದ ಜೊತೆ ಸಮಯವನ್ನು ಕಳೆಯಬೇಕು ಎಂದುಕೊಂಡರೂ ಆಗದು. ನಿಮ್ಮ ಆತ್ಮೀಯವಾದ ಮಾತಿನಿಂದ ಅಪರಿಚಿತರ ಸ್ನೇಹವನ್ನು ಗಳಿಸುವಿರಿ. ಆಕಸ್ಮಿಕವಾಗಿ ದ್ರವ್ಯಪ್ರಾಪ್ತಿಯಾಗುವುದು. ದಾಂಪತ್ಯದಲ್ಲಿ ನಂಬಿಕೆ ಹೆಚ್ಚಾಗುವುದು. ಆದಾಯದ ಮೂಲದಲ್ಲಿ ಬದಲಾವಣೆಯಾಗಲಿದೆ. ಕೆಲವನ್ನು ನೀವು ಬೇಕೆಂದೇ ಬಿಟ್ಟುಕೊಳ್ಳುವಿರಿ.
ಲೋಹಿತ ಹೆಬ್ಬಾರ್ -8762924271 (what’s app only)